ಅನ್ವೇಷಿಸಿ › ವಿಷಯಗಳು › ಗುಡಾರಗಳು
ದೈನಂದಿನ ಜೀವನ
ಬೈಬಲಿನಲ್ಲಿ ಗುಡಾರಗಳು
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 29 ವಾಕ್ಯಭಾಗಗಳು, ಸಾಲು ಸಾಲಾಗಿ.
- ಯಾಬಾಲನು ಗುಡಾರಗಳಲ್ಲಿ ವಾಸಿಸುತ್ತಾ ದನಕರುಗಳನ್ನು ಸಾಕುವವರ ಮೂಲಪುರುಷನುಆದಿ 4:20
ವಚನಗಳು
ಆದಿ 4:20ಆದಾಳು ಯಾಬಾಲನನ್ನು ಹೆತ್ತಳು; ದನಕರುಗಳನ್ನು ಸಾಕುತ್ತಾ ಗುಡಾರಗಳಲ್ಲಿ ವಾಸಿಸುವವರೆಲ್ಲರ ಮೂಲ ಪುರುಷನು ಇವನೇ.
- ಅಬ್ರಾಮನು ಬೇತೇಲಿಗೂ ಆಯಿಗೂ ನಡುವೆ ಗುಡಾರ ಹಾಕುತ್ತಾನೆ, ಆ ಮೇಲೆ ಮಮ್ರೆಗೆ ಹೋಗುತ್ತಾನೆಆದಿ 12:8, ಆದಿ 13:18
ವಚನಗಳು
ಆದಿ 12:8ಅವನು ಅಲ್ಲಿಂದ ಹೊರಟು ಬೇತೇಲಿನ ಪೂರ್ವದಲ್ಲಿರುವ ಗುಡ್ಡಕ್ಕೆ ಬಂದು ತನ್ನ ಗುಡಾರವನ್ನು ಹಾಕಿ ಇಳಿದುಕೊಂಡನು. ಪಶ್ಚಿಮಕ್ಕೆ ಬೇತೇಲ್, ಪೂರ್ವಕ್ಕೆ ಆಯಿ ಎಂಬ ಊರುಗಳಿದ್ದವು. ಅಲ್ಲಿಯೂ ಅಬ್ರಾಮನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಆತನ ಹೆಸರಿನಲ್ಲಿ ಆರಾಧಿಸಿದನು.
ಆದಿ 13:18ತರುವಾಯ ಅಬ್ರಾಮನು ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನಲ್ಲಿರುವ ಮಮ್ರೆ ಮೋರೆ ಎಂಬ ತೋಪಿಗೆ ಬಂದು ಅಲ್ಲೇ ವಾಸಮಾಡಿಕೊಂಡು, ಯೆಹೋವನಿಗೆ ಯಜ್ಞವೇದಿಯನ್ನು ಕಟ್ಟಿಸಿದನು.
- ಲೋಟನಿಗೂ ಕುರಿಹಿಂಡುಗಳೂ ದನಗಳೂ ಗುಡಾರಗಳೂ ಇವೆಆದಿ 13:5
ವಚನಗಳು
ಆದಿ 13:5ಅಬ್ರಾಮನ ಜೊತೆಯಲ್ಲಿದ್ದ ಲೋಟನಿಗೂ ಕುರಿ, ಎತ್ತು, ಕುಟುಂಬಗಳು ಇದ್ದವು.
- ಬಿಸಿಲಿನ ಹೊತ್ತಿನಲ್ಲಿ ಅಬ್ರಹಾಮನು ತನ್ನ ಗುಡಾರದ ಬಾಗಿಲಲ್ಲಿ ಕುಳಿತಿರುತ್ತಾನೆಆದಿ 18:1–2
ವಚನಗಳು
ಆದಿ 18:1–2ಅಬ್ರಹಾಮನು ಬಿಸಿಲೇರಿದಾಗ ಮಮ್ರೆಯ ಮೋರೆ ತೋಪಿನ ತನ್ನ ಗುಡಾರದ ಬಾಗಿಲಲ್ಲಿ ಕುಳಿತಿರುವಾಗ ಯೆಹೋವನು ಅವನಿಗೆ ಪ್ರತ್ಯಕ್ಷನಾದನು. ಹೇಗೆಂದರೆ, ಅಬ್ರಹಾಮನು ಕಣ್ಣೆತ್ತಿ ನೋಡಲು ಅವನೆದುರಿನಲ್ಲಿ ಮೂವರು ಪುರುಷರು ನಿಂತಿದ್ದರು. ಕೂಡಲೆ ಅವರನ್ನು ಎದುರುಗೊಳ್ಳುವುದಕ್ಕೆ ಅವನು ಗುಡಾರದ ಬಾಗಿಲಿನಿಂದ ಓಡಿ ಹೋಗಿ ತಲೆಬಾಗಿ ನಮಸ್ಕರಿಸಿ.
- ಸಾರಳು ಗುಡಾರದ ಬಾಗಿಲ ಬಳಿ ಕಿವಿಗೊಟ್ಟು ಕೇಳುತ್ತಾಳೆಆದಿ 18:9–10
ವಚನಗಳು
ಆದಿ 18:9–10ಬಳಿಕ ಅವರು ಅವನಿಗೆ, “ನಿನ್ನ ಪತ್ನಿಯಾದ ಸಾರಳು ಎಲ್ಲಿದ್ದಾಳೆ” ಎಂದು ಕೇಳಲು ಅವನು “ಅಗೋ, ಗುಡಾರದಲ್ಲಿದ್ದಾಳೆ” ಎಂದನು. ಅದಕ್ಕೆ ಆತನು, “ಬರುವ ವರ್ಷ ಇದೇ ವೇಳೆಗೆ ನಾನು ತಪ್ಪದೆ ತಿರುಗಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಪತ್ನಿಯಾದ ಸಾರಳಿಗೆ ಮಗನಿರುವನು” ಎಂದನು. ಆ ಮಾತು ಹಿಂದೆ ಗುಡಾರದ ಬಾಗಿಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿತ್ತು.
- ಇಸಾಕನು ರೆಬೆಕ್ಕಳನ್ನು ತನ್ನ ತಾಯಿಯಾದ ಸಾರಳ ಗುಡಾರಕ್ಕೆ ಕರೆತರುತ್ತಾನೆಆದಿ 24:67
ವಚನಗಳು
ಆದಿ 24:67ಈ ರೀತಿಯಾಗಿ ಇಸಾಕನು ರೆಬೆಕ್ಕಳನ್ನು ವರಿಸಿದನು, ಆಕೆ ಅವನ ಹೆಂಡತಿಯಾದಳು. ಅವನು ಆಕೆಯನ್ನು ಪ್ರೀತಿಸಿ ತನ್ನ ತಾಯಿ ಸಾರಳು ಸತ್ತ ದುಃಖವನ್ನು ಶಮನ ಮಾಡಿಕೊಂಡನು.
- ಇಸಾಕನು ಗುಡಾರ ಹಾಕುತ್ತಾನೆ, ಅವನ ಸೇವಕರು ಬಾವಿಯನ್ನು ತೋಡುತ್ತಾರೆಆದಿ 26:25
ವಚನಗಳು
ಆದಿ 26:25ಇಸಾಕನು ಯಜ್ಞವೇದಿಯನ್ನು ಕಟ್ಟಿಸಿ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿ ಅಲ್ಲಿ ತನ್ನ ಗುಡಾರವನ್ನು ಹಾಕಿಸಿಕೊಂಡನು.
- ಯಾಕೋಬ, ಲೇಯ, ರಾಹೇಲ ಮತ್ತು ದಾಸಿಯರು — ಪ್ರತಿಯೊಬ್ಬರಿಗೂ ಒಂದು ಗುಡಾರಆದಿ 31:33
ವಚನಗಳು
ಆದಿ 31:33ಲಾಬಾನನು ಯಾಕೋಬನ ಗುಡಾರದಲ್ಲಿಯೂ, ಲೇಯಳ ಗುಡಾರದಲ್ಲಿಯೂ, ಆ ಇಬ್ಬರು ದಾಸಿಯರ ಗುಡಾರದಲ್ಲಿಯೂ ಹುಡುಕಿದನು. ಆದರೂ ಅವನಿಗೇನೂ ಸಿಕ್ಕಲ್ಲಿಲ್ಲ. ಲೇಯಳ ಗುಡಾರವನ್ನು ಬಿಟ್ಟು ರಾಹೇಲಳ ಗುಡಾರಕ್ಕೆ ಬಂದನು.
- ಅಬ್ರಹಾಮ, ಇಸಾಕ, ಯಾಕೋಬರು ಗುಡಾರಗಳಲ್ಲಿ ವಾಸಿಸಿದರುಇಬ್ರಿ 11:9
ವಚನಗಳು
ಇಬ್ರಿ 11:9ನಂಬಿಕೆಯಿಂದಲೇ ಅವನು ವಾಗ್ದಾನದ ದೇಶಕ್ಕೆ ಬಂದಾಗ, ಅಲ್ಲಿ ಅನ್ಯ ದೇಶದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿ ಬದುಕಿದನು. ಅದೇ ವಾಗ್ದಾನಕ್ಕೆ ಸಹಭಾಧ್ಯರಾಗಿದ್ದ ಇಸಾಕನೂ, ಯಾಕೋಬನೂ ಅವನಂತೆಯೇ ಗುಡಾರಗಳಲ್ಲಿ ವಾಸಿಸಿದರು.
- ಗುಡಾರಗಳಿಗೆ ತೆರೆಗಳೂ ಹಗ್ಗಗಳೂ ಗೂಟಗಳೂ ಇದ್ದವುಯೆಶಾ 54:2, ಯೆರೆ 10:20
ವಚನಗಳು
ಯೆಶಾ 54:2ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು, ನಿನ್ನ ನಿವಾಸದ ಪರದೆಗಳು ಹರಡಲಿ, ಸಂಕೋಚಪಡಬೇಡ; ನಿನ್ನ ಹಗ್ಗಗಳನ್ನು ಉದ್ದಮಾಡಿ ಗೂಟಗಳನ್ನು ಬಲಪಡಿಸು.
ಯೆರೆ 10:20ನನ್ನ ಗುಡಾರವು ಹಾಳಾಗಿದೆ, ಹಗ್ಗಗಳು ಹರಿದುಹೋಗಿವೆ, ಮಕ್ಕಳು ನನ್ನೊಳಗಿಂದ ತೊಲಗಿ ಇಲ್ಲವಾಗಿದ್ದಾರೆ. ನನ್ನ ಗುಡಾರವನ್ನು ಹಾಕುವುದಕ್ಕೂ, ನನ್ನ ಪರದೆಗಳನ್ನು ಬಿಗಿಯುವುದಕ್ಕೂ ಇನ್ನು ಯಾರೂ ಇರುವುದಿಲ್ಲ.
- ಕೇದಾರಿನ ಗುಡಾರಗಳಂತೆ ಕಪ್ಪುಪ.ಗೀ 1:5
ವಚನಗಳು
ಪ.ಗೀ 1:5ಯೆರೂಸಲೇಮಿನ ಮಹಿಳೆಯರೇ, ನಾನು ಕೇದಾರಿನ ಗುಡಾರಗಳಂತೆ ಕಪ್ಪಾಗಿದ್ದರೂ, ಸೊಲೊಮೋನನ ಪರದೆಗಳಂತೆ ಚೆಲುವಾಗಿದ್ದೇನೆ.
- ಪೌಲ, ಅಕ್ವಿಲ, ಪ್ರಿಸ್ಕಿಲ್ಲರು ಕಸುಬಿನಿಂದ ಗುಡಾರ ಮಾಡುವವರಾಗಿದ್ದರುಅ. ಕೃ 18:2–3
ವಚನಗಳು
ಅ. ಕೃ 18:2–3ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯನನ್ನು ಅಲ್ಲಿ ಕಂಡನು. ಯೆಹೂದ್ಯರೆಲ್ಲರೂ ರೋಮಾಪುರವನ್ನು ಬಿಟ್ಟುಹೋಗಬೇಕೆಂದು ಕ್ಲೌದಿಯ ಚಕ್ರವರ್ತಿಯು ಆಜ್ಞೆ ವಿಧಿಸಿದ ಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿನಗಳ ಮೊದಲೇ ಇತಾಲ್ಯ ದೇಶದಿಂದ ಅಲ್ಲಿಗೆ ಬಂದಿದ್ದರು. ಪೌಲನು ಅವರ ಮನೆಗೆ ಹೋಗಿ ತಾನೂ, ಅವರೂ ಒಂದೇ ಕಸುಬಿನವರಾಗಿದ್ದುದರಿಂದ ಅವರ ಸಂಗಡವಿದ್ದು ಅವರೊಂದಿಗೆ ಕೆಲಸಮಾಡುತ್ತಿದ್ದನು; ಗುಡಾರಮಾಡುವುದು ಅವರ ಕಸುಬಾಗಿತ್ತು.
ಅರಣ್ಯದಲ್ಲಿ
- ಮೋಶೆಯು ತನ್ನ ಮಾವನನ್ನು ವಂದಿಸುತ್ತಾನೆ, ಅವರು ಡೇರೆಯೊಳಗೆ ಹೋಗುತ್ತಾರೆವಿಮೋ 18:7
ವಚನಗಳು
ವಿಮೋ 18:7ಮೋಶೆಯು ತನ್ನ ಮಾವನನ್ನು ಎದುರುಗೊಳ್ಳುವುದಕ್ಕೆ ಹೊರಟು ಆತನನ್ನು ವಂದಿಸಿ ಮುದ್ದಿಟ್ಟನು. ಅವರು ಪರಸ್ಪರ ಯೋಗಕ್ಷೇಮವನ್ನು ವಿಚಾರಿಸಿದ ಮೇಲೆ ಡೇರೆಯೊಳಗೆ ಹೋದರು.
- ಇಸ್ರಾಯೇಲರು ದಳಗಳಾಗಿ, ಪ್ರತಿಯೊಬ್ಬನು ತನ್ನ ಧ್ವಜದ ಕೆಳಗೆ ಇಳಿದುಕೊಳ್ಳುತ್ತಾರೆಅರಣ್ಯ 1:52, ಅರಣ್ಯ 2:2
ವಚನಗಳು
ಅರಣ್ಯ 1:52ಇಸ್ರಾಯೇಲರ ಆಯಾ ಸೈನ್ಯಗಳು ತಮ್ಮ ಡೇರೆಗಳನ್ನು ತಮ್ಮತಮ್ಮ ದಂಡಿನ ಧ್ವಜದ ಹತ್ತಿರ ಹಾಕಿಕೊಳ್ಳಬೇಕು.
ಅರಣ್ಯ 2:2“ಇಸ್ರಾಯೇಲರೆಲ್ಲರೂ ಒಬ್ಬೊಬ್ಬರಾಗಿ ಕುಟುಂಬದ ಗುರುತುಗಳ ಪ್ರಕಾರ ದೇವದರ್ಶನದ ಗುಡಾರದ ಸುತ್ತಲೂ ಸ್ವಲ್ಪ ದೂರವಾಗಿ ಡೇರೆಗಳನ್ನು ತಮ್ಮ ತಮ್ಮ ದಂಡಿನ ಧ್ವಜದ ಹತ್ತಿರದಲ್ಲಿ ಹಾಕಿಕೊಳ್ಳಬೇಕು. ಅವರು ದೇವದರ್ಶನದ ಗುಡಾರದ ಎದುರಿನಲ್ಲಿ ಇಳಿದುಕೊಳ್ಳಬೇಕು.”
- ಜನರು ತಮ್ಮ ಗುಡಾರಗಳ ಬಾಗಿಲಲ್ಲಿ ನಿಂತು ಮೋಶೆಯನ್ನು ನೋಡುತ್ತಾರೆವಿಮೋ 33:8
ವಚನಗಳು
ವಿಮೋ 33:8ಮೋಶೆಯು ಆ ಗುಡಾರಕ್ಕೆ ಹೋಗುವಾಗಲೆಲ್ಲಾ ಜನರೆಲ್ಲರೂ ಎದ್ದು ತಮ್ಮ ತಮ್ಮ ಡೇರೆಗಳ ಬಾಗಿಲಲ್ಲಿ ನಿಂತು, ಮೋಶೆಯು ಆ ಗುಡಾರದೊಳಕ್ಕೆ ಹೋಗುವ ತನಕ ಅವನನ್ನು ನೋಡುತ್ತಿದ್ದರು.
- ಬಿಳಾಮನು: “ಯಾಕೋಬೇ, ನಿಮ್ಮ ಡೇರೆಗಳು ಎಷ್ಟೋ ಚೆಲುವಾಗಿವೆ”ಅರಣ್ಯ 24:5
ವಚನಗಳು
ಅರಣ್ಯ 24:5ಯಾಕೋಬೇ, ನಿಮ್ಮ ಡೇರೆಗಳು ಎಷ್ಟೋ ಚೆಲುವಾಗಿವೆ, ಇಸ್ರಾಯೇಲರೇ, ನಿಮ್ಮ ನಿವಾಸಗಳು ಎಷ್ಟೋ ರಮ್ಯವಾಗಿವೆ.
- ಆಕಾನನು ಬೆಳ್ಳಿ ಬಂಗಾರವನ್ನು ತನ್ನ ಗುಡಾರದೊಳಗೆ ನೆಲದಲ್ಲಿ ಅಡಗಿಸಿಡುತ್ತಾನೆಯೆಹೋ 7:22
ವಚನಗಳು
ಯೆಹೋ 7:22ಆಗ ಯೆಹೋಶುವನು ಆಳುಗಳನ್ನು ಕಳುಹಿಸಲು ಅವರು ಓಡಿಹೋಗಿ ಹುಡುಕಲಾಗಿ ಆ ನಿಲುವಂಗಿಯು ಗುಡಾರದಲ್ಲಿ ಹೂತಿಡಲಾಗಿತ್ತು. ಬೆಳ್ಳಿಯು ಅದರ ಕೆಳಗೆ ಇತ್ತು.
ಕಥೆಗಳಲ್ಲಿ
- ಯಾಯೇಲಳು ತನ್ನ ಗುಡಾರದಲ್ಲಿ ಸೀಸೆರನಿಗೆ ಹಾಲು ಕೊಟ್ಟು ಗುಡಾರದ ಗೂಟದಿಂದ ಅವನನ್ನು ಕೊಲ್ಲುತ್ತಾಳೆನ್ಯಾಯ 4:18–21, ನ್ಯಾಯ 5:25–26
ವಚನಗಳು
ನ್ಯಾಯ 4:18–21ಯಾಯೇಲಳು ಹೊರಗೆ ಹೋಗಿ ಸೀಸೆರನನ್ನು ಎದುರುಗೊಂಡು ಅವನಿಗೆ, “ಸ್ವಾಮೀ, ಒಳಗೆ ಬನ್ನಿರಿ; ಹೆದರಬೇಡಿರಿ, ನಮ್ಮಲ್ಲಿಗೆ ಬನ್ನಿರಿ” ಅನ್ನಲು ಅವನು ಗುಡಾರದೊಳಗೆ ಹೋದನು. ಆಗ ಆಕೆಯು ಅವನನ್ನು ಕಂಬಳಿಯಿಂದ ಮುಚ್ಚಿದಳು. ಅವನು ಆಕೆಗೆ, “ದಯವಿಟ್ಟು ಸ್ವಲ್ಪ ನೀರನ್ನು ಕೊಡು, ನನಗೆ ಬಹಳ ಬಾಯಾರಿಕೆಯಾಗಿದೆ” ಅಂದನು. ಆಕೆಯು ಬುದ್ದಲಿಯನ್ನು ಬಿಚ್ಚಿ ಹಾಲನ್ನು ಕುಡಿಯಲು ಕೊಟ್ಟು ಅವನನ್ನು ಪುನಃ ಮುಚ್ಚಿದಳು. ಅವನು ಆಕೆಗೆ, “ನೀನು ಗುಡಾರದ ಬಾಗಿಲಲ್ಲೇ ನಿಂತಿರು; ಯಾರಾದರೂ ಬಂದು ‘ಇಲ್ಲಿ ಒಬ್ಬ ಮನುಷ್ಯನಿದ್ದಾನೆಯೇ ಎಂದು ವಿಚಾರಿಸಿದರೆ’ ಇಲ್ಲ ಎಂದು ಹೇಳು” ಎಂದು ಹೇಳಿದನು. ಹೆಬೆರನ ಹೆಂಡತಿಯಾದ ಯಾಯೇಲಳು ಕೈಯಲ್ಲಿ ಗುಡಾರದ ಗೂಟವನ್ನೂ, ಒಂದು ಸುತ್ತಿಗೆಯನ್ನೂ ತೆಗೆದುಕೊಂಡು ಅವನು ಆಯಾಸದಿಂದ ಗಾಢನಿದ್ರೆಯಲ್ಲಿದ್ದಾಗ, ಮೆಲ್ಲಗೆ ಹತ್ತಿರ ಹೋಗಿ, ಅವನ ತಲೆಯಲ್ಲಿ ಆ ಗೂಟವನ್ನು ಹೊಡೆದು ನೆಲಕ್ಕೆ ನಾಟಿಸಿದಳು; ಅವನು ಸತ್ತನು.
ನ್ಯಾಯ 5:25–26ನೀರು ಕೇಳಿದನು, ಹಾಲು ಕೊಟ್ಟಳು; ಉತ್ತಮ ಪಾತ್ರೆಯಲ್ಲಿ ಮಜ್ಜಿಗೆ ಕೊಟ್ಟಳು. ಕೈಚಾಚಿ ಗೂಟವನ್ನು ತೆಗೆದುಕೊಂಡಳು; ಬಲಗೈಯಲ್ಲಿ ದೊಡ್ಡ ಸುತ್ತಿಗೆಯನ್ನು ಹಿಡಿದಳು; ಆ ಸುತ್ತಿಗೆಯಿಂದ ಸೀಸೆರನ ತಲೆಯನ್ನು ಒಡೆದುಬಿಟ್ಟಳು. ಅವನ ನೆತ್ತಿಗೆ ತಿವಿದು ಜಡಿದಳು.
- ಮಿದ್ಯಾನ್ಯರು ತಮ್ಮ ದನಕರುಗಳೊಂದಿಗೂ ಗುಡಾರಗಳೊಂದಿಗೂ ಮಿಡತೆಗಳಂತೆ ಬರುತ್ತಾರೆನ್ಯಾಯ 6:5
ವಚನಗಳು
ನ್ಯಾಯ 6:5ಆ ಶತ್ರುಗಳು ತಮ್ಮ ಕುರಿದನ ಗುಡಾರಗಳ ಸಹಿತವಾಗಿ ಮಿಡತೆಗಳಂತೆ ಗುಂಪುಗುಂಪಾಗಿ ಬರುತ್ತಿದ್ದರು. ಅವರೂ ಅವರ ಒಂಟೆಗಳೂ ಅಸಂಖ್ಯವಾಗಿದ್ದವು. ಆ ಗುಂಪೆಲ್ಲಾ ಬಂದು ದೇಶವನ್ನು ಹಾಳುಮಾಡುತ್ತಿತ್ತು.
- ದಾವೀದನು ಗೊಲ್ಯಾತನ ಆಯುಧಗಳನ್ನು ತನ್ನ ಸ್ವಂತ ಗುಡಾರದಲ್ಲಿ ಇಡುತ್ತಾನೆ1 ಸಮು 17:54
ವಚನಗಳು
1 ಸಮು 17:54ದಾವೀದನು ಆ ಫಿಲಿಷ್ಟಿಯನ ತಲೆಯನ್ನು ಯೆರೂಸಲೇಮಿಗೆ ಒಯ್ದನು. ಅವನ ಆಯುಧಗಳನ್ನು ತನ್ನ ಗುಡಾರದಲ್ಲಿಟ್ಟುಕೊಂಡನು.
- ಊರೀಯನು: ಮಂಜೂಷವೂ ಇಸ್ರಾಯೇಲರೂ ಯೆಹೂದ್ಯರೂ ಗುಡಾರಗಳಲ್ಲಿ ವಾಸಿಸುತ್ತಿದ್ದಾರೆ2 ಸಮು 11:11
ವಚನಗಳು
2 ಸಮು 11:11ಅದಕ್ಕೆ ಊರೀಯನು, “ಒಡಂಬಡಿಕೆಯ ಮಂಜೂಷವೂ, ಇಸ್ರಾಯೇಲ್ಯರೂ, ಯೆಹೂದ್ಯರೂ ಗುಡಾರಗಳಲ್ಲಿ ವಾಸವಾಗಿದ್ದಾರೆ. ನನ್ನ ಒಡೆಯನಾದ ಯೋವಾಬನೂ, ಅವನ ಸೇವಕರೂ ಬಯಲಿನಲ್ಲಿ ಪಾಳೆಯಮಾಡಿಕೊಂಡಿದ್ದಾರೆ. ಹೀಗಿರುವಾಗ ನಾನು ಮಾತ್ರ ನನ್ನ ಮನೆಗೆ ಹೋಗಿ ಊಟಮಾಡಿ, ಕುಡಿದು, ಹೆಂಡತಿಯೊಡನೆ ಮಲಗಿಕೊಳ್ಳುವುದು ಹೇಗೆ? ನಿನ್ನಾಣೆ, ನಿನ್ನ ಜೀವದ ಆಣೆ, ನಾನು ಇಂಥದ್ದನ್ನು ಮಾಡುವುದೇ ಇಲ್ಲ” ಎಂದು ಉತ್ತರಕೊಟ್ಟನು.
- “ಇಸ್ರಾಯೇಲರೇ, ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಿರಿ”2 ಸಮು 20:1, 1 ಅರಸು 12:16
ವಚನಗಳು
2 ಸಮು 20:1ಆಕಸ್ಮಾತ್ತಾಗಿ ಬೆನ್ಯಾಮೀನ ಕುಲದವನೂ, ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ದುಷ್ಟಮನುಷ್ಯನು ಅಲ್ಲಿ ಹೇಗೋ ಬಂದಿದ್ದನು. ಅವನು ಕಹಳೆಯನ್ನು ಊದಿ, “ಇಸ್ರಾಯೇಲರೇ, ದಾವೀದನಲ್ಲಿ ನಮಗೆ ಪಾಲಿಲ್ಲ. ಇಷಯನ ಮಗನಲ್ಲಿ ನಮಗೆ ಸ್ವತ್ತು ಇಲ್ಲ. ಪ್ರತಿಯೊಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ಹೋಗೋಣ” ಎಂದನು.
1 ಅರಸು 12:16ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲವೆಂದೂ ತಿಳಿದು ಇಸ್ರಾಯೇಲರೆಲ್ಲರೂ ಅವನಿಗೆ, “ದಾವೀದನಲ್ಲಿ ನಮಗೇನು ಪಾಲು? ಇಷಯನ ಮಗನಲ್ಲಿ ನಮಗೇನು ಬಾಧ್ಯತೆ? ಇಸ್ರಾಯೇಲರೇ, ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಿರಿ, ದಾವೀದನವರೇ ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ” ಎಂದು ಹೇಳಿ ತಮ್ಮ ತಮ್ಮ ನಿವಾಸಗಳಿಗೆ ಹೋದರು.
- ಆಸನ ಸೈನ್ಯವು ಕುರುಬರ ಗುಡಾರಗಳ ಮೇಲೆ ಬಿದ್ದು ಕುರಿಗಳನ್ನೂ ಒಂಟೆಗಳನ್ನೂ ತೆಗೆದುಕೊಳ್ಳುತ್ತದೆ2 ಪೂರ್ವ 14:15
ವಚನಗಳು
2 ಪೂರ್ವ 14:15ದನ ಕಾಯುವವರ ಗುಡಾರಗಳ ಮೇಲೂ ದಾಳಿಮಾಡಿ ಸಾಕಷ್ಟು ಒಂಟೆ ಕುರಿಗಳನ್ನು ಯೆರೂಸಲೇಮಿಗೆ ಹೊಡೆದುಕೊಂಡು ಬಂದರು.
- ಕುರುಬನ ಗುಡಾರವನ್ನು ಕಿತ್ತು ಬೇರೆಡೆಗೆ ಕೊಂಡೊಯ್ಯಲಾಗುತ್ತದೆಯೆಶಾ 38:12
ವಚನಗಳು
ಯೆಶಾ 38:12ನನ್ನ ಆಶ್ರಯವು ಕುರುಬನ ಗುಡಾರದಂತೆ ಕಿತ್ತು, ನನ್ನ ಕಡೆಯಿಂದ ಒಯ್ಯಲ್ಪಟ್ಟಿದೆ. ಆತನು ನನ್ನ ಆಯುಷ್ಯದ ಹಾಸನ್ನು ಕತ್ತರಿಸಿದ್ದರಿಂದ ನೆಯಿಗೆಯವನಂತೆ ನನ್ನ ಜೀವಮಾನವನ್ನು ಸುತ್ತಿಬಿಟ್ಟಿದ್ದೇನೆ, ಉದಯದಿಂದ ಅಸ್ತಮಾನದೊಳಗೇ ನನ್ನನ್ನು ತೀರಿಸುತ್ತೀ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು