Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ವಿಷಯಗಳು › ವ್ಯಾಪಾರ ಮತ್ತು ವರ್ತಕರು

ದೈನಂದಿನ ಜೀವನ

ಬೈಬಲಿನಲ್ಲಿ ವ್ಯಾಪಾರ ಮತ್ತು ವರ್ತಕರು

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 37 ವಾಕ್ಯಭಾಗಗಳು, ಸಾಲು ಸಾಲಾಗಿ.

  • ಅಬ್ರಹಾಮನು “ವರ್ತಕರಲ್ಲಿ ಸಲ್ಲುವ ಬೆಳ್ಳಿಯಿಂದ” ತೂಕಮಾಡಿ ಕೊಡುತ್ತಾನೆಆದಿ 23:16
    ವಚನಗಳು
    ಆದಿ 23:16ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿದನು. ಎಫ್ರೋನನು ಹಿತ್ತಿಯರ ಎದುರಿನಲ್ಲಿ ಹೇಳಿದ ನಾನೂರು ನಾಣ್ಯಗಳನ್ನು ಅಬ್ರಹಾಮನು ವರ್ತಕರಲ್ಲಿ ಸಲ್ಲುವ ಬೆಳ್ಳಿಯಿಂದ ತೂಕ ಮಾಡಿಕೊಟ್ಟನು.
  • ಇಷ್ಮಾಯೇಲ್ಯರ ವರ್ತಕರ ಗುಂಪು ಸುಗಂಧದ್ರವ್ಯ, ಮುಲಾಮು ಮತ್ತು ರಕ್ತಬೋಳವನ್ನು ಐಗುಪ್ತಕ್ಕೆ ಒಯ್ಯುತ್ತದೆಆದಿ 37:25
    ವಚನಗಳು
    ಆದಿ 37:25ಆ ಮೇಲೆ ಅವರು ಊಟಕ್ಕೆ ಕುಳಿತುಕೊಂಡಾಗ ಅವರು ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ, ಇಷ್ಮಾಯೇಲರ ಗುಂಪು ಒಂಟೆಗಳ ಮೇಲೆ ಪರಿಮಳ ದ್ರವ್ಯ, ಸುಗಂಧ ತೈಲ, ರಕ್ತಬೋಳ, ಇವುಗಳನ್ನು ಹೇರಿಕೊಂಡು ಗಿಲ್ಯಾದಿನಿಂದ ಐಗುಪ್ತದೇಶಕ್ಕೆ ಪ್ರಯಾಣಮಾಡುತ್ತಾ ಬರುವುದನ್ನು ಕಂಡರು.
  • ಯೋಸೇಫನನ್ನು ಇಪ್ಪತ್ತು ಶೆಕೆಲ್ ಬೆಳ್ಳಿಗೆ ವರ್ತಕರಿಗೆ ಮಾರಲಾಗುತ್ತದೆಆದಿ 37:28, ಆದಿ 37:36
    ವಚನಗಳು
    ಆದಿ 37:28ಅಷ್ಟರಲ್ಲಿ ಮಿದ್ಯಾನ್ಯರಾದ ವರ್ತಕರು ಹಾದುಹೋಗುತ್ತಿದ್ದರು. ಅವರು ಯೋಸೇಫನನ್ನು ಗುಂಡಿಯೊಳಗಿಂದ ಮೇಲೆ ಎತ್ತಿ ಆ ಇಷ್ಮಾಯೇಲ್ಯರಿಗೆ ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಅವನನ್ನು ಮಾರಿದರು. ಅವರು ಅವನನ್ನು ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದರು.
    ಆದಿ 37:36ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ತೆಗೆದುಕೊಂಡು ಹೋಗಿ ಐಗುಪ್ತ ದೇಶದ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದರು. ಇವನು ಅರಸನ ಮೈಗಾವಲಿನವರ ದಳಪತಿಯೂ ಆಗಿದ್ದನು.
  • ಹೀರಾಮನು ದೇವದಾರು ಮತ್ತು ತುರಾಯಿ ಮರವನ್ನು ಕಳುಹಿಸುತ್ತಾನೆ; ಸೊಲೊಮೋನನು ಗೋದಿಯನ್ನೂ ಎಣ್ಣೆಯನ್ನೂ ಕೊಡುತ್ತಾನೆ1 ಅರಸು 5:8–11, 2 ಪೂರ್ವ 2:15
    ವಚನಗಳು
    1 ಅರಸು 5:8–11ಇದಲ್ಲದೆ ಅವನು ಸೊಲೊಮೋನನಿಗೆ, “ನೀನು ಹೇಳಿಕಳುಹಿಸಿದ್ದನ್ನು ಕೇಳಿದೆನು. ದೇವದಾರು ವೃಕ್ಷಗಳನ್ನೂ, ತುರಾಯಿ ಮರಗಳನ್ನೂ ಕುರಿತು ನಿನ್ನ ಅಪೇಕ್ಷೆಯನ್ನು ನೆರವೇರಿಸುವೆನು. ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತೆಗೆದುಕೊಂಡು ಹೋಗುವರು. ನಾನು ಅವುಗಳನ್ನು ತೆಪ್ಪವನ್ನಾಗಿ ಕಟ್ಟಿಸಿ, ಸಮುದ್ರ ಮಾರ್ಗವಾಗಿ ನೀನು ನೇಮಿಸುವ ಸ್ಥಳಕ್ಕೆ ಕಳುಹಿಸಿ, ಅಲ್ಲಿ ಬಿಚ್ಚಿಸಿಕೊಡುವೆನು. ನೀನು ಅವುಗಳನ್ನು ತೆಗೆದುಕೊಂಡು ಅವುಗಳಿಗೆ ಬದಲಾಗಿ ನನ್ನ ಮನೆಯವರಿಗೆ ಆಹಾರ ಪದಾರ್ಥಗಳನ್ನು ಕೊಡಬೇಕೆಂಬುದೇ ನನ್ನ ಅಪೇಕ್ಷೆಯಾಗಿದೆ” ಎಂದು ಹೇಳಿ ಕಳುಹಿಸಿದನು. ಹೀಗೆ ಹೀರಾಮನು ಸೊಲೊಮೋನನಿಗೆ ಬೇಕಾದಷ್ಟು ದೇವದಾರು ಮರಗಳನ್ನೂ ಮತ್ತು ತುರಾಯಿ ಮರಗಳನ್ನೂ ಕೊಡುತ್ತಿದ್ದನು. ಸೊಲೊಮೋನನಾದರೋ ಪ್ರತಿ ವರ್ಷ ಅವನ ಮನೆಯವರ ಆಹಾರಕ್ಕಾಗಿ ಇಪ್ಪತ್ತು ಸಾವಿರ ಕೋರ್ ಗೋದಿಯನ್ನೂ, ಇಪ್ಪತ್ತು ಕೋರ್ ನಿರ್ಮಲವಾದ ಎಣ್ಣೆಯನ್ನೂ ಕೊಡುತ್ತಿದ್ದನು.
    2 ಪೂರ್ವ 2:15ಈಗ ನನ್ನ ಒಡೆಯನು ಹೇಳಿದ ಮೇರೆಗೆ ಆ ಗೋದಿಯನ್ನು, ಜವೆಗೋದಿಯನ್ನು, ಎಣ್ಣೆಯನ್ನು, ದ್ರಾಕ್ಷಾರಸವನ್ನು ತನ್ನ ಸೇವಕರಿಗೆ ಕಳುಹಿಸಿಕೊಡಲಿ.
  • ಸೊಲೊಮೋನನ ಹಡಗುಗಳು ಓಫೀರಿನಿಂದ 420 ತಲಾಂತು ಬಂಗಾರವನ್ನು ತರುತ್ತವೆ1 ಅರಸು 9:26–28
    ವಚನಗಳು
    1 ಅರಸು 9:26–28ಇದಲ್ಲದೆ ಅರಸನಾದ ಸೊಲೊಮೋನನು ಎದೋಮ್ ದೇಶದಲ್ಲಿ ಏಲೋತಿನ ಹತ್ತಿರ ಕೆಂಪುಸಮುದ್ರದ ತೀರದಲ್ಲಿರುವ ಎಚ್ಯೋನ್ಗೆಬೆರಿನಲ್ಲಿ ಹಡಗುಗಳನ್ನು ಕಟ್ಟಿಸಿದನು. ಹೀರಾಮನು ಸಮುದ್ರ ಪ್ರಯಾಣದಲ್ಲಿ ನಿಪುಣರಾದ ತನ್ನ ನಾವಿಕರನ್ನು ಸೊಲೊಮೋನನ ಸೇವಕರೊಡನೆ ಆ ಹಡಗುಗಳಲ್ಲಿ ಕಳುಹಿಸಿದನು. ಅವರು ಓಫೀರಿಗೆ ಪ್ರಯಾಣಮಾಡಿ ಅಲ್ಲಿಂದ ಅರಸನಾದ ಸೊಲೊಮೋನನಿಗೆ ನಾನೂರಿಪ್ಪತ್ತು ತಲಾಂತು ಬಂಗಾರವನ್ನು ತೆಗೆದುಕೊಂಡು ಬಂದರು.
  • ಸೊಲೊಮೋನನಿಗೆ ವರ್ತಕರಿಂದಲೂ ವ್ಯಾಪಾರಿಗಳಿಂದಲೂ ಆದಾಯ ಬರುತ್ತದೆ1 ಅರಸು 10:15, 2 ಪೂರ್ವ 9:14
    ವಚನಗಳು
    1 ಅರಸು 10:15ಅದರ ಜೊತೆಗೆ ದೇಶಾಂತರ ವ್ಯಾಪಾರಿಗಳೂ, ವರ್ತಕರೂ, ಅರಬಿಯ ಅರಸರೂ, ಪ್ರದೇಶಾಧಿಪತಿಗಳೂ ಸಹ ಸೊಲೊಮೋನನಿಗೆ ಬೆಳ್ಳಿ ಬಂಗಾರವನ್ನು ಕೊಡುತ್ತಿದ್ದರು.
    2 ಪೂರ್ವ 9:14ಇದಲ್ಲದೆ ದೇಶಾಂತರದಲ್ಲಿ ವ್ಯಾಪಾರಮಾಡುತ್ತಿದ್ದ ವ್ಯಾಪಾರಿಗಳೂ, ವರ್ತಕರೂ, ಅರಬಸ್ಥಾನದ ಅರಸರೂ, ದೇಶಾಧಿಪತಿಗಳೂ ಅರಸನಾದ ಸೊಲೊಮೋನನಿಗೆ ಬೆಳ್ಳಿ ಮತ್ತು ಬಂಗಾರವನ್ನು ತರುತ್ತಿದ್ದರು.
  • ಎಲೀಮೆಲೆಕನಿಗೆ ಸೇರಿದ್ದ ಭೂಮಿಯನ್ನು ನವೊಮಿಯು ಮಾರುತ್ತಾಳೆರೂತ 4:3
    ವಚನಗಳು
    ರೂತ 4:3ಆಗ ಅವನು ಆ ಸಮೀಪಬಂಧುವಿಗೆ, “ಮೋವಾಬ್ ದೇಶದಿಂದ ಹಿಂದಿರುಗಿ ಬಂದಿರುವ ನವೊಮಿಯು ನಮ್ಮ ಸಹೋದರನಾದ ಎಲೀಮೆಲೆಕನ ಪಾಲಿಗೆ ಬಂದ ಹೊಲವನ್ನು ಮಾರಬೇಕೆಂದಿದ್ದಾಳೆ.
  • ಅಕ್ಕಸಾಲಿಗರೂ ವರ್ತಕರೂ ಯೆರೂಸಲೇಮಿನ ಗೋಡೆಯ ಒಂದು ಭಾಗವನ್ನು ದುರಸ್ತಿಮಾಡುತ್ತಾರೆನೆಹೆ 3:32
    ವಚನಗಳು
    ನೆಹೆ 3:32ಈ ಮೂಲೆಯುಪ್ಪರಿಗೆಗೂ ಕುರಿಬಾಗಿಲಿಗೂ ಮಧ್ಯದಲ್ಲಿದ್ದ ಗೋಡೆಯನ್ನು ಜೀರ್ಣೋದ್ಧಾರ ಮಾಡಿದವರು ಅಕ್ಕಸಾಲಿಗರು ಮತ್ತು ವರ್ತಕರು.
  • ತೂರಿನವರು ಸಬ್ಬತ್ ದಿನದಲ್ಲಿ ಯೆರೂಸಲೇಮಿನಲ್ಲಿ ಮೀನನ್ನು ಮಾರುತ್ತಾರೆನೆಹೆ 13:16
    ವಚನಗಳು
    ನೆಹೆ 13:16ಇದಲ್ಲದೆ ದೇಶದಲ್ಲಿ ವಾಸಿಸುತ್ತಿದ್ದ ತೂರ್ಯರು ಮೀನು ಮುಂತಾದ ಸರಕುಗಳನ್ನು ತಂದು ಯೆಹೂದ್ಯರಿಗೆ ಸಬ್ಬತ್ ದಿನದಲ್ಲಿ ಯೆರೂಸಲೇಮಿನಲ್ಲೇ ಮಾರುತ್ತಿದ್ದರು.
  • ನೆಹೆಮೀಯನು ಬಾಗಿಲುಗಳನ್ನು ಮುಚ್ಚಿಸುತ್ತಾನೆ; ವರ್ತಕರು ಪಟ್ಟಣದ ಹೊರಗೆ ಇಳಿದುಕೊಳ್ಳುತ್ತಾರೆನೆಹೆ 13:19–20
    ವಚನಗಳು
    ನೆಹೆ 13:19–20ಇದಲ್ಲದೆ, ಸಬ್ಬತ್ ದಿನ ಪ್ರಾರಂಭವಾಗುವುದಕ್ಕಿಂತ ಮೊದಲು ಯೆರೂಸಲೇಮಿನ ಬಾಗಿಲುಗಳನ್ನು ಕತ್ತಲಾಗುವುದಕ್ಕೆ ಮೊದಲೇ ಮುಚ್ಚಿಸಿ, ಸಬ್ಬತ್ ದಿನವು ಮುಗಿಯುವವರೆಗೂ ಅವುಗಳನ್ನು ತೆರೆಯಬಾರದೆಂದು ಆಜ್ಞಾಪಿಸಿ, ಯಾವ ಹೊರೆಯೂ ಒಳಗೆ ಬಾರದಂತೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಿಲುಗಳ ಬಳಿಯಲ್ಲಿ ಕಾವಲಿರಿಸಿದೆನು. ಇದರಿಂದ ವರ್ತಕರೂ, ಎಲ್ಲಾ ತರದ ದಿನನಿತ್ಯ ಬಳಕೆಯ ವಸ್ತುಗಳನ್ನು ಮಾರುವುದಕ್ಕೆ ಬಂದವರೂ, ಒಂದೆರಡು ಸಾರಿ ಯೆರೂಸಲೇಮಿನ ಹೊರಗೆ ಇಳಿದುಕೊಂಡರು.
  • ಗುಣವತಿಯಾದ ಹೆಂಡತಿಯು ಹೊಲವನ್ನು ಕೊಂಡು ನಾರುಮಡಿಯ ಉಡುಪುಗಳನ್ನು ಮಾರುತ್ತಾಳೆಜ್ಞಾನೋ 31:16, ಜ್ಞಾನೋ 31:24
    ವಚನಗಳು
    ಜ್ಞಾನೋ 31:16ಹೊಲವನ್ನು ನೋಡಿ ಯೋಚಿಸಿ ಕೊಂಡುಕೊಳ್ಳುವಳು, ತನ್ನ ಕೈಗೆಲಸದ ಲಾಭದಿಂದ ದ್ರಾಕ್ಷಿತೋಟವನ್ನು ಮಾಡಿಸುವಳು.
    ಜ್ಞಾನೋ 31:24ಹಚ್ಚಡಗಳನ್ನು ನೆಯ್ದು ಮಾರಾಟಮಾಡುವಳು, ನಡುಕಟ್ಟುಗಳನ್ನು ವರ್ತಕನಿಗೆ ಒದಗಿಸುವಳು.
  • ಪೌಲನ ಹಡಗು ತೂರಿನಲ್ಲಿ ತನ್ನ ಸರಕನ್ನು ಇಳಿಸುತ್ತದೆಅ. ಕೃ 21:2–3
    ವಚನಗಳು
    ಅ. ಕೃ 21:2–3ಅಲ್ಲಿ ಫೊಯಿನೀಕೆಗೆ ಹೋಗುವ ಹಡಗನ್ನು ಕಂಡು, ಅದರಲ್ಲಿ ಪ್ರಯಾಣವನ್ನು ಮುಂದುವರೆಸಿದೆವು. ಮುಂದೆ ಕುಪ್ರದ್ವೀಪವನ್ನು ಕಂಡು ಎಡಗಡೆಗೆ ಬಿಟ್ಟು ಸಿರಿಯದೇಶದ ಕಡೆಗೆ ಸಾಗಿ ತೂರ್ ಪಟ್ಟಣಕ್ಕೆ ಬಂದು ಇಳಿದೆವು. ಏಕೆಂದರೆ, ಅಲ್ಲಿ ಸರಕನ್ನು ಇಳಿಸಬೇಕಾಗಿತ್ತು.
  • ಥುವತೈರ ಊರಿನವಳೂ ಧೂಮ್ರ ಬಣ್ಣದ ವಸ್ತ್ರಗಳನ್ನು ಮಾರುವವಳೂ ಆದ ಲುದ್ಯಳುಅ. ಕೃ 16:14
    ವಚನಗಳು
    ಅ. ಕೃ 16:14ನಮ್ಮ ಮಾತುಗಳನ್ನು ಕೇಳಿದವರಲ್ಲಿ ಲುದ್ಯಳೆಂಬ ಒಬ್ಬ ಸ್ತ್ರೀಯು ಇದ್ದಳು. ಆಕೆ ಧೂಮ್ರ (ನೇರಳೆ) ಬಣ್ಣದ ವಸ್ತ್ರಗಳನ್ನು ಮಾರುವವಳೂ, ಥುವತೈರ ಎಂಬ ಊರಿನವಳೂ, ದೈವಭಕ್ತಳೂ ಆಗಿದ್ದಳು. ಪೌಲನು ಹೇಳುವ ಮಾತುಗಳಿಗೆ ಗಮನಕೊಡುವುದಕ್ಕಾಗಿ ಕರ್ತನು ಆಕೆಯ ಹೃದಯವನ್ನು ತೆರೆದನು.
  • ದೇವಾಲಯದ ಅಂಗಳಗಳಲ್ಲಿ ಚಿನಿವಾರರೂ ಪಾರಿವಾಳ ಮಾರುವವರೂಯೋಹಾ 2:14
    ವಚನಗಳು
    ಯೋಹಾ 2:14ಆತನು ದೇವಾಲಯದಲ್ಲಿ ದನ, ಕುರಿ, ಪಾರಿವಾಳಗಳನ್ನು ಮಾರುವವರೂ, ನಾಣ್ಯ ವಿನಿಮಯ ಮಾಡುವವರು ವ್ಯಾಪಾರಕ್ಕೆ ಕುಳಿತಿರುವುದನ್ನು ಕಂಡನು.
  • ಒಬ್ಬ ವರ್ತಕನು ಒಂದು ಅಮೂಲ್ಯವಾದ ಮುತ್ತಿಗಾಗಿ ತನಗಿದ್ದದ್ದನ್ನೆಲ್ಲಾ ಮಾರುತ್ತಾನೆ (ಸಾಮ್ಯ)ಮತ್ತಾ 13:45–46
    ವಚನಗಳು
    ಮತ್ತಾ 13:45–46ಮತ್ತು ಪರಲೋಕ ರಾಜ್ಯವು ಉತ್ತಮವಾದ ಮುತ್ತುಗಳನ್ನು ಹುಡುಕುವ ವ್ಯಾಪಾರಸ್ಥನಿಗೆ ಹೋಲಿಕೆಯಾಗಿದೆ. ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡುಕೊಂಡು ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಬಂದು ಅದನ್ನು ಕೊಂಡುಕೊಂಡನು.
  • ವ್ಯಾಪಾರಮಾಡಲು ಆಳುಗಳಿಗೆ ಹಣವನ್ನು ಕೊಡಲಾಗುತ್ತದೆ (ಸಾಮ್ಯ)ಲೂಕ 19:13, ಮತ್ತಾ 25:16
    ವಚನಗಳು
    ಲೂಕ 19:13ಹೊರಡುವಾಗ ತನ್ನ ಆಳುಗಳಲ್ಲಿ ಹತ್ತು ಮಂದಿಯನ್ನು ಕರೆದು ಅವರಿಗೆ ಹತ್ತು ಚಿನ್ನದ ನಾಣ್ಯಗಳನ್ನು ಕೊಟ್ಟು, ‘ನಾನು ಬರುವ ತನಕ ವ್ಯಾಪಾರಮಾಡಿಕೊಂಡಿರಿ’ ಎಂದು ಹೇಳಿ ಹೊರಟು ಹೋದನು.
    ಮತ್ತಾ 25:16ತಕ್ಷಣವೇ ಐದು ತಲಾಂತು ಹೊಂದಿದವನು ಹೋಗಿ ಅದನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಗಳಿಸಿಕೊಂಡನು.
  • “ಈಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರ್ಷವಿದ್ದು ವ್ಯಾಪಾರ ಮಾಡಿ”ಯಾಕೋ 4:13
    ವಚನಗಳು
    ಯಾಕೋ 4:13“ಈಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರ್ಷವಿದ್ದು ವ್ಯಾಪಾರ ಮಾಡಿ ಲಾಭವನ್ನು ಸಂಪಾದಿಸುತ್ತೇವೆ” ಎನ್ನುವವರೇ ಕೇಳಿರಿ.

ತೂರಿನೊಂದಿಗೆ ವ್ಯಾಪಾರ (ಯೆಹೆಜ್ಕೇಲನು 27)

  • ತಾರ್ಷೀಷ್: ಬೆಳ್ಳಿ, ಕಬ್ಬಿಣ, ತವರ ಮತ್ತು ಸೀಸಯೆಹೆ 27:12
    ವಚನಗಳು
    ಯೆಹೆ 27:12“ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿದ್ದರಿಂದ ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ ಮತ್ತು ಸೀಸಗಳನ್ನು ಒದಗಿಸುತ್ತಿದ್ದರು.
  • ಯಾವಾನ್, ತೂಬಲ್ ಮತ್ತು ಮೆಷೆಕ್: ದಾಸರು ಮತ್ತು ತಾಮ್ರದ ಪಾತ್ರೆಗಳುಯೆಹೆ 27:13
    ವಚನಗಳು
    ಯೆಹೆ 27:13ಯಾವಾನ್, ತೂಬಲ್, ಮೆಷೆಕ್ ಇವರು ನಿನ್ನ ವರ್ತಕರಾಗಿದ್ದರು. ಗುಲಾಮರನ್ನೂ ಮತ್ತು ತಾಮ್ರದ ಪಾತ್ರೆಗಳನ್ನೂ ನಿನಗೆ ಸರಬರಾಜು ಮಾಡುತ್ತಿದ್ದರು.
  • ತೋಗರ್ಮ ವಂಶದವರು: ಕುದುರೆಗಳು, ಯುದ್ಧದ ಕುದುರೆಗಳು ಮತ್ತು ಹೇಸರಗತ್ತೆಗಳುಯೆಹೆ 27:14
    ವಚನಗಳು
    ಯೆಹೆ 27:14“ತೋಗರ್ಮ ವಂಶದವರು ಕುದುರೆಗಳಿಂದಲೂ, ಕುದುರೆ ಸವಾರಿಗಳಿಂದಲೂ, ಹೇಸರಗತ್ತೆಗಳಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು.
  • ದೆದಾನ್: ಕುದುರೆಯ ತಡಿಬಟ್ಟೆಗಳು; ಕರಾವಳಿಗಳು: ದಂತ ಮತ್ತು ಕರಿಮರಯೆಹೆ 27:15, ಯೆಹೆ 27:20
    ವಚನಗಳು
    ಯೆಹೆ 27:15ದೇದಾನಿನವರು ನಿನ್ನ ವರ್ತಕರಾಗಿದ್ದರು; ಅನೇಕ ದ್ವೀಪಗಳು ನಿನ್ನ ಕೈಕೆಳಗೆ ವ್ಯಾಪಾರವನ್ನು ನಡೆಸಿದವು; ಅವರು ದಂತ ಕೊಂಬು ಮತ್ತು, ಕಪ್ಪುಮರಗಳನ್ನೂ ನಿನಗೆ ಕಪ್ಪವಾಗಿ ಸಲ್ಲಿಸುತ್ತಿದ್ದರು.
    ಯೆಹೆ 27:20ದೇದಾನಿನವರು ರಥಗಳ ಸವಾರಿಗಳಿಗೆ ತಕ್ಕ ಒಳ್ಳೆಯ ಬಟ್ಟೆಗಳಿಂದ ನಿನ್ನ ಸಂಗಡ ವ್ಯಾಪಾರ ಮಾಡುತ್ತಿದ್ದರು.
  • ಅರಾಮ್: ಕೆಂಪರಲು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ ಮತ್ತು ಮಾಣಿಕ್ಯಯೆಹೆ 27:16
    ವಚನಗಳು
    ಯೆಹೆ 27:16“ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದುದರಿಂದ ಅರಾಮಿನವರೂ ನಿನ್ನವರಾಗಿ ವ್ಯಾಪಾರಮಾಡಿ, ಕೆಂಪರಲು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.
  • ಯೆಹೂದ ಮತ್ತು ಇಸ್ರಾಯೇಲ್: ಗೋದಿ, ಜೇನು, ಎಣ್ಣೆ ಮತ್ತು ಮುಲಾಮುಯೆಹೆ 27:17
    ವಚನಗಳು
    ಯೆಹೆ 27:17“ಯೆಹೂದ್ಯರೂ, ಇಸ್ರಾಯೇಲ್ ದೇಶದವರೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋದಿಯಿಂದಲೂ, ಖಂಡಸಕ್ಕರೆ, ಜೇನು, ಎಣ್ಣೆ ಮತ್ತು ಸುಗಂಧತೈಲದಿಂದಲೂ ನಿನ್ನೊಂದಿಗೆ ವ್ಯಾಪಾರ ನಡೆಸಿದರು.
  • ದಮಸ್ಕ: ಹೆಲ್ಬೋನಿನ ದ್ರಾಕ್ಷಾರಸ ಮತ್ತು ಉಣ್ಣೆಯೆಹೆ 27:18
    ವಚನಗಳು
    ಯೆಹೆ 27:18“ನಿನ್ನ ಕೈಕೆಲಸದ ವಸ್ತುಗಳು ನಿನ್ನಲ್ಲಿ ಅಪಾರವಾಗಿದ್ದುದರಿಂದಲೂ, ಅಪರಿಮಿತವಾದ ಬಗೆಬಗೆಯ ಆಸ್ತಿಯೂ ನಿನಗೆ ಬೇಕಾಗಿದ್ದುದರಿಂದಲೂ ದಮಸ್ಕದವರೂ ನಿನ್ನ ಪರವಾಗಿ ವ್ಯಾಪಾರಮಾಡಿ, ಹೆಲ್ಬೋನಿನ ದ್ರಾಕ್ಷಾರಸವನ್ನೂ ಹಾಗು ಚಾಹರಿನ ಉಣ್ಣೆಯನ್ನೂ ನಿನ್ನಲ್ಲಿ ತುಂಬಿಸುತ್ತಿದ್ದರು.
  • ಅರಬರು ಮತ್ತು ಕೇದಾರ್: ಕುರಿಮರಿಗಳು, ಟಗರುಗಳು ಮತ್ತು ಹೋತಗಳುಯೆಹೆ 27:21
    ವಚನಗಳು
    ಯೆಹೆ 27:21ಅರಬರು ಮತ್ತು ಕೇದಾರಿನ ಪ್ರಧಾನರೂ ನಿನ್ನ ಕೈಕೆಳಗಿನ ವರ್ತಕರಾಗಿದ್ದರು; ಕುರಿಮರಿಗಳಿಂದಲೂ, ಟಗರುಗಳಿಂದಲೂ, ಹೋತಗಳಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದ್ದರು.
  • ಶೆಬ ಮತ್ತು ರಗ್ಮ: ಸುಗಂಧದ್ರವ್ಯಗಳು, ಅಮೂಲ್ಯ ರತ್ನಗಳು ಮತ್ತು ಚಿನ್ನಯೆಹೆ 27:22
    ವಚನಗಳು
    ಯೆಹೆ 27:22“ಶೆಬದವರೂ ಮತ್ತು ರಗ್ಮದವರೂ ನಿನ್ನ ಕಡೆಯ ವರ್ತಕರಾಗಿ, ಎಲ್ಲಾ ಶ್ರೇಷ್ಠವಾದ ಸುಗಂಧದ್ರವ್ಯದಿಂದಲೂ, ಅಮೂಲ್ಯವಾದ ರತ್ನಗಳಿಂದಲೂ, ಚಿನ್ನದಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದರು.

ಧರ್ಮಶಾಸ್ತ್ರದಲ್ಲಿ

  • ಸರಿಯಾದ ತಕ್ಕಡಿ, ತೂಕದ ಕಲ್ಲುಗಳು ಮತ್ತು ಅಳತೆಗಳುಯಾಜ 19:35–36, ಧರ್ಮೋ 25:13–15
    ವಚನಗಳು
    ಯಾಜ 19:35–36“‘ನ್ಯಾಯವಿಚಾರಣೆ, ತೂಕ, ಅಳತೆ ಮತ್ತು ಪರಿಮಾಣಗಳಲ್ಲಿ ನೀವು ನ್ಯಾಯವಿರುದ್ಧವಾಗಿ ನಡೆಯಬಾರದು. ತಕ್ಕಡಿ, ತೂಕದ ಕಲ್ಲು, ಕೊಳಗ ಮತ್ತು ಸೇರು ಇವುಗಳೆಲ್ಲಾ ನ್ಯಾಯವಾಗಿಯೇ ಇರಬೇಕು. ನಾನು ನಿಮ್ಮನ್ನು ಐಗುಪ್ತದೇಶದಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ.
    ಧರ್ಮೋ 25:13–15ಹೆಚ್ಚು ಕಡಿಮೆಯಾಗಿರುವ ಎರಡು ವಿಧವಾದ ತೂಕದ ಕಲ್ಲುಗಳನ್ನು ನಿಮ್ಮ ಚೀಲದಲ್ಲಿ ಇಟ್ಟುಕೊಳ್ಳಬಾರದು. ಹೆಚ್ಚುಕಡಿಮೆಯಾದ ಎರಡು ವಿಧವಾದ ಸೇರುಗಳು ಹಾಗೂ ಮೋಸ ಮಾಡುವ ತೂಕದ ಕಲ್ಲುಗಳು ನಿಮ್ಮ ಮನೆಯಲ್ಲಿ ಇರಬಾರದು. ನಿಮ್ಮ ತೂಕದ ಕಲ್ಲೂ ಮತ್ತು ನಿಮ್ಮ ಅಳತೆಯ ಸೇರೂ ನ್ಯಾಯವಾಗಿಯೇ ಇರಬೇಕು. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಬಹುಕಾಲ ಬಾಳುವಿರಿ.
  • ಕೊಳ್ಳುವವನೂ ಮಾರುವವನೂ ಒಬ್ಬರನ್ನೊಬ್ಬರು ವಂಚಿಸಬಾರದುಯಾಜ 25:14
    ವಚನಗಳು
    ಯಾಜ 25:14ನೀವು ಸ್ಥಿರಸೊತ್ತನ್ನು ಸ್ವದೇಶದವರೊಡನೆ ಕ್ರಯ ಮತ್ತು ವಿಕ್ರಯ ಮಾಡುವಾಗ ಇದರ ವಿಷಯದಲ್ಲಿ ಅನ್ಯಾಯಮಾಡಬಾರದು.

ನುಡಿಗಳು

  • ಕೊಳ್ಳುವವನು “ಚೆನ್ನಾಗಿಲ್ಲ, ಚೆನ್ನಾಗಿಲ್ಲ” ಎನ್ನುತ್ತಾನೆ, ಆ ಮೇಲೆ ಹೊರಟುಹೋಗಿ ಹೆಚ್ಚಳಪಡುತ್ತಾನೆಜ್ಞಾನೋ 20:14
    ವಚನಗಳು
    ಜ್ಞಾನೋ 20:14ಕೊಳ್ಳುವವನು, “ಚೆನ್ನಾಗಿಲ್ಲ, ಚೆನ್ನಾಗಿಲ್ಲ” ಎಂದು ಹೇಳುತ್ತಾನೆ, ಕೊಂಡುಕೊಂಡು ಹೋಗಿ ಹೆಚ್ಚಳಪಡುತ್ತಾನೆ.
  • ಧಾನ್ಯವನ್ನು ಮಾರಲು ಸಬ್ಬತ್ ದಿನ ಮುಗಿಯುವುದನ್ನೇ ಕಾಯುವ ವ್ಯಾಪಾರಿಗಳುಆಮೋ 8:5
    ವಚನಗಳು
    ಆಮೋ 8:5ಬಡವರನ್ನು ಬೆಳ್ಳಿಗೂ, ದಿಕ್ಕಿಲ್ಲದವರನ್ನು ಒಂದು ಜೊತೆ ಕೆರಗಳ ಜೋಡಿಗೂ ಕೊಂಡುಕೊಳ್ಳೋಣ; ಗೋದಿಯ ನುಚ್ಚುನ್ನು ಮಾರಿಬಿಡೋಣ” ಎಂದು ಹೇಳುತ್ತೀರಿ ಅಲ್ಲವೇ?

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು