Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ವಿಷಯಗಳು › ಗೋಪುರಗಳು ಮತ್ತು ಕಾವಲುಗೋಪುರಗಳು

ಆಶ್ಚರ್ಯಕರ ವಿವರಗಳು

ಬೈಬಲಿನಲ್ಲಿ ಗೋಪುರಗಳು ಮತ್ತು ಕಾವಲುಗೋಪುರಗಳು

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 30 ವಾಕ್ಯಭಾಗಗಳು, ಸಾಲು ಸಾಲಾಗಿ.

  • ಬಾಬೆಲಿನಲ್ಲಿ: ಆಕಾಶವನ್ನು ಮುಟ್ಟುವ ಗೋಪುರವುಳ್ಳ ಪಟ್ಟಣಆದಿ 11:4
    ವಚನಗಳು
    ಆದಿ 11:4ಅವರು, “ಬನ್ನಿರಿ, ಒಂದು ಪಟ್ಟಣವನ್ನು ಕಟ್ಟೋಣ, ಆಕಾಶವನ್ನು ಮುಟ್ಟುವ ಒಂದು ಗೋಪುರವನ್ನೂ ಕಟ್ಟಿ ದೊಡ್ಡ ಹೆಸರನ್ನು ಸಂಪಾದಿಸಿಕೊಳ್ಳೋಣ; ಹೀಗೆ ಮಾಡಿದರೆ ಭೂಮಿಯ ಮೇಲೆಲ್ಲಾ ಚದರಿಹೋಗುವುದಕ್ಕೆ ಆಸ್ಪದವಾಗುವುದಿಲ್ಲ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
  • ಪಟ್ಟಣವನ್ನೂ ಗೋಪುರವನ್ನೂ ನೋಡಲು ಯೆಹೋವನು ಇಳಿದುಬಂದನುಆದಿ 11:5
    ವಚನಗಳು
    ಆದಿ 11:5ಮನುಷ್ಯರು ಕಟ್ಟುತ್ತಿದ್ದ ಆ ಪಟ್ಟಣವನ್ನೂ, ಗೋಪುರವನ್ನೂ ನೋಡುವುದಕ್ಕೆ ಯೆಹೋವನು ಇಳಿದು ಬಂದನು.
  • ಅವರು ಪಟ್ಟಣವನ್ನು ಕಟ್ಟುವುದನ್ನು ನಿಲ್ಲಿಸಿದರು, ಅದಕ್ಕೆ ಬಾಬೆಲ್ ಎಂದು ಹೆಸರಾಯಿತುಆದಿ 11:8–9
    ವಚನಗಳು
    ಆದಿ 11:8–9ಯೆಹೋವನು ಅದೇ ಪ್ರಕಾರ ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿ ಬಿಟ್ಟನು. ಅವರು ಆ ಪಟ್ಟಣ ಕಟ್ಟುವುದನ್ನು ನಿಲ್ಲಿಸಿಬಿಟ್ಟರು. ಸಮಸ್ತ ಲೋಕದ ಭಾಷೆಯನ್ನು ಯೆಹೋವನು ಅಲ್ಲಿ ಗಲಿಬಿಲಿ ಮಾಡಿ, ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿದ್ದರಿಂದ ಆ ಪಟ್ಟಣಕ್ಕೆ ಬಾಬೆಲ್ (ದೇವರ ಬಾಗಿಲು) ಎಂಬ ಹೆಸರಾಯಿತು.
  • ಯಾಕೋಬನು ಮಿಗ್ದಲ್ ಏದರಿನ ಆಚೆಯಲ್ಲಿ ತನ್ನ ಗುಡಾರವನ್ನು ಹಾಕಿದನುಆದಿ 35:21
    ವಚನಗಳು
    ಆದಿ 35:21ಅಲ್ಲಿಂದ ಇಸ್ರಾಯೇಲನು ಪ್ರಯಾಣ ಮಾಡಿ ಮಿಗ್ದಲ್ ಏದರಿನ ಆಚೆಯಲ್ಲಿ ತನ್ನ ಗುಡಾರವನ್ನು ಹಾಕಿಸಿದನು.

ಯುದ್ಧದಲ್ಲಿ ಗೋಪುರಗಳು

  • ಗಿದ್ಯೋನನು ಪೆನೂವೇಲಿನ ಗೋಪುರವನ್ನು ಬೆದರಿಸಿ, ಆ ಮೇಲೆ ಅದನ್ನು ಕೆಡವಿದನುನ್ಯಾಯ 8:9, ನ್ಯಾಯ 8:17
    ವಚನಗಳು
    ನ್ಯಾಯ 8:9ಗಿದ್ಯೋನನು ಅವರಿಗೆ, “ನಾನು ಸುರಕ್ಷಿತವಾಗಿ ಹಿಂದಿರುಗಿ ಬಂದಾಗ ಈ ಬುರುಜನ್ನು ಕೆಡವಿಬಿಡುವೆನು” ಅಂದನು.
    ನ್ಯಾಯ 8:17ಮತ್ತು ಪೆನೂವೇಲಿನ ಬುರುಜನ್ನು ಕೆಡವಿಬಿಟ್ಟು ಆ ಊರಿನ ಜನರನ್ನು ಸಂಹರಿಸಿದನು.
  • ಅಬೀಮೆಲೆಕನು ಶೆಕೆಮಿನ ಗೋಪುರವನ್ನು ಸುಟ್ಟಾಗ ಸುಮಾರು ಸಾವಿರ ಜನರು ಸತ್ತರುನ್ಯಾಯ 9:46, ನ್ಯಾಯ 9:49
    ವಚನಗಳು
    ನ್ಯಾಯ 9:46ಶೆಕೆಮಿನ ಕೋಟೆಯವರು ಇದನ್ನು ಕೇಳಿ ಏಲ್‌ಬೆರೀತೆ ಎಂಬ ದೇವರ ಗುಡಿಯ ನೆಲಮನೆಯಲ್ಲಿ ಅಡಗಿಕೊಂಡರು.
    ನ್ಯಾಯ 9:49ಅವರೂ ಅದರಂತೆಯೇ ಮಾಡಿ, ಅವನ ಹಿಂದೆ ಹೋಗಿ, ಆ ಕೊಂಬೆಗಳನ್ನು ಅವರಿದ್ದ ನೆಲಮನೆಯ ಸುತ್ತಲೂ ಹಾಕಿ, ಬೆಂಕಿಹೊತ್ತಿಸಿ ಅದನ್ನು ಸುಟ್ಟುಬಿಟ್ಟರು. ಹೀಗೆ ಶೆಕೆಮ್‌ ಕೋಟೆಯವರೆಲ್ಲರೂ ಸತ್ತರು. ಅವರ ಸ್ತ್ರೀಪುರುಷರೆಲ್ಲಾ ಸುಮಾರು ಸಾವಿರ ಜನರಿದ್ದರು.
  • ತೇಬೇಚಿನಲ್ಲಿ ಜನರು ಒಂದು ಬಲವಾದ ಗೋಪುರದಲ್ಲಿ ತಮ್ಮನ್ನು ಬೀಗ ಹಾಕಿಕೊಂಡರುನ್ಯಾಯ 9:50–52
    ವಚನಗಳು
    ನ್ಯಾಯ 9:50–52ಅನಂತರ ಅಬೀಮೆಲೆಕನು ತೇಬೇಚಿಗೆ ಹೋಗಿ ಮುತ್ತಿಗೆಹಾಕಿ ಅದನ್ನು ಹಿಡಿದನು. ಆ ಊರಿನ ಮಧ್ಯದಲ್ಲಿ ಒಂದು ಭದ್ರವಾದ ಬುರುಜು ಇತ್ತು; ಊರಿನ ಸ್ತ್ರೀಪುರುಷರೆಲ್ಲರೂ ಓಡಿಹೋಗಿ, ಅದರೊಳಗೆ ಹೊಕ್ಕು, ಬಾಗಿಲನ್ನು ಮುಚ್ಚಿಕೊಂಡು ಮೇಲೆ ಹತ್ತಿದರು. ಅಬೀಮೆಲೆಕನು ಅಲ್ಲಿಗೆ ಬಂದು ಯುದ್ಧಮಾಡುತ್ತಾ ಬುರುಜಿನ ಬಾಗಿಲಿಗೆ ಬೆಂಕಿ ಹೊತ್ತಿಸಬೇಕೆಂದು ಅದರ ಸಮೀಪಕ್ಕೆ ಹೋಗಲು,
  • ಅದರ ಮಾಳಿಗೆಯಿಂದ ಒಬ್ಬ ಸ್ತ್ರೀಯು ಅಬೀಮೆಲೆಕನ ಮೇಲೆ ಬೀಸುವ ಕಲ್ಲನ್ನು ಹಾಕಿದಳುನ್ಯಾಯ 9:53
    ವಚನಗಳು
    ನ್ಯಾಯ 9:53ಒಬ್ಬ ಸ್ತ್ರೀಯು ಮೇಲಿನಿಂದ ಒಂದು ಬೀಸುವ ಕಲ್ಲನ್ನು ಬೀಳಿಸಿ, ಅವನ ತಲೆಬುರುಡೆಯನ್ನು ಒಡೆದುಬಿಟ್ಟಳು.
  • ಇಜ್ರೇಲಿನ ಗೋಪುರದ ಮೇಲಿದ್ದ ಕಾವಲುಗಾರನು ಯೇಹುವಿನ ದಂಡು ಬರುವುದನ್ನು ಕಂಡನು2 ಅರಸು 9:17
    ವಚನಗಳು
    2 ಅರಸು 9:17ಇಜ್ರೇಲಿನ ಬುರುಜಿನಲ್ಲಿದ್ದ ಕಾವಲುಗಾರರು ಯೇಹುವಿನ ಗುಂಪಿನವರನ್ನು ಕಂಡು, “ಜನರ ಒಂದು ಗುಂಪು ಬರುವುದು ಕಾಣಿಸುತ್ತದೆ” ಎಂದು ಯೋರಾಮನಿಗೆ ತಿಳಿಸಿದನು. ಯೋರಾಮನು ಅವನಿಗೆ, “ನೀನು ಒಬ್ಬ ರಾಹುತನನ್ನು ಕರೆದು ಬರುತ್ತಿರುವವರು ಶುಭವಾರ್ತೆಯನ್ನು ತರುತ್ತಿದ್ದಾರೊ? ಎಂದು ಕೇಳುವುದಕ್ಕಾಗಿ ಕಳುಹಿಸು” ಎಂಬುದಾಗಿ ಆಜ್ಞಾಪಿಸಿದನು.
  • ‘ಕಾವಲುಗಾರರ ಗೋಪುರವುಳ್ಳ ಚಿಕ್ಕ ಊರು ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಪಟ್ಟಣದವರೆಗೆ’2 ಅರಸು 17:9, 2 ಅರಸು 18:8
    ವಚನಗಳು
    2 ಅರಸು 17:9ಇಸ್ರಾಯೇಲರು ತಮ್ಮ ದೇವರಾದ ಯೆಹೋವನಿಗೆ ವಿರುದ್ಧವಾದ ಗುಪ್ತವಾದ ದುಷ್ಟ ಕೃತ್ಯಗಳನ್ನು ನಡಿಸಿದರು. ಕಾವಲುಗಾರರ ಗೋಪುರವುಳ್ಳ ಚಿಕ್ಕ ಊರು ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಪಟ್ಟಣದವರೆಗಿರುವ ಎಲ್ಲಾ ಊರುಗಳಲ್ಲಿ ತಮಗೋಸ್ಕರ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು.
    2 ಅರಸು 18:8ಗಾಜ ಪ್ರಾಂತ್ಯದವರೆಗೆ ವಾಸವಾಗಿದ್ದ ಫಿಲಿಷ್ಟಿಯರನ್ನು ಸೋಲಿಸಿ, ಕಾವಲುಗಾರರ ಗೋಪುರ ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಚಿಕ್ಕಗ್ರಾಮ ಮೊದಲುಗೊಂಡು ಮಹಾನಗರಗಳವರೆಗೂ ಎಲ್ಲಾ ಊರುಗಳನ್ನು ನಾಶಮಾಡಿದನು.

ಗೋಪುರಗಳನ್ನು ಕಟ್ಟಿದ ಅರಸರು

  • ಆಸನು: ಗೋಡೆಗಳೂ ಗೋಪುರಗಳೂ ಕದಗಳೂ ಅಗುಳಿಗಳೂ ಇರುವ ಪಟ್ಟಣಗಳು2 ಪೂರ್ವ 14:7
    ವಚನಗಳು
    2 ಪೂರ್ವ 14:7ಇವನು ಯೆಹೂದ್ಯರಿಗೆ, “ನಾವು ನಮ್ಮ ದೇವರಾದ ಯೆಹೋವನನ್ನು ಆಶ್ರಯಿಸಿಕೊಂಡ ಕಾರಣ ಆತನ ಅನುಗ್ರಹದಿಂದ ಸುತ್ತಣ ವೈರಿಗಳ ಭಯ ತಪ್ಪಿ ದೇಶವು ಇನ್ನೂ ನಿರಾತಂಕವಾಗಿರುತ್ತದೆ. ಆದುದರಿಂದ ನಾವು ಪಟ್ಟಣಗಳನ್ನು ಕಟ್ಟಿ, ಅವುಗಳನ್ನು ಸುತ್ತಣ ಗೋಡೆ, ಗೋಪುರ, ಬುರುಜು ಬಾಗಿಲು, ಅಗುಳಿ ಇವುಗಳಿಂದ ಭದ್ರಪಡಿಸೋಣ” ಎನ್ನಲಾಗಿ ಅವರು ಅವುಗಳನ್ನು ಚೆನ್ನಾಗಿ ಕಟ್ಟಿ ಮುಗಿಸಿದರು.
  • ಉಜ್ಜೀಯನು ಯೆರೂಸಲೇಮಿನ ಬಾಗಿಲುಗಳಲ್ಲಿಯೂ ಅರಣ್ಯದಲ್ಲಿಯೂ ಗೋಪುರಗಳನ್ನು ಕಟ್ಟಿಸಿದನು2 ಪೂರ್ವ 26:9–10
    ವಚನಗಳು
    2 ಪೂರ್ವ 26:9–10ಉಜ್ಜೀಯನು ಯೆರೂಸಲೇಮಿನಲ್ಲಿ ಮೂಲೆಬಾಗಿಲು, ತಗ್ಗಿನ ಬಾಗಿಲು, ಗೋಡೆ ತಿರುಗುವ ಭಾಗಗಳ ಮೇಲೆ ಗೋಪುರಗಳನ್ನು ಕಟ್ಟಿಸಿ ಭದ್ರಗೊಳಿಸಿದನು. ಅವನಿಗೆ ಇಳಿಜಾರಿನ ಪ್ರದೇಶದಲ್ಲಿಯೂ, ತಪ್ಪಲ ಸೀಮೆಯಲ್ಲಿಯೂ ಅಲ್ಲದೆ ಅಡವಿಯಲ್ಲಿಯೂ ಪಶುಗಳ ದೊಡ್ಡ ಮಂದೆಗಳು ಇದ್ದವು. ಆದುದರಿಂದ ಆ ಅಡವಿಯಲ್ಲಿ ಗೋಪುರಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿದನು. ಅವನಿಗೆ ವ್ಯವಸಾಯದಲ್ಲಿ ಬಹಳ ಅಭಿರುಚಿ ಇದ್ದುದರಿಂದ ಗುಡ್ಡ, ಫಲವತ್ತಾದ ಬಯಲು, ಇವುಗಳಲ್ಲಿ ಹೊಲ ಹಾಗು ದ್ರಾಕ್ಷಿ ತೋಟಗಳಲ್ಲಿ ಕೆಲಸಗಾರರನ್ನು ನೇಮಿಸಿದನು.
  • ಉಜ್ಜೀಯನ ಯಂತ್ರಗಳು ಗೋಪುರಗಳಿಂದ ಬಾಣಗಳನ್ನೂ ಕಲ್ಲುಗಳನ್ನೂ ಎಸೆಯುತ್ತಿದ್ದವು2 ಪೂರ್ವ 26:15
    ವಚನಗಳು
    2 ಪೂರ್ವ 26:15ಇದಲ್ಲದೆ, ಅವನು ಬಾಣಗಳನ್ನೂ, ದೊಡ್ಡ ಕಲ್ಲುಗಳನ್ನು ಬಳಸುವುದಕ್ಕಾಗಿ, ತಜ್ಞರ ಆಜ್ಞೆಯ ಮೇರೆಗೆ ಯಂತ್ರಗಳನ್ನೂ ಮಾಡಿಸಿ, ಅವುಗಳನ್ನು ಯೆರೂಸಲೇಮಿನ ಗೋಪುರಗಳ ಮೇಲೆಯೂ, ಕೋಟೆಕೊತ್ತಲಗಳನ್ನು ಮೇಲೆಯೂ ಇಡಿಸಿದ್ದನು. ಅವನು ಬಲಿಷ್ಠನಾಗುವ ಹಾಗೆ ದೇವರ ಅತಿಶಯವಾದ ಸಹಾಯವು ಆಶ್ಚರ್ಯವಾದ ರೀತಿಯಲ್ಲಿ ಅವನಿಗೆ ದೊರೆಯುತ್ತಿದ್ದುದರಿಂದ; ಅವನ ಕೀರ್ತಿಯೂ ಬಹು ದೂರದ ಮೇರೆಯವರೆಗೂ ಹಬ್ಬಿತು.
  • ಯೋತಾಮನು ಕಾಡುಗಳಲ್ಲಿ ಕೋಟೆಗಳನ್ನೂ ಗೋಪುರಗಳನ್ನೂ ಕಟ್ಟಿಸಿದನು2 ಪೂರ್ವ 27:4
    ವಚನಗಳು
    2 ಪೂರ್ವ 27:4ಇದಲ್ಲದೆ, ಇವನು ಯೆಹೂದ ಪರ್ವತ ಪ್ರದೇಶದಲ್ಲಿ ಪಟ್ಟಣಗಳನ್ನೂ, ಕಾಡುಗಳಲ್ಲಿ ದುರ್ಗಗಳನ್ನೂ, ಗೋಪುರಗಳನ್ನೂ ಕಟ್ಟಿಸಿದನು.
  • ಹಿಜ್ಕೀಯನು ಬಿದ್ದುಹೋದ ಗೋಡೆಯನ್ನು ಪುನಃ ಕಟ್ಟಿಸಿ ಅದರ ಮೇಲೆ ಗೋಪುರಗಳನ್ನು ಎಬ್ಬಿಸಿದನು2 ಪೂರ್ವ 32:5
    ವಚನಗಳು
    2 ಪೂರ್ವ 32:5ಇದರಿಂದ ಅರಸನು ಧ್ಯೆರ್ಯಗೊಂಡು, ಅಲ್ಲಲ್ಲಿ ಬಿದ್ದುಹೋಗಿದ್ದ ಪೌಳಿಗೋಡೆಯನ್ನು ಜೀರ್ಣೋದ್ಧಾರ ಮಾಡಿಸಿ, ಅದರ ಮೇಲೆ ಗೋಪುರಗಳನ್ನೂ, ಹೊರಗೆ ಇನ್ನೊಂದು ಗೋಡೆಯನ್ನೂ ಕಟ್ಟಿಸಿದನು. ದಾವೀದನಗರದ ಮಿಲ್ಲೋ ಕೋಟೆಯನ್ನು ಭದ್ರಪಡಿಸಿದಲ್ಲದೆ. ಅನೇಕ ಆಯುಧಗಳನ್ನೂ, ಗುರಾಣಿಗಳನ್ನೂ ಮಾಡಿಸಿದನು.

ಯೆರೂಸಲೇಮಿನ ಗೋಪುರಗಳು

  • ಹಮ್ಮೆಯಾ ಗೋಪುರ ಮತ್ತು ಹನನೇಲ್ ಗೋಪುರನೆಹೆ 3:1, ನೆಹೆ 12:39
    ವಚನಗಳು
    ನೆಹೆ 3:1ಹೀಗೆ ಮಹಾಯಾಜಕನಾದ ಎಲ್ಯಾಷೀಬನೂ ಅವನ ಕುಟುಂಬದ ಯಾಜಕರೂ ಕುರಿಬಾಗಿಲನ್ನು ಕಟ್ಟಿ ಅದನ್ನು ಪ್ರತಿಷ್ಠಿಸಿ ಅದಕ್ಕೆ ಬಾಗಿಲುಗಳನ್ನು ಇಟ್ಟರು. ಅಲ್ಲಿಂದ ಹಮ್ಮೆಯಾ ಗೋಪುರದವರೆಗೆ ಗೋಡೆಕಟ್ಟಿ ಅದನ್ನು ಪ್ರತಿಷ್ಠಿಸಿದರು. ಅಲ್ಲಿಂದ ಹನನೇಲ್ ಗೋಪುರದವರೆಗೂ ಕಟ್ಟಿದರು.
    ನೆಹೆ 12:39ಅಲ್ಲಿಂದ ಎಫ್ರಾಯೀಮ್ ಬಾಗಿಲು, ಯೆಷಾನಾ ಬಾಗಿಲು, ಮೀನು ಬಾಗಿಲು, ಹನನೇಲ್ ಗೋಪುರ, ಹಮ್ಮೇಯಾ ಬುರುಜು ಇವುಗಳ ಮಾರ್ಗವಾಗಿ ಕುರಿ ಬಾಗಿಲಿನವರೆಗೂ ಹೋಗಿ ಸೆರೆಮನೆಯ ಬಾಗಿಲಿನ ಬಳಿಯಲ್ಲಿ ನಿಂತೆವು.
  • ಒಲೆಬುರುಜುನೆಹೆ 3:11, ನೆಹೆ 12:38
    ವಚನಗಳು
    ನೆಹೆ 3:11ಗೋಡೆಯ ಇನ್ನೊಂದು ಭಾಗವನ್ನೂ ಒಲೆಬುರುಜನ್ನೂ ಜೀರ್ಣೋದ್ಧಾರ ಮಾಡಿದವರು ಹಾರೀಮನ ಮಗನಾದ ಮಲ್ಕೀಯನೂ, ಪಹತ್ ಮೋವಾಬ್ಯನ ಮಗನಾದ ಹಷ್ಷೂಬನು.
    ನೆಹೆ 12:38ಅವರನ್ನು ಎದುರುಗೊಳ್ಳುವ ಹಾಗೆ ಆರಾಧನೆ ಮಂಡಳಿಯ ಎರಡನೆಯ ಗುಂಪಿನವರೂ, ನಾನೂ, ಉಳಿದ ಅರ್ಧಜನರೂ ಗೋಡೆಯ ಮೇಲೆ ಒಲೆಬುರುಜಿನಿಂದ ಅಗಲವಾದ ಗೋಡೆಯವರೆಗೂ
  • ಓಫೇಲಿನ ಗೋಡೆಯ ಬಳಿ ಮುಂದಕ್ಕೆ ಚಾಚಿರುವ ದೊಡ್ಡ ಗೋಪುರನೆಹೆ 3:25–27
    ವಚನಗಳು
    ನೆಹೆ 3:25–27ಸೆರೆಮನೆಯ ಅಂಗಳದ ಹತ್ತಿರವಿದ್ದ ಅರಸನ ಅರಮನೆಯ ಮೇಲಿನ ಗೋಡೆಯನ್ನು ಮೀರಿನಿಂತಿರುವ ಮೂಲೆ ಗೋಪುರದ ಎದುರಿನ ಭಾಗವನ್ನು ಊಜೈಯನ ಮಗನಾದ ಪಾಲಾಲನೂ. ಇವನ ನಂತರ ಪರೋಷನ ಮಗನಾದ ಪೆದಾಯನೂ ಜೀರ್ಣೋದ್ಧಾರ ಮಾಡಿದರು. ಈಗ ಮೂಲೆ ಗೋಪುರ ಮತ್ತು ನೀರು ಬಾಗಿಲಿನ ಪೂರ್ವದಿಕ್ಕಿಗಿರುವ ಓಫೇಲ್ ಗುಡ್ಡವು ದೇವಾಲಯದ ಸೇವಕರ ವಾಸಸ್ಥಾನವಾಗಿತ್ತು. ಆ ದೊಡ್ಡ ಮೂಲೆ ಗೋಪುರದ ಎದುರಿನಿಂದ ಓಫೇಲ್ ಗೋಡೆಯವರೆಗಿರುವ ಗೋಡೆಯ ಇನ್ನೊಂದು ಭಾಗವನ್ನು ತೆಕೋವದವರು ಜೀರ್ಣೋದ್ಧಾರ ಮಾಡಿದರು.
  • ಸಿಲೊವಾಮಿನ ಗೋಪುರವು ಬಿದ್ದಾಗ ಹದಿನೆಂಟು ಜನರು ಸತ್ತರುಲೂಕ 13:4
    ವಚನಗಳು
    ಲೂಕ 13:4ಇಲ್ಲವೆ ಸಿಲೊವಾಮಿನಲ್ಲಿ ಗೋಪುರ ಬಿದ್ದು ಸತ್ತ ಆ ಹದಿನೆಂಟು ಮಂದಿಯು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಕೆಟ್ಟವರೆಂದು ನೀವು ಭಾವಿಸುತ್ತೀರೋ?

ದ್ರಾಕ್ಷಿತೋಟಗಳು ಮತ್ತು ನುಡಿಗಳು

  • ದ್ರಾಕ್ಷಿತೋಟದ ಯಜಮಾನನು ಕಾವಲುಗೋಪುರವನ್ನು ಕಟ್ಟಿ ದ್ರಾಕ್ಷಿಯ ಆಲೆಯನ್ನು ತೋಡುತ್ತಾನೆಯೆಶಾ 5:2, ಮತ್ತಾ 21:33
    ವಚನಗಳು
    ಯೆಶಾ 5:2ಅವನು ಅದನ್ನು ಅಗೆದು, ಕಲ್ಲುಗಳನ್ನು ತೆಗೆದುಹಾಕಿ, ಒಳ್ಳೆಯ ದ್ರಾಕ್ಷಿಯ ಸಸಿಗಳನ್ನು ನೆಟ್ಟು, ಮಧ್ಯದಲ್ಲಿ ಗೋಪುರವನ್ನು ಕಟ್ಟಿ, ದ್ರಾಕ್ಷಿಯ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆಯ ಸಿಹಿ ದ್ರಾಕ್ಷಿಯ ಹಣ್ಣನ್ನು ಕೊಡುವುದೆಂದು ಎದುರುನೋಡುತ್ತಿರಲು, ಅದು ಹುಳಿ ಹಣ್ಣನ್ನು ಕೊಟ್ಟಿತು.
    ಮತ್ತಾ 21:33“ಮತ್ತೊಂದು ಸಾಮ್ಯವನ್ನು ಕೇಳಿರಿ, ಒಬ್ಬ ಮನೆಯ ಯಜಮಾನನಿದ್ದನು. ಅವನು ಒಂದು ದ್ರಾಕ್ಷಾತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿಸಿ, ಅದರಲ್ಲಿ ದ್ರಾಕ್ಷಿಯ ಗಾಣವನ್ನು ಹಾಕಿಸಿ, ಕಾವಲು ಗೋಪುರವನ್ನು ಕಟ್ಟಿಸಿ, ದ್ರಾಕ್ಷಿಯ ತೋಟಗಾರರಿಗೆ ಅದನ್ನು ಗುತ್ತಿಗೆಗೆ ಕೊಟ್ಟು, ಅವನು ಬೇರೊಂದು ದೇಶಕ್ಕೆ ಹೋದನು.
  • ಯೇಸು: ಗೋಪುರವನ್ನು ಕಟ್ಟುವ ಮೊದಲು ಖರ್ಚನ್ನು ಲೆಕ್ಕಿಸುಲೂಕ 14:28–30
    ವಚನಗಳು
    ಲೂಕ 14:28–30ನಿಮ್ಮಲ್ಲಿ ಯಾವನಾದರೂ ಒಂದು ಗೋಪುರವನ್ನು ಕಟ್ಟಿಸಬೇಕೆಂದು ಯೋಚಿಸಿದರೆ ಅವನು ಮೊದಲು ಕುಳಿತುಕೊಂಡು, ಅದಕ್ಕೆ ಎಷ್ಟು ಖರ್ಚು ಆದೀತು, ಅದನ್ನು ತೀರಿಸುವುದಕ್ಕೆ ಸಾಕಾಗುವಷ್ಟು ಹಣ ನನ್ನಲ್ಲಿ ಇದೆಯೋ ಎಂದು ಲೆಕ್ಕಮಾಡುವುದಿಲ್ಲವೇ? ಹೀಗೆ ಲೆಕ್ಕಮಾಡದೆ ಅದಕ್ಕೆ ಅಸ್ತಿವಾರ ಹಾಕಿದ ಮೇಲೆ ಆ ಕೆಲಸವನ್ನು ಪೂರೈಸಲಾರದೆ ಹೋದರೆ ನೋಡುವವರೆಲ್ಲರು, ‘ಈ ಮನುಷ್ಯನು ಕಟ್ಟಿಸುವುದಕ್ಕಂತೂ ತೊಡಗಿದನು, ಕೆಲಸಪೂರೈಸಲಾರದೆ ಹೋದನು’ ಎಂದು ಅವನನ್ನು ಹಾಸ್ಯಮಾಡಾರು.
  • ಒಬ್ಬ ಕಾವಲುಗಾರನು: ದಿನದಿನವೂ ನಾನು ಕಾವಲುಗೋಪುರದ ಮೇಲೆ ನಿಲ್ಲುತ್ತೇನೆಯೆಶಾ 21:8
    ವಚನಗಳು
    ಯೆಶಾ 21:8ಬಳಿಕ ಅವನು ಸಿಂಹದಂತೆ ಕೂಗಿ, “ಕರ್ತನೇ, ಪ್ರತಿ ದಿನವು ನಾನು ಕಾವಲಿನ ಬುರುಜಿನ ಮೇಲೆ ನಿಂತಿದ್ದೇನೆ, ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ.
  • ಪರಮಗೀತೆ: ನಿನ್ನ ಕೊರಳು ದಾವೀದನ ಗೋಪುರದಂತಿದೆಪ.ಗೀ 4:4, ಪ.ಗೀ 7:4
    ವಚನಗಳು
    ಪ.ಗೀ 4:4ನಿನ್ನ ಕೊರಳು ದಾವೀದನು ಕಟ್ಟಿಸಿದ ನುಣುಪಾದ ಗೋಪುರದಂತಿದೆ, ನಿನ್ನ ಕತ್ತಿನ ಹಾರ ಸಾವಿರ ಶೂರರ ಗುರಾಣಿಗಳನ್ನು ನೇತುಹಾಕಿರುವ ದಾವೀದನ ಬುರುಜಿನ ಹಾಗಿದೆ.
    ಪ.ಗೀ 7:4ನಿನ್ನ ಕೊರಳು ದಂತದ ಗೋಪುರ, ನಿನ್ನ ನೇತ್ರಗಳು ಹೆಷ್ಬೋನಿನಲ್ಲಿನ ಬತ್ ರಬ್ಬೀಮ್ ಬಾಗಿಲ ಬಳಿಯ ಕೊಳಗಳಂತಿವೆ. ನಿನ್ನ ಮೂಗು ದಮಸ್ಕದ ಕಡೆಗಿರುವ ಲೆಬನೋನಿನ ಬುರುಜಿನಂತಿದೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು