Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ವಿಷಯಗಳು › ನಕ್ಷತ್ರಗಳು

ಆಶ್ಚರ್ಯಕರ ವಿವರಗಳು

ಬೈಬಲಿನಲ್ಲಿ ನಕ್ಷತ್ರಗಳು

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 21 ವಾಕ್ಯಭಾಗಗಳು, ಸಾಲು ಸಾಲಾಗಿ.

  • ದೇವರು ಎರಡು ದೊಡ್ಡ ಬೆಳಕುಗಳನ್ನೂ ನಕ್ಷತ್ರಗಳನ್ನೂ ಉಂಟುಮಾಡಿದನುಆದಿ 1:16
    ವಚನಗಳು
    ಆದಿ 1:16ದೇವರು ಹಗಲನ್ನಾಳುವುದಕ್ಕೆ ದೊಡ್ಡ ದೀಪವನ್ನೂ ಇರುಳನ್ನಾಳುವುದಕ್ಕೆ ಚಿಕ್ಕ ದೀಪವನ್ನೂ ಹೀಗೆ ಎರಡು ದೊಡ್ಡ ದೀಪಗಳನ್ನು ಉಂಟು ಮಾಡಿದನು. ಆತನು ನಕ್ಷತ್ರಗಳನ್ನು ಸಹ ಉಂಟು ಮಾಡಿದನು.
  • ಸಾಧ್ಯವಾದರೆ ನಕ್ಷತ್ರಗಳನ್ನು ಎಣಿಸಬೇಕೆಂದು ಅಬ್ರಹಾಮನಿಗೆ ಹೇಳಲಾಯಿತುಆದಿ 15:5
    ವಚನಗಳು
    ಆದಿ 15:5“ಆಕಾಶದ ಕಡೆಗೆ ನೋಡು, ನಕ್ಷತ್ರಗಳನ್ನು ಲೆಕ್ಕಿಸುವುದು ನಿನ್ನಿಂದಾದರೆ ಲೆಕ್ಕಿಸು.” ನಂತರ ಯೆಹೋವನು ಅಬ್ರಾಮನಿಗೆ, “ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವುದು” ಎಂದು ಹೇಳಿದನು.
  • ನಕ್ಷತ್ರಗಳಷ್ಟು ಮತ್ತು ಮರಳಿನಷ್ಟು ಸಂತತಿಆದಿ 22:17, ಧರ್ಮೋ 1:10
    ವಚನಗಳು
    ಆದಿ 22:17ನಾನು ನಿನ್ನನ್ನು ಆಶೀರ್ವದಿಸಿಯೇ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಅಧಿಕವಾಗಿ ಹೆಚ್ಚಿಸುವೆನು, ಅದನ್ನು ಆಕಾಶದ ನಕ್ಷತ್ರಗಳಂತೆಯೂ, ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾಗುವಂತೆ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವತ್ತಾಗಿ ಮಾಡಿಕೊಳ್ಳುವರು.
    ಧರ್ಮೋ 1:10ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಧಿಕ ಸಂಖ್ಯೆಯಲ್ಲಿ ಹೆಚ್ಚಿಸಿದ್ದರಿಂದ ನೀವು ಈಗ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗಿದ್ದೀರಿ.
  • ಆತನು ನಕ್ಷತ್ರಗಳ ಸಂಖ್ಯೆಯನ್ನು ಗೊತ್ತುಮಾಡಿ ಪ್ರತಿಯೊಂದಕ್ಕೂ ಹೆಸರಿಡುತ್ತಾನೆಕೀರ್ತ 147:4
    ವಚನಗಳು
    ಕೀರ್ತ 147:4ಅವನು ನಕ್ಷತ್ರಗಳ ಸಂಖ್ಯೆಯನ್ನು ಗೊತ್ತುಮಾಡಿ, ಪ್ರತಿಯೊಂದಕ್ಕೂ ಹೆಸರಿಟ್ಟಿದ್ದಾನೆ.
  • ಒಂದು ನಕ್ಷತ್ರದ ಪ್ರಭೆಗೂ ಇನ್ನೊಂದು ನಕ್ಷತ್ರದ ಪ್ರಭೆಗೂ ವ್ಯತ್ಯಾಸವುಂಟು1 ಕೊರಿ 15:41
    ವಚನಗಳು
    1 ಕೊರಿ 15:41ಸೂರ್ಯನ ತೇಜಸ್ಸು ಒಂದು ವಿಧವಾದರೆ, ಚಂದ್ರನ ಪ್ರಕಾಶವೇ ಮತ್ತೊಂದು ವಿಧ, ಹಾಗೆಯೇ ನಕ್ಷತ್ರ ನಕ್ಷತ್ರಗಳ ಪ್ರಕಾಶವು ಸಹ ವೈವಿಧ್ಯವಾದುದು.
  • ಹನ್ನೊಂದು ನಕ್ಷತ್ರಗಳು ಅಡ್ಡಬೀಳುವಂತೆ ಯೋಸೇಫನು ಕನಸು ಕಂಡನುಆದಿ 37:9
    ವಚನಗಳು
    ಆದಿ 37:9ಅವನು ಇನ್ನೊಂದು ಕನಸನ್ನು ಕಂಡನು. ಅದನ್ನು ತನ್ನ ಅಣ್ಣಂದಿರಿಗೆ ತಿಳಿಸಿದನು. ಅವನು ಅವರಿಗೆ, “ಇನ್ನೊಂದು ಕನಸು ಕಂಡಿದ್ದೇನೆ. ಅದರಲ್ಲಿ ಸೂರ್ಯಚಂದ್ರರೂ, ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡ ಬಿದ್ದವು” ಎಂದು ಹೇಳಿದನು.
  • ನಕ್ಷತ್ರಗಳು ತಮ್ಮ ಪಥಗಳಿಂದ ಸೀಸೆರನಿಗೆ ವಿರುದ್ಧವಾಗಿ ಯುದ್ಧಮಾಡಿದವುನ್ಯಾಯ 5:20
    ವಚನಗಳು
    ನ್ಯಾಯ 5:20ನಕ್ಷತ್ರಗಳೂ ಆಕಾಶಪಥದಲ್ಲಿದ್ದು ಸೀಸೆರನೊಡನೆ ಯುದ್ಧಮಾಡಿದವು.
  • ಉದಯನಕ್ಷತ್ರಗಳು ಒಟ್ಟಾಗಿ ಹಾಡಿದವುಯೋಬ 38:7
    ವಚನಗಳು
    ಯೋಬ 38:7ಮುಂಜಾನೆ ನಕ್ಷತ್ರಗಳು ಒಟ್ಟಾಗಿ ಉತ್ಸಾಹ ಧ್ವನಿಯೆತ್ತುತ್ತಾ ದೇವಕುಮಾರರೆಲ್ಲರೂ ಆನಂದ ಘೋಷಮಾಡುತ್ತಾ ಇರಲು,
  • ಜ್ಞಾನಿಗಳು ಪೂರ್ವದಲ್ಲಿ ಆತನ ನಕ್ಷತ್ರವನ್ನು ಕಂಡರುಮತ್ತಾ 2:2
    ವಚನಗಳು
    ಮತ್ತಾ 2:2“ಯೆಹೂದ್ಯರ ಅರಸನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಆತನನ್ನು ಸೂಚಿಸುವ ನಕ್ಷತ್ರವನ್ನು ನಾವು ಪೂರ್ವದಿಕ್ಕಿನಲ್ಲಿ ಕಂಡು ಆತನಿಗೆ ಅಡ್ಡಬಿದ್ದು ನಮಸ್ಕರಿಸುವುದಕ್ಕಾಗಿ ಬಂದೆವು” ಎಂದರು.
  • ನಕ್ಷತ್ರವು ಮುಂದೆ ಹೋಗಿ ಆ ಸ್ಥಳದ ಮೇಲೆ ನಿಂತಿತುಮತ್ತಾ 2:9–10
    ವಚನಗಳು
    ಮತ್ತಾ 2:9–10ಅವರು ಅರಸನ ಮಾತನ್ನು ಕೇಳಿ ಹೊರಟಾಗ ಪೂರ್ವದಿಕ್ಕಿನಲ್ಲಿ ಕಂಡ ನಕ್ಷತ್ರವು ಪುನಃ ಕಾಣಿಸಿಕೊಂಡು ಆ ಕೂಸು ಇದ್ದ ಸ್ಥಳದ ಮೇಲೆ ಬಂದು ನಿಲ್ಲುವ ತನಕ ಅವರ ಮುಂದಾಗಿ ಹೋಗುತಿತ್ತು. ಅವರು ನಕ್ಷತ್ರವನ್ನು ಕಂಡು ಪರಮಾನಂದದಿಂದ ಸಂತೋಷಿಸಿದರು.
  • ದಾವೀದನು ಇಪ್ಪತ್ತು ವರ್ಷದೊಳಗಿನವರನ್ನು ಎಣಿಸಲಿಲ್ಲ: ಇಸ್ರಾಯೇಲರು ನಕ್ಷತ್ರಗಳಂತಾಗುವರು1 ಪೂರ್ವ 27:23
    ವಚನಗಳು
    1 ಪೂರ್ವ 27:23ಇಸ್ರಾಯೇಲರನ್ನು ಆಕಾಶದ ನಕ್ಷತ್ರಗಳಂತೆ ಅಸಂಖ್ಯವಾಗಿ ಮಾಡುವೆನೆಂಬುದಾಗಿ ಯೆಹೋವನು ಕೊಟ್ಟ ಮಾತನ್ನು ದಾವೀದನು ನಂಬಿ ಇಪ್ಪತ್ತು ವರ್ಷಕ್ಕಿಂತ ಕಡಿಮೆ ವಯಸ್ಸುಳ್ಳವರನ್ನು ಪರಿಗಣಿಸಲಿಲ್ಲ.

ಹೆಸರಿಸಲಾದ ನಕ್ಷತ್ರಪುಂಜಗಳು

  • ನಕ್ಷತ್ರಮಂಡಲ, ಮೃಗಶಿರ, ಕೃತ್ತಿಕೆ ಮತ್ತು ದಕ್ಷಿಣ ದಿಕ್ಕಿನ ನಕ್ಷತ್ರಗೃಹಗಳುಯೋಬ 9:9
    ವಚನಗಳು
    ಯೋಬ 9:9ನಕ್ಷತ್ರಮಂಡಲವನ್ನೂ, ಮೃಗಶಿರವನ್ನೂ, ಕೃತ್ತಿಕೆಯನ್ನೂ, ದಕ್ಷಿಣ ದಿಕ್ಕಿನ ನಕ್ಷತ್ರಗೃಹಗಳನ್ನೂ ನಿರ್ಮಿಸಿದವನು ಆತನೇ.
  • ನೀನು ಕೃತ್ತಿಕೆಯ ಸರಪಣಿಯನ್ನು ಬಿಗಿಯಬಲ್ಲೆಯಾ, ಮೃಗಶಿರದ ಸಂಕೋಲೆಯನ್ನು ಬಿಚ್ಚಬಲ್ಲೆಯಾ?ಯೋಬ 38:31–32
    ವಚನಗಳು
    ಯೋಬ 38:31–32ನೀನು ಕೃತ್ತಿಕೆಯ ಸರಪಣಿಯನ್ನು ಬಿಗಿದು, ಮೃಗಶಿರದ ಸಂಕೋಲೆಯನ್ನು ಬಿಚ್ಚುವೆಯಾ? ಆಯಾ ಸಮಯದಲ್ಲಿ ನಕ್ಷತ್ರ ರಾಶಿಗಳನ್ನು ಬರಮಾಡುವೆಯೋ? ನಕ್ಷತ್ರ ಮಂಡಲ ಪರಿವಾರದೊಡನೆ ನಡೆಸುವೆಯಾ?
  • ಆಮೋಸನು: ಆತನು ಕೃತ್ತಿಕೆಯನ್ನೂ ಮೃಗಶಿರವನ್ನೂ ಸೃಷ್ಟಿಸಿದನುಆಮೋ 5:8
    ವಚನಗಳು
    ಆಮೋ 5:8ಕೃತ್ತಿಕಾ ಮತ್ತು ಒರಿಯನ್ ಎಂಬ ಪ್ರಕಾಶಮಾನವಾದ ನಕ್ಷತ್ರಗಳನ್ನು ಸೃಷ್ಟಿಸಿ, ಕಾರ್ಗತ್ತಲನ್ನು ಬೆಳಕನ್ನಾಗಿ ಮಾಡಿ, ಹಗಲನ್ನು ಇರುಳಾಗಿ ಮಾರ್ಪಡಿಸಿ, ಸಾಗರದ ಜಲವನ್ನು ಬರಮಾಡಿಕೊಂಡು, ಭೂಮಂಡಲದ ಮೇಲೆ ಸುರಿಯುವಾತನ ಕಡೆಗೆ ತಿರುಗಿಕೊಳ್ಳಿರಿ, ಯೆಹೋವನೆಂಬುದೇ ಆತನ ನಾಮಧೇಯ!

ನಕ್ಷತ್ರಾರಾಧನೆ

  • ಸೂರ್ಯ, ಚಂದ್ರ, ನಕ್ಷತ್ರಗಳಿಗೆ ಅಡ್ಡಬೀಳಬಾರದೆಂದು ಇಸ್ರಾಯೇಲರಿಗೆ ಹೇಳಲಾಯಿತುಧರ್ಮೋ 4:19
    ವಚನಗಳು
    ಧರ್ಮೋ 4:19ನಿಮ್ಮ ದೇವರಾದ ಯೆಹೋವನು ಭೂಲೋಕದಲ್ಲಿರುವ ಬೇರೆ ಎಲ್ಲಾ ಜನಾಂಗಗಳಿಗೋಸ್ಕರ ದಯಪಾಲಿಸಿದ ಸೂರ್ಯ, ಚಂದ್ರ ಅಥವಾ ನಕ್ಷತ್ರಗಳೆನಿಸಿಕೊಳ್ಳುವ ಆಕಾಶಸೈನ್ಯವನ್ನು ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ, ಮರುಳುಗೊಂಡು ಅವುಗಳನ್ನು ಪೂಜಿಸಲೂ ಬಾರದು ಮತ್ತು ನಮಸ್ಕರಿಸಲೂ ಬಾರದು.
  • ಇಸ್ರಾಯೇಲರೂ ಅರಸನಾದ ಮನಸ್ಸೆಯೂ ಆಕಾಶದ ಸಮಸ್ತ ನಕ್ಷತ್ರಗಣಕ್ಕೆ ಅಡ್ಡಬಿದ್ದರು2 ಅರಸು 17:16, 2 ಅರಸು 21:3
    ವಚನಗಳು
    2 ಅರಸು 17:16ತಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ಮೀರಿ ಎರಡು ಎರಕದ ಬಸವನಮೂರ್ತಿಗಳು, ಅಶೇರ ವಿಗ್ರಹಸ್ತಂಭ ಇವುಗಳನ್ನು ಮಾಡಿಕೊಂಡರು. ಆಕಾಶಸೈನ್ಯ, ಬಾಳ್ ದೇವತೆ ಇವುಗಳನ್ನು ಪೂಜಿಸಿದರು.
    2 ಅರಸು 21:3ತನ್ನ ತಂದೆಯಾದ ಹಿಜ್ಕೀಯನು ತೆಗೆದು ಹಾಕಿದ ಪೂಜಾಸ್ಥಳಗಳನ್ನು ತಿರುಗಿ ಸ್ಥಾಪಿಸಿ ಇಸ್ರಾಯೇಲರ ಅರಸನಾದ ಅಹಾಬನಂತೆ ಬಾಳದೇವತೆಗೋಸ್ಕರ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹ ಸ್ತಂಭಗಳನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.
  • ನಕ್ಷತ್ರರಾಶಿಗಳಿಗೆ ಧೂಪಹಾಕುತ್ತಿದ್ದ ಯಾಜಕರನ್ನು ಯೋಷೀಯನು ತೆಗೆದುಹಾಕಿದನು2 ಅರಸು 23:5
    ವಚನಗಳು
    2 ಅರಸು 23:5ಇದಲ್ಲದೆ, ಯೆಹೂದ ಪ್ರಾಂತ್ಯದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಸುತ್ತಣ ಪ್ರದೇಶಗಳಲ್ಲಿಯೂ ಇದ್ದ ಪೂಜಾಸ್ಥಳಗಳ ವಿಗ್ರಹಗಳಿಗೂ, ಬಾಳನಿಗೂ, ಸೂರ್ಯ, ಚಂದ್ರ ಹಾಗೂ ನಕ್ಷತ್ರಗಳು ಎನಿಸಿಕೊಳ್ಳುವ ಆಕಾಶಸೈನ್ಯಕ್ಕೂ, ಧೂಪಹಾಕುವುದಕ್ಕಾಗಿ ಯೆಹೂದ ರಾಜರಿಂದ ನೇಮಿಸಲ್ಪಟ್ಟ ಎಲ್ಲಾ ಪೂಜಾರಿಗಳನ್ನು ತೆಗೆದುಹಾಕಿದನು.
  • ಜನರು ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆ ಅಡ್ಡಬೀಳುತ್ತಿದ್ದರುಯೆರೆ 19:13, ಚೆಫ 1:5
    ವಚನಗಳು
    ಯೆರೆ 19:13ಯೆರೂಸಲೇಮಿನ ಮನೆಗಳೂ, ಯೆಹೂದದ ಅರಸರ ಮನೆಗಳೂ ಅಂದರೆ ಯಾವ ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಹಾಕಿ, ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ, ಆ ಮನೆಗಳೆಲ್ಲಾ ಹೊಲಸಾಗಿ ತೋಫೆತ್ ಎಂಬ ಸ್ಥಳಕ್ಕೆ ಸಮಾನವಾಗುವವು.’”
    ಚೆಫ 1:5ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣವನ್ನು ಪೂಜಿಸುವವರನ್ನೂ, ಯೆಹೋವನ ಭಕ್ತರೆಂದು ಪ್ರತಿಜ್ಞೆ ಮಾಡಿಕೊಂಡು ಆರಾಧಿಸಿ ಮಲ್ಕಾಮನ ಮೇಲೆ ಆಣೆಯಿಡುವವರನ್ನೂ,

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು