ಅನ್ವೇಷಿಸಿ › ವಿಷಯಗಳು › ತೆರಿಗೆಗಳು
ದೈನಂದಿನ ಜೀವನ
ಬೈಬಲಿನಲ್ಲಿ ತೆರಿಗೆಗಳು
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 35 ವಾಕ್ಯಭಾಗಗಳು, ಸಾಲು ಸಾಲಾಗಿ.
- ಜನಗಣತಿಯಲ್ಲಿ ಲೆಕ್ಕಿಸಲ್ಪಟ್ಟ ಪ್ರತಿಯೊಬ್ಬನೂ ಅರ್ಧ ಶೆಕೆಲನ್ನು ಕೊಡುತ್ತಿದ್ದನುವಿಮೋ 30:11–16, ವಿಮೋ 38:26
ವಚನಗಳು
ವಿಮೋ 30:11–16ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ಇಸ್ರಾಯೇಲ್ಯರ ಜನಗಣತಿ ಮಾಡಿಸಿ ಅವರನ್ನು ಲೆಕ್ಕಿಸುವಾಗ ಅವರಿಗೆ ಬಾಧೆಯುಂಟಾಗಿ ವ್ಯಾಧಿ ಸಂಭವಿಸದಂತೆ ಪ್ರತಿಯೊಬ್ಬನೂ ತನ್ನ ತನ್ನ ಪ್ರಾಣಕ್ಕಾಗಿ ವಿಮೋಚನ ಕ್ರಯವನ್ನು ಯೆಹೋವನಿಗೆ ಕೊಡಬೇಕು. ಲೆಕ್ಕಿತರಾದವರಲ್ಲಿ ಪ್ರತಿಯೊಬ್ಬನೂ ದೇವರ ಸೇವೆಗೆ ನೇಮಕವಾದ ಇಪ್ಪತ್ತು ಗೇರಾ ತೂಕದ ರೂಪಾಯಿಯ ಮೇರೆಗೆ ಅರ್ಧ ಶೆಕೆಲ್ ಕಾಣಿಕೆಯನ್ನು ಕೊಡಬೇಕು. ಈ ಅರ್ಧ ಶೆಕೆಲ್ ಯೆಹೋವನಿಗೆ ಪವಿತ್ರವಾದ ಕಾಣಿಕೆಯಾಗಿರುತ್ತದೆ. ಲೆಕ್ಕ ಮಾಡಿದವರಲ್ಲಿ ಇಪ್ಪತ್ತು ವರ್ಷದವರೂ ಹಾಗೂ ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳವರೂ ಆ ಕಾಣಿಕೆಯನ್ನು ಯೆಹೋವನಿಗೆ ಕೊಡಬೇಕು. ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿ ಕಾಣಿಕೆಯನ್ನು ಯೆಹೋವನಿಗೆ ಕೊಡುವುದರಲ್ಲಿ ಐಶ್ವರ್ಯವಂತರಾದರೂ ಅರ್ಧಶೆಕೆಲಿಗಿಂತ ಹೆಚ್ಚು ಕೊಡಬಾರದು. ಬಡವರು ಕಡಿಮೆ ಕೊಡಬಾರದು. ನೀನು ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿ ಹಣವನ್ನು ಇಸ್ರಾಯೇಲರಿಂದ ತೆಗೆದುಕೊಂಡು ಅದನ್ನು ದೇವದರ್ಶನದ ಗುಡಾರದ ಸೇವೆಗೆ ಉಪಯೋಗಿಸಬೇಕು. ಇಸ್ರಾಯೇಲರ ಪ್ರಾಣಗಳನ್ನು ಉಳಿಸಬೇಕೆಂಬುದಾಗಿ ಆ ಕಾಣಿಕೆಯು ಯೆಹೋವನಾದ ನನ್ನ ಸನ್ನಿಧಿಯಲ್ಲಿ ಜ್ಞಾಪಕವಾಗಿರುವುದು.”
ವಿಮೋ 38:26ದೇವರ ಸೇವೆಗೆ ನೇಮಕವಾದ ಶೆಕೆಲಿನ ಮೇರೆಗೆ ಒಂದೊಂದು “ಬೆಕಾ” ಅಂದರೆ ಅರ್ಧ ಶೆಕೆಲ್ ಆಗಿತ್ತು. ಜನಗಣತಿಯಲ್ಲಿ ಎಣಿಸಲ್ಪಟ್ಟವರಲ್ಲಿ ಇಪ್ಪತ್ತು ವರ್ಷದವರು ಹಾಗೂ ಅದಕ್ಕೂ ಮೇಲ್ಪಟ್ಟ ವಯಸ್ಸುಳ್ಳವರ ಲೆಕ್ಕ ಆರು ಲಕ್ಷದ ಮೂರು ಸಾವಿರದ ಐನೂರ ಐವತ್ತು ಮಂದಿಯಾಗಿತ್ತು.
- ದೇವರ ಆಲಯಕ್ಕಾಗಿ ಪ್ರತಿವರ್ಷ ಶೆಕೆಲಿನ ಮೂರನೆಯ ಒಂದು ಭಾಗನೆಹೆ 10:32
ವಚನಗಳು
ನೆಹೆ 10:32ವರ್ಷಕ್ಕೆ ಒಂದು ಶೆಕೆಲಿನ ಮೂರನೆಯ ಒಂದು ಭಾಗವನ್ನು ದೇವಾಲಯದ ಸೇವೆಗಾಗಿ ಕೊಡಬೇಕೆಂಬ ನಿಯಮವನ್ನು ಪಾಲಿಸಿಕೊಳ್ಳುತ್ತೇವೆ.
- ಯೋಸೇಫನು: ಐಗುಪ್ತದ ಬೆಳೆಯಲ್ಲಿ ಐದನೆಯ ಒಂದು ಭಾಗ ಫರೋಹನಿಗೆ ಸೇರುತ್ತದೆಆದಿ 41:34, ಆದಿ 47:24
ವಚನಗಳು
ಆದಿ 41:34ಫರೋಹನು ಐಗುಪ್ತ ದೇಶದ ಎಲ್ಲಾ ಭಾಗಗಳಲ್ಲಿಯೂ ಅಧಿಕಾರಿಗಳನ್ನು ನೇಮಿಸಿ ಅವರ ಕೈಯಿಂದ ಸುಭಿಕ್ಷವಾದ ಏಳು ವರ್ಷಗಳಲ್ಲಿ ದೇಶದ ಬೆಳೆಯೊಳಗೆ ಐದರಲ್ಲಿ ಒಂದು ಪಾಲನ್ನು ಕಂದಾಯವಾಗಿ ಎತ್ತಿಸಬೇಕು.
ಆದಿ 47:24ಪೈರು ಕೊಯ್ಯುವ ಕಾಲದಲ್ಲಿ ಐದರಲ್ಲೊಂದು ಪಾಲು ಫರೋಹನಿಗೆ ಸಲ್ಲಬೇಕು; ಮಿಕ್ಕ ನಾಲ್ಕು ಪಾಲು ನಿಮ್ಮದು; ಅದು ಬೀಜಕ್ಕೆ ಆಗುತ್ತದೆ ಮತ್ತು ನಿಮಗೂ ನಿಮ್ಮ ಮನೆಯವರಿಗೂ ನಿಮ್ಮ ಕುಟುಂಬಕ್ಕೆ ಸೇರಿದವರೆಲ್ಲರಿಗೂ ಆಹಾರಕ್ಕಾಗುತ್ತದೆ” ಎಂದು ಹೇಳಿದನು.
- ಐಗುಪ್ತದ ಯಾಜಕರ ಭೂಮಿ ಮಾತ್ರ ಫರೋಹನಿಗೆ ಸೇರುವುದಿಲ್ಲಆದಿ 47:26
ವಚನಗಳು
ಆದಿ 47:26ಬೆಳೆಯಲ್ಲಿ ಐದನೆಯ ಒಂದು ಪಾಲು ಫರೋಹನಿಗೆ ಸಲ್ಲಬೇಕೆಂಬುದನ್ನು ಯೋಸೇಫನು ಐಗುಪ್ತ ದೇಶದಲ್ಲಿ ಕಟ್ಟಳೆಯಾಗಿ ಮಾಡಿದನು. ಈ ದಿನದ ವರೆಗೂ ಅದು ಹಾಗೆಯೇ ಇದೆ. ಪುರೋಹಿತರ ಭೂಮಿ ಮಾತ್ರ ಫರೋಹನಿಗೆ ಸ್ವಾಧೀನವಾಗಲಿಲ್ಲ.
- ಪಾರಸಿಯ ಅರಸನೊಬ್ಬನು ಯಾಜಕರಿಗೂ ದೇವಾಲಯದ ಸೇವಕರಿಗೂ ತೆರಿಗೆಯಿಂದ ವಿನಾಯಿತಿ ಕೊಡುತ್ತಾನೆಎಜ್ರ 7:24
ವಚನಗಳು
ಎಜ್ರ 7:24ಇದಲ್ಲದೆ ಆ ದೇವಾಲಯದ ಸೇವೆಯಲ್ಲಿರುವ ಯಾಜಕರು, ಲೇವಿಯರು, ಗಾಯಕರು, ದ್ವಾರಪಾಲಕರು, ದಾಸರು ಮುಂತಾದ ಸೇವಕರಲ್ಲಿ ಯಾರಿಂದಲೂ ಕಪ್ಪ, ತೆರಿಗೆ, ಸುಂಕ ಇವುಗಳನ್ನು ವಸೂಲಿಮಾಡುವುದಕ್ಕೆ ನಿಮಗೆ ಅಧಿಕಾರವಿಲ್ಲ ಎಂಬುದು ತಿಳಿದಿರಲಿ.’
- ಗೊಲ್ಯಾತನನ್ನು ಕೊಂದವನ ಕುಟುಂಬಕ್ಕೆ ತೆರಿಗೆಗಳಿಂದ ವಿನಾಯಿತಿ ಇರುವುದು1 ಸಮು 17:25
ವಚನಗಳು
1 ಸಮು 17:25ಅವರು, “ಇಸ್ರಾಯೇಲ್ಯರಾದ ನಮ್ಮನ್ನು ಹೀಯಾಳಿಸುವುದಕ್ಕೋಸ್ಕರ ಬಂದಿರುವ ಈ ಮನುಷ್ಯನನ್ನು ಕಂಡಿರಾ? ಯಾವನು ಇವನನ್ನು ಕೊಲ್ಲುವನೋ ಅಂಥವನಿಗೆ ಅರಸನು ಅಪಾರದ್ರವ್ಯದೊಡನೆ ತನ್ನ ಮಗಳನ್ನು ಕೊಟ್ಟು ಮದುವೆ ಮಾಡುವನು. ಇದಲ್ಲದೆ ಅವನ ತಂದೆಯ ಕುಟುಂಬವನ್ನು ಎಲ್ಲಾ ತೆರಿಗೆಯಿಂದ ವಿಮೋಚಿಸುವನು” ಎಂದು ಮಾತನಾಡಿಕೊಳ್ಳುತ್ತಿದ್ದರು.
- ಎಸ್ತೇರಳ ಔತಣಕ್ಕಾಗಿ ತೆರಿಗೆಯ ವಿನಾಯಿತಿಎಸ್ತೇ 2:18
ವಚನಗಳು
ಎಸ್ತೇ 2:18ಅವನು ತನ್ನ ಎಲ್ಲಾ ಸರದಾರರಿಗೂ ಮತ್ತು ಪರಿವಾರದವರಿಗೂ ಎಸ್ತೇರಳ ಔತಣ ಎಂದು ದೊಡ್ಡ ಔತಣವನ್ನು ಮಾಡಿಸಿ, ಎಲ್ಲಾ ಸಂಸ್ಥಾನಗಳಲ್ಲಿಯೂ ಸೆರೆಯವರನ್ನು ಬಿಡಿಸಿ, ರಾಜರ ಘನತೆಗೆ ತಕ್ಕಂತೆ ಉದಾರವಾಗಿ ದಾನಧರ್ಮಗಳನ್ನು ಮಾಡಿದನು.
- ಅಹಷ್ವೇರೋಷನು ದೂರದ ಸಮುದ್ರತೀರಗಳ ವರೆಗೂ ಕಪ್ಪವನ್ನು ವಿಧಿಸುತ್ತಾನೆಎಸ್ತೇ 10:1
ವಚನಗಳು
ಎಸ್ತೇ 10:1ಅಹಷ್ವೇರೋಷ್ ರಾಜನು ತನ್ನ ರಾಜ್ಯಕ್ಕೆ ಸೇರಿರುವ ಎಲ್ಲಾ ದೇಶಗಳಿಗೂ ಮತ್ತು ಸಮುದ್ರದ್ವೀಪಗಳಿಗೂ ತೆರಿಗೆಯನ್ನು ವಿಧಿಸಿದನು.
ಅರಸರೂ ತೆರಿಗೆಗಳೂ
- ಸೊಲೊಮೋನನ ಹನ್ನೆರಡು ಮಂದಿ ಅಧಿಕಾರಿಗಳಲ್ಲಿ ಪ್ರತಿಯೊಬ್ಬನೂ ಒಂದೊಂದು ತಿಂಗಳು ಅರಮನೆಗೆ ಆಹಾರ ಒದಗಿಸುತ್ತಾನೆ1 ಅರಸು 4:7
ವಚನಗಳು
1 ಅರಸು 4:7ಸೊಲೊಮೋನನು ಎಲ್ಲಾ ಇಸ್ರಾಯೇಲರ ಮೇಲ್ವಿಚಾರಣೆಗಾಗಿ ಹನ್ನೆರಡು ಕಾರ್ಯನಿರ್ವಾಹಕರನ್ನು ನೇಮಿಸಿದನು. ಅವರಲ್ಲಿ ಪ್ರತಿಯೊಬ್ಬನು ಒಂದೊಂದು ತಿಂಗಳು ಅರಸನಿಗೂ ಮತ್ತು ಅವನ ಮನೆಯವರಿಗೂ ಬೇಕಾದ ಆಹಾರ ಪದಾರ್ಥಗಳನ್ನು ಪ್ರತಿವರ್ಷವೂ ಒದಗಿಸಿಕೊಡಬೇಕಾಗಿತ್ತು.
- ಒಂದೇ ದಿನಕ್ಕೆ ಸೊಲೊಮೋನನ ಆಹಾರ ಸಾಮಗ್ರಿಗಳು1 ಅರಸು 4:22–23
ವಚನಗಳು
1 ಅರಸು 4:22–23ಸೊಲೊಮೋನನ ಅರಮನೆಗೆ ಪ್ರತಿದಿನ ಬೇಕಾಗುವ ಆಹಾರಪದಾರ್ಥಗಳು, ಮೂವತ್ತು ಕೋರ್ ಗೋದಿಯ ಹಿಟ್ಟು, ಅರುವತ್ತು ಕೋರ್ ಜವೆಗೋದಿಯ ಹಿಟ್ಟು, ಹತ್ತು ಕೊಬ್ಬಿದ ಎತ್ತುಗಳು, ಇಪ್ಪತ್ತು ಹುಲ್ಲುಗಾವಲಿನಲ್ಲಿರುವ ಎತ್ತುಗಳು, ನೂರು ಕುರಿಗಳು ಇವುಗಳಲ್ಲದೆ ಕಡವೆ, ಜಿಂಕೆ, ಸಾರಂಗ, ಕೊಬ್ಬಿದ ಕೋಳಿಗಳು ಇವುಗಳೇ.
- ಸೊಲೊಮೋನನ ಕಟ್ಟಡಗಳಿಗಾಗಿ ಬಿಟ್ಟೀ ಕೆಲಸ1 ಅರಸು 9:15
ವಚನಗಳು
1 ಅರಸು 9:15ಸೊಲೊಮೋನನ ಬಿಟ್ಟೀ ಕೆಲಸದವರು ಕಟ್ಟಿದವುಗಳು ಯಾವುವೆಂದರೆ, ಯೆಹೋವನ ಆಲಯ, ಅರಮನೆ, ಮಿಲ್ಲೋ ಕೋಟೆ, ಯೆರೂಸಲೇಮಿನ ಪೌಳಿಗೋಡೆ, ಹಾಚೋರ್ ಮೆಗಿದ್ದೋ ಮತ್ತು ಗೆಜೆರ್ ಇವುಗಳೇ.
- ಅದೋರಾಮನು ಬಿಟ್ಟೀ ಕೆಲಸದವರ ಮೇಲ್ವಿಚಾರಕನಾಗಿದ್ದನು2 ಸಮು 20:24, 1 ಅರಸು 4:6
ವಚನಗಳು
2 ಸಮು 20:24ಅದೋರಾಮನು ಬಿಟ್ಟೀಕೆಲಸ ಮಾಡಿಸುವವನು. ಅಹೀಲೂದನ ಮಗನಾದ ಯೆಹೋಷಾಫಾಟನು ಮುಖ್ಯ ದಾಖಲೆಮಾಡುವ ಲೇಖಕ.
1 ಅರಸು 4:6ಅಹೀಷಾರನು ರಾಜಗೃಹಾಧಿಪತಿಯು. ಅಬ್ದನ ಮಗನಾದ ಅದೋನೀರಾಮನು ಬಿಟ್ಟೀಕೆಲಸ ಮಾಡಿಸುವವರ ಮುಖ್ಯಸ್ಥನು.
- ಭಾರವಾದ ನೊಗವನ್ನು ಹಗುರಮಾಡಬೇಕೆಂದು ಇಸ್ರಾಯೇಲರು ರೆಹಬ್ಬಾಮನನ್ನು ಕೇಳುತ್ತಾರೆ1 ಅರಸು 12:4
ವಚನಗಳು
1 ಅರಸು 12:4ಅವನಿಗೆ, “ನಿನ್ನ ತಂದೆಯು ನಮ್ಮ ಮೇಲೆ ಭಾರವಾದ ನೊಗವನ್ನು ಹೇರಿದನು. ನಿನ್ನ ತಂದೆಯು ನೇಮಿಸಿದ ಬಿಟ್ಟೀಕೆಲಸವನ್ನು ನೀನು ಕಡಿಮೆ ಮಾಡಿ ನಮ್ಮ ಮೇಲಿರುವ ಭಾರವಾದ ನೊಗವನ್ನು ಹಗುರ ಮಾಡುವುದಾದರೆ ನಾವು ನಿನಗೆ ಸೇವೆಮಾಡುತ್ತೇವೆ” ಎಂದು ಹೇಳಿದರು.
- ಇಸ್ರಾಯೇಲರು ಅದೋರಾಮನನ್ನು ಕಲ್ಲೆಸೆದು ಕೊಲ್ಲುತ್ತಾರೆ; ರೆಹಬ್ಬಾಮನು ಓಡಿಹೋಗುತ್ತಾನೆ1 ಅರಸು 12:18
ವಚನಗಳು
1 ಅರಸು 12:18ರೆಹಬ್ಬಾಮನು ಬಿಟ್ಟೀ ಕೆಲಸದವರ ಮೇಲ್ವಿಚಾರಕನಾದ ಅದೋರಾಮನನ್ನು ಇಸ್ರಾಯೇಲರ ಬಳಿಗೆ ಕಳುಹಿಸಲು ಅವರು ಅವನನ್ನು ಕಲ್ಲೆಸೆದು ಕೊಂದರು. ಅರಸನಾದ ರೆಹಬ್ಬಾಮನು ಬೇಗನೆ ರಥವನ್ನೇರಿ ಯೆರೂಸಲೇಮಿಗೆ ಓಡಿಹೋದನು.
- ಮೆನಹೇಮನು ಪೂಲನಿಗೆ ಸಾವಿರ ತಲಾಂತು ಬೆಳ್ಳಿಯನ್ನು ಕೊಡುತ್ತಾನೆ2 ಅರಸು 15:19–20
ವಚನಗಳು
2 ಅರಸು 15:19–20ಅಶ್ಶೂರ ದೇಶದ ಅರಸನಾದ ಪೂಲನೆಂಬವನು ಇಸ್ರಾಯೇಲ್ ದೇಶಕ್ಕೆ ವಿರುದ್ಧವಾಗಿ ಬಂದಾಗ ಮೆನಹೇಮನು ಅವನ ಮುಖಾಂತರವಾಗಿ ತನ್ನ ಅರಸುತನವನ್ನು ಜನರು ದೃಢಪಡಿಸಿಕೊಳ್ಳುವುದಕ್ಕೋಸ್ಕರ ಅವನಿಗೆ ಸಾವಿರ ತಲಾಂತು ಬೆಳ್ಳಿಯನ್ನು ಕೊಟ್ಟನು. ಮೆನಹೇಮನು ಅಶ್ಶೂರದ ಅರಸನಿಗೆ ಆ ಹಣವನ್ನು ಕೊಡುವುದಕ್ಕಾಗಿ ಇಸ್ರಾಯೇಲರ ಪ್ರತಿಯೊಬ್ಬ ಐಶ್ವರ್ಯವಂತನಿಂದ ಐವತ್ತು ರೂಪಾಯಿಗಳನ್ನು ವಸೂಲಿಮಾಡಿಕೊಂಡನು. ಆ ಹಣವು ಸಿಕ್ಕಿದ ನಂತರ ಅಶ್ಶೂರದ ಅರಸನು ಅಲ್ಲಿ ನಿಲ್ಲದೆ ಹಿಂತಿರುಗಿ ಹೋದನು.
- ಫರೋಹ ನೆಕೋವನಿಗೆ ಕೊಡಲು ಯೆಹೋಯಾಕೀಮನು ದೇಶದ ಮೇಲೆ ತೆರಿಗೆ ವಿಧಿಸುತ್ತಾನೆ2 ಅರಸು 23:35
ವಚನಗಳು
2 ಅರಸು 23:35ಫರೋಹನು ಗೊತ್ತುಮಾಡಿದಷ್ಟು ಬೆಳ್ಳಿ ಬಂಗಾರವನ್ನು ಕೊಡುವುದಕ್ಕಾಗಿ ಯೆಹೋಯಾಕೀಮನು ತನ್ನ ದೇಶದಲ್ಲಿ ತೆರಿಗೆಯನ್ನು ವಿಧಿಸಿದನು. ತೆರಿಗೆಕೊಡಬೇಕಾದ ಪ್ರತಿಯೊಬ್ಬನು ತನಗೆ ನೇಮಕವಾದಷ್ಟು ಬೆಳ್ಳಿ ಬಂಗಾರವನ್ನು ದೇಶದ ಜನರಿಂದ ವಸೂಲಿಮಾಡಿಕೊಂಡು ಫರೋಹ ನೆಕೋವನಿಗೆ ತಂದೊಪ್ಪಿಸಿದನು.
- ಶತ್ರುಗಳು ಅರಸನನ್ನು ಎಚ್ಚರಿಸುತ್ತಾರೆ: ಯೆರೂಸಲೇಮ್ ಕಪ್ಪಕೊಡುವುದನ್ನು ನಿಲ್ಲಿಸುವುದುಎಜ್ರ 4:13, ಎಜ್ರ 4:20
ವಚನಗಳು
ಎಜ್ರ 4:13ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ಕಟ್ಟುವುದು ಮುಕ್ತಾಯಗೊಂಡರೆ ಅವರು ಕಪ್ಪ, ತೆರಿಗೆ ಮತ್ತು ಸುಂಕಗಳನ್ನು ಪಾವತಿಸಲಿಕ್ಕಿಲ್ಲ ಮತ್ತು ಕಡೆಯಲ್ಲಿ ಇದರಿಂದ ಅರಸರಿಗೆ ನಷ್ಟವುಂಟಾಗುವುದೆಂದು ತಮಗೆ ತಿಳಿದಿರಲಿ.
ಎಜ್ರ 4:20ಅವರು ಯೆರೂಸಲೇಮಿನಲ್ಲಿ ಬಲಿಷ್ಠರಾಗಿ ರಾಜ್ಯ ಆಳುತ್ತಾ, ಹೊಳೆಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರನಡಿಸುತ್ತಾ, ಕಪ್ಪ, ತೆರಿಗೆ ಸುಂಕಗಳನ್ನು ತೆಗೆದುಕೊಳ್ಳುತ್ತಾ ಇದ್ದರೆಂದು ಕಂಡುಬಂದಿತು.
- ತಮ್ಮ ಹೊಲಗಳ ಮೇಲಿನ ಅರಸನ ತೆರಿಗೆಯನ್ನು ಕೊಡಲು ಜನರು ಹಣವನ್ನು ಸಾಲ ತೆಗೆದುಕೊಳ್ಳುತ್ತಾರೆನೆಹೆ 5:4
ವಚನಗಳು
ನೆಹೆ 5:4ಮತ್ತು ಕೆಲವರು, “ಅರಸನ ಸರ್ಕಾರಕ್ಕೆ ಕಂದಾಯ ಕೊಡುವುದಕ್ಕಾಗಿ ನಾವು ನಮ್ಮ ಹೊಲ ದ್ರಾಕ್ಷಿತೋಟಗಳ ಮೇಲೆ ಹಣವನ್ನು ಸಾಲವಾಗಿ ತೆಗೆದುಕೊಳ್ಳಬೇಕಾಯಿತು” ಎಂದು ಹೇಳಿದರು.
- ಬಡವರಿಂದ ವಸೂಲಿಮಾಡಿದ ಧಾನ್ಯದ ತೆರಿಗೆಆಮೋ 5:11
ವಚನಗಳು
ಆಮೋ 5:11ನೀವು ಬಡವರನ್ನು ತುಳಿದು, ಅವರಿಂದ ಗೋದಿಯನ್ನು ಬಿಟ್ಟಿ ತೆಗೆದುಕೊಂಡ ಕಾರಣ ಕೆತ್ತಿದ ಕಲ್ಲಿನಿಂದ ನೀವು ಕಟ್ಟಿಕೊಂಡ ಮನೆಗಳಲ್ಲಿ, ವಾಸಿಸದೆ ಇರುವಿರಿ. ಒಳ್ಳೆಯ ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಅದರ ದ್ರಾಕ್ಷಾರಸವನ್ನು ಕುಡಿಯುವಿರಿ.
ಸುವಾರ್ತೆಗಳಲ್ಲಿ
- ಚಕ್ರವರ್ತಿಯಾದ ಔಗುಸ್ತನು ಇಡೀ ಸಾಮ್ರಾಜ್ಯದ ಜನಗಣತಿಗೆ ಆಜ್ಞಾಪಿಸುತ್ತಾನೆಲೂಕ 2:1–3
ವಚನಗಳು
ಲೂಕ 2:1–3ಆ ಕಾಲದಲ್ಲಿ ತನ್ನ ರಾಜ್ಯದ ಜನರೆಲ್ಲಾ ಜನಗಣತಿಯನ್ನು ಮಾಡಿಸಿಕೊಳ್ಳಬೇಕೆಂಬ ಆಜ್ಞೆಯು ಚಕ್ರವರ್ತಿಯಾದ ಔಗುಸ್ತನಿಂದ ಹೊರಟಿತು. ಇದು ಕುರೇನ್ಯನು ಸಿರಿಯಕ್ಕೆ ಅಧಿಪತಿಯಾಗಿದ್ದಾಗ ನಡೆದ ಮೊದಲನೆಯ ಜನಗಣತಿ. ಆಗ ಎಲ್ಲರೂ ಜನಗಣತಿ ಮಾಡಿಸಿಕೊಳ್ಳುವುದಕ್ಕಾಗಿ ತಮ್ಮತಮ್ಮ ಊರುಗಳಿಗೆ ಹೊರಟರು.
- ದೇವಾಲಯದ ತೆರಿಗೆ: ಮೀನಿನ ಬಾಯಲ್ಲಿ ಒಂದು ನಾಣ್ಯಮತ್ತಾ 17:24–27
ವಚನಗಳು
ಮತ್ತಾ 17:24–27ಅವರು ಕಪೆರ್ನೌಮಿಗೆ ಬಂದಾಗ ದೇವಾಲಯಕ್ಕಾಗಿ ತೆರಿಗೆಯನ್ನು ಸಂಗ್ರಹಿಸುವವರು ಪೇತ್ರನ ಬಳಿಗೆ ಬಂದು, “ನಿಮ್ಮ ಗುರುವು ದೇವಾಲಯದ ತೆರಿಗೆಯನ್ನು ಕಟ್ಟುವುದಿಲ್ಲವೇ” ಎಂದು ಕೇಳಲು, “ಹೌದು ಕಟ್ಟುವನು” ಅಂದನು. ಪೇತ್ರನು ಮನೆಯೊಳಗೆ ಬಂದಾಗ, ಅವನು ಬಾಯಿ ತೆರೆದು ಮಾತನಾಡುವ ಮೊದಲೇ, ಯೇಸು ಅವನಿಗೆ, “ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋಕದ ಅರಸರು ಕಂದಾಯವನ್ನಾಗಲಿ ತೆರಿಗೆಯನ್ನಾಗಲಿ ಯಾರಿಂದ ತೆಗೆದುಕೊಳ್ಳುತ್ತಾರೆ? ತಮ್ಮ ಪ್ರಜೆಗಳಿಂದಲೋ ಅಥವಾ ಪರರಿಂದಲೋ?” ಎಂದು ಕೇಳಿದನು. ಅವನು, “ಪರರಿಂದ” ಎಂದು ಉತ್ತರ ಕೊಡಲು, ಯೇಸು ಅವನಿಗೆ, “ಹಾಗಾದರೆ ಪ್ರಜೆಗಳು ಅದನ್ನು ಕೊಡಬೇಕಾಗಿಲ್ಲವೇ. ಆದರೂ ನಾವು ಅವರಿಗೆ ಅಡ್ಡಿಯಾಗದಂತೆ, ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕಿ ಮೊದಲು ಸಿಕ್ಕುವ ಮೀನನ್ನು ಹಿಡಿದು, ಅದರ ಬಾಯಿ ತೆರೆದು ನೋಡು ಅದರಲ್ಲಿ ಒಂದು ಬೆಳ್ಳಿ ನಾಣ್ಯ ಸಿಕ್ಕುವುದು. ಅದನ್ನು ತೆಗೆದುಕೊಂಡು ನನಗೋಸ್ಕರ ಮತ್ತು ನಿನಗೋಸ್ಕರ ತೆರಿಗೆ ಹಣ ಕೊಡು” ಎಂದು ಹೇಳಿದನು.
- “ಕೈಸರನಿಗೆ ಸುಂಕ ಕೊಡುವುದು ನಿಯಮ ಬದ್ಧವೋ?”ಮತ್ತಾ 22:17–21
ವಚನಗಳು
ಮತ್ತಾ 22:17–21ಹೀಗಿರಲಾಗಿ ಕೈಸರನಿಗೆ ಸುಂಕ ಕೊಡುವುದು ನಿಯಮ ಬದ್ಧವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು” ಅಂದರು. ಯೇಸು ಅವರ ಕೆಡುಕನ್ನು ಅರಿತುಕೊಂಡವನಾಗಿ, “ಕಪಟಿಗಳೇ, ನನ್ನನ್ನು ಏಕೆ ಪರೀಕ್ಷೆಮಾಡುತ್ತೀರಿ? ಸುಂಕಕ್ಕೆ ಕೊಡುವ ನಾಣ್ಯವನ್ನು ನನಗೆ ತೋರಿಸಿರಿ” ಅನ್ನಲು ಅವರು ಆತನಿಗೆ ಒಂದು ನಾಣ್ಯವನ್ನು ತಂದು ಕೊಟ್ಟರು. ಆತನು, “ಈ ಸ್ವರೂಪವು ಈ ಮುದ್ರೆಯೂ ಯಾರದು?” ಎಂದು ಕೇಳಿದ್ದಕ್ಕೆ ಅವರು, “ಕೈಸರನದು” ಅಂದರು. ಆಗ ಆತನು ಅವರಿಗೆ, “ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ” ಎಂದು ಹೇಳಿದನು.
- ಯೋಹಾನನು ಸುಂಕ ವಸೂಲಿಗಾರರಿಗೆ: “ನೇಮಿಸಲ್ಪಟ್ಟಿದ್ದಕ್ಕಿಂತ ಹೆಚ್ಚಾಗಿ ಏನೂ ತೆಗೆದುಕೊಳ್ಳಬೇಡಿರಿ”ಲೂಕ 3:12–13
ವಚನಗಳು
ಲೂಕ 3:12–13ಸುಂಕ ವಸೂಲಿಗಾರರು ಸಹ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಬಂದು, “ಗುರುವೇ, ನಾವೇನು ಮಾಡಬೇಕು” ಎಂದು ಆತನನ್ನು ಕೇಳಲು, ಆತನು, “ನೇಮಿಸಲ್ಪಟ್ಟಿದ್ದಕ್ಕಿಂತ ಹೆಚ್ಚಾಗಿ ಏನೂ ತೆಗೆದುಕೊಳ್ಳಬೇಡಿರಿ” ಎಂದು ಅವರಿಗೆ ಹೇಳಿದನು.
- ಲೇವಿಯನ್ನು ಸುಂಕದ ಕಟ್ಟೆಯಿಂದ ಕರೆಯಲಾಗುತ್ತದೆಮಾರ್ಕ 2:14, ಲೂಕ 5:27
ವಚನಗಳು
ಮಾರ್ಕ 2:14ಆತನು ಅಲ್ಲಿಂದ ಹೋಗುತ್ತಿರುವಾಗ ಸುಂಕ ವಸೂಲಿಮಾಡುವ ಸ್ಥಳದಲ್ಲಿ ಕುಳಿತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ನೋಡಿ, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು, ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು.
ಲೂಕ 5:27ಅನಂತರ ಯೇಸು ಹೊರಟು ಸುಂಕ ವಸೂಲಿಮಾಡುವ ಸ್ಥಳದಲ್ಲಿ ಕುಳಿತಿದ್ದ ಲೇವಿಯೆಂಬ ಒಬ್ಬ ಸುಂಕದವನನ್ನು ಕಂಡು, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು,
- ಯೇಸು ಸುಂಕದವರೊಂದಿಗೆ ಊಟಮಾಡುತ್ತಾನೆ, ಫರಿಸಾಯರು ಆಕ್ಷೇಪಿಸುತ್ತಾರೆಮತ್ತಾ 9:10–11, ಮತ್ತಾ 11:19
ವಚನಗಳು
ಮತ್ತಾ 9:10–11ಅನಂತರ ಯೇಸು ಅವನ ಮನೆಯಲ್ಲಿ ಊಟಕ್ಕೆ ಕುಳಿತಿರುವಾಗ ಬಹು ಮಂದಿ ಸುಂಕದವರೂ ಪಾಪಿಗಳೂ ಬಂದು ಯೇಸುವಿನ ಮತ್ತು ಆತನ ಶಿಷ್ಯರ ಪಂಕ್ತಿಯಲ್ಲೇ ಕುಳಿತುಕೊಂಡರು. ಅದನ್ನು ನೋಡಿದ ಫರಿಸಾಯರು ಆತನ ಶಿಷ್ಯರನ್ನು, “ನಿಮ್ಮ ಗುರುವು ಸುಂಕದವರು ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಕೇಳಿದರು.
ಮತ್ತಾ 11:19ಮನುಷ್ಯಕುಮಾರನು ಬಂದನು, ಅವನು ಅನ್ನ ಪಾನಗಳನ್ನು ಸೇವಿಸುವವನಾಗಿದ್ದನು. ಅವರು ‘ಇಗೋ ಇವನು ಹೊಟ್ಟೆಬಾಕನು ಕುಡುಕನು ತೆರಿಗೆಯವರ ಮತ್ತು ಪಾಪಿಗಳ ಗೆಳೆಯನು’ ಅನ್ನುತ್ತಾರೆ. ಆದರೆ ಜ್ಞಾನವು ಅದರ ಕಾರ್ಯಗಳಿಂದಲೇ ಜ್ಞಾನವೆಂದು ಸಮರ್ಥಿಸಲ್ಪಡುತ್ತದೆ” ಅಂದನು.
- ಸಾಮ್ಯ: ದೇವಾಲಯದಲ್ಲಿ ಒಬ್ಬ ಫರಿಸಾಯನೂ ಒಬ್ಬ ಸುಂಕದವನೂಲೂಕ 18:10–13
ವಚನಗಳು
ಲೂಕ 18:10–13ಅದೇನೆಂದರೆ, “ಪ್ರಾರ್ಥನೆಮಾಡಬೇಕೆಂದು ಇಬ್ಬರು ಮನುಷ್ಯರು ದೇವಾಲಯಕ್ಕೆ ಹೋದರು. ಒಬ್ಬನು ಫರಿಸಾಯನು, ಇನ್ನೊಬ್ಬನು ಸುಂಕದವನು. ಫರಿಸಾಯನು ನಿಂತುಕೊಂಡು ಪ್ರಾರ್ಥಿಸುವಾಗ ತನ್ನೊಳಗೆ, ‘ದೇವರೇ, ದರೋಡೆಕೋರರೂ, ಅನ್ಯಾಯಗಾರರೂ, ಹಾದರಮಾಡುವವರೂ ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ಅಲ್ಲ, ಆದುದರಿಂದ ನಿನಗೆ ಸ್ತೋತ್ರಮಾಡುತ್ತೇನೆ. ವಾರಕ್ಕೆ ಎರಡಾವರ್ತಿ ಉಪವಾಸಮಾಡುತ್ತೇನೆ; ನಾನು ಸಂಪಾದಿಸಿದ ಎಲ್ಲಾದರಲ್ಲಿಯೂ ಹತ್ತರಲ್ಲೊಂದು ಪಾಲು ಕೊಡುತ್ತೇನೆ’ ಎಂದು ಪ್ರಾರ್ಥಿಸಿದನು. ಆದರೆ ಆ ಸುಂಕದವನು ದೂರದಲ್ಲಿ ನಿಂತು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವುದಕ್ಕೂ ಆಗದೇ, ‘ದೇವರೇ, ಪಾಪಿಯಾದ ನನ್ನನ್ನು ಕರುಣಿಸು’ ಅಂದನು.
- ಸುಂಕದವರ ಮುಖ್ಯಸ್ಥನಾದ ಜಕ್ಕಾಯನು ನಾಲ್ಕರಷ್ಟು ಹಿಂದಿರುಗಿಸುವನುಲೂಕ 19:2, ಲೂಕ 19:8
ವಚನಗಳು
ಲೂಕ 19:2ಅಲ್ಲಿ ಜಕ್ಕಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು. ಅವನು ಸುಂಕವಸೂಲಿಯ ಮುಖ್ಯಸ್ಥನು ಮತ್ತು ಐಶ್ವರ್ಯವಂತನಾಗಿದ್ದನು.
ಲೂಕ 19:8ಆದರೆ ಜಕ್ಕಾಯನು ನಿಂತುಕೊಂಡು “ಕರ್ತನಿಗೆ, ಕರ್ತನೇ, ನೋಡು, ನನ್ನ ಆಸ್ತಿಯಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ ಮತ್ತು ನಾನು ಅನ್ಯಾಯವಾಗಿ ಯಾರಿಂದ ಏನಾದರೂ ಕಿತ್ತುಕೊಂಡಿದ್ದೇಯಾದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ” ಎಂದು ಹೇಳಿದನು.
- ಪೌಲನು: ಯಾರಿಗೆ ತೆರಿಗೆ ಸಲ್ಲಬೇಕೋ ಅವರಿಗೆ ತೆರಿಗೆ ಕೊಡಿರಿರೋಮಾ 13:6–7
ವಚನಗಳು
ರೋಮಾ 13:6–7ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕೆಂದರೆ ಕಂದಾಯ ಸಂಗ್ರಹಿಸುವವರು ದೇವರ ಸೇವಕರಾಗಿದ್ದು ಆ ಕೆಲಸದಲ್ಲಿಯೇ ನಿರತರಾಗಿರುತ್ತಾರೆ. ಅವರವರಿಗೆ ಸಲ್ಲಿಸತಕ್ಕದ್ದನ್ನು ಸಲ್ಲಿಸಿರಿ. ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು ಸಲ್ಲಿಸಿರಿ. ಯಾರಿಗೆ ಭಯಪಡಬೇಕೋ ಅವರಿಗೆ ಭಯಪಡಿರಿ ಯಾರಿಗೆ ಮರ್ಯಾದೆ ತೋರಿಸಬೇಕೋ ಅವರಿಗೆ ಗೌರವವನ್ನು ಸಲ್ಲಿಸಿರಿ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು