ಪ್ರಕೃತಿ
ಬೈಬಲಿನಲ್ಲಿ ಕುರಿಗಳು
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 38 ವಾಕ್ಯಭಾಗಗಳು, ಸಾಲು ಸಾಲಾಗಿ.
- ಹೇಬೆಲನು ಕುರಿಗಳನ್ನು ಕಾಯುವವನಾಗಿದ್ದನುಆದಿ 4:2
ವಚನಗಳು
ಆದಿ 4:2ತರುವಾಯ ಅವನ ತಮ್ಮನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿಕಾಯುವವನಾದನು. ಕಾಯಿನನು ವ್ಯವಸಾಯಗಾರನಾದನು.
- ಹೇಬೆಲನು ತನ್ನ ಮಂದೆಯ ಚೊಚ್ಚಲುಗಳನ್ನು ತಂದನುಆದಿ 4:4
ವಚನಗಳು
ಆದಿ 4:4ಹೇಬೆಲನು ಹಾಗೆಯೇ ತನ್ನ ಹಿಂಡಿನಿಂದ ಚೊಚ್ಚಲ ಕುರಿಗಳನ್ನು ಕಾಣಿಕೆಯಾಗಿ ತಂದು ಅವುಗಳ ಕೊಬ್ಬನ್ನು ಹೋಮ ಮಾಡಿದನು, ಯೆಹೋವನು ಹೇಬೆಲನನ್ನೂ ಅವನ ಕಾಣಿಕೆಯನ್ನು ಮೆಚ್ಚಿಕೊಂಡನು.
- ಪೊದೆಯಲ್ಲಿ ಕೊಂಬುಗಳಿಂದ ಸಿಕ್ಕಿಕೊಂಡಿದ್ದ ಟಗರನ್ನು ಅಬ್ರಹಾಮನು ಕಂಡನುಆದಿ 22:13
ವಚನಗಳು
ಆದಿ 22:13ಅಬ್ರಹಾಮನು ಕಣ್ಣೆತ್ತಿ ನೋಡಲಾಗಿ ತನ್ನ ಹಿಂದೆ, ಒಂದು ಟಗರು ಪೊದೆಯಲ್ಲಿ ಕೊಂಬುಗಳಿಂದ ಸಿಕ್ಕಿ ಹಾಕಿಕೊಂಡಿರುವುದನ್ನು ಕಂಡನು. ಅವನು ಹೋಗಿ ಅದನ್ನು ಹಿಡಿದು ತಂದು ತನ್ನ ಮಗನಿಗೆ ಬದಲಾಗಿ ಹೋಮಮಾಡಿದನು.
- ಮಂದೆಗಳಿಗೆ ನೀರು ಕುಡಿಸಲು ಕುರುಬರು ಬಾವಿಯ ಬಾಯಿಂದ ಕಲ್ಲನ್ನು ಉರುಳಿಸುತ್ತಿದ್ದರುಆದಿ 29:2–3
ವಚನಗಳು
ಆದಿ 29:2–3ಅವನು ಕಣ್ಣೆತ್ತಿ ನೋಡಲಾಗಿ ಹೊಲದಲ್ಲಿ ಬಾವಿಯನ್ನು ಕಂಡನು. ಬಾವಿಯ ಹತ್ತಿರ ಮೂರು ಕುರಿಹಿಂಡುಗಳು ಮಲಗಿದ್ದವು. ಆ ಬಾವಿಯ ನೀರನ್ನು ಮಂದೆಗಳಿಗೆ ಕುಡಿಸುತ್ತಿದ್ದರು. ಆ ಬಾವಿಯ ಮೇಲೆ ಒಂದು ದೊಡ್ಡ ಕಲ್ಲನ್ನು ಇಡಲಾಗಿತ್ತು. ಹಿಂಡುಗಳೆಲ್ಲಾ ಅಲ್ಲಿ ಕೂಡಿದಾಗ ಕುರಿಕಾಯುವವರು ಬಾವಿಯ ಮೇಲೆ ಮುಚ್ಚಿದ್ದ ಕಲ್ಲನ್ನು ಉರುಳಿಸಿ ಕುರಿಗಳಿಗೆ ನೀರು ಕುಡಿಸಿ ತಿರುಗಿ ಕಲ್ಲನ್ನು ಬಾವಿಯ ಮೇಲೆ ಮುಚ್ಚುತ್ತಿದ್ದರು.
- ರಾಹೇಲಳು ಕುರಿ ಕಾಯುವವಳಾಗಿದ್ದಳು; ಯಾಕೋಬನು ಅವಳ ತಂದೆಯ ಕುರಿಗಳಿಗೆ ನೀರು ಕುಡಿಸಿದನುಆದಿ 29:9–10
ವಚನಗಳು
ಆದಿ 29:9–10ಅವನು ಅವರೊಂದಿಗೆ ಮಾತನಾಡುತ್ತಿರುವಾಗಲೇ ರಾಹೇಲಳು ತನ್ನ ತಂದೆಯ ಕುರಿಗಳ ಸಂಗಡ ಬಂದಳು; ಆಕೆಯೇ ಅವುಗಳನ್ನು ಮೇಯಿಸುತ್ತಿದ್ದಳು. ಯಾಕೋಬನು ತನ್ನ ತಾಯಿಯ ಅಣ್ಣನಾದ ಲಾಬಾನನ ಮಗಳಾದ ರಾಹೇಲಳನ್ನೂ ಲಾಬಾನನ ಕುರಿಗಳನ್ನೂ ಕಂಡಾಗ ಬಾವಿಯ ಹತ್ತಿರಕ್ಕೆ ಹೋಗಿ ಅದರ ಮೇಲೆ ಮುಚ್ಚಿದ್ದ ಕಲ್ಲನ್ನು ಸರಿಸಿ ಲಾಬನನ ಕುರಿಗಳಿಗೆ ನೀರು ಕುಡಿಸಿದನು.
- ಇತ್ರೋವಿನ ಏಳು ಮಂದಿ ಹೆಣ್ಣುಮಕ್ಕಳು ಮಂದೆಗೆ ನೀರು ಕುಡಿಸಿದರು, ಮೋಶೆಯು ಅವರಿಗೆ ಸಹಾಯಮಾಡಿದನುವಿಮೋ 2:16–17
ವಚನಗಳು
ವಿಮೋ 2:16–17ಮಿದ್ಯಾನರ ಯಾಜಕನಿಗೆ ಏಳು ಮಂದಿ ಹೆಣ್ಣು ಮಕ್ಕಳಿದ್ದರು. ಅವರು ಬಂದು ತಮ್ಮ ತಂದೆಯ ಕುರಿ ಮಂದೆಗಳಿಗೆ ನೀರು ಕುಡಿಸುವುದಕ್ಕಾಗಿ, ನೀರನ್ನು ಸೇದಿ ತೊಟ್ಟಿಗಳಲ್ಲಿ ತುಂಬಿಸುತ್ತಿದ್ದರು. ಕುರುಬರು ಬಂದು ಅವರನ್ನು ಬಾವಿಯ ಬಳಿಯಿಂದ ಓಡಿಸಲು, ಮೋಶೆಯು ಅವರಿಗೆ ಸಹಾಯಕನಾಗಿ ಬಂದು ಅವರ ಕುರಿಗಳಿಗೆ ನೀರನ್ನು ಕುಡಿಸಿದನು.
- ಮೋಶೆಯು ಇತ್ರೋವಿನ ಮಂದೆಯನ್ನು ಮೇಯಿಸುತ್ತಿದ್ದಾಗ ಹೋರೇಬಿಗೆ ಬಂದನುವಿಮೋ 3:1
ವಚನಗಳು
ವಿಮೋ 3:1ಮೋಶೆಯು ತನ್ನ ಮಾವನಾದ, ಮಿದ್ಯಾನ್ಯರ ಯಾಜಕನಾದ ಇತ್ರೋನನ ಮಂದೆಯನ್ನು ಮೇಯಿಸುತ್ತಿರಲಾಗಿ ಆ ಮಂದೆಯನ್ನು ಅಡವಿಯ ಮತ್ತೊಂದುಭಾಗಕ್ಕೆ ನಡಿಸಿಕೊಂಡು ಹೋಗುತ್ತಾ, “ಹೋರೇಬ್” ಎಂಬ ದೇವರ ಬೆಟ್ಟಕ್ಕೆ ಬಂದನು.
- ಕಿರಿಯ ಮಗನಾದ ದಾವೀದನು ಹೊರಗೆ ಕುರಿಗಳನ್ನು ಕಾಯುತ್ತಿದ್ದನು1 ಸಮು 16:11
ವಚನಗಳು
1 ಸಮು 16:11ಅನಂತರ ಸಮುವೇಲನು ಇಷಯನನ್ನು, “ನಿನ್ನ ಮಕ್ಕಳೆಲ್ಲಾ ಇಷ್ಟೇ ಮಂದಿಯೋ” ಎಂದು ಕೇಳಲು ಅವನು, “ಇವರೆಲ್ಲರಿಗಿಂತಲೂ ಚಿಕ್ಕವನು ಒಬ್ಬನಿರುತ್ತಾನೆ; ಅವನು ಕುರಿಮೇಯಿಸುವುದಕ್ಕೆ ಹೋಗಿದ್ದಾನೆ” ಎಂದು ಉತ್ತರಕೊಟ್ಟನು. ಆಗ ಸಮುವೇಲನು, “ಅವನನ್ನು ಕರೆದುಕೊಂಡು ಬರಲು ತಿಳಿಸು; ಅವನು ಬರುವವರೆಗೂ ನಾವು ಊಟಕ್ಕೆ ಕುಳಿತುಕೊಳ್ಳಬಾರದು” ಎಂದು ಹೇಳಲು ಇಷಯನು ಅವನನ್ನು ಕರೆದು ಕರೆದುಕೊಂಡು ಬರಲು ತಿಳಿಸಿದನು.
- ಕುರುಬನಾಗಿ ಯಾಕೋಬನು: ಹಗಲಿನಲ್ಲಿ ಬಿಸಿಲು, ರಾತ್ರಿಯಲ್ಲಿ ಚಳಿ, ಕಾಡುಮೃಗಗಳಿಂದ ನಷ್ಟಆದಿ 31:38–40
ವಚನಗಳು
ಆದಿ 31:38–40“ನಾನು ಇಪ್ಪತ್ತು ವರ್ಷ ನಿನ್ನ ಸಂಗಡ ಇದ್ದೆನು. ನಿನ್ನ ಹಿಂಡಿನ ಹೆಣ್ಣು ಆಡುಕುರಿಗಳನ್ನು ಕಂದು ಹಾಕಲಿಲ್ಲ. ನಿನ್ನ ಹಿಂಡಿನ ಟಗರುಗಳನ್ನು ನಾನೇನೂ ತಿಂದುಬಿಡಲಿಲ್ಲ. ಕಾಡುಮೃಗಗಳಿಂದ ಕೊಲ್ಲಲ್ಪಟ್ಟ ಕುರಿ, ಆಡುಗಳನ್ನು ನಿನ್ನ ಭಾಗಕ್ಕೆ ಹಾಕದೆ ನಾನೇ ನಷ್ಟವನ್ನು ಹೊತ್ತೆನು. ಹಗಲಿನಲ್ಲಿ, ಇರುಳಿನಲ್ಲಿ ಕಳೆದು ಹೋದದ್ದರ ಲೆಕ್ಕವನ್ನು ನನ್ನಿಂದ ತೆಗೆದುಕೊಂಡೆ. ಹಗಲಿನಲ್ಲಿ ಬಿಸಿಲಿನಿಂದಲೂ, ಇರುಳಲ್ಲಿ ಚಳಿಯಿಂದಲೂ ಬಾಧೆಪಟ್ಟೆನು, ನಿದ್ದೆಮಾಡುವುದಕ್ಕಾದರೂ ಅವಕಾಶ ಸಿಗಲಿಲ್ಲ, ನನ್ನ ಸ್ಥಿತಿ ಹೀಗಿತ್ತು.
- ಯಾಕೋಬನ ಸಂಬಳ: ಮಚ್ಚೆಮಚ್ಚೆಯಾದ, ಚುಕ್ಕೆಚುಕ್ಕೆಯಾದ ಮತ್ತು ಕಪ್ಪು ಬಣ್ಣದ ಪ್ರಾಣಿಗಳುಆದಿ 30:32
ವಚನಗಳು
ಆದಿ 30:32ಅದೇನೆಂದರೆ, “ಈ ಹೊತ್ತು ನಾನು ನಿನ್ನ ಹಿಂಡಿನೊಳಗೆ ಹೋಗಿ, ಕುರಿಗಳಲ್ಲಿ ಚುಕ್ಕೆ ಮತ್ತು ಮಚ್ಚೆಗಳಿರುವವುಗಳನ್ನೂ, ಕುರಿಗಳಲ್ಲಿ ಕಪ್ಪಾಗಿರುವವುಗಳನ್ನೂ, ಆಡುಗಳಲ್ಲಿ ಚುಕ್ಕೆ ಮತ್ತು ಮಚ್ಚೆಗಳಿರುವುಗಳನ್ನೂ ವಿಂಗಡಿಸುವೆನು. ಅವೇ ನನ್ನ ಸಂಬಳವಾಗಿರಲಿ.
- ನೀರಿನ ತೊಟ್ಟಿಗಳ ಬಳಿ ಅವನು ಸುಲಿದಿಟ್ಟ ಕೋಲುಗಳು ಮತ್ತು ಪಟ್ಟೆಪಟ್ಟೆಯಾದ ಮರಿಗಳುಆದಿ 30:37–39
ವಚನಗಳು
ಆದಿ 30:37–39ಹೀಗಿರುವಲ್ಲಿ ಯಾಕೋಬನು ಚಿನಾರು, ಬಾದಾಮಿ, ಅರ್ಮೋನ್ ಎಂಬ ಮರಗಳ ಹಸಿ ಕೋಲುಗಳನ್ನು ತೆಗೆದುಕೊಂಡು ಪಟ್ಟೆಪಟ್ಟೆಯಾಗಿ ತೊಗಟೆಯನ್ನು ಸುಲಿದು, ಅವುಗಳಲ್ಲಿರುವ ಬಿಳಿಯ ಬಣ್ಣವು ಕಾಣಿಸುವಂತೆ ಮಾಡಿದನು. ಆ ಕೋಲುಗಳನ್ನು ಆಡುಕುರಿಗಳ ಹಿಂಡು ನೀರು ಕುಡಿಯುವ ತೊಟ್ಟಿಗಳಲ್ಲಿ ಇಟ್ಟನು. ಆಡುಕುರಿಗಳಿಗೆ ನೀರು ಕುಡಿಯುವ ಸಮಯ, ಸಂಗಮ ಸಮಯ. ಆಡುಕುರಿಗಳು ಆ ಕೋಲುಗಳನ್ನು ನೋಡುತ್ತಾ ಸಂಗಮಮಾದಿದ್ದರಿಂದ ರೇಖೆ, ಚುಕ್ಕೆ, ಮಚ್ಚೆಗಳುಳ್ಳ ಮರಿಗಳನ್ನು ಈಯುತ್ತಿದ್ದವು.
- ಕುರುಬರು ರಾತ್ರಿಯಲ್ಲಿ ತಮ್ಮ ಮಂದೆಗಳನ್ನು ಕಾಯುತ್ತಿದ್ದರುಲೂಕ 2:8
ವಚನಗಳು
ಲೂಕ 2:8ಆ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದುಕೊಂಡು ರಾತ್ರಿಯಲ್ಲಿ ತಮ್ಮ ಕುರಿಹಿಂಡನ್ನು ಕಾಯುತ್ತಿರಲಾಗಿ,
- ಕುರಿಗಳಿಗೆ ಕುರುಬನ ಸ್ವರ ಗೊತ್ತು; ಅವನು ಅವುಗಳನ್ನು ಹೆಸರು ಹಿಡಿದು ಕರೆಯುತ್ತಾನೆಯೋಹಾ 10:3–4
ವಚನಗಳು
ಯೋಹಾ 10:3–4ಬಾಗಿಲು ಕಾಯುವವನು ಅವನಿಗೆ ಬಾಗಿಲನ್ನು ತೆರೆಯುತ್ತಾನೆ; ಕುರಿಗಳು ಅವನ ಸ್ವರಕ್ಕೆ ಕಿವಿಗೊಡುತ್ತವೆ. ಅವನು ತನ್ನ ಸ್ವಂತ ಕುರಿಗಳ ಹೆಸರು ಹೇಳಿ ಕರೆದು ಅವುಗಳನ್ನು ಹೊರಗೆ ಬಿಡುತ್ತಾನೆ. ತನ್ನ ಕುರಿಗಳನ್ನೆಲ್ಲಾ ಹೊರಗೆ ಬಿಟ್ಟ ಮೇಲೆ ತಾನು ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಸ್ವರವನ್ನು ತಿಳಿದಿರುವುದರಿಂದ ಅವನನ್ನು ಹಿಂಬಾಲಿಸುತ್ತವೆ.
ಉಣ್ಣೆ, ಹಾಲು ಮತ್ತು ಉಣ್ಣೆ ಕತ್ತರಿಸುವುದು
- ಮಂದೆಯ ಹಾಲು, ಕುರಿಮರಿಗಳ ಮತ್ತು ಬಾಷಾನಿನ ಟಗರುಗಳ ಕೊಬ್ಬುಧರ್ಮೋ 32:14
ವಚನಗಳು
ಧರ್ಮೋ 32:14ಆಹಾರಕ್ಕಾಗಿ ಆಕಳಿನ ಮೊಸರು, ಆಡು ಕುರಿಗಳ ಹಾಲು, ಕೊಬ್ಬಿದ ಕುರಿ ಟಗರುಗಳ ಮಾಂಸವು, ಬಾಷಾನ್ ಸೀಮೆಯ ಉತ್ತಮಪಶುಗಳು, ಹೋತಗಳು, ಶ್ರೇಷ್ಠವಾದ ಗೋದಿ ಇವುಗಳನ್ನೂ ಮತ್ತು ಪಾನಕ್ಕಾಗಿ ದ್ರಾಕ್ಷಿಯರಸವನ್ನೂ ಕೊಟ್ಟದ್ದೂ; ಇದನ್ನೆಲ್ಲಾ ನೆನಪಿಗೆ ತಂದುಕೊಳ್ಳಿರಿ.”
- ರಾಹೇಲಳು ವಿಗ್ರಹಗಳನ್ನು ತೆಗೆದುಕೊಂಡಾಗ ಲಾಬಾನನು ತನ್ನ ಕುರಿಗಳ ಉಣ್ಣೆ ಕತ್ತರಿಸಲು ಹೋಗಿದ್ದನುಆದಿ 31:19
ವಚನಗಳು
ಆದಿ 31:19ಆಗ ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವುದಕ್ಕೋಸ್ಕರ ಹೋಗಿದ್ದನು. ಹೀಗಿರುವಲ್ಲಿ ರಾಹೇಲಳು ತನ್ನ ತಂದೆಯ ಮನೆಯಲ್ಲಿದ್ದ ವಿಗ್ರಹಗಳನ್ನು ಕದ್ದುಕೊಂಡಳು.
- ಯೆಹೂದನು ತಿಮ್ನಾದಲ್ಲಿದ್ದ ತನ್ನ ಉಣ್ಣೆ ಕತ್ತರಿಸುವವರ ಬಳಿಗೆ ಹೋದನುಆದಿ 38:12–13
ವಚನಗಳು
ಆದಿ 38:12–13ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ತೀರಿಕೊಂಡಳು. ಯೆಹೂದನು ತನಗೆ ದುಃಖಶಮನವಾದ ಮೇಲೆ ತನ್ನ ಕುರಿಗಳ ಉಣ್ಣೆ ಕತ್ತರಿಸುವವರ ಬಳಿಗೆ ತನ್ನ ಸ್ನೇಹಿತನಾದ ಹೀರಾ ಎಂಬ ಅದುಲ್ಲಾಮ್ಯನ ಜೊತೆಯಲ್ಲಿ ಗಟ್ಟಾ ಹತ್ತಿ ತಿಮ್ನಾ ಊರಿಗೆ ಹೋದನು. ಆಗ ತಾಮಾರಳಿಗೆ, “ಮಾವನು ತನ್ನ ಕುರಿಗಳ ಉಣ್ಣೇ ಕತ್ತರಿಸುವುದಕ್ಕೋಸ್ಕರ ತಿಮ್ನಾ ಊರಿಗೆ ಹೋಗುತ್ತಿದ್ದಾನೆ” ಎಂದು ತಿಳಿದು ಬಂದಿತು
- ನಾಬಾಲನಿಗೆ 3,000 ಕುರಿಗಳೂ 1,000 ಆಡುಗಳೂ ಇದ್ದವು; ಅವನು ಕರ್ಮೆಲಿನಲ್ಲಿ ಉಣ್ಣೆ ಕತ್ತರಿಸುತ್ತಿದ್ದನು1 ಸಮು 25:2
ವಚನಗಳು
1 ಸಮು 25:2ಕರ್ಮೆಲಿನಲ್ಲಿ ಸ್ವಂತ ಸೊತ್ತು ಹೊಂದಿದ್ದ ಒಬ್ಬ ಮನುಷ್ಯನಿದ್ದನು. ಅವನು ಮಾವೋನಿನಲ್ಲಿ ವಾಸಿಸುತ್ತಿದ್ದನು. ಅವನ ಹೆಸರು ನಾಬಾಲ್.
- ಉಣ್ಣೆ ಕತ್ತರಿಸುವ ಕಾಲವು ಔತಣದ ಕಾಲ: ನಾಬಾಲನದು ಮತ್ತು ಅಬ್ಷಾಲೋಮನದು1 ಸಮು 25:11, 1 ಸಮು 25:36, 2 ಸಮು 13:23–24
ವಚನಗಳು
1 ಸಮು 25:11ಉಣ್ಣೆಕತ್ತರಿಸುವವರಿಗೋಸ್ಕರ ನಾನು ಸಿದ್ಧ ಮಾಡಿಸಿರುವ ಮಾಂಸವನ್ನು ಆಹಾರಪಾನಗಳನ್ನೂ, ಎಲ್ಲಿಂದಲೋ ಬಂದವರಿಗೆ ಕೊಟ್ಟುಬಿಡಬೇಕೋ?” ಎಂದು ಉತ್ತರ ಕೊಟ್ಟನು.
1 ಸಮು 25:36ಅಬೀಗೈಲಳು ನಾಬಾಲನ ಬಳಿಗೆ ಬಂದಳು. ಅವನು ತನ್ನ ಮನೆಯಲ್ಲಿ ರಾಜರಂತೆ ಒಂದು ದೊಡ್ಡ ಔತಣವನ್ನು ಮಾಡಿಸಿ ಬಹಳವಾಗಿ ಕುಡಿದು ಬಹು ಸಂಭ್ರಮದಿಂದ ಕಾರಣ ಆಕೆಯು ಮರುದಿನದ ವರೆಗೆ ಇದರ ವಿಷಯವಾಗಿ ಏನೂ ಹೇಳಲಿಲ್ಲ.
2 ಸಮು 13:23–24ಎರಡು ವರ್ಷಗಳಾದ ನಂತರ ಅಬ್ಷಾಲೋಮನು ಒಂದು ದಿನ ಎಫ್ರಾಯೀಮಿನ ಬಳಿಯಲ್ಲಿರುವ ಬಾಳ್ ಹಾಚೋರಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುವಾಗ ಎಲ್ಲಾ ರಾಜಪುತ್ರರನ್ನು ಔತಣಕ್ಕೆ ಕರೆದನು. ಅವನು ಅರಸನ ಬಳಿಗೆ ಹೋಗಿ ಅವನನ್ನು, “ಸ್ವಾಮೀ, ನಿನ್ನ ಸೇವಕನು ಕುರಿಗಳ ಉಣ್ಣೆ ಕತ್ತರಿಸುವವರನ್ನು ಕರೆಸಿದ್ದಾನೆ. ಅರಸನು ತನ್ನ ಸೇವಕರೊಡನೆ ಅವನ ಬಳಿಗೆ ಬರಲಿ” ಎಂದು ಬೇಡಿಕೊಂಡನು.
- ಮಂದೆಯಿಂದ ಮೊದಲು ಕತ್ತರಿಸಿದ ಉಣ್ಣೆಯು ಯಾಜಕರಿಗೆ ಸೇರುತ್ತಿತ್ತುಧರ್ಮೋ 18:3–4
ವಚನಗಳು
ಧರ್ಮೋ 18:3–4ಜನರ ಕಡೆಯಿಂದ ಯಾಜಕರು ಹೊಂದಬೇಕಾದವುಗಳು ಯಾವುವೆಂದರೆ: ದನಗಳಲ್ಲಿಯಾಗಲಿ, ಆಡು ಮತ್ತು ಕುರಿಗಳಲ್ಲಿಯಾಗಲಿ ಪಶುವನ್ನು ಕೊಯಿದು ಯಜ್ಞಮಾಡುವವರೆಲ್ಲರೂ ಅದರ ಮುಂದೊಡೆಯನ್ನೂ, ಎರಡು ದವಡೆಗಳನ್ನೂ, ಕೋಷ್ಠವನ್ನೂ (ಒಳಭಾಗವನ್ನು) ಯಾಜಕರಿಗೆ ಕೊಡಬೇಕು. ಧಾನ್ಯ, ದ್ರಾಕ್ಷಾರಸ ಮತ್ತು ಎಣ್ಣೆ ಇವುಗಳ ಪ್ರಥಮಫಲಗಳನ್ನು ಹಾಗೂ ಮೊದಲನೆಯ ಸಾರಿ ಕತ್ತರಿಸುವ ಕುರಿಗಳ ಉಣ್ಣೆಯನ್ನೂ ಅವರಿಗೆ ಕೊಡಬೇಕು.
- ಯೋಬನು ತನ್ನ ಕುರಿಗಳ ಉಣ್ಣೆಯಿಂದ ಬಡವರನ್ನು ಬೆಚ್ಚಗಿಟ್ಟನುಯೋಬ 31:20
ವಚನಗಳು
ಯೋಬ 31:20ಅವರ ಸೊಂಟವು ನನ್ನ ಕುರಿಗಳ ಉಣ್ಣೆಯಿಂದ ಬೆಚ್ಚಗಾಗಿ, ನಾನು ಅವರಿಂದ ಹರಸಲ್ಪಡಲಿಲ್ಲವೋ?
ಮಂದೆಗಳ ಸಂಖ್ಯೆ
- ಮೋವಾಬಿನ ಅರಸನಾದ ಮೇಶನು 100,000 ಕುರಿಮರಿಗಳನ್ನೂ 100,000 ಟಗರುಗಳ ಉಣ್ಣೆಯನ್ನೂ ಕಪ್ಪವಾಗಿ ಕೊಟ್ಟನು2 ಅರಸು 3:4
ವಚನಗಳು
2 ಅರಸು 3:4ಅನೇಕ ಕುರಿಹಿಂಡುಗಳನ್ನು ಹೊಂದಿದ್ದ ಮೋವಾಬ್ಯರ ಅರಸನಾದ ಮೇಷನೆಂಬುವನು ಇಸ್ರಾಯೇಲರ ಅರಸನಿಗೆ ಒಂದು ಲಕ್ಷ ಕುರಿಗಳ ಮತ್ತು ಒಂದು ಲಕ್ಷ ಟಗರುಗಳ ಉಣ್ಣೆಯನ್ನು ಕಪ್ಪವಾಗಿ ಕೊಡುತ್ತಿದ್ದನು.
- ಅರಬರು ಯೆಹೋಷಾಫಾಟನಿಗೆ 7,700 ಟಗರುಗಳನ್ನೂ 7,700 ಹೋತಗಳನ್ನೂ ತಂದರು2 ಪೂರ್ವ 17:11
ವಚನಗಳು
2 ಪೂರ್ವ 17:11ಫಿಲಿಷ್ಟಿಯರಲ್ಲಿ ಕೆಲವರು ಯೆಹೋಷಾಫಾಟನಿಗೆ ಕಾಣಿಕೆಯನ್ನೂ, ಕಪ್ಪವನ್ನಾಗಿ ಬೆಳ್ಳಿಯನ್ನೂ ತಂದುಕೊಡುತ್ತಿದ್ದರು. ಅರಬಿಯರು ತಮ್ಮ ಪಶುಪ್ರಾಣಿಗಳ ಹಿಂಡುಗಳಿಂದ ಏಳು ಸಾವಿರದ ಏಳು ನೂರು ಟಗರುಗಳನ್ನೂ, ಏಳು ಸಾವಿರದ ಏಳು ನೂರು ಆಡುಗಳನ್ನೂ ಕೊಡುತ್ತಿದ್ದರು.
- ಹಗ್ರೀಯರಿಂದ 250,000 ಕುರಿಗಳನ್ನು ವಶಪಡಿಸಿಕೊಳ್ಳಲಾಯಿತು1 ಪೂರ್ವ 5:21
ವಚನಗಳು
1 ಪೂರ್ವ 5:21ಈ ಯುದ್ಧದಲ್ಲಿ ಅವರ ಹಿಂಡುಗಳನ್ನು ಅಂದರೆ, ಐವತ್ತು ಸಾವಿರ ಒಂಟೆಗಳು, ಎರಡು ಲಕ್ಷದ ಐವತ್ತು ಸಾವಿರ ಕುರಿಗಳೂ, ಎರಡು ಸಾವಿರ ಕತ್ತೆಗಳು ಮತ್ತು ಒಂದು ಲಕ್ಷ ಜನರನ್ನೂ ಕೊಳ್ಳೆಹಿಡಿದರು.
- ಯೋಬನಿಗೆ 7,000 ಕುರಿಗಳಿದ್ದವು, ಆ ಮೇಲೆ 14,000ಯೋಬ 1:3, ಯೋಬ 42:12
ವಚನಗಳು
ಯೋಬ 1:3ಅವನಿಗೆ ಏಳು ಸಾವಿರ ಕುರಿಗಳೂ, ಮೂರು ಸಾವಿರ ಒಂಟೆಗಳೂ, ಐನೂರು ಜೋಡಿ ಎತ್ತುಗಳೂ, ಐನೂರು ಹೆಣ್ಣು ಕತ್ತೆಗಳೂ, ಬಹುಮಂದಿ ಸೇವಕರೂ ಇದ್ದುದರಿಂದ ಅವನು ಮೂಡಣ ದೇಶದವರಲ್ಲೆಲ್ಲಾ ಹೆಚ್ಚು ಸ್ವತ್ತುಳ್ಳವನಾಗಿದ್ದನು.
ಯೋಬ 42:12ಯೆಹೋವನು ಯೋಬನ ಮೊದಲನೆಯ ಸ್ಥಿತಿಗಿಂತಲೂ ಅವನ ಕಡೆಯ ಸ್ಥಿತಿಯನ್ನು ಹೀಗೆ ಹೆಚ್ಚಾಗಿ ಆಶೀರ್ವದಿಸಿದನು. ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ, ಆರು ಸಾವಿರ ಒಂಟೆಗಳೂ, ಒಂದು ಸಾವಿರ ಜೋಡಿ ಎತ್ತುಗಳೂ, ಒಂದು ಸಾವಿರ ಹೆಣ್ಣುಕತ್ತೆಗಳೂ ಉಂಟಾದವು.
- ಕೇದಾರಿನವರು ತೂರಿನೊಂದಿಗೆ ಕುರಿಮರಿಗಳ, ಟಗರುಗಳ ಮತ್ತು ಹೋತಗಳ ವ್ಯಾಪಾರ ಮಾಡಿದರುಯೆಹೆ 27:21
ವಚನಗಳು
ಯೆಹೆ 27:21ಅರಬರು ಮತ್ತು ಕೇದಾರಿನ ಪ್ರಧಾನರೂ ನಿನ್ನ ಕೈಕೆಳಗಿನ ವರ್ತಕರಾಗಿದ್ದರು; ಕುರಿಮರಿಗಳಿಂದಲೂ, ಟಗರುಗಳಿಂದಲೂ, ಹೋತಗಳಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದ್ದರು.
- ದೇವಾಲಯದ ಪ್ರತಿಷ್ಠೆಯಲ್ಲಿ ಸೊಲೊಮೋನನು 120,000 ಕುರಿಗಳನ್ನು ಅರ್ಪಿಸಿದನು1 ಅರಸು 8:63
ವಚನಗಳು
1 ಅರಸು 8:63ಸೊಲೊಮೋನನು ಯೆಹೋವನಿಗೋಸ್ಕರ ಮಾಡಿದ ಸಮಾಧಾನಯಜ್ಞಕ್ಕಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ ಮತ್ತು ಕುರಿಗಳು ಲಕ್ಷದ ಇಪ್ಪತ್ತು ಸಾವಿರ, ಈ ಪ್ರಕಾರ ಅರಸನೂ ಎಲ್ಲಾ ಇಸ್ರಾಯೇಲರೂ ಯೆಹೋವನ ಆಲಯವನ್ನು ಪ್ರತಿಷ್ಠೆ ಮಾಡಿದರು.
ಧರ್ಮಶಾಸ್ತ್ರದಲ್ಲಿ
- ಕದ್ದ ಕುರಿಯನ್ನು ಕೊಯ್ದರೆ ಅಥವಾ ಮಾರಿದರೆ: ನಾಲ್ಕು ಕುರಿಗಳನ್ನು ಈಡು ಕೊಡಬೇಕುವಿಮೋ 22:1
ವಚನಗಳು
ವಿಮೋ 22:1ಒಬ್ಬನು ಎತ್ತನ್ನಾಗಲಿ, ಕುರಿಯನ್ನಾಗಲಿ ಕದ್ದುಕೊಂಡು ಕೊಯ್ದರೆ ಇಲ್ಲವೆ ಮಾರಿದರೆ ಅವನು ಒಂದು ಎತ್ತಿಗೆ ಬದಲಾಗಿ ಐದು ಎತ್ತುಗಳನ್ನು ಒಂದು ಕುರಿಗೆ ಬದಲಾಗಿ ನಾಲ್ಕು ಕುರಿಗಳನ್ನು ಕೊಡಬೇಕು.
- ಕಾಡುಮೃಗಗಳು ಸೀಳಿದ ಕುರಿ: ಸಾಕ್ಷಿಗಾಗಿ ಅದರ ಶವವನ್ನು ತರಬೇಕುವಿಮೋ 22:10, ವಿಮೋ 22:13
ವಚನಗಳು
ವಿಮೋ 22:10ಒಬ್ಬನು ತನ್ನ ನೆರೆಯವನಿಗೆ ಕತ್ತೆಯನ್ನಾಗಲಿ, ಎತ್ತನ್ನಾಗಲಿ, ಕುರಿಯನ್ನಾಗಲಿ ಬೇರೆ ಯಾವ ಪಶುವನ್ನಾಗಲಿ ಕಾಪಾಡುವುದಕ್ಕೆ ಕೊಟ್ಟಿದ್ದು, ಅದು ಸತ್ತರೆ ಇಲ್ಲವೆ ಗಾಯಗೊಂಡರೆ ಇಲ್ಲವೆ ಯಾರೂ ತಿಳಿಯದಂತೆ ಕಳ್ಳತನವಾದರೆ,
ವಿಮೋ 22:13ಕಾಡುಮೃಗವು ಆ ಪಶುವನ್ನು ಕೊಂದಿದ್ದರೆ, ಅದರ ಹೆಣವನ್ನು ಗುರುತಿಗಾಗಿ ತೋರಿಸಲಿ. ಕಾಡುಮೃಗ ಕೊಂದಿದ್ದಕ್ಕೆ ಈಡು ಕೊಡಬೇಕಾದ ಅಗತ್ಯವಿಲ್ಲ.
ಯೆರೂಸಲೇಮಿನಲ್ಲಿ
- ಯಾಜಕರು ಕುರಿಬಾಗಿಲನ್ನು ಪುನಃ ಕಟ್ಟಿದರುನೆಹೆ 3:1
ವಚನಗಳು
ನೆಹೆ 3:1ಹೀಗೆ ಮಹಾಯಾಜಕನಾದ ಎಲ್ಯಾಷೀಬನೂ ಅವನ ಕುಟುಂಬದ ಯಾಜಕರೂ ಕುರಿಬಾಗಿಲನ್ನು ಕಟ್ಟಿ ಅದನ್ನು ಪ್ರತಿಷ್ಠಿಸಿ ಅದಕ್ಕೆ ಬಾಗಿಲುಗಳನ್ನು ಇಟ್ಟರು. ಅಲ್ಲಿಂದ ಹಮ್ಮೆಯಾ ಗೋಪುರದವರೆಗೆ ಗೋಡೆಕಟ್ಟಿ ಅದನ್ನು ಪ್ರತಿಷ್ಠಿಸಿದರು. ಅಲ್ಲಿಂದ ಹನನೇಲ್ ಗೋಪುರದವರೆಗೂ ಕಟ್ಟಿದರು.
- ಬೇತ್ಸಥಾ ಕೊಳವು ಕುರಿಬಾಗಿಲಿನ ಬಳಿಯಲ್ಲಿತ್ತುಯೋಹಾ 5:2
ವಚನಗಳು
ಯೋಹಾ 5:2ಅಲ್ಲಿ ಕುರಿಬಾಗಿಲು ಎಂಬ ಸ್ಥಳದ ಬಳಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಅದನ್ನು ಇಬ್ರಿಯ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯುತ್ತಾರೆ.
ನುಡಿಗಳು
- ಹಲ್ಲುಗಳು “ಉಣ್ಣೆ ಕತ್ತರಿಸಿ ಸ್ನಾನಮಾಡಿಸಿದ ಕುರಿಮಂದೆಯ ಬಿಳುಪಿನಂತಿವೆ”ಪ.ಗೀ 4:2
ವಚನಗಳು
ಪ.ಗೀ 4:2ಉಣ್ಣೆ ಕತ್ತರಿಸಿ ಸ್ನಾನಮಾಡಿಸಿದ ಕುರಿಮಂದೆಯ ಬಿಳುಪಿನಂತಿವೆ ನಿನ್ನ ಹಲ್ಲುಗಳು, ಯಾವುದೂ ಒಂಟಿಯಾಗಿರದೆ ಎಲ್ಲವೂ ಒಟ್ಟಾಗಿ ಜೋಡಿಯಾಗಿವೆ.
- “ನಿನ್ನ ಹಿಂಡುಗಳ ಸ್ಥಿತಿಯನ್ನು ಚೆನ್ನಾಗಿ ತಿಳಿದುಕೊಂಡಿರು”ಜ್ಞಾನೋ 27:23
ವಚನಗಳು
ಜ್ಞಾನೋ 27:23ನಿನ್ನ ಹಿಂಡುಗಳ ಸ್ಥಿತಿಯನ್ನು ಚೆನ್ನಾಗಿ ತಿಳಿದುಕೊಂಡಿರು, ನಿನ್ನ ಮಂದೆಗಳ ಮೇಲೆ ಮನಸ್ಸಿಡು.
- “ಕುರಿಗಳಿಂದ ನಿನಗೆ ಉಡುಪಾಗುವುದು”ಜ್ಞಾನೋ 27:26
ವಚನಗಳು
ಜ್ಞಾನೋ 27:26ಕುರಿಗಳಿಂದ ನಿನಗೆ ಉಡುಪಾಗುವುದು, ಆಡುಗಳಿಂದ ಹೊಲದ ಕ್ರಯ ಹೆಚ್ಚುವುದು.
- “ಉಣ್ಣೆ ಕತ್ತರಿಸುವವರ ಮುಂದೆ ಮೌನವಾಗಿರುವ ಕುರಿಯ ಹಾಗೂ”ಯೆಶಾ 53:7
ವಚನಗಳು
ಯೆಶಾ 53:7ಅವನು ಬಾಧೆಗೆ ಒಳಗಾಗಿ ತನ್ನನ್ನು ತಗ್ಗಿಸಿಕೊಂಡನು, ಬಾಯಿ ತೆರೆಯಲಿಲ್ಲ; ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆಯೂ, ಉಣ್ಣೆ ಕತ್ತರಿಸುವವರ ಮುಂದೆ ಮೌನವಾಗಿರುವ ಕುರಿಯ ಹಾಗೂ ಇದ್ದನು, ಬಾಯಿ ತೆರೆಯಲೇ ಇಲ್ಲ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು