Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ವಿಷಯಗಳು › ನಿದ್ರೆ

ದೈನಂದಿನ ಜೀವನ

ಬೈಬಲಿನಲ್ಲಿ ನಿದ್ರೆ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 34 ವಾಕ್ಯಭಾಗಗಳು, ಸಾಲು ಸಾಲಾಗಿ.

ನುಡಿಗಳು

  • ಆತನು ತನ್ನ ಪ್ರಿಯರಿಗೆ ನಿದ್ರೆಯನ್ನು ಅನುಗ್ರಹಿಸುತ್ತಾನೆಕೀರ್ತ 127:2
    ವಚನಗಳು
    ಕೀರ್ತ 127:2ಬೆಳಗಾಗುವುದಕ್ಕಿಂತ ಮುಂಚೆ ಏಳುವವರೇ, ಹೊತ್ತು ಮೀರಿ ಮಲಗುವವರೇ, ನೀವು ಆಹಾರಕ್ಕಾಗಿ ಇಷ್ಟು ಕಷ್ಟಪಡುವುದು ವ್ಯರ್ಥ; ಆತನು ಅದನ್ನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಕೊಡುತ್ತಾನೆ.
  • “ನಾನು ನಿರ್ಭಯವಾಗಿರುವುದರಿಂದ ಮಲಗಿಕೊಂಡು ಕೂಡಲೆ ನಿದ್ದೆಮಾಡುವೆನು”ಕೀರ್ತ 4:8, ಕೀರ್ತ 3:5
    ವಚನಗಳು
    ಕೀರ್ತ 4:8ನಾನು ನಿರ್ಭಯವಾಗಿರುವುದರಿಂದ ಮಲಗಿಕೊಂಡು ಕೂಡಲೆ ನಿದ್ದೆಮಾಡುವೆನು. ಏಕೆಂದರೆ ಯೆಹೋವನೇ, ನನಗೆ ಯಾವ ಅಪಾಯವೂ ಬಾರದಂತೆ ನೀನು ನನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೀ.
    ಕೀರ್ತ 3:5ಯೆಹೋವನು ನನ್ನನ್ನು ಕಾಪಾಡುವವನು, ಆದುದರಿಂದ ನಾನು ಮಲಗಿಕೊಂಡು ನಿದ್ದೆಮಾಡಿ ಸುಖವಾಗಿ ಎಚ್ಚರಗೊಂಡೆನು.
  • ನೀನು ಮಲಗಿಕೊಳ್ಳುವಾಗ ನಿನ್ನ ನಿದ್ರೆಯು ಸುಖಕರವಾಗಿರುವುದುಜ್ಞಾನೋ 3:24
    ವಚನಗಳು
    ಜ್ಞಾನೋ 3:24ನೀನು ಮಲಗುವಾಗ ಹೆದರಿಕೆ ಇರುವುದಿಲ್ಲ, ಮಲಗಿದ ಮೇಲೆ ಸುಖವಾಗಿ ನಿದ್ರೆಮಾಡುವಿ.
  • ದುಡಿಯುವವನಿಗೆ ಸುಖನಿದ್ರೆ; ಐಶ್ವರ್ಯವಂತನ ಸಮೃದ್ಧಿಯು ಅವನನ್ನು ನಿದ್ರಿಸಗೊಡುವುದಿಲ್ಲಪ್ರಸ 5:12
    ವಚನಗಳು
    ಪ್ರಸ 5:12ದುಡಿಯುವವನು ಸ್ವಲ್ಪವೇ ತಿನ್ನಲಿ ಹೆಚ್ಚೇ ತಿನ್ನಲಿ, ಹಾಯಾಗಿ ನಿದ್ರಿಸುತ್ತಾನೆ. ಆದರೆ ಐಶ್ವರ್ಯವಂತನ ಸಮೃದ್ಧಿಯು ಅವನಿಗೆ ನಿದ್ರೆ ಮಾಡಗೊಡಿಸದು.
  • ನಿದ್ರೆಯನ್ನು ಪ್ರೀತಿಸಬೇಡ, ಇಲ್ಲದಿದ್ದರೆ ಬಡವನಾಗುವಿಜ್ಞಾನೋ 20:13
    ವಚನಗಳು
    ಜ್ಞಾನೋ 20:13ನಿದ್ರಾನಿರತನಾಗಿರಬೇಡ! ಬಡವನಾದೀಯೆ, ಕಣ್ಣು ತೆರೆ! ಆಹಾರದಿಂದ ತೃಪ್ತಿಗೊಳ್ಳುವಿ.
  • “ಇನ್ನು ಸ್ವಲ್ಪ ನಿದ್ದೆ, ಇನ್ನು ಸ್ವಲ್ಪ ತೂಕಡಿಕೆ, ಇನ್ನೂ ಕೊಂಚ ನಿದ್ದೆಗಾಗಿ ಕೈಮುದುರಿಕೊಳ್ಳುವೆ”ಜ್ಞಾನೋ 6:9–10, ಜ್ಞಾನೋ 24:33
    ವಚನಗಳು
    ಜ್ಞಾನೋ 6:9–10ಸೋಮಾರಿಯೇ, ಎಷ್ಟು ಹೊತ್ತು ನಿದ್ರೆ? ನಿದ್ರೆಯಿಂದ ಯಾವಾಗ ಎಚ್ಚರಗೊಳ್ಳುವಿ? “ಇನ್ನು ಸ್ವಲ್ಪ ನಿದ್ದೆ, ಇನ್ನು ಸ್ವಲ್ಪ ತೂಕಡಿಕೆ, ಇನ್ನೂ ಕೊಂಚ ನಿದ್ದೆಗಾಗಿ ಕೈಮುದುರಿಕೊಳ್ಳುವೆ” ಅಂದುಕೊಳ್ಳುವಿಯಾ?
    ಜ್ಞಾನೋ 24:33ಇನ್ನು ಸ್ವಲ್ಪ ನಿದ್ದೆ, ಇನ್ನು ತುಸ ತೂಕಡಿಕೆ, ಇನ್ನೂ ಕೊಂಚ ನಿದ್ದೆಗಾಗಿ ಕೈಮುದುರಿಕೊಳ್ಳುವೆ ಅಂದುಕೊಳ್ಳುವಿಯಾ?
  • ಸೋಮಾರಿತನವು ಗಾಢನಿದ್ರೆಯನ್ನು ಬರಮಾಡುತ್ತದೆಜ್ಞಾನೋ 19:15
    ವಚನಗಳು
    ಜ್ಞಾನೋ 19:15ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುವುದು, ಸೋಮಾರಿಯು ಹಸಿವೆಗೊಳ್ಳುವನು.
  • ಇಸ್ರಾಯೇಲನ್ನು ಕಾಯುವವನು ತೂಕಡಿಸುವುದೂ ಇಲ್ಲ, ನಿದ್ರಿಸುವುದೂ ಇಲ್ಲಕೀರ್ತ 121:4
    ವಚನಗಳು
    ಕೀರ್ತ 121:4ಇಗೋ, ಇಸ್ರಾಯೇಲರನ್ನು ಕಾಯುವಾತನು, ತೂಕಡಿಸುವುದೂ ಇಲ್ಲ, ನಿದ್ರಿಸುವುದೂ ಇಲ್ಲ.
  • ಎಲೀಯನು ಬಾಳನ ಪ್ರವಾದಿಗಳನ್ನು ಹಾಸ್ಯಮಾಡುತ್ತಾನೆ: ಅವನು ನಿದ್ರೆಮಾಡುತ್ತಿರಬಹುದು1 ಅರಸು 18:27
    ವಚನಗಳು
    1 ಅರಸು 18:27ಮಧ್ಯಾಹ್ನವಾದನಂತರ ಎಲೀಯನು ಅವರನ್ನು ಪರಿಹಾಸ್ಯ ಮಾಡಿ, “ಗಟ್ಟಿಯಾಗಿ ಕೂಗಿರಿ, ಅವನು ದೇವರಾಗಿರುತ್ತಾನಲ್ಲಾ. ಈಗ ಒಂದು ವೇಳೆ ಅವನು ಧ್ಯಾನದಲ್ಲಿರಬಹುದು, ಇಲ್ಲವೇ ಯಾವುದೋ ಕೆಲಸದಲ್ಲಿ ಅಥವಾ ಪ್ರಯಾಣದಲ್ಲಿ ಇರಬೇಕು. ಅದೂ ಇಲ್ಲದಿದ್ದರೆ ನಿದ್ರೆಮಾಡುತ್ತಿದ್ದಾನು, ಎಚ್ಚರವಾಗಬೇಕು” ಎಂದು ಹೇಳಿದನು.
  • ಹರಕೆ: ಯೆಹೋವನಿಗೆ ನಿವಾಸಸ್ಥಾನ ಸಿಕ್ಕುವ ತನಕ ನಿದ್ರೆಯಿಲ್ಲಕೀರ್ತ 132:3–5
    ವಚನಗಳು
    ಕೀರ್ತ 132:3–5“ನಾನು ನನ್ನ ಮನೆಯೊಳಗೆ ಪ್ರವೇಶಿಸುವುದಿಲ್ಲ, ಮಂಚವನ್ನು ಹತ್ತುವುದಿಲ್ಲ, ಕಣ್ಣುಗಳನ್ನು ಮುಚ್ಚುವುದಿಲ್ಲ, ರೆಪ್ಪೆಗಳನ್ನು ಕೂಡಿಸುವುದಿಲ್ಲ” ಎಂದು ಅವನು ಯೆಹೋವನಿಗೆ ಪ್ರಮಾಣಮಾಡಿ, ಯಾಕೋಬನ ಶೂರನಿಗೆ ಹರಕೆ ಮಾಡಿಕೊಂಡನಲ್ಲಾ.

ಉದಾಹರಣೆಗಳು

  • ಆದಾಮನಿಗೆ ಗಾಢನಿದ್ರೆ ಬರುತ್ತದೆಆದಿ 2:21
    ವಚನಗಳು
    ಆದಿ 2:21ಹೀಗಿರುವಲ್ಲಿ ಯೆಹೋವನಾದ ದೇವರು ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ತುಂಬಿದನು.
  • ಸೂರ್ಯನು ಮುಳುಗುತ್ತಿರುವಾಗ ಅಬ್ರಾಮನಿಗೆ ಗಾಢನಿದ್ರೆ ಬರುತ್ತದೆಆದಿ 15:12
    ವಚನಗಳು
    ಆದಿ 15:12ಹೊತ್ತು ಮುಣುಗುತ್ತಿರುವಾಗ ಅಬ್ರಾಮನಿಗೆ ಗಾಢನಿದ್ರೆ ಹತ್ತಿತು; ಕಾರ್ಗತ್ತಲು ಅವನ ಮೇಲೆ ಕವಿಯಿತು; ಅವನು ಮಹಾಭೀತಿಯಿಂದ ಭಯಭ್ರಾಂತನಾದನು.
  • ಯಾಕೋಬನು ತಲೆಯ ಕೆಳಗೆ ಕಲ್ಲನ್ನಿಟ್ಟುಕೊಂಡು ಮಲಗುತ್ತಾನೆಆದಿ 28:11
    ವಚನಗಳು
    ಆದಿ 28:11ಅವನು ಪ್ರಯಾಣಾರ್ಥವಾಗಿ ಹೋಗುತ್ತಿರುವಾಗ ಹೊತ್ತು ಮುಳುಗಿದ್ದರಿಂದ ಆ ರಾತ್ರಿ ಅಲ್ಲಿಯೇ ಉಳಿದುಕೊಂಡನು. ಅವನು ಅಲ್ಲಿದ್ದ ಕಲ್ಲುಗಳಲ್ಲಿ ಒಂದು ಕಲ್ಲನ್ನು ತಲೆದಿಂಬಾಗಿ ಇಟ್ಟುಕೊಂಡು ಆ ಸ್ಥಳದಲ್ಲಿ ಮಲಗಿಕೊಂಡನು.
  • ಯಾಕೋಬನು: ಇರುಳಲ್ಲಿ ಚಳಿ, ನನ್ನ ಕಣ್ಣುಗಳಿಗೆ ನಿದ್ರೆಯೇ ಇರಲಿಲ್ಲಆದಿ 31:40
    ವಚನಗಳು
    ಆದಿ 31:40ಹಗಲಿನಲ್ಲಿ ಬಿಸಿಲಿನಿಂದಲೂ, ಇರುಳಲ್ಲಿ ಚಳಿಯಿಂದಲೂ ಬಾಧೆಪಟ್ಟೆನು, ನಿದ್ದೆಮಾಡುವುದಕ್ಕಾದರೂ ಅವಕಾಶ ಸಿಗಲಿಲ್ಲ, ನನ್ನ ಸ್ಥಿತಿ ಹೀಗಿತ್ತು.
  • ಆಯಾಸದಿಂದ ಗಾಢನಿದ್ರೆಯಲ್ಲಿದ್ದ ಸೀಸೆರನನ್ನು ಯಾಯೇಲಳು ಕೊಲ್ಲುತ್ತಾಳೆನ್ಯಾಯ 4:21
    ವಚನಗಳು
    ನ್ಯಾಯ 4:21ಹೆಬೆರನ ಹೆಂಡತಿಯಾದ ಯಾಯೇಲಳು ಕೈಯಲ್ಲಿ ಗುಡಾರದ ಗೂಟವನ್ನೂ, ಒಂದು ಸುತ್ತಿಗೆಯನ್ನೂ ತೆಗೆದುಕೊಂಡು ಅವನು ಆಯಾಸದಿಂದ ಗಾಢನಿದ್ರೆಯಲ್ಲಿದ್ದಾಗ, ಮೆಲ್ಲಗೆ ಹತ್ತಿರ ಹೋಗಿ, ಅವನ ತಲೆಯಲ್ಲಿ ಆ ಗೂಟವನ್ನು ಹೊಡೆದು ನೆಲಕ್ಕೆ ನಾಟಿಸಿದಳು; ಅವನು ಸತ್ತನು.
  • ದೆಲೀಲಳು ಸಂಸೋನನನ್ನು ತನ್ನ ತೊಡೆಯ ಮೇಲೆ ಮಲಗಿಸಿ ನಿದ್ರೆಗೊಳಿಸುತ್ತಾಳೆನ್ಯಾಯ 16:19
    ವಚನಗಳು
    ನ್ಯಾಯ 16:19ಆಕೆಯು ಸಂಸೋನನನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡು ಅವನಿಗೆ ನಿದ್ರೆಹತ್ತಿದಾಗ ಒಬ್ಬ ಮನುಷ್ಯನಿಂದ ಅವನ ತಲೆಯ ಏಳು ಜಡೆಗಳನ್ನು ಬೋಳಿಸಿ, ಅವನನ್ನು ದುರ್ಬಲಪಡಿಸಿದಳು. ಅವನ ಶಕ್ತಿಯು ಅವನನ್ನು ಬಿಟ್ಟು ಹೋಯಿತು,
  • ಬೋವಜನು ಧಾನ್ಯದ ರಾಶಿಯ ಬಳಿಯಲ್ಲಿ ಮಲಗುತ್ತಾನೆ; ಮಧ್ಯರಾತ್ರಿಯಲ್ಲಿ ರೂತಳನ್ನು ಕಾಣುತ್ತಾನೆರೂತ 3:7–8
    ವಚನಗಳು
    ರೂತ 3:7–8ಬೋವಜನು ಅನ್ನಪಾನಗಳನ್ನು ತೆಗೆದುಕೊಂಡು ಸಂತುಷ್ಟನಾಗಿ ರಾಶಿಯ ಬಳಿಯಲ್ಲಿ ಮಲಗಿದ ಮೇಲೆ ರಹಸ್ಯವಾಗಿ ಬಂದು ಅವನ ಕಾಲುಗಳ ಮೇಲಣ ಹೊದಿಕೆಯನ್ನು ತೆಗೆದುಬಿಟ್ಟು, ಕಾಲ್ಬದಿಯಲ್ಲಿ ಮಲಗಿದಳು. ಮಧ್ಯರಾತ್ರಿಯಲ್ಲಿ ಎಚ್ಚರವಾದಾಗ ಬೋವಜನು ತನ್ನ ಕಾಲುಗಳ ಬಳಿಯಲ್ಲಿ ಮಲಗಿರುವ ಹೆಂಗಸನ್ನು ಕಂಡು,
  • ನಿದ್ರಿಸುತ್ತಿದ್ದ ಸೌಲನ ಬಳಿಯಿಂದ ದಾವೀದನು ಈಟಿಯನ್ನೂ ನೀರಿನ ತಂಬಿಗೆಯನ್ನೂ ತೆಗೆದುಕೊಳ್ಳುತ್ತಾನೆ1 ಸಮು 26:7, 1 ಸಮು 26:12
    ವಚನಗಳು
    1 ಸಮು 26:7ದಾವೀದನೂ ಮತ್ತು ಅಬೀಷೈಯೂ ರಾತ್ರಿಯಲ್ಲಿ ಆ ಪಾಳೆಯಕ್ಕೆ ಹೋದಾಗ ಸೌಲನು ಬಂಡಿಗಳ ಗುಂಪಿನ ಮಧ್ಯದಲ್ಲಿ ಮಲಗಿಕೊಂಡು ನಿದ್ರೆಮಾಡುತ್ತಿದ್ದನು. ಅವನ ಬರ್ಜಿಯು ಅವನ ತಲೆಯ ಹತ್ತಿರ ನೆಲದಲ್ಲಿ ನೆಡಲ್ಪಟ್ಟಿತ್ತು. ಅಬ್ನೇರನೂ, ಸೈನಿಕರೂ ಅವನ ಸುತ್ತಲೂ ಮಲಗಿದ್ದರು.
    1 ಸಮು 26:12ಸೌಲನ ತಲೆದಿಂಬಿನ ಬಳಿಯಲ್ಲಿದ್ದ ಬರ್ಜಿ ಮತ್ತು ನೀರಿನ ತಂಬಿಗೆಯನ್ನು ತೆಗೆದುಕೊಂಡು ಹೋದರು. ಯಾರೂ ನೋಡಲಿಲ್ಲ, ಯಾರಿಗೂ ಗೊತ್ತಾಗಲಿಲ್ಲ, ಯಾರೂ ಎಚ್ಚರವಾಗಲಿಲ್ಲ. ಏಕೆಂದರೆ ಯೆಹೋವನು ಅವರಿಗೆ ಗಾಢನಿದ್ರೆಯನ್ನು ಬರಮಾಡಿದ್ದನು. ಒಬ್ಬರಿಗೂ ಎಚ್ಚರವಿಲ್ಲದೆ ಎಲ್ಲರೂ ನಿದ್ರೆಮಾಡುತ್ತಿದ್ದರು.
  • ಮಧ್ಯಾಹ್ನದ ನಿದ್ರೆಯಲ್ಲಿದ್ದಾಗ ಈಷ್ಬೋಶೆತನನ್ನು ಕೊಲ್ಲಲಾಗುತ್ತದೆ2 ಸಮು 4:5
    ವಚನಗಳು
    2 ಸಮು 4:5ಈಷ್ಬೋಶೆತನು ಮಧ್ಯಾಹ್ನದ ಬಿಸಿಲು ಹೊತ್ತಿನಲ್ಲಿ ಮನೆಯೊಳಗೆ ಮಲಗಿರುವಾಗ ಬೇರೋತಿನ ರಿಮ್ಮೋನನ ಮಕ್ಕಳಾದ ರೇಕಾಬ್, ಬಾಣ ಎಂಬುವರು ಅವನ ಮನೆಯ ಬಳಿಗೆ ಬಂದರು.
  • ಎಲೀಯನು ಜಾಲೀ ಗಿಡದ ಕೆಳಗೆ ನಿದ್ರೆಮಾಡುತ್ತಾನೆ1 ಅರಸು 19:5
    ವಚನಗಳು
    1 ಅರಸು 19:5ಪಕ್ಕನೆ ಒಬ್ಬ ದೇವದೂತನು ಅವನನ್ನು ತಟ್ಟಿ, “ಎದ್ದು ಊಟ ಮಾಡು” ಎಂದು ಹೇಳಿದನು.
  • ನಿದ್ರೆಬಾರದ ಅಹಷ್ವೇರೋಷನು ರಾಜವೃತ್ತಾಂತಗಳನ್ನು ತನಗೆ ಓದಿಸುತ್ತಾನೆಎಸ್ತೇ 6:1
    ವಚನಗಳು
    ಎಸ್ತೇ 6:1ಆ ರಾತ್ರಿಯಲ್ಲಿ ಅರಸನಿಗೆ ನಿದ್ರೆಬರಲಿಲ್ಲ; ಆದುದರಿಂದ ಅವನು ಪೂರ್ವ ಘಟನೆಗಳ ಗ್ರಂಥವನ್ನು ತರಲು ಸೇವಕರಿಗೆ ಅಪ್ಪಣೆಮಾಡಿ ಅದನ್ನು ಪಾರಾಯಣಮಾಡಿಸುತ್ತಿದ್ದನು.
  • ನೆಬೂಕದ್ನೆಚ್ಚರನ ಕನಸುಗಳು: ಅವನಿಗೆ ನಿದ್ರೆ ಹತ್ತಲಿಲ್ಲದಾನಿ 2:1
    ವಚನಗಳು
    ದಾನಿ 2:1ನೆಬೂಕದ್ನೆಚ್ಚರನು ತನ್ನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಕನಸು ಕಂಡು ತತ್ತರಗೊಂಡನು, ಅವನಿಗೆ ನಿದ್ರೆ ತಪ್ಪಿತು.
  • ದಾನಿಯೇಲನು ಸಿಂಹಗಳ ನಡುವೆ ಇರುವಾಗ ದಾರ್ಯಾವೆಷನಿಗೆ ನಿದ್ರೆ ಬರುವುದಿಲ್ಲದಾನಿ 6:18
    ವಚನಗಳು
    ದಾನಿ 6:18ರಾಜನು ಅರಮನೆಯಲ್ಲಿ ವಿನೋದವಾದ್ಯಗಳನ್ನು ತನ್ನ ಮುಂದೆ ತರಿಸದೆ, ಉಪವಾಸವಾಗಿ ರಾತ್ರಿಯನ್ನು ಕಳೆದನು; ಅವನಿಗೆ ನಿದ್ರೆ ಬರಲಿಲ್ಲ.
  • ಬಿರುಗಾಳಿಯಲ್ಲೂ ಯೋನನು ಹಡಗಿನ ಒಳಭಾಗದಲ್ಲಿ ನಿದ್ರಿಸುತ್ತಾನೆಯೋನ 1:5
    ವಚನಗಳು
    ಯೋನ 1:5ಆಗ ನಾವಿಕರು ಹೆದರಿ ತಮ್ಮತಮ್ಮ ದೇವರುಗಳಿಗೆ ಮೊರೆಯಿಟ್ಟರು. ಹಡಗನ್ನು ಹಗುರ ಮಾಡಲು ಹಡಗಿನಲ್ಲಿರುವ ಸರಕುಗಳನ್ನು ಸಮುದ್ರಕ್ಕೆ ಬಿಸಾಡಿಬಿಟ್ಟರು. ಆದರೆ ಯೋನನು ಹಡಗಿನ ಕೆಳಭಾಗಕ್ಕೆ ಹೋಗಿ ಮಲಗಿ ಗಾಢನಿದ್ರೆ ಮಾಡುತ್ತಿದ್ದನು.
  • ಬಿರುಗಾಳಿಯಲ್ಲಿ ಯೇಸು ದೋಣಿಯ ಹಿಂಭಾಗದಲ್ಲಿ ತಲೆದಿಂಬನ್ನು ಒರಗಿ ನಿದ್ರಿಸುತ್ತಾನೆಮತ್ತಾ 8:24, ಮಾರ್ಕ 4:38, ಲೂಕ 8:23
    ವಚನಗಳು
    ಮತ್ತಾ 8:24ಅವರು ಹೋಗುತ್ತಿರುವಾಗ ಸಮುದ್ರವು ಅಲ್ಲೋಲಕಲ್ಲೋಲವಾಗಿ ದೋಣಿಯು ಅಲೆಗಳಿಂದ ಮುಚ್ಚುವಂತೆ ಆಯಿತು; ಆದರೆ ಯೇಸು ನಿದ್ರಿಸುತ್ತಿದ್ದನು.
    ಮಾರ್ಕ 4:38ಆದರೆ ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬನ್ನು ಒರಗಿ ನಿದ್ದೆಮಾಡುತ್ತಿದ್ದನು. ಅವರು ಆತನನ್ನು ಎಬ್ಬಿಸಿ, “ಗುರುವೇ, ನಾವು ಮುಳುಗಿಹೋಗುವುದರಲ್ಲಿ ನಿನಗೆ ಚಿಂತೆಯಿಲ್ಲವೇ” ಎಂದು ಕೇಳಿದರು.
    ಲೂಕ 8:23ಅವರು ಹೋಗುತ್ತಿರುವಾಗ ಆತನಿಗೆ ನಿದ್ರೆ ಹತ್ತಿತು, ಅಷ್ಟರಲ್ಲಿ ಬಿರುಗಾಳಿ ಸಮುದ್ರದಲ್ಲಿ ಬೀಸಿ ದೋಣಿಯೊಳಗೆ ನೀರು ತುಂಬಿಕೊಂಡದ್ದರಿಂದ ಅವರೆಲ್ಲರು ಅಪಾಯಕ್ಕೆ ಗುರಿಯಾದರು.
  • ಗೆತ್ಸೇಮನೆಯಲ್ಲಿ ಶಿಷ್ಯರು ನಿದ್ರೆಹೋಗುತ್ತಾರೆಮತ್ತಾ 26:40–43, ಲೂಕ 22:45
    ವಚನಗಳು
    ಮತ್ತಾ 26:40–43ಅನಂತರ ಆತನು ಶಿಷ್ಯರ ಬಳಿಗೆ ಬರಲು ಅವರು ನಿದ್ದೆಮಾಡುವುದನ್ನು ಕಂಡು ಪೇತ್ರನಿಗೆ, “ಒಂದು ಗಳಿಗೆಯಾದರೂ ನನ್ನ ಸಂಗಡ ಎಚ್ಚರವಾಗಿರಲಾರಿರಾ? ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ಆದರೆ ದೇಹವು ಬಲಹೀನವಾಗಿದೆ” ಎಂದು ಹೇಳಿದನು. ತಿರುಗಿ ಎರಡನೇ ಸಾರಿ ಹೋಗಿ, “ನನ್ನ ತಂದೆಯೇ, ನಾನು ಕುಡಿಯದ ಹೊರತು ಈ ಪಾತ್ರೆ ಬಿಟ್ಟುಹೋಗಲಾರದು ಎಂದಿದ್ದರೆ ನಿನ್ನ ಚಿತ್ತದಂತೆಯೇ ಆಗಲಿ” ಎಂದು ದೇವರನ್ನು ಪ್ರಾರ್ಥಿಸಿದನು. ಆತನು ತಿರುಗಿ ಬಂದಾಗಲೂ ಅವರು ನಿದ್ದೆಮಾಡುವುದನ್ನು ಕಂಡನು; ಅವರ ಕಣ್ಣುಗಳು ಭಾರವಾಗಿದ್ದವು.
    ಲೂಕ 22:45ಆತನು ಪ್ರಾರ್ಥನೆ ಮುಗಿಸಿ ಎದ್ದು ಶಿಷ್ಯರ ಬಳಿಗೆ ಬಂದು, ಅವರು ದುಃಖದಿಂದ ಬಳಲಿಹೋದವರಾಗಿ ನಿದ್ರೆಹತ್ತಿರುವುದನ್ನು ಕಂಡು,
  • ಪೇತ್ರನು ಸೆರೆಮನೆಯಲ್ಲಿ ಇಬ್ಬರು ಸೈನಿಕರ ನಡುವೆ ನಿದ್ರಿಸುತ್ತಾನೆಅ. ಕೃ 12:6
    ವಚನಗಳು
    ಅ. ಕೃ 12:6ಹೆರೋದನು ಅವನನ್ನು ಜನರ ಮುಂದೆ ತರಿಸಬೇಕೆಂದಿದ್ದ ದಿನದ ಹಿಂದಿನ ರಾತ್ರಿಯಲ್ಲಿ, ಪೇತ್ರನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟವನಾಗಿ, ಇಬ್ಬರು ಸಿಪಾಯಿಗಳ ನಡುವೆ ನಿದ್ದೆಮಾಡುತ್ತಿದ್ದನು. ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯುತ್ತಿದ್ದರು.
  • ಪೌಲನು ಮಾತನಾಡುತ್ತಿರುವಾಗ ಯೂತಿಖನು ತೂಕಡಿಸಿ ಕಿಟಕಿಯಿಂದ ಬೀಳುತ್ತಾನೆಅ. ಕೃ 20:9
    ವಚನಗಳು
    ಅ. ಕೃ 20:9ಯೂತಿಖನೆಂಬ ಒಬ್ಬ ಯೌವನಸ್ಥನು ಕಿಟಿಕಿಯ ಹೊಸ್ತಿಲಿನಲ್ಲಿ ಕುಳಿತುಕೊಂಡು ಗಾಢನಿದ್ರೆಯಿಂದ ತೂಕಡಿಸುತ್ತಿದ್ದನು. ಪೌಲನು ಇನ್ನೂ ಬೋಧನೆ ಮಾಡುತ್ತಾ ಇದ್ದಾಗ ಆ ಯೌವನಸ್ಥನು ಗಾಢವಾದ ನಿದ್ರೆಯಿಂದ ತೂಕಡಿಸಿ ಮೂರನೆಯ ಅಂತಸ್ತಿನಿಂದ ಕೆಳಕ್ಕೆ ಬಿದ್ದುಬಿಟ್ಟನು; ಅವನನ್ನು ಎಬ್ಬಿಸಲು ಹೋದಾಗ ಅವನು ಸತ್ತುಹೋಗಿದ್ದನು.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು