ಅನ್ವೇಷಿಸಿ › ವಿಷಯಗಳು › ತಾಸುಗಳು ಮತ್ತು ಜಾವಗಳು
ಆಶ್ಚರ್ಯಕರ ವಿವರಗಳು
ಬೈಬಲಿನಲ್ಲಿ ತಾಸುಗಳು ಮತ್ತು ಜಾವಗಳು
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 49 ವಾಕ್ಯಭಾಗಗಳು, ಸಾಲು ಸಾಲಾಗಿ.
- ‘ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೊದಲನೆಯ ದಿನವಾಯಿತು’ಆದಿ 1:5
ವಚನಗಳು
ಆದಿ 1:5ದೇವರು ಬೆಳಕನ್ನೂ ಕತ್ತಲನ್ನೂ ಬೇರ್ಪಡಿಸಿ ಬೆಳಕಿಗೆ “ಹಗಲು” ಎಂದೂ, ಕತ್ತಲೆಗೆ “ಇರುಳು” ಎಂದೂ ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೊದಲನೆಯ ದಿನವಾಯಿತು.
- ಯೇಸು: ‘ಹಗಲಿಗೆ ಹನ್ನೆರಡು ತಾಸುಗಳು ಉಂಟಲ್ಲವೇ?’ಯೋಹಾ 11:9
ವಚನಗಳು
ಯೋಹಾ 11:9ಯೇಸು, “ಹಗಲಿಗೆ ಹನ್ನೆರಡು ತಾಸುಗಳು ಉಂಟಲ್ಲವೇ? ಒಬ್ಬನು ಹಗಲಿನಲ್ಲಿ ನಡೆದರೆ, ಈ ಲೋಕದ ಬೆಳಕು ಕಾಣಿಸುವುದರಿಂದ ಅವನು ಎಡವುದಿಲ್ಲ.
- ಒಂದು ದಿನದ ಪ್ರಯಾಣ: ಎಲೀಯನು ಅಷ್ಟು ದೂರ ಅರಣ್ಯದೊಳಗೆ ಹೋದನು1 ಅರಸು 19:4
ವಚನಗಳು
1 ಅರಸು 19:4ತರುವಾಯ ತಾನೊಬ್ಬನೇ ಅರಣ್ಯದೊಳಗೆ ಒಂದು ದಿನದ ಪ್ರಯಾಣದಷ್ಟು ದೂರ ಹೋಗಿ ಒಂದು ಜಾಲೀ ಗಿಡದ ಕೆಳಗೆ ಕುಳಿತುಕೊಂಡು ಮರಣವನ್ನು ಅಪೇಕ್ಷಿಸಿದನು. ಅವನು, “ಯೆಹೋವನೇ ನನಗೆ ಸಾಕಾಯಿತು, ನನ್ನ ಪ್ರಾಣವನ್ನು ತೆಗೆದುಬಿಡು. ನಾನು ನನ್ನ ಪೂರ್ವಿಕರಿಗಿಂತ ಉತ್ತಮನಲ್ಲ” ಎಂದು ದೇವರನ್ನು ಪ್ರಾರ್ಥಿಸಿ ಅದೇ ಗಿಡದ ಕೆಳಗೆ ಮಲಗಿಕೊಂಡು ನಿದ್ರೆ ಮಾಡಿದನು.
- ಸಬ್ಬತ್ ದಿನದ ಪ್ರಯಾಣ: ಎಣ್ಣೆಮರಗಳ ಗುಡ್ಡದಿಂದ ಯೆರೂಸಲೇಮಿನ ವರೆಗೆಅ. ಕೃ 1:12
ವಚನಗಳು
ಅ. ಕೃ 1:12ಆಗ ಅವರು ಆಲೀವ್ ಮರಗಳ ಗುಡ್ಡದಿಂದ ಯೆರೂಸಲೇಮಿಗೆ ಹಿಂತಿರುಗಿ ಬಂದರು. ಆ ಗುಡ್ಡಕ್ಕೂ ಯೆರೂಸಲೇಮಿಗೂ ಸಬ್ಬತ್ ದಿನದಲ್ಲಿ ಪ್ರಯಾಣಮಾಡುವಷ್ಟು ದೂರವಿತ್ತು.
- ಸಿದ್ಧತೆಯ ದಿನ: ಸಬ್ಬತ್ತಿನ ಹಿಂದಿನ ದಿನಮಾರ್ಕ 15:42, ಯೋಹಾ 19:31
ವಚನಗಳು
ಮಾರ್ಕ 15:42ಆಗಲೇ ಸಂಜೆಯಾಗಿತ್ತು; ಮತ್ತು ಆ ದಿನವು ‘ಸಿದ್ಧತೆಯ’ ದಿನ, ಅಂದರೆ ಸಬ್ಬತ್ ದಿನದ ಹಿಂದಿನ ದಿನವಾಗಿತ್ತು.
ಯೋಹಾ 19:31ಅದು ಸಿದ್ಧತೆಯ ದಿನವಾದುದರಿಂದ ಯೆಹೂದ್ಯರು, ಸಬ್ಬತ್ ದಿನದಲ್ಲಿ ಮೃತದೇಹಗಳು ಶಿಲುಬೆಯ ಮೇಲೆ ಇರಬಾರದೆಂದು, ಪಿಲಾತನನ್ನು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಕೇಳಿಕೊಂಡರು, ಏಕೆಂದರೆ ಆ ಸಬ್ಬತ್ ದಿನವು ಬಹು ವಿಶೇಷವಾದದ್ದು.
- ಸಬ್ಬತ್ತಿಗೆ ಮೊದಲು ಸಂಜೆಯ ನೆರಳು ಬೀಳುವಾಗ ನೆಹೆಮೀಯನು ಬಾಗಿಲುಗಳನ್ನು ಮುಚ್ಚಿಸಿದನುನೆಹೆ 13:19
ವಚನಗಳು
ನೆಹೆ 13:19ಇದಲ್ಲದೆ, ಸಬ್ಬತ್ ದಿನ ಪ್ರಾರಂಭವಾಗುವುದಕ್ಕಿಂತ ಮೊದಲು ಯೆರೂಸಲೇಮಿನ ಬಾಗಿಲುಗಳನ್ನು ಕತ್ತಲಾಗುವುದಕ್ಕೆ ಮೊದಲೇ ಮುಚ್ಚಿಸಿ, ಸಬ್ಬತ್ ದಿನವು ಮುಗಿಯುವವರೆಗೂ ಅವುಗಳನ್ನು ತೆರೆಯಬಾರದೆಂದು ಆಜ್ಞಾಪಿಸಿ, ಯಾವ ಹೊರೆಯೂ ಒಳಗೆ ಬಾರದಂತೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಿಲುಗಳ ಬಳಿಯಲ್ಲಿ ಕಾವಲಿರಿಸಿದೆನು.
- ಆಹಾಜನ ಮೆಟ್ಟಿಲುಗಳ ಮೇಲೆ ನೆರಳು ಹತ್ತು ಮೆಟ್ಟಿಲು ಹಿಂದಕ್ಕೆ ಹೋಯಿತು2 ಅರಸು 20:9–11
ವಚನಗಳು
2 ಅರಸು 20:9–11ಅದಕ್ಕೆ ಯೆಶಾಯನು, “ಯೆಹೋವನು ನುಡಿದಿದ್ದನ್ನು ನೆರವೇರಿಸುವನು ಎಂಬುದಕ್ಕೆ ಯೆಹೋವನಿಂದ ಉಂಟಾದ ಗುರುತು ಕೇಳುತ್ತಿರುವೆ, ಹಾಗಾದರೆ ನೆರಳು ಹತ್ತು ಮೆಟ್ಟಲು ಮುಂದೆ ಹೋಗಬೇಕೋ? ಹಿಂದೆ ಬರಬೇಕೋ? ಹೇಳು ಹಿಂದೆ ಹೋಗಬೇಕೋ ಹೇಳು?” ಎಂದು ಕೇಳಿದನು. ಅದಕ್ಕೆ ಹಿಜ್ಕೀಯನು, “ನೆರಳು ಮುಂದೆ ಹೋಗುವುದು ಸುಲಭ, ಆದುದರಿಂದ ಹತ್ತು ಮೆಟ್ಟಲು ಹಿಂದೆ ಬರುವಂತೆ ಮಾಡು” ಎಂದು ಹೇಳಿದನು. ಆಗ ಪ್ರವಾದಿಯಾದ ಯೆಶಾಯನು ಯೆಹೋವನಿಗೆ ಮೊರೆಯಿಡಲು ಆತನು ಆಹಾಜನ ಗಡಿಯಾರದ ವೇಳಾನುಸಾರ ಹತ್ತು ಮೆಟ್ಟಲು ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಟಲು ಹಿಂದೆ ಬರುವಂತೆ ಮಾಡಿದನು.
ರಾತ್ರಿಯ ಜಾವಗಳು
- ಪ್ರಲಾಪಗಳು: ‘ರಾತ್ರಿಯ ಒಂದೊಂದು ಜಾವದ ಆರಂಭದಲ್ಲಿ ಎದ್ದೆದ್ದು ಗೋಳಾಡಿರಿ’ಪ್ರಲಾ 2:19
ವಚನಗಳು
ಪ್ರಲಾ 2:19ರಾತ್ರಿಯ ಒಂದೊಂದು ಜಾವದ ಆರಂಭದಲ್ಲಿ ಎದ್ದೆದ್ದು ಗೋಳಾಡಿರಿ, ನಿಮ್ಮ ಹೃದಯಸಾರವನ್ನು ನೀರನ್ನೋ ಎಂಬಂತೆ ಕರ್ತನ ಸಮ್ಮುಖದಲ್ಲಿ ಹೊಯ್ದು ಬಿಡಿರಿ; ಪ್ರತಿಯೊಂದು ಬೀದಿಯ ಕೊನೆಕೊನೆಯಲ್ಲಿ ಹಸಿವೆಯಿಂದ ಮೂರ್ಛೆಹೋಗಿರುವ ನಿಮ್ಮ ಮಕ್ಕಳ ಪ್ರಾಣವನ್ನು ಉಳಿಸಬೇಕೆಂದು ಕೈಯೆತ್ತಿ ಪ್ರಾರ್ಥಿಸಿರಿ.”
- ಕಾವಲು ಬದಲಾದ ನಂತರ, ನಡುಜಾವದ ಆರಂಭದಲ್ಲಿ ಗಿದ್ಯೋನನು ಬಂದನುನ್ಯಾಯ 7:19
ವಚನಗಳು
ನ್ಯಾಯ 7:19ರಾತ್ರಿಯ ಎರಡನೆಯ ಜಾವದಲ್ಲಿ ಕಾವಲುಗಾರರು ಬದಲಾದ ಕೂಡಲೆ ಗಿದ್ಯೋನನೂ ಅವನ ಸಂಗಡ ಇದ್ದ ನೂರು ಮಂದಿಯೂ (ಶತ್ರುಗಳ) ಪಾಳೆಯದ ಅಂಚಿಗೆ ಬಂದು, ಕೊಂಬುಗಳನ್ನು ಊದಿ, ತಮ್ಮ ಕೈಯಲ್ಲಿದ್ದ ಕೊಡಗಳನ್ನು ಒಡೆದುಬಿಟ್ಟರು.
- ಬೆಳಗಿನ ಜಾವದಲ್ಲಿ ಐಗುಪ್ತ್ಯರ ಪಾಳೆಯವು ಗಲಿಬಿಲಿಗೊಂಡಿತುವಿಮೋ 14:24
ವಚನಗಳು
ವಿಮೋ 14:24ಬೆಳಗಿನ ಜಾವದಲ್ಲಿ ಯೆಹೋವನು ಆ ಅಗ್ನಿ ಸ್ತಂಭ ಮತ್ತು ಮೇಘ ಸ್ತಂಭದೊಳಗಿನಿಂದ ಐಗುಪ್ತ್ಯರ ದಂಡಿನ ಕಡೆಗೆ ನೋಡಿ ಅವರಲ್ಲಿ ಗಲಿಬಿಲಿಯನ್ನು ಉಂಟುಮಾಡಿದನು.
- ಬೆಳಗಿನ ಜಾವದಲ್ಲಿ ಸೌಲನು ಅಮ್ಮೋನಿಯರ ಪಾಳೆಯದ ಮೇಲೆ ಬಿದ್ದನು1 ಸಮು 11:11
ವಚನಗಳು
1 ಸಮು 11:11ಸೌಲನು ಬೆಳಗಿನ ಜಾವದಲ್ಲಿ ತನ್ನ ಜನರನ್ನು ಮೂರು ಗುಂಪನ್ನಾಗಿ ಮಾಡಿ ಅಮ್ಮೋನಿಯರ ಪಾಳೆಯದೊಳಗೆ ನುಗ್ಗಿ ಅವರನ್ನು ಮಧ್ಯಾಹ್ನದ ವರೆಗೆ ಹತ್ಯೆಮಾಡಿದನು. ಉಳಿದವರನ್ನು ಒಟ್ಟಾಗಿ ಸೇರಿಸಿಕೊಳ್ಳದ ಹಾಗೆ ಚದರಿಸಿಬಿಟ್ಟನು.
- ರಾತ್ರಿಯ ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆದನುಮತ್ತಾ 14:25, ಮಾರ್ಕ 6:48
ವಚನಗಳು
ಮತ್ತಾ 14:25ರಾತ್ರಿಯ ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆಯುತ್ತಾ ಅವರ ಕಡೆಗೆ ಬಂದನು.
ಮಾರ್ಕ 6:48ಎದುರು ಗಾಳಿ ಬೀಸುತ್ತಿದ್ದುದರಿಂದ ಶಿಷ್ಯರು ಹುಟ್ಟುಗೋಲು ಹಾಕಿ ದಣಿದು ಹೋದದ್ದನ್ನು ಯೇಸು ಕಂಡು ಹೆಚ್ಚುಕಡಿಮೆ ರಾತ್ರಿಯ ನಾಲ್ಕನೆಯ ಜಾವದಲ್ಲಿ ಸಮುದ್ರದ ಮೇಲೆ ನಡೆದು ಅವರ ಕಡೆಗೆ ಬಂದು ಅವರನ್ನು ದಾಟಿ ಮುಂದಕ್ಕೆ ಹೋಗಬೇಕೆಂದಿದ್ದನು.
- ಯಜಮಾನನು ಎರಡನೆಯ ಅಥವಾ ಮೂರನೆಯ ಜಾವದಲ್ಲಿ ಬರಬಹುದುಲೂಕ 12:38
ವಚನಗಳು
ಲೂಕ 12:38ಯಜಮಾನನು ಬರುವಾಗ ನಡು ರಾತ್ರಿಯಾಗಿರಲಿ, ಮುಂಜಾವವಾಗಿರಲಿ, ಆತನು ಬರುವಾಗ ಎಚ್ಚರವಾಗಿ ಕಾಣಿಸಿಕೊಳ್ಳುವ ಆಳುಗಳು ಧನ್ಯರು.
- ಸಾಯಂಕಾಲದಲ್ಲಿಯೋ ಮಧ್ಯರಾತ್ರಿಯಲ್ಲಿಯೋ ಕೋಳಿ ಕೂಗುವಾಗಲೋ ಬೆಳಿಗ್ಗೆಯೋಮಾರ್ಕ 13:35
ವಚನಗಳು
ಮಾರ್ಕ 13:35“ಮನೆ ಯಜಮಾನನು ಸಂಜೆಯಲ್ಲಿಯೋ, ಮಧ್ಯರಾತ್ರಿಯಲ್ಲಿಯೋ, ಕೋಳಿ ಕೂಗುವಾಗಲೋ ಬೆಳಕಾಗುವಾಗಲೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲದ ಕಾರಣ ಎಚ್ಚರವಾಗಿರಿ!
- ಒಬ್ಬ ಕೀರ್ತನೆಗಾರನು ರಾತ್ರಿಯ ಜಾವಗಳಲ್ಲಿ ಧ್ಯಾನಿಸುತ್ತಾನೆಕೀರ್ತ 63:6, ಕೀರ್ತ 119:148
ವಚನಗಳು
ಕೀರ್ತ 63:6ನಾನು ಹಾಸಿಗೆಯ ಮೇಲಿದ್ದುಕೊಂಡು ನಿನ್ನನ್ನು ಸ್ಮರಿಸುವಾಗ, ರಾತ್ರಿಯ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುತ್ತಿರುವೆನು.
ಕೀರ್ತ 119:148ನಿನ್ನ ನುಡಿಯನ್ನು ಧ್ಯಾನಿಸಲು, ನನ್ನ ಕಣ್ಣುಗಳು ಇರುಳಿನ ಒಂದೊಂದು ಜಾವದಲ್ಲೂ ತೆರೆದಿರುತ್ತವೆ.
ಹಗಲಿನ ತಾಸುಗಳು
- ಪೇತ್ರನು: ಇದು ಹಗಲಿನ ಮೂರನೆಯ ತಾಸು ಮಾತ್ರಅ. ಕೃ 2:15
ವಚನಗಳು
ಅ. ಕೃ 2:15ನೀವು ಭಾವಿಸಿದಂತೆ ಇವರು ಮದ್ಯಪಾನಮಾಡಿ ಅಮಲೇರಿದವರಲ್ಲ, ಈಗ ಬೆಳಗ್ಗೆ ಒಂಭತ್ತು ಘಂಟೆಯಾಗಿದೆಯಷ್ಟೆ.
- ಮೂರನೆಯ, ಆರನೆಯ, ಒಂಭತ್ತನೆಯ ಮತ್ತು ಹನ್ನೊಂದನೆಯ ತಾಸುಗಳಲ್ಲಿ ಕೂಲಿಗೆ ಗೊತ್ತುಮಾಡಲ್ಪಟ್ಟ ಕೆಲಸಗಾರರುಮತ್ತಾ 20:3, ಮತ್ತಾ 20:5–6
ವಚನಗಳು
ಮತ್ತಾ 20:3ಅವನು ಪುನಃ ಸುಮಾರು ಒಂಭತ್ತು ಗಂಟೆಗೆ ಸಂತೆಯ ಸ್ಥಳಕ್ಕೆ ಹೋಗಿ ಕೆಲಸವಿಲ್ಲದೆ ಸುಮ್ಮನೇ ನಿಂತಿದ್ದ ಬೇರೆ ಕೆಲವರು ಕೂಲಿಯಾಳುಗಳನ್ನು ಕಂಡು,
ಮತ್ತಾ 20:5–6ಅವನು ಪುನಃ ಸುಮಾರು ಹನ್ನೆರಡು ಗಂಟೆಗೆ ಮತ್ತು ಮೂರು ಗಂಟೆಗೆ ಹೋಗಿ ಅದೇ ಪ್ರಕಾರ ಮಾಡಿದನು. ಮತ್ತೊಂದು ಸಾರಿ ಸಾಯಂಕಾಲ ಐದು ಗಂಟೆಗೆ ಅವನು ಹೋಗಿ ಬೇರೆ ಕೆಲವರು ಸುಮ್ಮನೇ ನಿಂತಿರುವುದನ್ನು ಕಂಡು ಅವರನ್ನು, ‘ದಿನವೆಲ್ಲಾ ಇಲ್ಲಿ ಸುಮ್ಮನೇ ನಿಂತಿರುವುದೇಕೆ?’ ಎಂದು ಕೇಳಿದನು.
- ಸಾಯಂಕಾಲವಾದಾಗ ಎಲ್ಲರಿಗೂ ಕೂಲಿ ಕೊಡಲಾಯಿತು, ಕೊನೆಗೆ ಬಂದವರಿಗೆ ಮೊದಲುಮತ್ತಾ 20:8–9
ವಚನಗಳು
ಮತ್ತಾ 20:8–9ಸಂಜೆಯಾದಾಗ ದ್ರಾಕ್ಷಾತೋಟದ ಯಜಮಾನನು ತನ್ನ ಮೇಲ್ವಿಚಾರಕನಿಗೆ, ‘ಆ ಕೂಲಿಯಾಳುಗಳನ್ನು ಕರೆದು ಕಡೆಗೆ ಬಂದವರಿಂದ ಪ್ರಾರಂಭಿಸಿ ಮೊದಲು ಬಂದವರ ತನಕ ಕೂಲಿ ಕೊಡು’ ಎಂದು ಹೇಳಿದನು. ಆಗ ಸಾಯಂಕಾಲ ಐದು ಗಂಟೆಗೆ ಬಂದು ಕೆಲಸ ಮಾಡಿದವರು ಬಂದಾಗ, ಪ್ರತಿಯೊಬ್ಬನಿಗೂ ಒಂದೊಂದು ಬೆಳ್ಳಿ ನಾಣ್ಯ ಸಿಕ್ಕಿತು.
- ಯೇಸುವನ್ನು ಶಿಲುಬೆಗೆ ಹಾಕಿದಾಗ ಮೂರನೆಯ ತಾಸಾಗಿತ್ತುಮಾರ್ಕ 15:25
ವಚನಗಳು
ಮಾರ್ಕ 15:25ಆತನನ್ನು ಶಿಲುಬೆಗೆ ಹಾಕುವಾಗ ಬೆಳಿಗ್ಗೆ ಒಂಭತ್ತು ಗಂಟೆಯಾಗಿತ್ತು.
- ಆರನೆಯ ತಾಸಿನಿಂದ ಒಂಭತ್ತನೆಯ ತಾಸಿನ ವರೆಗೆ ಕತ್ತಲೆಮತ್ತಾ 27:45, ಮಾರ್ಕ 15:33, ಲೂಕ 23:44–45
ವಚನಗಳು
ಮತ್ತಾ 27:45ಮಧ್ಯಾಹ್ನ ಹನ್ನೆರಡು ಘಂಟೆಯಿಂದ ಮೂರು ಘಂಟೆಯ ವರೆಗೆ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.
ಮಾರ್ಕ 15:33ಹನ್ನೆರಡು ಗಂಟೆಯಿಂದ ಮೂರು ಗಂಟೆಯ ತನಕ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.
ಲೂಕ 23:44–45ಇಷ್ಟರಲ್ಲಿ ಸುಮಾರು ನಡುಮಧ್ಯಾಹ್ನವಾಯಿತು. ಸೂರ್ಯನು ಕಾಂತಿಗುಂದಿ, ಮೂರು ಘಂಟೆಯ ತನಕ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು. ಇದಲ್ಲದೆ ದೇವಾಲಯದ ಪರದೆಯು ನಡುವೆ ಹರಿದು ಹೋಯಿತು.
- ಪಿಲಾತನು: “ಇಗೋ, ನಿಮ್ಮ ಅರಸನು” — ಸುಮಾರು ಆರನೆಯ ತಾಸಾಗಿತ್ತುಯೋಹಾ 19:14
ವಚನಗಳು
ಯೋಹಾ 19:14ಅದು ಪಸ್ಕ ಹಬ್ಬಕ್ಕೆ ಸಿದ್ಧಮಾಡುವ ದಿನದಲ್ಲಿ ಹೆಚ್ಚು ಕಡಿಮೆ ಬೆಳಿಗ್ಗೆ ಆರು ಘಂಟೆಯಾಗಿತ್ತು. ಅವನು ಯೆಹೂದ್ಯರಿಗೆ, “ಇಗೋ, ನಿಮ್ಮ ಅರಸನು” ಎಂದು ಹೇಳಿದನು.
- ಅಧಿಕಾರಿಯ ಮಗನಿಗೆ ಏಳನೆಯ ತಾಸಿನಲ್ಲಿ ಜ್ವರ ಬಿಟ್ಟಿತುಯೋಹಾ 4:52
ವಚನಗಳು
ಯೋಹಾ 4:52ಅವನು ಎಷ್ಟು ಘಂಟೆಯಲ್ಲಿ ಚೇತರಿಸಿಕೊಂಡನು ಎಂದು ಅವರನ್ನು ಕೇಳಿದಾಗ ಅವರು, “ನಿನ್ನೆ ಮಧ್ಯಾಹ್ನ ಒಂದು ಘಂಟೆಗೆ ಜ್ವರವು ಅವನನ್ನು ಬಿಟ್ಟಿತು” ಎಂದರು.
- ಸುಮಾರು ಹತ್ತನೆಯ ತಾಸಿನಲ್ಲಿ ಇಬ್ಬರು ಶಿಷ್ಯರು ಯೇಸುವಿನೊಂದಿಗೆ ಹೋದರುಯೋಹಾ 1:39
ವಚನಗಳು
ಯೋಹಾ 1:39ಆತನು ಅವರಿಗೆ, “ನೀವೇ ಬಂದು ನೋಡಿರಿ” ಎಂದು ಹೇಳಲು, ಅವರು ಹೋಗಿ ಆತನು ವಾಸಿಸುತ್ತಿದ್ದ ಸ್ಥಳವನ್ನು ನೋಡಿ ಆ ದಿನ ಆತನ ಸಂಗಡ ಇದ್ದರು. ಆಗ ಹೆಚ್ಚುಕಡಿಮೆ ಸಂಜೆ ನಾಲ್ಕು ಗಂಟೆಯಾಗಿತ್ತು.
- ಪ್ರಾರ್ಥನೆಯ ವೇಳೆಯಾದ ಒಂಭತ್ತನೆಯ ತಾಸಿನಲ್ಲಿ ಪೇತ್ರನೂ ಯೋಹಾನನೂ ದೇವಾಲಯಕ್ಕೆ ಹೋದರುಅ. ಕೃ 3:1
ವಚನಗಳು
ಅ. ಕೃ 3:1ಒಂದು ದಿನ ಪೇತ್ರ ಮತ್ತು ಯೋಹಾನನು ಮಧ್ಯಾಹ್ನದ ಮೇಲೆ ಮೂರು ಘಂಟೆಗೆ ನಡೆಯತ್ತಿದ್ದ ಪ್ರಾರ್ಥನೆಗಾಗಿ ದೇವಾಲಯಕ್ಕೆ ಹೋದರು.
- ಕೊರ್ನೆಲ್ಯನು ಒಂಭತ್ತನೆಯ ತಾಸಿನಲ್ಲಿ ಪ್ರಾರ್ಥಿಸುತ್ತಿದ್ದನುಅ. ಕೃ 10:3, ಅ. ಕೃ 10:30
ವಚನಗಳು
ಅ. ಕೃ 10:3ಒಂದು ದಿನ ಮಧ್ಯಾಹ್ನ ಸುಮಾರು ಮೂರು ಘಂಟೆಗೆ ಅವನಿಗೆ ಒಂದು ದರ್ಶನ ಉಂಟಾಗಿ ಒಬ್ಬ ದೇವದೂತನು ತನ್ನ ಬಳಿಗೆ ಬಂದು; “ಕೊರ್ನೆಲ್ಯನೇ” ಎಂದು ಕರೆಯುವುದನ್ನು ಅವನು ಪ್ರತ್ಯಕ್ಷವಾಗಿ ಕಂಡನು.
ಅ. ಕೃ 10:30ಅದಕ್ಕೆ ಕೊರ್ನೇಲ್ಯನು; “ನಾನು ನಾಲ್ಕು ದಿನಗಳ ಹಿಂದೆ ಇದೇ ಹೊತ್ತಿನಲ್ಲಿ ಮೂರನೇ ಗಳಿಗೆಯ ದೇವರ ಪ್ರಾರ್ಥನೆಯನ್ನು ನನ್ನ ಮನೆಯಲ್ಲಿ ಮಾಡುತ್ತಿದ್ದಾಗ ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನೆದುರಿಗೆ ನಿಂತುಕೊಂಡು;
- ಸುಮಾರು ಆರನೆಯ ತಾಸಿನಲ್ಲಿ ಪ್ರಾರ್ಥಿಸಲು ಪೇತ್ರನು ಮಾಳಿಗೆಯ ಮೇಲೆ ಹೋದನುಅ. ಕೃ 10:9
ವಚನಗಳು
ಅ. ಕೃ 10:9ಮರುದಿನ ಅವರು ಪ್ರಯಾಣಮಾಡಿ ಆ ಪಟ್ಟಣದ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಮಧ್ಯಾಹ್ನ ಹನ್ನೆರಡು ಗಂಟೆಗೆ ಪ್ರಾರ್ಥನೆಮಾಡುವುದಕ್ಕಾಗಿ ಮಹಡಿಯನ್ನು ಹತ್ತಿದನು.
- ರಾತ್ರಿಯ ಮೂರನೆಯ ತಾಸಿನಲ್ಲಿ ಸೈನಿಕರು ಕೈಸರೈಯಕ್ಕೆ ಹೊರಟರುಅ. ಕೃ 23:23
ವಚನಗಳು
ಅ. ಕೃ 23:23ಆ ಮೇಲೆ ಅವನು ಶತಾಧಿಪತಿಗಳಲ್ಲಿ ಇಬ್ಬರನ್ನು ಕರೆಯಿಸಿ; “ರಾತ್ರಿ ಒಂಭತ್ತು ಘಂಟೆಗೆ ಕೈಸರೈಯದ ತನಕ ಹೋಗುವಂತೆ ಇನ್ನೂರು ಮಂದಿ ಸಿಪಾಯಿಗಳನ್ನೂ, ಎಪ್ಪತ್ತುಮಂದಿ ಕುದುರೆ ಸವಾರರನ್ನೂ, ಇನ್ನೂರು ಮಂದಿ ಈಟಿ ಹಿಡಿದ ಸೈನಿಕರನ್ನು ಸಿದ್ಧಮಾಡಿರಿ.”
ಬೆಳಿಗ್ಗೆ, ಮಧ್ಯಾಹ್ನ ಮತ್ತು ಮಧ್ಯರಾತ್ರಿ
- ದಾನಿಯೇಲನು ಯೆರೂಸಲೇಮಿನ ಕಡೆಗೆ ಕಿಟಿಕಿಗಳನ್ನು ತೆರೆದು ದಿನಕ್ಕೆ ಮೂರು ಸಾರಿ ಪ್ರಾರ್ಥಿಸಿದನುದಾನಿ 6:10
ವಚನಗಳು
ದಾನಿ 6:10ಶಾಸನಕ್ಕೆ ರುಜುವಾದದ್ದು ದಾನಿಯೇಲನಿಗೆ ತಿಳಿದಾಗ ಅವನು ತನ್ನ ಮನೆಗೆ ಹೋಗಿ ಯೆರೂಸಲೇಮಿನ ಕಡೆಗೆ ಕದವಿಲ್ಲದೆ ಕಿಟಕಿಗಳುಳ್ಳ ತನ್ನ ಮಹಡಿಯ ಕೋಣೆಯಲ್ಲಿ ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಮೊಣಕಾಲೂರಿ ತನ್ನ ದೇವರಿಗೆ ಪ್ರಾರ್ಥನೆಮಾಡಿ ಸ್ತೋತ್ರ ಸಲ್ಲಿಸುತ್ತಿದ್ದನು
- ಒಂದು ಕೀರ್ತನೆ: ‘ತ್ರಿಕಾಲದಲ್ಲಿಯೂ ಹಂಬಲಿಸುತ್ತಾ ಮೊರೆಯಿಡುವೆನು’ಕೀರ್ತ 55:17
ವಚನಗಳು
ಕೀರ್ತ 55:17ತ್ರಿಕಾಲದಲ್ಲಿಯೂ ಹಂಬಲಿಸುತ್ತಾ ಮೊರೆಯಿಡುವೆನು. ಆತನು ಹೇಗೂ ನನ್ನ ಮೊರೆಯನ್ನು ಕೇಳಿ
- ಬಿಸಿಲಿನ ಹೊತ್ತಿನಲ್ಲಿ ಅಬ್ರಹಾಮನು ತನ್ನ ಗುಡಾರದ ಬಾಗಿಲಲ್ಲಿ ಕುಳಿತಿದ್ದನುಆದಿ 18:1
ವಚನಗಳು
ಆದಿ 18:1ಅಬ್ರಹಾಮನು ಬಿಸಿಲೇರಿದಾಗ ಮಮ್ರೆಯ ಮೋರೆ ತೋಪಿನ ತನ್ನ ಗುಡಾರದ ಬಾಗಿಲಲ್ಲಿ ಕುಳಿತಿರುವಾಗ ಯೆಹೋವನು ಅವನಿಗೆ ಪ್ರತ್ಯಕ್ಷನಾದನು.
- ಇಸಾಕನು ಸಂಜೆಯಾಗುತ್ತಿದ್ದಾಗ ಹೊಲಕ್ಕೆ ಹೊರಟನುಆದಿ 24:63
ವಚನಗಳು
ಆದಿ 24:63ಇಸಾಕನು ಸಂಜೆ ವೇಳೆಯಲ್ಲಿ ಧ್ಯಾನ ಮಾಡುವುದಕ್ಕಾಗಿ ಬಯಲು ಪ್ರದೇಶಕ್ಕೆ ಹೋಗಿದ್ದನು. ಅಲ್ಲಿ ಕಣ್ಣೆತ್ತಿ ನೋಡಲಾಗಿ ಒಂಟೆಗಳು ಬರುವುದನ್ನು ಕಂಡನು.
- ಪಸ್ಕದ ಕುರಿಮರಿಗಳನ್ನು ಸಂಜೆಯ ಮಬ್ಬಿನಲ್ಲಿ ವಧಿಸಲಾಗುತ್ತಿತ್ತುವಿಮೋ 12:6
ವಚನಗಳು
ವಿಮೋ 12:6ಈ ತಿಂಗಳಿನ ಹದಿನಾಲ್ಕನೆಯ ದಿನದವರೆಗೆ ಅವುಗಳನ್ನು ಇಟ್ಟುಕೊಂಡಿದ್ದು, ಆ ದಿನದ ಸಂಜೆ ವೇಳೆಯಲ್ಲಿ ಇಸ್ರಾಯೇಲರ ಸಮೂಹದವರೆಲ್ಲರೂ ಒಟ್ಟಿಗೆ ಸೇರಿ ಅವುಗಳನ್ನು ವಧಿಸಬೇಕು.
- ಸಂಜೆಯ ಯಜ್ಞದ ವೇಳೆಯಲ್ಲಿ ಎಲೀಯನು ಪ್ರಾರ್ಥಿಸಿದನು1 ಅರಸು 18:36
ವಚನಗಳು
1 ಅರಸು 18:36ಸಂಧ್ಯಾನೈವೇದ್ಯದ ಹೊತ್ತಿಗೆ ಪ್ರವಾದಿಯಾದ ಎಲೀಯನು ಯಜ್ಞವೇದಿಯ ಹತ್ತಿರ ಬಂದು, “ಅಬ್ರಹಾಮ, ಇಸಾಕ ಇಸ್ರಾಯೇಲರ ದೇವರೇ, ಯೆಹೋವನೇ, ನೀನೊಬ್ಬನೇ ಇಸ್ರಾಯೇಲರ ದೇವರಾಗಿರುತ್ತೀ ಎಂಬುದನ್ನೂ, ನಾನು ನಿನ್ನ ಸೇವಕನಾಗಿರುತ್ತೇನೆ ಎಂಬುದನ್ನೂ ಮತ್ತು ಇದನ್ನೆಲ್ಲಾ ನಿನ್ನ ಅಪ್ಪಣೆಯ ಮೇರೆಗೆ ಮಾಡಿದೆನೆಂಬುದನ್ನೂ ಈ ಹೊತ್ತು ತೋರಿಸಿಕೊಡು.
- ನೆಹೆಮೀಯನ ಜನರು ಬೆಳಗಿನ ಜಾವದಿಂದ ನಕ್ಷತ್ರಗಳು ಕಾಣುವ ತನಕ ಈಟಿಗಳನ್ನು ಹಿಡಿದಿದ್ದರುನೆಹೆ 4:21
ವಚನಗಳು
ನೆಹೆ 4:21ಹೀಗೆ ನಾವು ಅರುಣೋದಯದಿಂದ ನಕ್ಷತ್ರಗಳು ಮೂಡುವವರೆಗೂ ಕೆಲಸ ಮಾಡುತ್ತಿದ್ದೆವು. ನನ್ನ ಸೇವಕರಲ್ಲಿ ಅರ್ಧ ಮಂದಿ ಬರ್ಜಿಯನ್ನು ಹಿಡಿದುಕೊಂಡಿದ್ದರು.
- ಮಧ್ಯರಾತ್ರಿಯಲ್ಲಿ ಸಂಸೋನನು ಗಾಜಾ ಪಟ್ಟಣದ ಬಾಗಿಲಿನ ಕದಗಳನ್ನು ಕಿತ್ತುಕೊಂಡನುನ್ಯಾಯ 16:3
ವಚನಗಳು
ನ್ಯಾಯ 16:3ಸಂಸೋನನು ಮಲಗಿ ಮಧ್ಯರಾತ್ರಿಯಲ್ಲೆದ್ದು ಊರು ಬಾಗಿಲಿನ ಕದಗಳನ್ನೂ, ಅದರ ಎರಡು ನಿಲುವುಪಟ್ಟಿಗಳನ್ನೂ, ಅಗುಳಿಗಳನ್ನೂ ಕಿತ್ತು, ಹೆಗಲ ಮೇಲೆ ಹೊತ್ತುಕೊಂಡು ಹೋಗಿ ಹೆಬ್ರೋನಿನ ಎದುರಿಗಿರುವ ಪರ್ವತ ಶಿಖರದ ಮೇಲೆ ಇಟ್ಟನು.
- ಮಧ್ಯರಾತ್ರಿಯಲ್ಲಿ ಬೋವಜನು ಎಚ್ಚರಗೊಂಡಾಗ ತನ್ನ ಕಾಲುಗಳ ಬಳಿ ಒಬ್ಬ ಸ್ತ್ರೀ ಮಲಗಿರುವುದನ್ನು ಕಂಡನುರೂತ 3:8
ವಚನಗಳು
ರೂತ 3:8ಮಧ್ಯರಾತ್ರಿಯಲ್ಲಿ ಎಚ್ಚರವಾದಾಗ ಬೋವಜನು ತನ್ನ ಕಾಲುಗಳ ಬಳಿಯಲ್ಲಿ ಮಲಗಿರುವ ಹೆಂಗಸನ್ನು ಕಂಡು,
- ಸುಮಾರು ಮಧ್ಯರಾತ್ರಿಯಲ್ಲಿ ಪೌಲನೂ ಸೀಲನೂ ಸೆರೆಮನೆಯಲ್ಲಿ ಪ್ರಾರ್ಥಿಸುತ್ತಾ ಕೀರ್ತನೆಗಳನ್ನು ಹಾಡುತ್ತಿದ್ದರುಅ. ಕೃ 16:25
ವಚನಗಳು
ಅ. ಕೃ 16:25ಮಧ್ಯರಾತ್ರಿಯಲ್ಲಿ ಪೌಲನೂ ಮತ್ತು ಸೀಲನೂ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಿದ್ದರು; ಸೆರೆಯಲ್ಲಿದ್ದವರು ಲಕ್ಷ್ಯವಿಟ್ಟು ಕೇಳುತ್ತಿದ್ದರು.
- ಪೌಲನು ಮಧ್ಯರಾತ್ರಿಯ ತನಕ ಮಾತನಾಡಿದನು, ಯೂತಿಖನು ಕಿಟಿಕಿಯಿಂದ ಬಿದ್ದನುಅ. ಕೃ 20:7, ಅ. ಕೃ 20:9
ವಚನಗಳು
ಅ. ಕೃ 20:7ವಾರದ ಮೊದಲನೆಯ ದಿನದಲ್ಲಿ ನಾವು ರೊಟ್ಟಿ ಮುರಿಯುವ ನಿಯಮಕ್ಕಾಗಿ ಸೇರಿಬಂದಾಗ ಪೌಲನು ಅಲ್ಲಿ ನೆರೆದಂತಹ ವಿಶ್ವಾಸಿಗಳಿಗೆ ಬೋಧನೆಮಾಡಿದನು. ಮರುದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಬೋಧಿಸುತ್ತಾ ಮಧ್ಯರಾತ್ರಿಯವರೆಗೂ ಉಪನ್ಯಾಸವನ್ನು ನೀಡಿದನು.
ಅ. ಕೃ 20:9ಯೂತಿಖನೆಂಬ ಒಬ್ಬ ಯೌವನಸ್ಥನು ಕಿಟಿಕಿಯ ಹೊಸ್ತಿಲಿನಲ್ಲಿ ಕುಳಿತುಕೊಂಡು ಗಾಢನಿದ್ರೆಯಿಂದ ತೂಕಡಿಸುತ್ತಿದ್ದನು. ಪೌಲನು ಇನ್ನೂ ಬೋಧನೆ ಮಾಡುತ್ತಾ ಇದ್ದಾಗ ಆ ಯೌವನಸ್ಥನು ಗಾಢವಾದ ನಿದ್ರೆಯಿಂದ ತೂಕಡಿಸಿ ಮೂರನೆಯ ಅಂತಸ್ತಿನಿಂದ ಕೆಳಕ್ಕೆ ಬಿದ್ದುಬಿಟ್ಟನು; ಅವನನ್ನು ಎಬ್ಬಿಸಲು ಹೋದಾಗ ಅವನು ಸತ್ತುಹೋಗಿದ್ದನು.
- ಕೋಳಿ ಎರಡನೆಯ ಸಾರಿ ಕೂಗಿತು, ಪೇತ್ರನಿಗೆ ಜ್ಞಾಪಕ ಬಂತುಮಾರ್ಕ 14:30, ಮಾರ್ಕ 14:72
ವಚನಗಳು
ಮಾರ್ಕ 14:30ಯೇಸುವು ಆತನಿಗೆ, “ಸತ್ಯವಾಗಿ ಹೇಳುತ್ತೇನೆ ಇಂದು ಈ ರಾತ್ರಿಯಲ್ಲಿಯೇ ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ನಿರಾಕರಿಸುವೆ” ಎಂದನು.
ಮಾರ್ಕ 14:72ಆಗ ಪೇತ್ರನು, “ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಬಾರಿ ನಿರಾಕರಿಸುವೆ” ಎಂದು ಯೇಸು ತನಗೆ ಹೇಳಿದ ಮಾತನ್ನು ನೆನಪಿಗೆ ಬಂದ ಕಾರಣ, ವ್ಯಥೆಪಟ್ಟು ದುಃಖಭರಿತನಾಗಿ ಅತ್ತನು.
- ವಾರದ ಮೊದಲನೆಯ ದಿನ ಬಹಳ ಮುಂಜಾನೆ, ಸೂರ್ಯೋದಯವಾದ ಕೂಡಲೆ ಅವರು ಸಮಾಧಿಗೆ ಹೋದರುಮಾರ್ಕ 16:2
ವಚನಗಳು
ಮಾರ್ಕ 16:2ಮತ್ತು ವಾರದ ಮೊದಲನೆಯ ದಿನದ ಬೆಳಿಗ್ಗೆ ಹೊತ್ತು ಮೂಡುವಾಗ ಅವರು ಸಮಾಧಿಯ ಬಳಿಗೆ ಬಂದರು.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು