ಅನ್ವೇಷಿಸಿ › ವಿಷಯಗಳು › ಹಡಗುಗಳು ಮತ್ತು ಸಮುದ್ರಯಾನ
ಆಶ್ಚರ್ಯಕರ ವಿವರಗಳು
ಬೈಬಲಿನಲ್ಲಿ ಹಡಗುಗಳು ಮತ್ತು ಸಮುದ್ರಯಾನ
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 31 ವಾಕ್ಯಭಾಗಗಳು, ಸಾಲು ಸಾಲಾಗಿ.
- ನೋಹನ ನಾವೆ: ತುರಾಯಿ ಮರ, ಕೋಣೆಗಳುಳ್ಳದ್ದು, ರಾಳ ಹಚ್ಚಿದ್ದುಆದಿ 6:14–15
ವಚನಗಳು
ಆದಿ 6:14–15ನೀನು ನಿನಗೋಸ್ಕರ ತುರಾಯಿ ಮರದಿಂದ ನಾವೆಯನ್ನು ಮಾಡಿಕೋ; ಅದರಲ್ಲಿ ತುಂಬ ಕೋಣೆಗಳು ಇರಬೇಕು; ಒಳಕ್ಕೂ ಹೊರಕ್ಕೂ ರಾಳವನ್ನು ಹಚ್ಚು. ನೀನು ಅದನ್ನು ಮಾಡಬೇಕಾದ ವಿಧಾನ ಹೇಗೆಂದರೆ, ಅದು ಮುನ್ನೂರು ಮೊಳ ಉದ್ದವೂ, ಐವತ್ತು ಮೊಳ ಅಗಲವೂ, ಮೂವತ್ತು ಮೊಳ ಎತ್ತರವೂ ಉಳ್ಳದ್ದಾಗಿರಬೇಕು.
- ಸೊಲೊಮೋನನು ಕೆಂಪುಸಮುದ್ರದ ತೀರದ ಎಚ್ಯೋನ್ಗೆಬೆರಿನಲ್ಲಿ ಹಡಗುಗಳನ್ನು ಕಟ್ಟಿಸಿದನು1 ಅರಸು 9:26
ವಚನಗಳು
1 ಅರಸು 9:26ಇದಲ್ಲದೆ ಅರಸನಾದ ಸೊಲೊಮೋನನು ಎದೋಮ್ ದೇಶದಲ್ಲಿ ಏಲೋತಿನ ಹತ್ತಿರ ಕೆಂಪುಸಮುದ್ರದ ತೀರದಲ್ಲಿರುವ ಎಚ್ಯೋನ್ಗೆಬೆರಿನಲ್ಲಿ ಹಡಗುಗಳನ್ನು ಕಟ್ಟಿಸಿದನು.
- ಹೀರಾಮನ ನಾವಿಕರು ಓಫೀರಿನಿಂದ 450 ತಲಾಂತು ಚಿನ್ನವನ್ನು ತಂದರು2 ಪೂರ್ವ 8:18
ವಚನಗಳು
2 ಪೂರ್ವ 8:18ಹೂರಾಮನು ಅವನಿಗೆ ತನ್ನ ಆಳುಗಳ ಮುಖಾಂತರ ಹಡುಗುಗಳನ್ನು ಕಳುಹಿಸಿದ್ದಲ್ಲದೆ, ಸಮುದ್ರ ಪ್ರಯಾಣದಲ್ಲಿ ನಿಪುಣರಾದ ನಾವಿಕರನ್ನು ಕಳುಹಿಸಿದನು. ಅವರು ಸೊಲೊಮೋನನ ಸೇವಕರೊಡನೆ ಓಫೀರಿಗೆ ಪ್ರಯಾಣಮಾಡಿ ಅಲ್ಲಿಂದ ಅರಸನಾದ ಸೊಲೊಮೋನನಿಗೆ ನಾನೂರೈವತ್ತು ತಲಾಂತು ಬಂಗಾರವನ್ನು ತಂದುಕೊಟ್ಟರು.
- ಪ್ರತಿ ಮೂರು ವರ್ಷಕ್ಕೊಮ್ಮೆ: ಚಿನ್ನ, ಬೆಳ್ಳಿ, ದಂತ, ಕೋತಿಗಳು ಮತ್ತು ನವಿಲುಗಳು1 ಅರಸು 10:22
ವಚನಗಳು
1 ಅರಸು 10:22ಹೀರಾಮನ ನಾವೆಗಳ ಜೊತೆಯಲ್ಲಿ ಸೊಲೊಮೋನನ ತಾರ್ಷೀಷ್ ಹಡಗುಗಳು ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ವಾನರಗಳನ್ನು ಮತ್ತು ನವಿಲುಗಳನ್ನೂ ತರುತ್ತಿದ್ದವು.
- ಯೆಹೋಷಾಫಾಟನ ಹಡಗುಗಳು ಪ್ರಯಾಣ ಹೊರಡುವ ಮೊದಲೇ ಒಡೆದುಹೋದವು1 ಅರಸು 22:48, 2 ಪೂರ್ವ 20:36–37
ವಚನಗಳು
1 ಅರಸು 22:48ಇದಲ್ಲದೆ ಯೆಹೋಷಾಫಾಟನು ಓಫೀರಿನಿಂದ ಬಂಗಾರ ತರುವುದಕ್ಕಾಗಿ ತಾರ್ಷಿಷ್ ಹಡಗುಗಳನ್ನು ಮಾಡಿಸಿದನು.
2 ಪೂರ್ವ 20:36–37ಅವರು ತಾರ್ಷೀಷಿಗೆ ಹೋಗುವುದಕ್ಕಾಗಿ ಹಡುಗುಗಳನ್ನು ಕಟ್ಟಬೇಕೆಂದು ಒಡಬಂಡಿಕೆ ಮಾಡಿಕೊಂಡು ಅವುಗಳನ್ನು ಎಚ್ಯೋನ್ ಗೆಬೆರಿನಲ್ಲಿ ಕಟ್ಟಿಸಿದರು. ಆಗ ಮಾರೇಷಾ ಊರಿನ ದೋದಾವಾಹುವಿನ ಮಗನಾದ ಎಲೀಯೆಜರನು ಯೆಹೋಷಾಫಾಟನಿಗೆ ವಿರುದ್ಧವಾಗಿ, “ನೀನು ಅಹಜ್ಯನೊಡನೆ ಒಡಬಂಡಿಕೆ ಮಾಡಿಕೊಂಡದ್ದರಿಂದ ಯೆಹೋವನು ನಿನ್ನ ಕೆಲಸವನ್ನು ಹಾಳು ಮಾಡುವನು” ಎಂದು ಪ್ರವಾದಿಸಿದನು. ಆ ಹಡುಗುಗಳು ಒಡೆದು ಹೋದುದರಿಂದ ತಾರ್ಷೀಷಿಗೆ ಪ್ರಯಾಣ ಮಾಡಲು ಸಾಧ್ಯವಾಗಲಿಲ್ಲ.
- ಯೆಹೆಜ್ಕೇಲನು ತೂರನ್ನು ತುರಾಯಿ, ದೇವದಾರು, ಅಲ್ಲೋನ್ ಮರ ಮತ್ತು ನಾರುಬಟ್ಟೆಯ ಹಡಗಾಗಿ ಚಿತ್ರಿಸುತ್ತಾನೆಯೆಹೆ 27:5–7
ವಚನಗಳು
ಯೆಹೆ 27:5–7ಸೆನೀರಿನ ತುರಾಯಿ ಮರದಿಂದ ನಿನ್ನ ಹಲಗೆಗಳನ್ನು ಮಾಡುವುದಕ್ಕೆ ಮತ್ತು ನಿನ್ನ ಸ್ತಂಭವನ್ನು ರಚಿಸುವುದಕ್ಕೆ ಲೆಬನೋನಿನಿಂದ ದೇವದಾರು ಮರವನ್ನು ತಂದರು. ನಿನ್ನ ಹುಟ್ಟುಗೋಲನ್ನು ಬಾಷಾನಿನ ಓಕ್ ಮರದಿಂದ ಮಾಡಿ, ಕಿತ್ತೀಮ್ ದ್ವೀಪದ ಹಲಿಗೆಯಿಂದ ನಿನ್ನ ಹಡಗಿನ ಮೇಲ್ಮಾಳಿಗೆಯನ್ನು ಕಟ್ಟಿ, ಅದನ್ನು ದಂತದಿಂದ ಕೆತ್ತಿದ್ದಾರೆ. ನಿನ್ನ ಹಾಯಿಯು ನಿನಗೆ ಧ್ವಜವಾಗಲೆಂದು ಅದನ್ನು ಐಗುಪ್ತದ ಕಸೂತಿಯ ನಾರು ಬಟ್ಟೆಯಿಂದ ಮಾಡಿದರು. ನಿನ್ನ ಮೇಲ್ಕಟ್ಟನ್ನು ಎಲೀಷ ಕರಾವಳಿಯ ಧೂಮ್ರ ರಕ್ತವರ್ಣಗಳಿಂದ ಚಿತ್ರಿತವಾಗಿದೆ.
- ಆಪು ಹುಲ್ಲಿನ ದೋಣಿಗಳು ದೂತರನ್ನು ನೀರಿನ ಮೇಲೆ ಒಯ್ಯುತ್ತಿದ್ದವುಯೆಶಾ 18:2
ವಚನಗಳು
ಯೆಶಾ 18:2ರಾಯಭಾರಿಗಳನ್ನು ನೀರಿನ ಮೇಲೆ ಬೆಂಡಿನ ದೋಣಿಗಳಲ್ಲಿ ನದಿಯ ಮಾರ್ಗವಾಗಿ ಕಳುಹಿಸುವ ದೇಶ, ವೇಗವಾಗಿ ಬರುತ್ತಿರುವ ದೂತರೇ, ಎತ್ತರವಾದವರೂ, ನಯವಾದ ಚರ್ಮವುಳ್ಳವರೂ, ಸರ್ವ ಭಯಂಕರರೂ, ಮಹಾ ಬಲದಿಂದ ಶತ್ರುಗಳನ್ನು ತುಳಿಯುವವರೂ, ನದಿಗಳಿಂದ ವಿಭಾಗವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರ ಬಳಿಗೆ ಹೋಗಿರಿ.
- ದೊಡ್ಡ ಹಡಗನ್ನು ಬಹಳ ಚಿಕ್ಕ ಚುಕ್ಕಾಣಿಯಿಂದ ನಡೆಸಲಾಗುತ್ತದೆಯಾಕೋ 3:4
ವಚನಗಳು
ಯಾಕೋ 3:4ಹಡಗುಗಳನ್ನು ಸಹ ಗಮನಿಸಿರಿ. ಅವು ಬಹು ದೊಡ್ಡವುಗಳಾಗಿದ್ದರೂ ಬಲವಾದ ಗಾಳಿಯಿಂದ ದಿಕ್ಕು ತಪ್ಪುತ್ತದೆ. ಆದರೂ ನಾವಿಕನು ಬಹಳ ಸಣ್ಣ ಚುಕ್ಕಾಣಿಯಿಂದ ಅವುಗಳನ್ನು ತಾನು ಹೋಗ ಬೇಕಾದ ಕಡೆಗೆ ತಿರುಗಿಸಿಕೊಳ್ಳುತ್ತಾನೆ.
- ಸಮುದ್ರದಲ್ಲಿ ಹಡಗಿನ ದಾರಿ: ಆಗೂರನಿಗೆ ಅತ್ಯಾಶ್ಚರ್ಯಜ್ಞಾನೋ 30:18–19
ವಚನಗಳು
ಜ್ಞಾನೋ 30:18–19ಮೂರು ವಿಷಯಗಳು ನನ್ನ ಬುದ್ಧಿಯನ್ನು ಮೀರಿವೆ, ಹೌದು, ನಾಲ್ಕನ್ನು ಗ್ರಹಿಸಲಾರೆನು; ಯಾವುವೆಂದರೆ, ಆಕಾಶದಲ್ಲಿ ಹದ್ದಿನ ಹಾದಿ, ಬಂಡೆಯ ಮೇಲೆ ಸರ್ಪದ ಸರಣಿ, ಸಾಗರದ ನಡುವೆ ಹಡಗಿನ ಮಾರ್ಗ, ಸ್ತ್ರೀಯಲ್ಲಿ ಪುರುಷನ ಪದ್ಧತಿ, ಇವೇ.
ಸಮುದ್ರಯಾನಗಳು
- ಯೋನನು ತಾರ್ಷೀಷಿಗೆ ಹೋಗುವ ಹಡಗಿಗೆ ಹಣ ಕೊಟ್ಟನುಯೋನ 1:3
ವಚನಗಳು
ಯೋನ 1:3ಆದರೆ ಯೋನನು ಯೆಹೋವನ ಸನ್ನಿಧಿಯಿಂದ ತಪ್ಪಿಸಿಕೊಳ್ಳಲು ತಾರ್ಷೀಷಿಗೆ ಓಡಿಹೋಗಬೇಕೆಂದು ಯೋಚಿಸಿ ಹೊರಟು ಯೊಪ್ಪ ಎಂಬ ಊರಿಗೆ ಬಂದು ಅಲ್ಲಿ ತಾರ್ಷೀಷಿಗೆ ಹೊರಡುವ ಹಡಗನ್ನು ಕಂಡು ಪ್ರಯಾಣದ ದರವನ್ನು ಕೊಟ್ಟು ತಾರ್ಷೀಷಿಗೆ ಪ್ರಯಾಣಮಾಡುತ್ತಿದ್ದ ಹಡಗಿನವರೊಡನೆ ಅದನ್ನು ಹತ್ತಿದನು.
- ಬಿರುಗಾಳಿಯಲ್ಲಿ ನಾವಿಕರು ಸರಕನ್ನು ಸಮುದ್ರಕ್ಕೆ ಎಸೆದರುಯೋನ 1:4–5
ವಚನಗಳು
ಯೋನ 1:4–5ಆಗ ಯೆಹೋವನು ದೊಡ್ಡ ಬಿರುಗಾಳಿಯನ್ನು ಸಮುದ್ರದ ಮೇಲೆ ಬರಮಾಡಿದನು. ಸಮುದ್ರದಲ್ಲಿ ದೊಡ್ಡ ತುಫಾನು ಎದ್ದು ಹಡಗು ಒಡೆದುಹೋಗುವ ಹಾಗಾಯಿತು. ಆಗ ನಾವಿಕರು ಹೆದರಿ ತಮ್ಮತಮ್ಮ ದೇವರುಗಳಿಗೆ ಮೊರೆಯಿಟ್ಟರು. ಹಡಗನ್ನು ಹಗುರ ಮಾಡಲು ಹಡಗಿನಲ್ಲಿರುವ ಸರಕುಗಳನ್ನು ಸಮುದ್ರಕ್ಕೆ ಬಿಸಾಡಿಬಿಟ್ಟರು. ಆದರೆ ಯೋನನು ಹಡಗಿನ ಕೆಳಭಾಗಕ್ಕೆ ಹೋಗಿ ಮಲಗಿ ಗಾಢನಿದ್ರೆ ಮಾಡುತ್ತಿದ್ದನು.
- ಅವರು ಬಲವಾಗಿ ಹುಟ್ಟು ಹಾಕಿದರೂ ದಡ ಸೇರಲಾಗಲಿಲ್ಲಯೋನ 1:13
ವಚನಗಳು
ಯೋನ 1:13ನಾವಿಕರು ಅದಕ್ಕೆ ಒಪ್ಪದೆ ದಡಕ್ಕೆ ಹಿಂತಿರುಗಬೇಕೆಂದು ಹುಟ್ಟುಹಾಕುತ್ತಾ ಬಂದರೂ ಸಹ ದಡ ಸೇರಲು ಆಗಲಿಲ್ಲ; ಸಮುದ್ರವು ಇನ್ನೂ ಅಲ್ಲೋಲಕಲ್ಲೋಲವಾಗುತ್ತಲೇ ಇತ್ತು.
- ಯೇಸು ಸೀಮೋನನ ದೋಣಿಯಿಂದ ಜನಸಮೂಹಕ್ಕೆ ಬೋಧಿಸಿದನುಲೂಕ 5:2–3
ವಚನಗಳು
ಲೂಕ 5:2–3ಯೇಸು ಆ ಸರೋವರದ ದಡದಲ್ಲಿದ್ದ ಎರಡು ದೋಣಿಗಳನ್ನು ಕಂಡನು. ಬೆಸ್ತರು ಅವುಗಳೊಳಗಿಂದ ಹೊರಗೆ ಬಂದು ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು. ಆ ದೋಣಿಗಳಲ್ಲಿ, ಸೀಮೋನನ ದೋಣಿಯನ್ನು ಯೇಸು ಹತ್ತಿ ದಡದಿಂದ ಸ್ವಲ್ಪ ದೂರಕ್ಕೆ ನೂಕಬೇಕೆಂದು ಅವನನ್ನು ಕೇಳಿಕೊಂಡನು. ತರುವಾಯ ಯೇಸು ಕುಳಿತುಕೊಂಡು ದೋಣಿಯೊಳಗಿಂದಲೇ ಆ ಜನರ ಗುಂಪಿಗೆ ಉಪದೇಶಮಾಡಿದನು.
- ಬಿರುಗಾಳಿಯಲ್ಲಿ ಯೇಸು ದೋಣಿಯ ಹಿಂಭಾಗದಲ್ಲಿ ತಲೆದಿಂಬನ್ನು ಒರಗಿ ನಿದ್ರಿಸಿದನುಮಾರ್ಕ 4:37–38
ವಚನಗಳು
ಮಾರ್ಕ 4:37–38ತರುವಾಯ ದೊಡ್ಡ ಬಿರುಗಾಳಿ ಎದ್ದು ಅಲೆಗಳು ಆ ದೋಣಿಗೆ ಬಡಿದು ನೀರು ಒಳಗೆ ನುಗ್ಗಿದ್ದರಿಂದ ಆ ದೋಣಿ ಆಗಲೇ ತುಂಬುವುದಕ್ಕೆ ಬಂದಿತ್ತು. ಆದರೆ ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬನ್ನು ಒರಗಿ ನಿದ್ದೆಮಾಡುತ್ತಿದ್ದನು. ಅವರು ಆತನನ್ನು ಎಬ್ಬಿಸಿ, “ಗುರುವೇ, ನಾವು ಮುಳುಗಿಹೋಗುವುದರಲ್ಲಿ ನಿನಗೆ ಚಿಂತೆಯಿಲ್ಲವೇ” ಎಂದು ಕೇಳಿದರು.
- ಶಿಷ್ಯರು ಗಾಳಿಗೆ ಎದುರಾಗಿ ಹುಟ್ಟು ಹಾಕುತ್ತಾ ಬಹಳ ಕಷ್ಟಪಟ್ಟರುಮಾರ್ಕ 6:48
ವಚನಗಳು
ಮಾರ್ಕ 6:48ಎದುರು ಗಾಳಿ ಬೀಸುತ್ತಿದ್ದುದರಿಂದ ಶಿಷ್ಯರು ಹುಟ್ಟುಗೋಲು ಹಾಕಿ ದಣಿದು ಹೋದದ್ದನ್ನು ಯೇಸು ಕಂಡು ಹೆಚ್ಚುಕಡಿಮೆ ರಾತ್ರಿಯ ನಾಲ್ಕನೆಯ ಜಾವದಲ್ಲಿ ಸಮುದ್ರದ ಮೇಲೆ ನಡೆದು ಅವರ ಕಡೆಗೆ ಬಂದು ಅವರನ್ನು ದಾಟಿ ಮುಂದಕ್ಕೆ ಹೋಗಬೇಕೆಂದಿದ್ದನು.
- ಪೌಲನು ಮೂರು ಸಾರಿ ಹಡಗೊಡೆತಕ್ಕೆ ಸಿಕ್ಕಿದನು, ಒಂದು ದಿನ ನಡುಸಮುದ್ರದಲ್ಲಿ ಕಳೆದನು2 ಕೊರಿ 11:25
ವಚನಗಳು
2 ಕೊರಿ 11:25ಮೂರು ಸಾರಿ ಬಾರುಕೋಲಿನಿಂದ ನನ್ನನ್ನು ಹೊಡೆದರು. ಒಂದು ಸಾರಿ ಜನರು ನನ್ನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು. ಮೂರು ಸಾರಿ ನಾನಿದ್ದ ಹಡಗು ಒಡೆದು ಹೋಯಿತು. ಒಂದು ರಾತ್ರಿ ಒಂದು ಹಗಲು ಸಮುದ್ರದ ನೀರಿನಲ್ಲಿ ಕಳೆದೆನು.
ಪೌಲನು ರೋಮಿಗೆ ಹೋದ ಸಮುದ್ರಯಾನ
- ಆಸ್ಯದ ಕರಾವಳಿಯುದ್ದಕ್ಕೂ ಹೋಗುವ ಅದ್ರಮಿತ್ತಿಯದ ಹಡಗುಅ. ಕೃ 27:2
ವಚನಗಳು
ಅ. ಕೃ 27:2ಆಗ ಅದ್ರಮಿತ್ತಿಯದಿಂದ ಬಂದು ಆಸ್ಯಸೀಮೆಯ ಕರಾವಳಿಯ ಸ್ಥಳಗಳಿಗೆ ಹೋಗುವುದಕ್ಕಿದ್ದ ಒಂದು ಹಡಗನ್ನು ಹತ್ತಿ ಸಮುದ್ರಪ್ರಯಾಣವನ್ನು ಪ್ರಾರಂಭಿಸಿದೆವು. ಮಕೆದೋನ್ಯಕ್ಕೆ ಸೇರಿದ ಥೆಸಲೋನಿಕದ ಅರಿಸ್ತಾರ್ಕನು ನಮ್ಮ ಜೊತೆಯಲ್ಲಿದ್ದನು.
- ಉಪವಾಸದ ದಿನದ ನಂತರ ಸಮುದ್ರಪ್ರಯಾಣವು ಅಪಾಯಕರವಾಗಿತ್ತುಅ. ಕೃ 27:9
ವಚನಗಳು
ಅ. ಕೃ 27:9ಹೀಗೆ ಬಹುಕಾಲ ಕಳೆದುಹೋಯಿತು; ಉಪವಾಸದ ದಿನವು ಮುಗಿದುಹೋಗಿತ್ತು. ಈ ಸಂದರ್ಭದಲ್ಲಿ ಸಮುದ್ರಪ್ರಯಾಣ ಮಾಡುವುದು ಅಪಾಯಕರವಾಗಿದ್ದುದರಿಂದ ಪೌಲನು;
- ಈಶಾನ್ಯ ಮಾರುತವು ಅಪ್ಪಳಿಸಿತು; ಅವರು ಹಡಗಿನ ಕೆಳಗೆ ಹಗ್ಗಗಳನ್ನು ಸುತ್ತಿದರುಅ. ಕೃ 27:14, ಅ. ಕೃ 27:17
ವಚನಗಳು
ಅ. ಕೃ 27:14ಸ್ವಲ್ಪ ಹೊತ್ತಿನಮೇಲೆ ಆ ದ್ವೀಪದ ಮೇಲೆ ಈಶಾನ್ಯ ಮಾರುತ ಎಂಬ ಉರಕಲೋನ್ ಗಾಳಿಯು ಅಪ್ಪಳಿಸಿತು.
ಅ. ಕೃ 27:17ಅದನ್ನು ಮೇಲಕ್ಕೆ ಎತ್ತಿದ ನಂತರ ಹಗ್ಗಗಳನ್ನು ತೆಗೆದುಕೊಂಡು ಹಡಗಿನ ಕೆಳಭಾಗವನ್ನು ಬಿಗಿದರು. ಆ ಮೇಲೆ ಸುರ್ತಿಸ್ ಎಂಬ ಮರಳುದಿಬ್ಬಕ್ಕೆ ಎಲ್ಲಿ ಸಿಕ್ಕಿಕೊಳ್ಳುವುದೋ ಎಂಬ ಭಯ ಆವರಿಸಿತು. ಆದುದರಿಂದ ಅವರು ಹಾಯಿಯನ್ನು ಇಳಿಸಿ, ಗಾಳಿ ಬೀಸುತ್ತಿದ್ದ ಕಡೆಯೇ ಹಡಗು ತೇಲಲೆಂದು ಬಿಟ್ಟರು.
- ಸರಕು, ಆ ಮೇಲೆ ಹಡಗಿನ ಸಾಮಗ್ರಿಗಳು ಸಮುದ್ರಕ್ಕೆ ಎಸೆಯಲ್ಪಟ್ಟವುಅ. ಕೃ 27:18–19
ವಚನಗಳು
ಅ. ಕೃ 27:18–19ಬಿರುಗಾಳಿಯ ಮಳೆಯೂ ನಮ್ಮನ್ನು ಅತ್ಯಂತವಾಗಿ ಹೊಯಿದಾಡಿಸಿದ್ದರಿಂದ ಅವರು ಮರುದಿನ ಹಡಗಿನಲ್ಲಿದ್ದ ಸರಕು ಸಾಮಗ್ರಿಗಳನ್ನು ಸಮುದ್ರಕ್ಕೆ ಎಸೆಯಲು ಆರಂಭಿಸಿದರು. ಮೂರನೆಯ ದಿನದಲ್ಲಿ ಹಡಗಿನ ಕೆಲವು ಸಲಕರಣೆಗಳನ್ನು ಸ್ವತಃ ಎತ್ತಿ ಹೊರಗೆಸೆದರು.
- ಆಳ ಅಳೆಯುವುದು: ನೀರು ಕಡಿಮೆ ಆಳವಾಗುತ್ತಾ ಬರುತ್ತದೆಅ. ಕೃ 27:28
ವಚನಗಳು
ಅ. ಕೃ 27:28ಅಳತೆ ಮಾಪನವನ್ನು ಇಳಿಸಿ ಇಪ್ಪತ್ತು ಮಾರುದ್ದವೆಂದು ಕಂಡರು. ಸ್ವಲ್ಪ ಹೊತ್ತಿನ ಮೇಲೆ ಅವರು ತಿರುಗಿ ಮಾಪನದ ಗುಂಡನ್ನು ಇಳಿಸಿ ನೋಡಲಾಗಿ ಹದಿನೈದು ಮಾರುದ್ದವೆಂದು ಕಂಡರು.
- ಹಡಗಿನ ಹಿಂಭಾಗದಿಂದ ನಾಲ್ಕು ಲಂಗರುಗಳನ್ನು ಇಳಿಸಲಾಯಿತುಅ. ಕೃ 27:29
ವಚನಗಳು
ಅ. ಕೃ 27:29ಬಂಡೆಗಳಿಗೆ ಡಿಕ್ಕಿಹೊಡೆದೆವೋ ಎಂದು ಭಯಪಟ್ಟು ಹಡಗಿನ ಹಿಂಭಾಗದಿಂದ ನಾಲ್ಕು ಲಂಗರುಗಳನ್ನು ಬಿಟ್ಟು ಬೇಗ ಬೆಳಗಾಗಲಿ ಎಂದು ಪ್ರಾರ್ಥಿಸಿದೆವು.
- ನಾವಿಕರು ಚಿಕ್ಕ ದೋಣಿಯಲ್ಲಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರು; ಸೈನಿಕರು ಅದರ ಹಗ್ಗಗಳನ್ನು ಕಡಿದುಬಿಟ್ಟರುಅ. ಕೃ 27:30, ಅ. ಕೃ 27:32
ವಚನಗಳು
ಅ. ಕೃ 27:30ಆದರೆ, ನಾವಿಕರು ಮುಂಭಾಗದಲ್ಲಿ ಲಂಗರುಗಳನ್ನು ಹಾಕಬೇಕೆಂಬ ಸುಳ್ಳುಕಾರಣ ಕೊಟ್ಟು ದೋಣಿಯನ್ನು ಸಮುದ್ರದಲ್ಲಿ ಇಳಿಸಿ ಹಡಗನ್ನು ಬಿಟ್ಟು ತಪ್ಪಿಸಿಕೊಂಡು ಹೋಗುವುದಕ್ಕೆ ಪ್ರಯತ್ನಿಸುತ್ತಿರುವಾಗ,
ಅ. ಕೃ 27:32ಆಗ ಸಿಪಾಯಿಗಳು ದೋಣಿಯ ಹಗ್ಗಗಳನ್ನು ಕತ್ತರಿಸಿ ಅದು ಬಿದ್ದು ಹೋಗುವಂತೆ ಮಾಡಿದರು.
- ಹಡಗಿನಲ್ಲಿ 276 ಜನರಿದ್ದರುಅ. ಕೃ 27:37
ವಚನಗಳು
ಅ. ಕೃ 27:37ಆ ಹಡಗಿನಲ್ಲಿದ್ದ ನಾವೆಲ್ಲರೂ ಒಟ್ಟು ಇನ್ನೂರ ಎಪ್ಪತ್ತಾರು ಮಂದಿ ಇದ್ದೇವು.
- ಹಡಗನ್ನು ಹಗುರಮಾಡಲು ಅವರು ಧಾನ್ಯವನ್ನು ಸಮುದ್ರಕ್ಕೆ ಎಸೆದರುಅ. ಕೃ 27:38
ವಚನಗಳು
ಅ. ಕೃ 27:38ಸಾಕಾದಷ್ಟು ತಿಂದ ಮೇಲೆ, ಮಿಕ್ಕ ಗೋದಿಯನ್ನು ಸಮುದ್ರಕ್ಕೆ ಚೆಲ್ಲಿ, ಹಡಗನ್ನು ಹಗುರ ಮಾಡಿದರು.
- ಹಡಗು ದಿಬ್ಬಕ್ಕೆ ತಗಲಿ ನಿಂತಿತು, ಅದರ ಹಿಂಭಾಗವು ಒಡೆದುಹೋಯಿತುಅ. ಕೃ 27:41
ವಚನಗಳು
ಅ. ಕೃ 27:41ಆದರೆ ಮಧ್ಯದಲ್ಲಿ ಅವರಿಗೆ ಮರಳದಿಬ್ಬ ಸಿಕ್ಕಿದಾಗ ಅದಕ್ಕೆ ನಾವೆಯನ್ನು ಹತ್ತಿಸಿದರು. ಮುಂಭಾಗವು ದಿಣ್ಣೆಗೆ ತಗಲಿಕೊಂಡು ಅಲ್ಲಾಡದೆ ನಿಂತಿತು. ಹಿಂಭಾಗವು ಹುಚ್ಚು ಅಲೆಗಳ ಹೊಡೆತದಿಂದ ಒಡೆದು ತುಂಡಾಯಿತು.
- ಎಲ್ಲರೂ ದಡ ಸೇರಿದರು, ಕೆಲವರು ಹಲಗೆಗಳ ಮೇಲೆಅ. ಕೃ 27:44
ವಚನಗಳು
ಅ. ಕೃ 27:44ಉಳಿದವರಲ್ಲಿ ಕೆಲವರು ಹಲಿಗೆಗಳ ಮೇಲೆ, ಕೆಲವರು ಹಡಗಿನ ತುಂಡುಗಳ ಮೇಲೆ ಹೋಗಬೇಕೆಂತಲೂ ಅಪ್ಪಣೆಕೊಟ್ಟನು. ಈ ರೀತಿಯಿಂದ ಎಲ್ಲರೂ ಸುರಕ್ಷಿತವಾಗಿ ತೀರವನ್ನು ತಲುಪಿದರು.
- ಮುಂದೆ ಅಶ್ವಿನೀದೇವತೆಗಳೆಂಬ ಚಿಹ್ನೆಯ ಅಲೆಕ್ಸಾಂದ್ರಿಯದ ಹಡಗಿನಲ್ಲಿ ರೋಮಿಗೆಅ. ಕೃ 28:11
ವಚನಗಳು
ಅ. ಕೃ 28:11ಮೂರು ತಿಂಗಳಾದ ಮೇಲೆ ಅಲೆಕ್ಸಾಂದ್ರಿಯದಿಂದ ಬಂದು, ಆ ದ್ವೀಪದಲ್ಲಿ ಹಿಮಕಾಲವನ್ನು ಕಳೆಯಲು ತಂಗಿದ್ದ ಒಂದು ಹಡಗನ್ನು ಹತ್ತಿ ಹೊರಟೆವು. ಆ ಹಡಗಿಗೆ ಅಶ್ವಿನೀದೇವತೆಗಳೆಂಬ ಚಿಹ್ನೆ ಇತ್ತು.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು