Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ವಿಷಯಗಳು › ರೋಗ ಮತ್ತು ವೈದ್ಯರು

ದೈನಂದಿನ ಜೀವನ

ಬೈಬಲಿನಲ್ಲಿ ರೋಗ ಮತ್ತು ವೈದ್ಯರು

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 41 ವಾಕ್ಯಭಾಗಗಳು, ಸಾಲು ಸಾಲಾಗಿ.

ವೈದ್ಯರು

  • ಯೋಸೇಫನ ವೈದ್ಯರು ಯಾಕೋಬನ ಶವಕ್ಕೆ ಸುಗಂಧದ್ರವ್ಯ ಹಾಕುತ್ತಾರೆಆದಿ 50:2
    ವಚನಗಳು
    ಆದಿ 50:2ತರುವಾಯ ಯೋಸೇಫನು ತನ್ನ ಸೇವಕರಾದ ವೈದ್ಯರಿಗೆ, “ನನ್ನ ತಂದೆಯ ಶವವನ್ನು ಸುಗಂಧ ದ್ರವ್ಯಗಳಿಂದ ತುಂಬಿ ಸಿದ್ಧಪಡಿಸಿರಿ” ಎಂದು ಅಪ್ಪಣೆ ಕೊಡಲು ಅವರು ಇಸ್ರಾಯೇಲನ ಶವವನ್ನು ಸುಗಂಧ ದ್ರವ್ಯಗಳಿಂದ ತುಂಬಿದರು.
  • ಕಾಲುಗಳಲ್ಲಿ ರೋಗವಿದ್ದ ಆಸನು ವೈದ್ಯರನ್ನು ಆಶ್ರಯಿಸುತ್ತಾನೆ2 ಪೂರ್ವ 16:12, 1 ಅರಸು 15:23
    ವಚನಗಳು
    2 ಪೂರ್ವ 16:12ಆಸನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಅವನ ಕಾಲುಗಳಿಗೆ ಬಹು ಕಠಿಣವಾದ ರೋಗ ತಗಲಿತು. ಈ ರೋಗದಲ್ಲೂ ಅವನು ಯೆಹೋವನ ಸಹಾಯವನ್ನು ಕೋರದೆ ವೈದ್ಯರ ಸಹಾಯವನ್ನೇ ಕೋರಿದನು.
    1 ಅರಸು 15:23ಆಸನ ಉಳಿದ ಚರಿತ್ರೆ, ಅವನ ಎಲ್ಲಾ ಪರಾಕ್ರಮಕೃತ್ಯಗಳು, ಅವನು ಪಟ್ಟಣಗಳನ್ನು ಕಟ್ಟಿಸಿದ ಸಂಗತಿಗಳೂ, ಅವನ ಇತರ ಕಾರ್ಯಗಳು ಯೆಹೂದ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ. ಮುಪ್ಪಿನಲ್ಲಿ ಅವನ ಕಾಲುಗಳಿಗೆ ರೋಗವುಂಟಾಯಿತು.
  • ಹನ್ನೆರಡು ವರ್ಷ ರಕ್ತಸ್ರಾವವಿದ್ದ ಸ್ತ್ರೀಯು ತನಗಿದ್ದದ್ದನ್ನೆಲ್ಲಾ ವೈದ್ಯರಿಗಾಗಿ ಖರ್ಚುಮಾಡಿದಳುಮಾರ್ಕ 5:25–26, ಲೂಕ 8:43
    ವಚನಗಳು
    ಮಾರ್ಕ 5:25–26ಆಗ ಅಲ್ಲಿ ಹನ್ನೆರಡು ವರ್ಷದಿಂದ ರಕ್ತಕುಸುಮ ರೋಗವಿದ್ದ ಒಬ್ಬ ಹೆಂಗಸು ಇದ್ದಳು. ಅನೇಕ ವೈದ್ಯರ ಚಿಕಿತ್ಸೆಯಿಂದ ಆಕೆಯು ಬಹು ಕಷ್ಟವನ್ನು ಅನುಭವಿಸಿ, ಕೈಯಲ್ಲಿದ್ದ ಹಣವನ್ನೆಲ್ಲಾ ವ್ಯಯಮಾಡಿದ್ದರೂ ಅವಳ ರೋಗ ಮಾತ್ರ ಹೆಚ್ಚುತ್ತಾ ಬಂದಿತ್ತೇ ಹೊರತು ಸ್ವಲ್ಪವೂ ಗುಣಮುಖ ಆಗುತ್ತಿರಲಿಲ್ಲ.
    ಲೂಕ 8:43ಆಗ ಹನ್ನೆರಡು ವರ್ಷದಿಂದ ರಕ್ತಸ್ರಾವ ರೋಗವಿದ್ದ ಒಬ್ಬ ಹೆಂಗಸು ಅಲ್ಲಿಗೆ ಬಂದಿದ್ದಳು. ಆಕೆಯು ತನ್ನ ಬಳಿ ಇದ್ದ ಹಣವನ್ನೆಲ್ಲಾ ವೆಚ್ಚಮಾಡಿದರೂ ಒಬ್ಬ ವೈದ್ಯರಿಂದಲೂ ಗುಣಹೊಂದಲಾರದೆ ಇದ್ದಳು.
  • “ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ, ಕ್ಷೇಮವಿಲ್ಲದವರಿಗೆ ಬೇಕು”ಮತ್ತಾ 9:12
    ವಚನಗಳು
    ಮತ್ತಾ 9:12ಯೇಸು ಅದನ್ನು ಕೇಳಿ, “ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ, ಕ್ಷೇಮವಿಲ್ಲದವರಿಗೆ ಬೇಕು.
  • ಒಂದು ಗಾದೆ: “ವೈದ್ಯನೇ, ನಿನ್ನನ್ನು ನೀನೇ ವಾಸಿಮಾಡಿಕೋ”ಲೂಕ 4:23
    ವಚನಗಳು
    ಲೂಕ 4:23ಅದಕ್ಕೆ ಯೇಸು ಅವರಿಗೆ, “‘ವೈದ್ಯನೇ, ನಿನ್ನನ್ನು ನೀನೇ ವಾಸಿಮಾಡಿಕೋ’ ಎಂಬ ಗಾದೆಯನ್ನು ನನಗೆ ನಿಸ್ಸಂದೇಹವಾಗಿ ಹೇಳಿ; ಕಪೆರ್ನೌಮಿನಲ್ಲಿ ನೀನು ಮಾಡಿದ ಕಾರ್ಯಗಳನ್ನು ನಾವು ಕೇಳಿದ್ದೇವೆ, ಅಂಥವುಗಳನ್ನು ಈ ನಿನ್ನ ಸ್ವಂತ ಸ್ಥಳದಲ್ಲಿಯೂ ಮಾಡು ಎಂದು ಹೇಳುವಿರಿ.
  • “ಪ್ರಿಯ ವೈದ್ಯನಾಗಿರುವ ಲೂಕನು”ಕೊಲೊ 4:14
    ವಚನಗಳು
    ಕೊಲೊ 4:14ಪ್ರಿಯ ವೈದ್ಯನಾಗಿರುವ ಲೂಕನು ಮತ್ತು ದೇಮನು ನಿಮಗೆ ವಂದನೆ ಹೇಳುತ್ತಾರೆ.
  • “ಗಿಲ್ಯಾದಿನಲ್ಲಿ ಔಷಧವಿಲ್ಲವೋ? ಅಲ್ಲಿ ವೈದ್ಯನು ಸಿಕ್ಕನೋ?”ಯೆರೆ 8:22
    ವಚನಗಳು
    ಯೆರೆ 8:22ಗಿಲ್ಯಾದಿನಲ್ಲಿ ಔಷಧವಿಲ್ಲವೋ? ಅಲ್ಲಿ ವೈದ್ಯನು ಸಿಕ್ಕನೋ? ನನ್ನ ಪ್ರಜೆಯೆಂಬಾಕೆಗೆ ಏಕೆ ಗುಣವಾಗಲಿಲ್ಲ?

ಔಷಧಗಳು

  • ಹಿಜ್ಕೀಯನ ಹುಣ್ಣಿಗೆ ಅಂಜೂರದ ಅಡೆಯ ಪಟ್ಟು2 ಅರಸು 20:7, ಯೆಶಾ 38:21
    ವಚನಗಳು
    2 ಅರಸು 20:7ಅನಂತರ ಯೆಶಾಯನು, ಒಂದು ಅಂಜೂರಹಣ್ಣನ್ನು ತೆಗೆದು ಅವನ ಗಾಯದ ಮೇಲೆ ಇಟ್ಟಾಗ ಹಿಜ್ಕೀಯನು ಗುಣಹೊಂದಿದನು.
    ಯೆಶಾ 38:21ಯೆಶಾಯನು, “ಅಂಜೂರದ ಹಣ್ಣುಗಳ ಉಂಡೆಯನ್ನು ತರಿಸಿ ಹುಣ್ಣಿನ ಮೇಲೆ ಇಟ್ಟರೆ ಅರಸನು ಗುಣಹೊಂದುವನು” ಎಂದು ಅಪ್ಪಣೆಕೊಟ್ಟನು.
  • ಸಮಾರ್ಯದವನು ಗಾಯಗಳಿಗೆ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹೊಯ್ದು ಕಟ್ಟುತ್ತಾನೆಲೂಕ 10:34
    ವಚನಗಳು
    ಲೂಕ 10:34ಅವನ ಹತ್ತಿರಕ್ಕೆ ಹೋಗಿ ಅವನ ಗಾಯಗಳಿಗೆ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹೊಯ್ದು ಗಾಯವನು ಕಟ್ಟಿ ತನ್ನ ಸ್ವಂತ ವಾಹನ ಪಶುವಿನ ಮೇಲೆ ಹತ್ತಿಸಿಕೊಂಡು ಛತ್ರಕ್ಕೆ ಕರೆದುಕೊಂಡು ಹೋಗಿ ಅವನನ್ನು ಆರೈಕೆಮಾಡಿದನು.
  • ಹೊಟ್ಟೆಗಾಗಿಯೂ ಆಗಾಗ ಬರುವ ಅಸ್ವಸ್ಥತೆಗಳಿಗಾಗಿಯೂ ಸ್ವಲ್ಪ ದ್ರಾಕ್ಷಾರಸ1 ತಿಮೊ 5:23
    ವಚನಗಳು
    1 ತಿಮೊ 5:23ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ, ನಿನ್ನ ಅಜೀರ್ಣದ ಮತ್ತು ನಿನಗೆ ಆಗಾಗ್ಗೆ ಉಂಟಾಗುವ ಅಸ್ವಸ್ಥತೆಯ ಪರಿಹಾರಕ್ಕಾಗಿ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೊ.
  • ರೋಗಿಗಳಿಗೆ ಎಣ್ಣೆ ಹಚ್ಚಲಾಗುತ್ತಿತ್ತುಮಾರ್ಕ 6:13, ಯಾಕೋ 5:14
    ವಚನಗಳು
    ಮಾರ್ಕ 6:13ಅನೇಕ ದೆವ್ವಗಳನ್ನು ಬಿಡಿಸಿ ಅನೇಕ ರೋಗಿಗಳಿಗೆ ಎಣ್ಣೆ ಹಚ್ಚಿ ಗುಣಪಡಿಸಿದರು.
    ಯಾಕೋ 5:14ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದರೆ, ಅವನು ಸಭೆಯ ಹಿರಿಯರನ್ನು ಕರೆದು ಪ್ರಾರ್ಥಿಸುವಂತೆ ವಿನಂತಿಸಲಿ. ಅವರು ಕರ್ತನ ಹೆಸರಿನಲ್ಲಿ ಅವನಿಗೆ ಎಣ್ಣೆ ಹಚ್ಚಿ ಅವನಿಗೋಸ್ಕರ ದೇವರನ್ನು ಪ್ರಾರ್ಥಿಸಲಿ.
  • ಸಂತೋಷದ ಹೃದಯವು ಒಳ್ಳೆಯ ಔಷಧಜ್ಞಾನೋ 17:22
    ವಚನಗಳು
    ಜ್ಞಾನೋ 17:22ಹರ್ಷಹೃದಯವು ಒಳ್ಳೆಯ ಔಷಧ, ಕುಗ್ಗಿದ ಮನದಿಂದ ಅನಾರೋಗ್ಯ.

ಉದಾಹರಣೆಗಳು

  • ಯಾಕೋಬನು ಅಸ್ವಸ್ಥನಾಗುತ್ತಾನೆ; ಯೋಸೇಫನು ತನ್ನ ಇಬ್ಬರು ಮಕ್ಕಳನ್ನು ಕರೆತರುತ್ತಾನೆಆದಿ 48:1
    ವಚನಗಳು
    ಆದಿ 48:1ಕೆಲವು ಕಾಲವಾದ ಮೇಲೆ ಯೋಸೇಫನಿಗೆ, “ಅವನ ತಂದೆಯು ಅಸ್ವಸ್ಥನಾಗಿದ್ದಾನೆ” ಎಂಬ ವಾರ್ತೆಯು ದೊರಕಿತು. ಆಗ ಯೋಸೇಫನು ಮನಸ್ಸೆ ಎಫ್ರಾಯೀಮರೆಂಬ ತನ್ನಿಬ್ಬರು ಮಕ್ಕಳನ್ನು ತನ್ನ ಸಂಗಡ ಕರೆದುಕೊಂಡು ತಂದೆಯ ಬಳಿಗೆ ಬಂದನು.
  • ಐಗುಪ್ತ್ಯನಾದ ದಾಸನು ಅಸ್ವಸ್ಥನಾದಾಗ ಅವನ ಯಜಮಾನನು ಅವನನ್ನು ಬಿಟ್ಟುಹೋಗುತ್ತಾನೆ1 ಸಮು 30:13
    ವಚನಗಳು
    1 ಸಮು 30:13ಆಗ ದಾವೀದನು ಅವನನ್ನು, “ನೀನು ಯಾರ ಕಡೆಯವನು, ಎಲ್ಲಿಯವನು?” ಎಂದು ಕೇಳಿದನು. ಅವನು “ನಾನು ಐಗುಪ್ತನು, ಒಬ್ಬ ಅಮಾಲೇಕ್ಯನ ದಾಸನು. ನಾನು ಮೂರು ದಿನಗಳ ಹಿಂದೆ ಅಸ್ವಸ್ಥನಾಗಿ ಮಲಗಿಕೊಂಡಿದ್ದರಿಂದ ನನ್ನ ಯಜಮಾನನು ನನ್ನನ್ನು ಬಿಟ್ಟುಹೋದನು.
  • ಯಾರೊಬ್ಬಾಮನ ಮಗನು ಅಸ್ವಸ್ಥನಾಗುತ್ತಾನೆ; ಅವನ ತಾಯಿ ವೇಷಮರೆಸಿಕೊಂಡು ಪ್ರವಾದಿಯ ಬಳಿಗೆ ಹೋಗುತ್ತಾಳೆ1 ಅರಸು 14:1–3
    ವಚನಗಳು
    1 ಅರಸು 14:1–3ಆ ಕಾಲದಲ್ಲಿ ಯಾರೊಬ್ಬಾಮನ ಮಗನಾದ ಅಬೀಯನು ಅಸ್ವಸ್ಥನಾದನು. ಆಗ ಯಾರೊಬ್ಬಾಮನು ತನ್ನ ಹೆಂಡತಿಗೆ, “ನೀನು ಎದ್ದು ನನ್ನ ಹೆಂಡತಿಯೆಂದು ಯಾರಿಗೂ ಗೊತ್ತಾಗದಂತೆ ವೇಷಹಾಕಿಕೊಂಡು ಶೀಲೋವಿಗೆ ಹೋಗು. ನಾನು ಈ ಜನರಿಗೆ ಅರಸನಾಗಬೇಕೆಂದು ನನಗೆ ಮುಂತಿಳಿಸಿದ ಪ್ರವಾದಿಯಾದ ಅಹೀಯನು ಅಲ್ಲಿರುತ್ತಾನೆ. ನೀನು ಹತ್ತು ರೊಟ್ಟಿಗಳನ್ನೂ, ಒಂದಷ್ಟು ಸಿಹಿಪದಾರ್ಥವನ್ನೂ ಮತ್ತು ಒಂದು ಕುಪ್ಪೆ ಜೇನುತುಪ್ಪವನ್ನೂ ತೆಗೆದುಕೊಂಡು ಅವನ ಬಳಿಗೆ ಹೋಗು. ಹುಡುಗನಿಗೆ ಏನಾಗುವುದೆಂದು ಅವನು ತಿಳಿಸುವನು” ಎಂದು ಹೇಳಿದನು.
  • ಚಾರೆಪ್ತದ ವಿಧವೆಯ ಮಗನು ಅಸ್ವಸ್ಥನಾಗುತ್ತಾನೆ1 ಅರಸು 17:17
    ವಚನಗಳು
    1 ಅರಸು 17:17ಕೆಲವು ದಿನಗಳಾದನಂತರ ಆ ಸ್ತ್ರೀಯ ಮಗನು ಅಸ್ವಸ್ಥನಾದನು. ಹುಡುಗನಿಗೆ ರೋಗವು ಹೆಚ್ಚಾಗಿದ್ದುದರಿಂದ ಉಸಿರಾಡುವುದು ನಿಂತುಹೋಯಿತು.
  • ಹೊಲದಲ್ಲಿ ಶೂನೇಮ್ಯಳ ಹುಡುಗನು: “ಅಪ್ಪಾ, ನನ್ನ ತಲೆ, ನನ್ನ ತಲೆ”2 ಅರಸು 4:18–20
    ವಚನಗಳು
    2 ಅರಸು 4:18–20ಹುಡುಗನು ದೊಡ್ಡವನಾದ ಮೇಲೆ ಒಂದು ದಿನ, ಹೊಲದಲ್ಲಿ ಬೆಳೆ ಕೊಯ್ಯುವವರ ಸಂಗಡ ಇದ್ದ ತನ್ನ ತಂದೆಯ ಬಳಿಗೆ ಹೋದನು. ಅಲ್ಲಿದ್ದಾಗ ಅವನು ಪಕ್ಕನೆ, “ಅಪ್ಪಾ, ನನ್ನ ತಲೆ, ನನ್ನ ತಲೆ” ಎಂದು ಕೂಗಲು, ತಂದೆಯು ಒಬ್ಬ ಸೇವಕನನ್ನು ಕರೆದು ಅವನಿಗೆ, “ಇವನನ್ನು ತಾಯಿಯ ಹತ್ತಿರ ಕರೆದುಕೊಂಡು ಹೋಗು” ಎಂದು ಆಜ್ಞಾಪಿಸಿದನು. ಸೇವಕನು ಹುಡುಗನನ್ನು ಅವನ ತಾಯಿಗೆ ತಂದು ಒಪ್ಪಿಸಿದನು. ಹುಡುಗನು ಮಧ್ಯಾಹ್ನದವರೆಗೂ ತಾಯಿಯ ತೊಡೆಯ ಮೇಲೆಯೇ ಇದ್ದು ಅನಂತರ ಸತ್ತನು.
  • ಅಹಜ್ಯನು ಕಿಟಿಕಿಯ ಜಾಲರಿಯಿಂದ ಬಿದ್ದು ಗಾಯಗೊಳ್ಳುತ್ತಾನೆ2 ಅರಸು 1:2
    ವಚನಗಳು
    2 ಅರಸು 1:2ಅಹಜ್ಯನು ಸಮಾರ್ಯದಲ್ಲಿ ತನ್ನ ಮೇಲುಪ್ಪರಿಗೆಯ ಕಿಟಿಕಿಯಿಂದ ಬಿದ್ದು ಅಸ್ವಸ್ಥನಾದಾಗ ತನ್ನ ಸೇವಕರನ್ನು ಕರೆದು ಅವರಿಗೆ, “ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಸನ್ನಿಧಿಗೆ ಹೋಗಿ ನಾನು ಈ ಅಸ್ವಸ್ಥತೆಯಿಂದ ವಾಸಿಯಾಗುವೆನೋ ಇಲ್ಲವೋ ಎಂಬುದನ್ನು ವಿಚಾರಿಸಿರಿ” ಎಂದು ಹೇಳಿಕಳುಹಿಸಿದನು.
  • ಅರಾಮಿನ ಬೆನ್ಹದದನು ತಾನು ವಾಸಿಯಾಗುವೆನೋ ಎಂದು ಎಲೀಷನನ್ನು ವಿಚಾರಿಸುತ್ತಾನೆ2 ಅರಸು 8:7–8
    ವಚನಗಳು
    2 ಅರಸು 8:7–8ಒಮ್ಮೆ ಎಲೀಷನು ದಮಸ್ಕಕ್ಕೆ ಹೋದನು. ಆಗ ಅರಾಮ್ಯರ ಅರಸನಾದ ಬೆನ್ಹದದನು ಅಸ್ವಸ್ಥನಾಗಿದ್ದನು. “ದೇವರ ಮನುಷ್ಯನು ಬಂದಿದ್ದಾನೆ” ಎಂಬ ವರ್ತಮಾನವನ್ನು ಅರಸನು ಕೇಳಿ, ಅರಸನು ಹಜಾಯೇಲನಿಗೆ, “ನೀನು ಕಾಣಿಕೆಯನ್ನು ತೆಗೆದುಕೊಂಡು ದೇವರ ಮನುಷ್ಯನ ಬಳಿಗೆ ಹೋಗಿ ನನಗೆ ವಾಸಿಯಾಗುವುದೋ? ಇಲ್ಲವೋ ಎಂಬುದನ್ನು ಅವನ ಮುಖಾಂತರವಾಗಿ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸು” ಎಂದು ಆಜ್ಞಾಪಿಸಿದನು.
  • ಎಲೀಷನು ಮರಣಕರವಾದ ರೋಗದಿಂದ ಅಸ್ವಸ್ಥನಾಗುತ್ತಾನೆ2 ಅರಸು 13:14
    ವಚನಗಳು
    2 ಅರಸು 13:14ಆ ಕಾಲದಲ್ಲಿ ಎಲೀಷನು ಮರಣಕರವಾದ ರೋಗಕ್ಕೆ ಗುರಿಯಾದನು. ಇಸ್ರಾಯೇಲರ ಅರಸನಾದ ಯೋವಾಷನು ಇದನ್ನು ಕೇಳಿ ಅವನ ಬಳಿಗೆ ಹೋಗಿ, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲರಿಗೆ ರಥರಥಾಶ್ವಬಲಗಳಾಗಿದ್ದವನೇ” ಎಂದು ಕೂಗುತ್ತಾ ಅವನ ಮುಖದ ಮೇಲೆ ಬಿದ್ದು ಬಹಳವಾಗಿ ಅತ್ತನು.
  • ಹಿಜ್ಕೀಯನು ಮರಣಕರವಾಗಿ ಅಸ್ವಸ್ಥನಾಗಿ ಆ ಮೇಲೆ ಚೇತರಿಸಿಕೊಳ್ಳುತ್ತಾನೆಯೆಶಾ 38:1, 2 ಅರಸು 20:7
    ವಚನಗಳು
    ಯೆಶಾ 38:1ಆ ಕಾಲದಲ್ಲಿ ಹಿಜ್ಕೀಯನು ಮರಣಕರ ರೋಗದಲ್ಲಿ ಬಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “ನಿನ್ನ ಮನೆಯ ವಿಷಯವಾಗಿ ವ್ಯವಸ್ಥೆ ಮಾಡು. ಏಕೆಂದರೆ ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ ಎಂಬುದಾಗಿ ಯೆಹೋವನು ಹೇಳುತ್ತಾನೆ” ಎಂದು ಹೇಳಿದನು.
    2 ಅರಸು 20:7ಅನಂತರ ಯೆಶಾಯನು, ಒಂದು ಅಂಜೂರಹಣ್ಣನ್ನು ತೆಗೆದು ಅವನ ಗಾಯದ ಮೇಲೆ ಇಟ್ಟಾಗ ಹಿಜ್ಕೀಯನು ಗುಣಹೊಂದಿದನು.
  • ಹುಣ್ಣುಗಳಿಂದ ತುಂಬಿದ ಯೋಬನು ಒಡೆದ ಮಡಕೆಯ ಚೂರಿನಿಂದ ಮೈಯನ್ನು ಕೆರೆದುಕೊಳ್ಳುತ್ತಾನೆಯೋಬ 2:7–8
    ವಚನಗಳು
    ಯೋಬ 2:7–8ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟು ಯೋಬನ ಅಂಗಾಲು ಮೊದಲುಗೊಂಡು ನಡುನೆತ್ತಿಯವರೆಗೂ ಕೆಟ್ಟ ಹುಣ್ಣುಗಳನ್ನು ಹುಟ್ಟಿಸಿ ಅವನನ್ನು ಬಾಧಿಸಿದನು. ಯೋಬನು ಒಂದು ಬೋಕಿಯನ್ನು ತೆಗೆದುಕೊಂಡು ತನ್ನ ಮೈಯನ್ನು ಕೆರೆದುಕೊಳ್ಳುತ್ತಾ ಬೂದಿಯಲ್ಲಿ ಕುಳಿತುಕೊಂಡಿದ್ದನು.
  • ದರ್ಶನದ ನಂತರ ದಾನಿಯೇಲನು ಕೆಲವು ದಿನ ಅಸ್ವಸ್ಥನಾಗಿ ಮಲಗಿರುತ್ತಾನೆದಾನಿ 8:27
    ವಚನಗಳು
    ದಾನಿ 8:27ಆಗ ದಾನಿಯೇಲನಾದ ನಾನು ಮೂರ್ಛೆಹೋಗಿ, ಕೆಲವು ದಿನಗಳು ಕಾಯಿಲೆ ಬಿದ್ದೆನು. ಆ ಮೇಲೆ ಎದ್ದು ರಾಜಕಾರ್ಯವನ್ನು ನಡೆಸಿದೆನು. ಆ ಕನಸಿಗೆ ಬೆಚ್ಚಿಬೆರಗಾದೆನು. ಅದು ಯಾರಿಗೂ ತಿಳಿಯಲಿಲ್ಲ.
  • ಪೇತ್ರನ ಅತ್ತೆ ತೀವ್ರ ಜ್ವರದಿಂದ ಹಾಸಿಗೆ ಹಿಡಿದಿದ್ದಾಳೆಮತ್ತಾ 8:14, ಲೂಕ 4:38
    ವಚನಗಳು
    ಮತ್ತಾ 8:14ತರುವಾಯ ಯೇಸು ಪೇತ್ರನ ಮನೆಗೆ ಬಂದಾಗ, ಪೇತ್ರನ ಅತ್ತೆ ಜ್ವರದಲ್ಲಿ ಮಲಗಿರುವುದನ್ನು ಕಂಡು, ಆತನು ಆಕೆಯ ಕೈಯನ್ನು ಮುಟ್ಟಿದನು ತಕ್ಷಣವೇ
    ಲೂಕ 4:38ಆತನು ಸಭಾಮಂದಿರದಿಂದೆದ್ದು ಸೀಮೋನನ ಮನೆಗೆ ಬಂದನು. ಅಲ್ಲಿ ಸೀಮೋನನ ಅತ್ತೆಯು ವಿಪರೀತ ಜ್ವರದಿಂದ ಕಷ್ಟಪಡುತ್ತಿರಲಾಗಿ; ಆಕೆಯ ವಿಷಯದಲ್ಲಿ ಅಲಿದ್ದವರು ಆತನನ್ನು ಬೇಡಿಕೊಂಡರು.
  • ಕಪೆರ್ನೌಮಿನಲ್ಲಿ ಅರಮನೆಯ ಅಧಿಕಾರಿಯ ಮಗನು ಅಸ್ವಸ್ಥನಾಗಿ ಮಲಗಿದ್ದಾನೆಯೋಹಾ 4:46–47
    ವಚನಗಳು
    ಯೋಹಾ 4:46–47ಹೀಗಿರಲಾಗಿ, ಯೇಸು ತಾನು ನೀರನ್ನು ದ್ರಾಕ್ಷಾರಸವನ್ನಾಗಿ ಮಾಡಿದ ಗಲಿಲಾಯದ ಕಾನಾ ಊರಿಗೆ ಹಿಂತಿರುಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಅರಮನೆಯ ಒಬ್ಬ ಅಧಿಕಾರಿಯ ಮಗನು ಅಸ್ವಸ್ಥನಾಗಿದ್ದನು. ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಸುದ್ದಿಯನ್ನು ಆ ಅಧಿಕಾರಿಯು ಕೇಳಿದಾಗ ತನ್ನ ಮಗನು ಸಾಯುವ ಸ್ಥಿತಿಯಲ್ಲಿದುದ್ದರಿಂದ ಯೇಸುವಿನ ಬಳಿಗೆ ಹೋಗಿ, “ನೀನು ಬಂದು ನನ್ನ ಮಗನನ್ನು ಸ್ವಸ್ಥಮಾಡು” ಎಂದು ಬೇಡಿಕೊಂಡನು.
  • ಮೂರ್ಛೆರೋಗವಿದ್ದ ಹುಡುಗನು ಆಗಾಗ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಬೀಳುತ್ತಾನೆಮತ್ತಾ 17:15
    ವಚನಗಳು
    ಮತ್ತಾ 17:15“ಕರ್ತನೇ ನನ್ನ ಮಗನನ್ನು ಕರುಣಿಸು, ಅವನು ಮೂರ್ಛೆರೋಗದಿಂದ ಬಹಳ ಕಷ್ಟಪಡುತ್ತಿದ್ದಾನೆ. ಅನೇಕ ಬಾರಿ ಬೆಂಕಿಯಲ್ಲಿಯೂ, ನೀರಿನಲ್ಲಿಯೂ ಬೀಳುತ್ತಾನೆ.
  • ಬೇತ್ಸಥಾ ಕೊಳದ ಬಳಿ ಅನೇಕ ರೋಗಿಗಳು ಮಲಗಿದ್ದಾರೆ; ಒಬ್ಬನು ಮೂವತ್ತೆಂಟು ವರ್ಷಗಳಿಂದಯೋಹಾ 5:2–4, ಯೋಹಾ 5:5
    ವಚನಗಳು
    ಯೋಹಾ 5:2–4ಅಲ್ಲಿ ಕುರಿಬಾಗಿಲು ಎಂಬ ಸ್ಥಳದ ಬಳಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಅದನ್ನು ಇಬ್ರಿಯ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯುತ್ತಾರೆ. ಇವುಗಳಲ್ಲಿ ಅಸ್ವಸ್ಥರೂ, ರೋಗಿಗಳೂ, ಕುರುಡರೂ, ಕುಂಟರೂ, ಪಾರ್ಶ್ವವಾಯು ಪೀಡಿತರು ಮೊದಲಾದ ಅನೇಕ ರೋಗಿಗಳು ಅಲ್ಲಿ ಬಿದ್ದುಕೊಂಡಿರುತ್ತಿದ್ದರು. (ನೀರು ಕಲಕುವುದನ್ನು ಕಾದುಕೊಂಡು ಅಲ್ಲಿ ಬಿದ್ದುಕೊಂಡಿರುತ್ತಿದ್ದರು. ಆಗಾಗ ಒಬ್ಬ ದೂತನು ಬಂದು ಕೊಳದ ನೀರನ್ನು ಕಲಕಿಹೊಗುತ್ತಿದ್ದನು. ಆಗ ಮೊದಲು ಯಾರು ಕೊಳದೊಳಗೆ ಇಳಿಯುತ್ತಿದ್ದರೋ ಅವರ ರೋಗವು ವಾಸಿಯಾಗುತ್ತಿತ್ತು.)
    ಯೋಹಾ 5:5ಅಲ್ಲಿ ಮೂವತ್ತೆಂಟು ವರ್ಷಗಳಿಂದ ರೋಗಿಯಾಗಿದ್ದ ಒಬ್ಬ ಮನುಷ್ಯನಿದ್ದನು.
  • ಹುಟ್ಟುಕುಂಟನಾದ ಒಬ್ಬನನ್ನು ಪ್ರತಿದಿನ ದೇವಾಲಯದ ಬಾಗಿಲ ಬಳಿಗೆ ಹೊತ್ತು ತರುತ್ತಾರೆಅ. ಕೃ 3:2
    ವಚನಗಳು
    ಅ. ಕೃ 3:2ಅಲ್ಲಿ ಹುಟ್ಟು ಕುಂಟನಾಗಿದ್ದ ಒಬ್ಬ ಮನುಷ್ಯನನ್ನು ಕೆಲವರು ಹೊತ್ತುಕೊಂಡು ಬಂದರು; ದೇವಾಲಯದೊಳಕ್ಕೆ ಹೋಗುವವರಿಂದ ಭಿಕ್ಷೆಬೇಡುವುದಕ್ಕಾಗಿ ದೇವಾಲಯದ ಸುಂದರದ್ವಾರವೆಂಬ ಬಾಗಿಲಿನಲ್ಲಿ ಅವನನ್ನು ಪ್ರತಿದಿನ ಕೂರಿಸುತ್ತಿದ್ದರು.
  • ಬೇಥಾನ್ಯದ ಲಾಜರನು ಅಸ್ವಸ್ಥನಾಗಿದ್ದಾನೆ; ಅವನ ಅಕ್ಕತಂಗಿಯರು ಯೇಸುವಿಗೆ ಹೇಳಿಕಳುಹಿಸುತ್ತಾರೆಯೋಹಾ 11:1–3
    ವಚನಗಳು
    ಯೋಹಾ 11:1–3ಮಾರ್ಥಳು ಮತ್ತು ಆಕೆಯ ಸಹೋದರಿಯಾದ, ಮರಿಯಳ ಊರಾದ, ಬೇಥಾನ್ಯದಲ್ಲಿ ಲಾಜರನೆಂಬುವನೊಬ್ಬನು ಅಸ್ವಸ್ಥನಾಗಿದ್ದನು. ಈ ಮರಿಯಳು ಕರ್ತನಿಗೆ ತೈಲವನ್ನು ಹಚ್ಚಿ ಆತನ ಪಾದಗಳನ್ನು ತನ್ನ ತಲೆ ಕೂದಲಿನಿಂದ ಒರಸಿದವಳು. ಈಕೆಯ ಸಹೋದರನಾದ ಲಾಜರನೇ ಅಸ್ವಸ್ಥನಾಗಿದ್ದನು. ಹೀಗಿರಲಾಗಿ ಅವನ ಸಹೋದರಿಯರು, “ಕರ್ತನೇ ಇಗೋ, ನೀನು ಪ್ರೀತಿಸುವವನು ಅಸ್ವಸ್ಥನಾಗಿದ್ದಾನೆ” ಎಂಬುದಾಗಿ ಯೇಸುವಿನ ಬಳಿಗೆ ಹೇಳಿ ಕಳುಹಿಸಿದರು.
  • ದೊರ್ಕಳು ಅಸ್ವಸ್ಥಳಾಗಿ ಸಾಯುತ್ತಾಳೆಅ. ಕೃ 9:37
    ವಚನಗಳು
    ಅ. ಕೃ 9:37ಆ ಕಾಲದಲ್ಲಿ ಆಕೆ ರೋಗಕ್ಕೆ ತುತ್ತಾಗಿ ಸತ್ತಳು. ಆಕೆಯ ಶವವನ್ನು ಸ್ನಾನಮಾಡಿಸಿ ಮೇಲಂತಸ್ತಿನಲ್ಲಿಟ್ಟರು.
  • ಪೊಪ್ಲಿಯನ ತಂದೆ ಜ್ವರದಿಂದಲೂ ರಕ್ತಭೇದಿಯಿಂದಲೂ ಅಸ್ವಸ್ಥನಾಗಿದ್ದಾನೆಅ. ಕೃ 28:8
    ವಚನಗಳು
    ಅ. ಕೃ 28:8ಅವನ ತಂದೆಯು ಜ್ವರದಿಂದಲೂ ರಕ್ತಭೇದಿಯಿಂದಲೂ ಹಾಸಿಗೆ ಹಿಡಿದಿದ್ದನು. ಪೌಲನು ಅವನ ಬಳಿಗೆ ಹೋಗಿ ಪ್ರಾರ್ಥನೆ ಮಾಡಿ ಅವನ ಮೇಲೆ ಕೈಗಳನ್ನಿಟ್ಟು ಅವನನ್ನು ಗುಣಪಡಿಸಿದನು.
  • ಎಪಫ್ರೊದೀತನು ಸಾಯುವಷ್ಟು ಅಸ್ವಸ್ಥನಾಗಿದ್ದಾನೆಫಿಲಿಪ್ಪಿ 2:25–27
    ವಚನಗಳು
    ಫಿಲಿಪ್ಪಿ 2:25–27ನನ್ನ ಕೊರತೆಯನ್ನು ನೀಗುವುದಕ್ಕೆ ನೀವು ಕಳುಹಿಸಿದಂಥ, ನನ್ನ ಸಹೋದರನೂ, ಜೊತೆಸೇವಕನೂ, ಸಹಸೇನಾನಿಯೂ ಆಗಿರುವಂಥ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವುದು ಅವಶ್ಯವೆಂದು ಭಾವಿಸಿದ್ದೇನೆ. ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದನು ಮತ್ತು ತಾನು ಅಸ್ವಸ್ಥನಾಗಿದ್ದ ಸುದ್ದಿಯನ್ನು ನೀವು ಕೇಳಿದ್ದರಿಂದ ಅವನು ನೊಂದುಕೊಂಡನು. ಅವನು ರೋಗದಲ್ಲಿ ಬಿದ್ದು ಸಾಯುವ ಹಾಗಿದ್ದನೆಂಬುದು ನಿಜವೇ, ಆದರೆ ದೇವರು ಅವನನ್ನು ಕರುಣಿಸಿದನು. ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖವು ಬಾರದಂತೆ ನನ್ನನ್ನೂ ಕರುಣಿಸಿದನು.
  • ಒಂದು ಅಸ್ವಸ್ಥತೆಯ ನಿಮಿತ್ತ ಪೌಲನು ಮೊದಲು ಗಲಾತ್ಯದಲ್ಲಿ ಸುವಾರ್ತೆ ಸಾರುತ್ತಾನೆಗಲಾ 4:13–14
    ವಚನಗಳು
    ಗಲಾ 4:13–14ನಾನು ದೈಹಿಕವಾಗಿ ಅಸ್ವಸ್ಥನಾಗಿದ್ದುದರಿಂದ ನಿಮ್ಮಲ್ಲಿದ್ದು ಮೊದಲನೆಯ ಬಾರಿಗೆ ನಿಮಗೆ ಸುವಾರ್ತೆ ಸಾರಿದ್ದನ್ನು ನೀವು ಬಲ್ಲಿರಿ. ನನ್ನ ದೇಹಸ್ಥಿತಿಯಿಂದ ನಿಮಗೆ ಸಮಸ್ಯೆಗಳು ಬಂದಾಗ್ಯೂ ಕೂಡ, ನೀವು ನನ್ನನ್ನು ಹೀನೈಸಲಿಲ್ಲ, ತಿರಸ್ಕರಿಸಲಿಲ್ಲ. ನನ್ನನ್ನು ದೇವದೂತನಂತೆ, ಕ್ರಿಸ್ತ ಯೇಸುವಿನಂತೆ ಸೇರಿಸಿಕೊಂಡಿದ್ದೀರಿ.
  • ಪೌಲನು ತ್ರೊಫಿಮನನ್ನು ಅಸ್ವಸ್ಥನಾಗಿ ಮಿಲೇತದಲ್ಲಿ ಬಿಟ್ಟುಬರುತ್ತಾನೆ2 ತಿಮೊ 4:20
    ವಚನಗಳು
    2 ತಿಮೊ 4:20ಎರಸ್ತನು ಕೊರಿಂಥದಲ್ಲಿ ನಿಂತನು. ತ್ರೊಫಿಮನು ಅಸ್ವಸ್ಥನಾಗಿದ್ದುದರಿಂದ ಅವನನ್ನು ಮಿಲೇತದಲ್ಲಿ ಬಿಟ್ಟೆನು.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು