ಅನ್ವೇಷಿಸಿ › ವಿಷಯಗಳು › ಗೂಢಚಾರರು ಮತ್ತು ಬೇಹುಗಾರರು
ಆಶ್ಚರ್ಯಕರ ವಿವರಗಳು
ಬೈಬಲಿನಲ್ಲಿ ಗೂಢಚಾರರು ಮತ್ತು ಬೇಹುಗಾರರು
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 34 ವಾಕ್ಯಭಾಗಗಳು, ಸಾಲು ಸಾಲಾಗಿ.
ಹನ್ನೆರಡು ಮಂದಿ ಗೂಢಚಾರರು
- ಕಾನಾನ್ ದೇಶವನ್ನು ಸಂಚರಿಸಿ ನೋಡಲು ಮೋಶೆಯು ಪ್ರತಿಯೊಂದು ಕುಲದಿಂದ ಒಬ್ಬ ಮುಖ್ಯಸ್ಥನನ್ನು ಕಳುಹಿಸುತ್ತಾನೆಅರಣ್ಯ 13:2, ಧರ್ಮೋ 1:23
ವಚನಗಳು
ಅರಣ್ಯ 13:2“ನಾನು ಇಸ್ರಾಯೇಲರಿಗೆ ಕೊಡುವ ಕಾನಾನ್ ದೇಶವನ್ನು ಸಂಚರಿಸಿ ನೋಡುವುದಕ್ಕೆ ನೀನು ಒಂದೊಂದು ಕುಲದಿಂದ ಒಬ್ಬೊಬ್ಬ ಮುಖ್ಯಸ್ಥನನ್ನು ಕಳುಹಿಸಬೇಕು” ಎಂದು ಆಜ್ಞಾಪಿಸಿದನು.
ಧರ್ಮೋ 1:23ಅದು ಒಳ್ಳೆಯ ಆಲೋಚನೆಯೆಂದು ನಾನು ತಿಳಿದುಕೊಂಡು ನಿಮ್ಮಲ್ಲಿ ಕುಲಕ್ಕೆ ಒಬ್ಬೊಬ್ಬನಂತೆ ಹನ್ನೆರಡು ಜನರನ್ನು ಆರಿಸಿಕೊಂಡೆನು.
- ಅವರಿಗೆ ಅಪ್ಪಣೆ: ಜನರು ಬಲಿಷ್ಠರೋ ಬಲಹೀನರೋ, ಕಡಿಮೆಯೋ ಹೆಚ್ಚೋ ನೋಡಿರಿಅರಣ್ಯ 13:17–18
ವಚನಗಳು
ಅರಣ್ಯ 13:17–18ಕಾನಾನ್ ದೇಶದಲ್ಲಿ ಸಂಚರಿಸಿ ನೋಡುವುದಕ್ಕೆ ಮೋಶೆ ಅವರನ್ನು ಕಳುಹಿಸುವಾಗ ಅವರಿಗೆ, “ನೀವು ಕಾನಾನ್ ದೇಶದ ದಕ್ಷಿಣ ಪ್ರಾಂತ್ಯದ ಮಾರ್ಗವಾಗಿ ಬೆಟ್ಟದ ಸೀಮೆಗೆ ಹತ್ತಿಹೋಗಿ ಆ ದೇಶದ ಸಂಗತಿಯನ್ನೆಲ್ಲಾ ನೋಡಿ ತಿಳಿದುಕೊಳ್ಳಬೇಕು. ಅಲ್ಲಿನ ನಿವಾಸಿಗಳು ಬಲಿಷ್ಠರೋ ಅಥವಾ ಬಲಹೀನರೋ, ಬಹಳ ಜನರೋ ಅಥವಾ ಸ್ವಲ್ಪ ಜನರೋ,
- ಅವರು ಚಿನ್ ಅರಣ್ಯದಿಂದ ರೆಹೋಬಿನ ವರೆಗೆ ಹೋದರುಅರಣ್ಯ 13:21
ವಚನಗಳು
ಅರಣ್ಯ 13:21ಅವರು ಬೆಟ್ಟವನ್ನು ಹತ್ತಿ ಚಿನ್ ಅರಣ್ಯದಿಂದ ಹಮಾತಿನ ದಾರಿಯಲ್ಲಿರುವ ರೆಹೋಬಿನ ವರೆಗೆ ಆ ದೇಶವನ್ನು ಸಂಚರಿಸಿ ನೋಡಿದರು.
- ಎಷ್ಕೋಲಿನಲ್ಲಿ ಇಬ್ಬರು ಒಂದೇ ದ್ರಾಕ್ಷಿಗೊಂಚಲನ್ನು ಕೋಲಿನ ಮೇಲೆ ಹೊತ್ತುಕೊಂಡರುಅರಣ್ಯ 13:23
ವಚನಗಳು
ಅರಣ್ಯ 13:23ಅವರು ಎಷ್ಕೋಲ್ ಎಂಬ ತಗ್ಗಿಗೆ ಬಂದು ಅಲ್ಲಿ ದ್ರಾಕ್ಷಾಲತೆಯಿಂದ ಒಂದೇ ಗೊಂಚಲುಳ್ಳ ಕೊಂಬೆಯನ್ನು ಕೊಯ್ದರು; ಇಬ್ಬರು ಅದನ್ನು ಅಡ್ಡಕೋಲಿನಿಂದ ಹೊತ್ತುಕೊಂಡು ಬಂದರು. ಕೆಲವು ದಾಳಿಂಬೆ ಮತ್ತು ಅಂಜೂರದ ಹಣ್ಣುಗಳನ್ನೂ ತಂದರು.
- ನಾಲ್ವತ್ತು ದಿನಗಳ ನಂತರ ಅವರು ಹಿಂದಿರುಗಿದರುಅರಣ್ಯ 13:25
ವಚನಗಳು
ಅರಣ್ಯ 13:25ಅವರು ನಲ್ವತ್ತು ದಿನಗಳು ಆ ದೇಶವನ್ನು ಸಂಚರಿಸಿ ನೋಡಿದರು.
- ಅವರ ವರದಿ: ಹಾಲೂ ಜೇನೂ ಹರಿಯುವ ದೇಶ, ಆದರೆ ಕೋಟೆಯುಳ್ಳ ಪಟ್ಟಣಗಳುಅರಣ್ಯ 13:27–28
ವಚನಗಳು
ಅರಣ್ಯ 13:27–28ಅವರು ಮೋಶೆಗೆ, “ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು; ಅದು ನಿಜವಾಗಿಯೂ ಹಾಲೂ ಮತ್ತು ಜೇನೂ ಹರಿಯುವ ದೇಶವೇ; ಅಲ್ಲಿನ ಹಣ್ಣುಗಳು ಇಂಥವು. ಆದರೆ ಆ ದೇಶದ ನಿವಾಸಿಗಳು ಬಲಿಷ್ಠರು: ಅವರಿರುವ ಪಟ್ಟಣಗಳು ದೊಡ್ಡದಾಗಿಯೂ, ಕೋಟೆ ಕೊತ್ತಲುಗಳುಳ್ಳದ್ದಾಗಿಯೂ ಇದೆ. ಅದಲ್ಲದೆ ಅಲ್ಲಿ ಉನ್ನತ ಪುರುಷರನ್ನು ನೋಡಿದೆವು.
- ಕಾಲೇಬನು: ‘ಅದನ್ನು ಜಯಿಸಲು ನಾವು ಶಕ್ತರಾಗಿದ್ದೇವೆ’; ಇತರರು ಒಪ್ಪಲಿಲ್ಲಅರಣ್ಯ 13:30–31
ವಚನಗಳು
ಅರಣ್ಯ 13:30–31ಇಸ್ರಾಯೇಲರು ಮೋಶೆಗೆ ವಿರುದ್ಧವಾಗಿ ಗುಣುಗುಟ್ಟಿದರು. ಕಾಲೇಬನು ಅವರನ್ನು ಸುಮ್ಮನಿರಿಸಿ, “ನಾವು ನಿರ್ಭಯವಾಗಿ ಆ ಬೆಟ್ಟದ ಸೀಮೆಗೆ ಹತ್ತಿಹೋಗಿ ಅದನ್ನು ಸ್ವಾಧೀನಪಡಿಸಿಕೊಳ್ಳೋಣ. ಅದನ್ನು ಜಯಿಸಲು ನಾವು ಶಕ್ತರಾಗಿದ್ದೇವೆ” ಎಂದು ಹೇಳಿದನು. ಆದರೆ ಅವನ ಜೊತೆಯಲ್ಲಿ ಹೋದವರು, “ಆ ಜನರು ನಮಗಿಂತ ಬಲಿಷ್ಠರು; ಅವರನ್ನು ಜಯಿಸಲು ನಮಗೆ ಶಕ್ತಿಸಾಲುವುದಿಲ್ಲ” ಎಂದು ಹೇಳಿದರು.
- ‘ನಾವು ಅವರ ಮುಂದೆ ಮಿಡತೆಗಳಂತೆ ಇದ್ದೇವೆ ಎಂದು ತಿಳಿದುಕೊಂಡೆವು’ಅರಣ್ಯ 13:33
ವಚನಗಳು
ಅರಣ್ಯ 13:33ಅಲ್ಲಿ ನೆಫೀಲಿಯರನ್ನು ಅಂದರೆ ನೆಫೀಲಿಯ ವಂಶದವರಾದ ಉನ್ನತ ಪುರುಷರನ್ನು ನೋಡಿದೆವು. ನಾವು ಅವರ ಮುಂದೆ ಮಿಡತೆಗಳಂತೆ ಇದ್ದೇವೆ ಎಂದು ತಿಳಿದುಕೊಂಡೆವು. ಅವರಿಗೂ ನಾವು ಹಾಗೆಯೇ ಕಾಣಿಸಿದೆವು” ಎಂದು ಹೇಳಿದರು.
- ನಾಲ್ವತ್ತು ದಿನಗಳ ಸಂಚಾರವು ಅರಣ್ಯದಲ್ಲಿ ನಾಲ್ವತ್ತು ವರ್ಷಗಳಾಯಿತು, ಒಂದು ದಿನಕ್ಕೆ ಒಂದು ವರ್ಷಅರಣ್ಯ 14:34
ವಚನಗಳು
ಅರಣ್ಯ 14:34ನೀವು ಆ ದೇಶವನ್ನು ಸಂಚರಿಸಿ ನೋಡಿದ ನಲ್ವತ್ತು ದಿನಗಳ ಪ್ರಕಾರ, ಒಂದು ದಿನಕ್ಕೆ ಒಂದು ವರ್ಷವಾಗಿ ಈ ಪ್ರಕಾರ ನಲ್ವತ್ತು ವರ್ಷ ನಿಮ್ಮ ಪಾಪಫಲವನ್ನು ಅನುಭವಿಸುವವರಾಗಿ ನಾನು ಕೈಬಿಟ್ಟವರ ಗತಿ ಎಂಥದೆಂದು ತಿಳಿದುಕೊಳ್ಳಬೇಕು.
- ಗೂಢಚಾರರಲ್ಲಿ ಯೆಹೋಶುವ ಮತ್ತು ಕಾಲೇಬರು ಮಾತ್ರ ಜೀವದಿಂದುಳಿದರುಅರಣ್ಯ 14:36–38
ವಚನಗಳು
ಅರಣ್ಯ 14:36–38ಆ ದೇಶವನ್ನು ಸಂಚರಿಸಿ ನೋಡುವುದಕ್ಕೆ ಮೋಶೆಯಿಂದ ಕಳುಹಿಸಲ್ಪಟ್ಟ ಮನುಷ್ಯರು ಹಿಂದಿರುಗಿ ಬಂದು ಆ ದೇಶದ ವಿಷಯದಲ್ಲಿ ಅಶುಭ ಸಮಾಚಾರವನ್ನು ಹೇಳಿ ಸರ್ವಸಮೂಹದವರನ್ನು ಮೋಶೆಗೆ ವಿರುದ್ಧವಾಗಿ ಗುಣುಗುಟ್ಟುವಂತೆ ಮಾಡಿದರು. ಅಶುಭ ಸಮಾಚಾರವನ್ನು ತಂದ ಆ ಮನುಷ್ಯರು ಯೆಹೋವನ ಸನ್ನಿಧಿಯಲ್ಲಿ ವ್ಯಾಧಿಯಿಂದ ಸತ್ತರು. ಆ ದೇಶವನ್ನು ಸಂಚರಿಸಿ ನೋಡುವುದಕ್ಕೆ ಹೋಗಿದ್ದ ಮನುಷ್ಯರಲ್ಲಿ ನೂನನ ಮಗನಾದ ಯೆಹೋಶುವನು ಮತ್ತು ಯೆಫುನ್ನೆಯ ಮಗನಾದ ಕಾಲೇಬನು ಮಾತ್ರ ಉಳಿದರು.
ಯೆರಿಕೋ ಮತ್ತು ರಹಬ
- ಯೆಹೋಶುವನು ಶಿಟ್ಟೀಮಿನಿಂದ ಇಬ್ಬರು ಗೂಢಚಾರರನ್ನು ರಹಸ್ಯವಾಗಿ ಕಳುಹಿಸುತ್ತಾನೆ; ಅವರು ರಹಬಳ ಮನೆಯಲ್ಲಿ ಇಳಿದುಕೊಳ್ಳುತ್ತಾರೆಯೆಹೋ 2:1
ವಚನಗಳು
ಯೆಹೋ 2:1ನೂನನ ಮಗನಾದ ಯೆಹೋಶುವನು ಇಬ್ಬರು ಗೂಢಚಾರರನ್ನು ಗುಪ್ತವಾಗಿ ಯೆರಿಕೋ ಪಟ್ಟಣವನ್ನೂ ನೋಡುವುದಕ್ಕೋಸ್ಕರ ಶಿಟ್ಟೀಮಿನಿಂದ ಕಳುಹಿಸಿದನು. ಅವರಿಗೆ “ನೀವು ಹೊರಟು ಹೋಗಿ ಕಾನಾನ್ ದೇಶದ ಯೆರಿಕೋ ಪಟ್ಟಣವನ್ನು ನೋಡಿರಿ” ಎಂದನು. ಆಗ ಅವರು ಹೊರಟು ಹೋಗಿ ರಾಹಾಬಳೆಂಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು.
- ರಹಬಳು ಅವರನ್ನು ತನ್ನ ಮಾಳಿಗೆಯ ಮೇಲೆ ಅಗಸೆಯ ದಂಟುಗಳ ಕೆಳಗೆ ಅಡಗಿಸುತ್ತಾಳೆಯೆಹೋ 2:4–6
ವಚನಗಳು
ಯೆಹೋ 2:4–6ಆದರೆ ಆ ಸ್ತ್ರೀಯು ಆ ಇಬ್ಬರನ್ನು ಅಡಗಿಸಿಟ್ಟು ಕೇಳಲು ಬಂದವರಿಗೆ, “ಆ ಮನುಷ್ಯರು ನನ್ನ ಬಳಿಗೆ ಬಂದದ್ದು ನಿಜ; ಅವರು ಎಲ್ಲಿಯವರೆಂಬುದು ನನಗೆ ತಿಳಿಯಲಿಲ್ಲ. ಊರಬಾಗಿಲನ್ನು ಮುಚ್ಚುವ ಹೊತ್ತಿನಲ್ಲಿ ಕತ್ತಲಲ್ಲೇ ಹೊರಟುಹೋದರು. ಎಲ್ಲಿಗೆ ಹೋದರೆಂಬುದು ಗೊತ್ತಿಲ್ಲ. ಬೇಗನೆ ಅವರನ್ನು ಬೆನ್ನಟ್ಟಿರಿ; ನಿಮಗೆ ಸಿಕ್ಕಾರು” ಎಂದು ಹೇಳಿದಳು. ಆದರೆ ಅವಳು ಆ ಮನುಷ್ಯರನ್ನು ಮಾಳಿಗೆಯ ಮೇಲೆ ಹತ್ತಿಸಿ, ಅಲ್ಲಿ ಸಾಲಾಗಿ ಇಟ್ಟಿದ್ದ ಸೆಣಬಿನ ಹೊರೆಗಳ ಮಧ್ಯದಲ್ಲಿ ಬಚ್ಚಿಟ್ಟಿದ್ದಳು.
- ಪಟ್ಟಣದ ಗೋಡೆಯಲ್ಲಿದ್ದ ತನ್ನ ಮನೆಯಿಂದ ಹಗ್ಗದ ಮೂಲಕ ಅವಳು ಅವರನ್ನು ಇಳಿಸುತ್ತಾಳೆಯೆಹೋ 2:15
ವಚನಗಳು
ಯೆಹೋ 2:15ಅವಳ ಮನೆಯು ಊರಗೋಡೆಯ ಮೇಲಿದ್ದುದರಿಂದ ಅವರನ್ನು ಹಗ್ಗದ ಮೂಲಕ ಕಿಟಿಕಿಯಿಂದ ಕೆಳಕ್ಕೆ ಇಳಿಸಿ ಅವರಿಗೆ
- ಒಪ್ಪಿಕೊಂಡ ಗುರುತು: ಕಿಟಿಕಿಗೆ ಕಟ್ಟಿದ ಕೆಂಪು ದಾರಯೆಹೋ 2:18
ವಚನಗಳು
ಯೆಹೋ 2:18ನಾವು ಈ ದೇಶದಲ್ಲಿ ಪ್ರವೇಶಿಸುವಾಗ ನೀನು ನಮ್ಮನ್ನು ಇಳಿಸಿದ ಕಿಟಿಕಿಗೆ ಈ ಕೆಂಪು ದಾರವನ್ನು ಕಟ್ಟಬೇಕು ಮತ್ತು ನಿನ್ನ ತಂದೆತಾಯಿಗಳನ್ನೂ ಅಣ್ಣತಮ್ಮಂದಿರನ್ನೂ ಎಲ್ಲಾ ಬಂಧುಬಳಗದವರನ್ನೂ ನಿನ್ನ ಮನೆಯಲ್ಲಿ ಸೇರಿಸಿಕೊಂಡಿರಬೇಕು.
- ಅವರು ಮೂರು ದಿನ ಬೆಟ್ಟದ ಸೀಮೆಯಲ್ಲಿ ಅಡಗಿಕೊಂಡು, ಆ ಮೇಲೆ ಯೆಹೋಶುವನಿಗೆ ವರದಿ ಮಾಡುತ್ತಾರೆಯೆಹೋ 2:16, ಯೆಹೋ 2:22–23
ವಚನಗಳು
ಯೆಹೋ 2:16“ನಿಮ್ಮನ್ನು ಹಿಂದಟ್ಟುವವರಿಗೆ ನೀವು ಸಿಕ್ಕದಂತೆ ಆ ಬೆಟ್ಟಕ್ಕೆ ಓಡಿ ಹೋಗಿ ಅಲ್ಲಿ ಮೂರು ದಿನ ಅಡಗಿಕೊಂಡಿದ್ದು, ತರುವಾಯ ಅವರು ಹಿಂದಿರುಗಿದ ಮೇಲೆ ನಿಮ್ಮ ದಾರಿ ಹಿಡಿದು ಹೋಗಿರಿ” ಎಂದಳು.
ಯೆಹೋ 2:22–23ಗೂಢಚಾರರು ಹೊರಟು ಹೋಗಿ ಆ ಬೆಟ್ಟವನ್ನು ಸೇರಿ ಬೆನ್ನಟ್ಟುವವರು ಹಿಂದಿರುಗುವ ತನಕ ಮೂರು ದಿನಗಳ ಕಾಲ ಅಲ್ಲೇ ತಂಗಿದ್ದರು. ಬೆನ್ನಟ್ಟುವವರು ಅವರನ್ನು ದಾರಿಯುದ್ದಕ್ಕೂ ಹುಡುಕಿ ಕಾಣದೆ ಹಿಂದಿರುಗಿದರು. ಆಗ ಅವರಿಬ್ಬರೂ ಬೆಟ್ಟದಿಂದಿಳಿದು, ಹೊಳೆದಾಟಿ, ನೂನನ ಮಗನಾದ ಯೆಹೋಶುವನ ಬಳಿಗೆ ಬಂದು ತಮಗೆ ಸಂಭವಿಸಿದ್ದನ್ನೆಲ್ಲಾ ತಿಳಿಸಿದರು.
- ಆ ಇಬ್ಬರು ಗೂಢಚಾರರು ರಹಬಳನ್ನೂ ಅವಳ ಕುಟುಂಬದವರೆಲ್ಲರನ್ನೂ ಹೊರಗೆ ಕರೆತರುತ್ತಾರೆಯೆಹೋ 6:22–23
ವಚನಗಳು
ಯೆಹೋ 6:22–23ಯೆಹೋಶುವನು ದೇಶವನ್ನು ಸಂಚರಿಸಿ ನೋಡಿದ್ದ ಇಬ್ಬರು ಗೂಢಚಾರರಿಗೆ “ನೀವು ಆ ವೇಶ್ಯೆಯ ಮನೆಗೆ ಹೋಗಿ ಅವಳಿಗೆ ಪ್ರಮಾಣಮಾಡಿದಂತೆ ಅವಳನ್ನೂ ಅವಳಿಗಿರುವುದೆಲ್ಲವನ್ನೂ ಹೊರಗೆ ತೆಗೆದುಕೊಂಡು ಬನ್ನಿರಿ” ಎಂದು ಹೇಳಲು ಆ ಯೌವನಸ್ಥರು ಹೋಗಿ ರಾಹಾಬಳನ್ನೂ ಅವಳ ತಂದೆತಾಯಿಯನ್ನು, ಸಹೋದರರನ್ನು, ಅವಳಿಗಿರುವುದೆಲ್ಲವನ್ನೂ, ಅವಳ ಗೋತ್ರದ ಎಲ್ಲಾ ಜನರನ್ನೂ ತಂದು ಇಸ್ರಾಯೇಲ್ಯರ ಪಾಳೆಯದ ಹೊರಗೆ ಇಟ್ಟರು.
- ಗೂಢಚಾರರನ್ನು ಸೇರಿಸಿಕೊಂಡದ್ದಕ್ಕಾಗಿ ಇಬ್ರಿಯರಿಗೆ ಪತ್ರಿಕೆಯೂ ಯಾಕೋಬನೂ ರಹಬಳನ್ನು ಸ್ಮರಿಸುತ್ತಾರೆಇಬ್ರಿ 11:31, ಯಾಕೋ 2:25
ವಚನಗಳು
ಇಬ್ರಿ 11:31ನಂಬಿಕೆಯಿಂದಲೇ ರಾಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿಕೊಂಡು, ಅವಿಧೇಯರೊಂದಿಗೆ ನಾಶವಾಗದೆ ಉಳಿದಳು.
ಯಾಕೋ 2:25ಅದೇ ರೀತಿಯಾಗಿ ವೇಶ್ಯೆಯಾದ ರಾಹಾಬಳು ಗೂಢಚಾರರನ್ನು ತನ್ನ ಮನೆಯಲ್ಲಿ ಸೇರಿಸಿಕೊಂಡು, ಬೇರೆ ದಾರಿಯಿಂದ ಅವರನ್ನು ಕಳುಹಿಸಿದ ಕ್ರಿಯೆಗಳಿಂದಲೇ ನೀತಿವಂತಳೆಂಬ, ನಿರ್ಣಯವನ್ನು ಹೊಂದಿದಳಲ್ಲವೇ?
ಇತರ ಗೂಢಚಾರರು
- ಗೂಢಚಾರರು ಯಗ್ಜೇರಿಗೆ ಹೋದ ನಂತರ ಇಸ್ರಾಯೇಲರು ಅದರ ಗ್ರಾಮಗಳನ್ನು ವಶಪಡಿಸಿಕೊಂಡರುಅರಣ್ಯ 21:32
ವಚನಗಳು
ಅರಣ್ಯ 21:32ಅದಲ್ಲದೆ ಮೋಶೆ ಗೂಢಚಾರರ ಮೂಲಕ ಯಗ್ಜೇರನ್ನು ಪರೀಕ್ಷಿಸಿದ ಮೇಲೆ ಇಸ್ರಾಯೇಲರು ಅದರ ಗ್ರಾಮಗಳನ್ನು ವಶಪಡಿಸಿಕೊಂಡು, ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು.
- ಆಯಿಗೆ ಕಳುಹಿಸಲ್ಪಟ್ಟ ಗೂಢಚಾರರ ವರದಿ: ಎರಡು ಮೂರು ಸಾವಿರ ಜನರು ಸಾಕುಯೆಹೋ 7:2–3
ವಚನಗಳು
ಯೆಹೋ 7:2–3ಯೆಹೋಶುವನು ಕೆಲವು ಜನರನ್ನು ಕರೆದು “ನೀವು ಗಟ್ಟಾ ಹತ್ತಿ ಬೇತೇಲಿನ ಪೂರ್ವಕ್ಕೂ ಬೇತಾವೆನಿನ ಸಮೀಪದಲ್ಲೂ ಇರುವ ‘ಆಯಿ’ ಎಂಬ ಪ್ರಾಂತ್ಯದಲ್ಲಿ ರಹಸ್ಯವಾಗಿ ಸಂಚರಿಸಿ ನೋಡಿರಿ” ಎಂದು ಹೇಳಿ ಅವರನ್ನು ಯೆರಿಕೋವಿನಿಂದ ಕಳುಹಿಸಿದನು. ಅವರು ಹೋಗಿ ಆಯಿ ಎಂಬ ಊರಲ್ಲಿ ಸಂಚರಿಸಿ ನೋಡಿ, ಹಿಂದಿರುಗಿ ಬಂದು ಯೆಹೋಶುವನಿಗೆ “ಎಲ್ಲಾ ಜನರು ಹೋಗುವುದು ಅವಶ್ಯವಿಲ್ಲ; ಎರಡು ಅಥವಾ ಮೂರು ಸಾವಿರ ಮಂದಿ ಹೋದರೆ ಸಾಕು. ಅವರೇ ಪಟ್ಟಣವನ್ನು ಜಯಿಸಬಹುದು. ಎಲ್ಲರನ್ನೂ ಕಳುಹಿಸಿ ಸುಮ್ಮನೆ ದಣಿಸುವುದೇತಕೆ? ಅವರು ಕಡಿಮೆ ಜನರಿದ್ದಾರೆ” ಎಂದು ಹೇಳಿದರು.
- ಐದು ಮಂದಿ ದಾನ್ಯರು ಲಯಿಷನ್ನು ಸಂಚರಿಸಿ ನೋಡುತ್ತಾರೆ: ನೆಮ್ಮದಿಯ ಜನರು, ಸಹಾಯಕರಿಲ್ಲನ್ಯಾಯ 18:2, ನ್ಯಾಯ 18:7
ವಚನಗಳು
ನ್ಯಾಯ 18:2ಅವರು ಚೊರ್ಗಾ, ಎಷ್ಟಾವೋಲ್ ಎಂಬ ಊರುಗಳಿಂದ ತಮ್ಮ ಕುಲದಲ್ಲಿ ಐದು ಮಂದಿ ಪರಾಕ್ರಮಶಾಲಿಗಳಾದ ಗೂಢಚಾರರನ್ನು ಆರಿಸಿ ಅವರಿಗೆ, “ನೀವು ಹೋಗಿ ಲಯಿಷ್ ದೇಶವನ್ನು ಸಂಚರಿಸಿ ನೋಡಿರಿ” ಎಂದು ಆಜ್ಞಾಪಿಸಿ ಕಳುಹಿಸಿದರು. ಇವರು ಪ್ರಯಾಣಮಾಡುತ್ತಾ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿದ್ದ ಮೀಕನ ಮನೆಗೆ ಬಂದು ಇಳಿದುಕೊಂಡರು.
ನ್ಯಾಯ 18:7ಆ ಐದು ಮಂದಿ ಹೊರಟು ಲಯಿಷಿಗೆ ಬಂದು, ಅಲ್ಲಿನ ಜನರು ನಿರ್ಭೀತರಾಗಿ ಚೀದೋನ್ಯರಂತೆ ಸುಖ ಸಮಾಧಾನಗಳಿಂದ ಜೀವಿಸುತ್ತಾರೆ; ಅವರನ್ನು ಅಡಗಿಸುವ ಅಧಿಕಾರಿಗಳು ದೇಶದಲ್ಲಿಲ್ಲ; ಅವರು ಚೀದೋನ್ಯರಿಗೆ ದೂರವಾಗಿದ್ದು ಯಾರೊಡನೆಯೂ ಒಡನಾಟವಿಲ್ಲದವರು ಎಂಬುದನ್ನು ತಿಳಿದುಕೊಂಡು
- ಸೌಲನು ಬಂದಿದ್ದಾನೆಂದು ಖಚಿತಪಡಿಸಿಕೊಳ್ಳಲು ದಾವೀದನು ಗೂಢಚಾರರನ್ನು ಕಳುಹಿಸುತ್ತಾನೆ1 ಸಮು 26:4
ವಚನಗಳು
1 ಸಮು 26:4ಅವನು ಕೂಡಲೇ ಗೂಢಚಾರರನ್ನು ಕಳುಹಿಸಿ ಸೌಲನು ಇಳಿದುಕೊಂಡಿದ್ದ ಸ್ಥಳವನ್ನು ಗೊತ್ತುಮಾಡಿಕೊಂಡನು.
- ದಾವೀದನ ಸಂತಾಪ ಸೂಚಕರು ಗೂಢಚಾರರೆಂದು ಅಮ್ಮೋನಿಯರ ಪ್ರಧಾನರು ಸಂಶಯಪಡುತ್ತಾರೆ2 ಸಮು 10:3
ವಚನಗಳು
2 ಸಮು 10:3ಅಮ್ಮೋನಿಯರ ರಾಜ ಪ್ರತಿನಿಧಿಗಳು ತಮ್ಮ ಒಡೆಯನಾದ ಹಾನೂನನಿಗೆ, “ದಾವೀದನು ನಿನ್ನ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದರಿಂದ ಅವನು ನಿನ್ನ ತಂದೆಯನ್ನು ಸನ್ಮಾನಿಸುವವನು ಎಂದು ನೀನು ತಿಳಿದುಕೊಂಡಿರಬಹುದೋ? ಅವರು ಪಟ್ಟಣವನ್ನು ಸಂಚರಿಸಿ ನೋಡಿ, ಸ್ವಾಧಿನಮಾಡಿಕೊಳ್ಳಬೇಕೆಂದು ತನ್ನ ಪ್ರತಿನಿಧಿಗಳನ್ನು ಕಳುಹಿಸಿದ್ದಾನೆ” ಎಂದು ಹೇಳಿದರು.
- ಅಬ್ಷಾಲೋಮನು ಕುಲಗಳಲ್ಲೆಲ್ಲಾ ಗೂಢಚಾರರನ್ನು ಕಳುಹಿಸುತ್ತಾನೆ: ತುತ್ತೂರಿಯ ಧ್ವನಿ ಕೇಳುತ್ತಲೇ ‘ಅಬ್ಷಾಲೋಮನು ಹೆಬ್ರೋನಿನಲ್ಲಿ ಅರಸನಾದನೆಂದು ಅರ್ಭಟಿಸಿರಿ’2 ಸಮು 15:10
ವಚನಗಳು
2 ಸಮು 15:10ಆದರೆ ಅವನು ಗೂಢಚಾರರನ್ನು ಕಳುಹಿಸಿ ಇಸ್ರಾಯೇಲರ ಎಲ್ಲಾ ಕುಲದವರಿಗೆ, “ನೀವು ತುತ್ತೂರಿಯ ಧ್ವನಿಯನ್ನು ಕೇಳುತ್ತಲೇ ‘ಅಬ್ಷಾಲೋಮನು ಹೆಬ್ರೋನಿನಲ್ಲಿ ಅರಸನಾದನೆಂದು ಅರ್ಭಟಿಸಿರಿ’” ಎಂದು ಹೇಳಿಸಿದ್ದನು.
- ಯಾಜಕರ ಮಕ್ಕಳಾದ ಅಹೀಮಾಚ ಮತ್ತು ಯೋನಾತಾನರು ದಾವೀದನಿಗೆ ಸುದ್ದಿ ಮುಟ್ಟಿಸಬೇಕು2 ಸಮು 15:35–36
ವಚನಗಳು
2 ಸಮು 15:35–36ಅಲ್ಲಿ ನಿನ್ನ ಸಂಗಡ ಚಾದೋಕ್ ಮತ್ತು ಎಬ್ಯಾತಾರನೂ ಇರುತ್ತಾರಲ್ಲಾ. ಅರಮನೆಯಲ್ಲಿ ನಿನಗೆ ಗೊತ್ತಾಗುವ ವರ್ತಮಾನವನ್ನೆಲ್ಲ ಆ ಇಬ್ಬರು ಯಾಜಕರಿಗೆ ತಿಳಿಸು. ಅವರ ಬಳಿಯಲ್ಲಿ ಇಬ್ಬರು ಹುಡುಗರಿದ್ದಾರೆ. ಒಬ್ಬನು ಚಾದೋಕನ ಮಗನಾದ ಅಹೀಮಾಚನು ಇನ್ನೊಬ್ಬನು ಎಬ್ಯಾತಾರನ ಮಗನಾದ ಯೋನಾತಾನನು. ಇವರ ಮುಖಾಂತರವಾಗಿ ನೀನು ಎಲ್ಲಾ ವರ್ತಮಾನವನ್ನು ನನಗೆ ಮುಟ್ಟಿಸಬಹುದು” ಎಂದು ಹೇಳಿ ಅವನನ್ನು ಕಳುಹಿಸಿದನು.
- ರೋಗೆಲಿನ ಬುಗ್ಗೆಯ ಬಳಿ ದಾಸಿಯೊಬ್ಬಳು ಅವರಿಗೆ ಸುದ್ದಿ ತರುತ್ತಾಳೆ; ಅವರು ಬಾವಿಯಲ್ಲಿ ಅಡಗಿಕೊಳ್ಳುತ್ತಾರೆ2 ಸಮು 17:17–19
ವಚನಗಳು
2 ಸಮು 17:17–19ಯೋನಾತಾನ ಮತ್ತು ಅಹೀಮಾಚರು ರೋಗೆಲಿನ ಬುಗ್ಗೆಯ ಬಳಿಯಲ್ಲಿದ್ದರು. ಇವರ ಮನೆಯ ದಾಸಿಯು ಎಲ್ಲಾ ವರ್ತಮಾನಗಳನ್ನು ಇವರಿಗೂ ಮತ್ತು ಇವರ ಅರಸನಾದ ದಾವೀದನಿಗೂ ಮುಟ್ಟಿಸುವಂತೆ ಗೊತ್ತುಮಾಡಿಕೊಂಡಿದ್ದರು. ತಮ್ಮನ್ನು ಯಾರೂ ನೋಡಬಾರದೆಂದು ಇವರು ತಾವಾಗಿ ಊರೊಳಕ್ಕೆ ಬರಲಿಲ್ಲ. ಆದರೂ ಒಬ್ಬ ಯೌವನಸ್ಥನು ಅವರನ್ನು ನೋಡಿ ಅಬ್ಷಾಲೋಮನಿಗೆ ತಿಳಿಸಿದನು. ಅಷ್ಟರಲ್ಲಿ ಅವರಿಬ್ಬರೂ ಓಡಿಹೋಗಿ ಬಹುರೀಮಿನಲ್ಲಿ ಇದ್ದ ಒಬ್ಬನ ಮನೆಯನ್ನು ಹೊಕ್ಕರು. ಆ ಮನೆಯ ಅಂಗಳದಲ್ಲಿ ಒಂದು ಬಾವಿಯಿತ್ತು. ಅವರು ಅದರಲ್ಲಿ ಇಳಿದುಕೊಂಡರು. ಕೂಡಲೆ ಆ ಮನೆಯ ಹೆಂಗಸು ಅದರ ಮೇಲೆ ಒಂದು ಬಟ್ಟೆಯನ್ನು ಹಾಸಿ, ಅದರ ಮೇಲೆ ಗೋದಿಯ ನುಚ್ಚನ್ನು ಹರಡಿದಳು. ಇದರಿಂದ ಅವರು ಅಲ್ಲಿ ಅಡಗಿರುವ ವಿಷಯ ಯಾರಿಗೂ ಗೊತ್ತಾಗಲಿಲ್ಲ.
- ಯಥಾರ್ಥರಂತೆ ನಟಿಸುವ ಗೂಢಚಾರರು ಯೇಸುವನ್ನು ಆತನ ಮಾತಿನಲ್ಲಿ ಹಿಡಿಯಲು ಪ್ರಯತ್ನಿಸುತ್ತಾರೆಲೂಕ 20:20
ವಚನಗಳು
ಲೂಕ 20:20ಆಮೇಲೆ ಅವರು ಯೇಸುವನ್ನು ಅಧಿಪತಿಯ ವಶಕ್ಕೂ ಅಧಿಕಾರಿಗಳಿಗೂ ಒಪ್ಪಿಸಬೇಕೆಂದು ಹೊಂಚು ಹಾಕುತ್ತಾ, ನೀತಿವಂತರಂತೆ ನಟಿಸುತ್ತಿರುವ ಗೂಢಚಾರರನ್ನು ಆತನ ಮಾತಿನಲ್ಲಿ ಏನನ್ನಾದರೂ ತಪ್ಪುಗಳನ್ನು ಕಂಡುಹಿಡಿಯುವುದಕ್ಕೆ (ಆತನ ಬಳಿಗೆ) ಕಳುಹಿಸಿದರು.
- ಪೌಲನು: ನಮ್ಮ ಸ್ವಾತಂತ್ರ್ಯವನ್ನು ಗೂಢವಾಗಿ ನೋಡಲು ಸುಳ್ಳು ಸಹೋದರರು ನುಸುಳಿಬಂದರುಗಲಾ 2:4
ವಚನಗಳು
ಗಲಾ 2:4ಆದರೆ ರಹಸ್ಯವಾಗಿ ಒಳಗೆ ಬಂದಿದ್ದ ಸುಳ್ಳು ಸಹೋದರರು ನಮ್ಮನ್ನು ಧರ್ಮಶಾಸ್ತ್ರದ ದಾಸತ್ವದಲ್ಲಿ ಸಿಕ್ಕಿಸಬೇಕೆಂದು, ಕ್ರಿಸ್ತ ಯೇಸುವಿನಲ್ಲಿರುವ ನಮ್ಮ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸಲು ಬಂದಿದ್ದರು.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು