ಅನ್ವೇಷಿಸಿ › ವಿಷಯಗಳು › ದ್ರೋಹಿಗಳು ಮತ್ತು ಹಿಡಿದುಕೊಟ್ಟವರು
ಆಶ್ಚರ್ಯಕರ ವಿವರಗಳು
ಬೈಬಲಿನಲ್ಲಿ ದ್ರೋಹಿಗಳು ಮತ್ತು ಹಿಡಿದುಕೊಟ್ಟವರು
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 26 ವಾಕ್ಯಭಾಗಗಳು, ಸಾಲು ಸಾಲಾಗಿ.
ಯೂದ
- ಹನ್ನೆರಡು ಮಂದಿಯಲ್ಲಿ ಒಬ್ಬನಾದ ಇಸ್ಕರಿಯೋತ ಯೂದ, ‘ಹಿಡಿದುಕೊಡುವ ದ್ರೋಹಿ’ಲೂಕ 6:16
ವಚನಗಳು
ಲೂಕ 6:16ಯಾಕೋಬನ ಮಗನಾದ ಯೂದ, ಆತನನ್ನು ಹಿಡಿದುಕೊಡುವ ದ್ರೋಹಿಯಾದ ಇಸ್ಕರಿಯೋತ ಯೂದ.
- ಹಣದ ಚೀಲವನ್ನು ಇಟ್ಟುಕೊಂಡಿದ್ದ ಅವನು ಅದರಲ್ಲಿ ಹಾಕಿದ್ದನ್ನು ತೆಗೆದುಕೊಳ್ಳುತ್ತಿದ್ದನುಯೋಹಾ 12:6
ವಚನಗಳು
ಯೋಹಾ 12:6ಅವನು ಬಡವರ ಮೇಲಿನ ಕನಿಕರದಿಂದ ಹೀಗೆ ಹೇಳಲಿಲ್ಲ. ಆದರೆ ಅವನು ಕಳ್ಳನಾಗಿದ್ದು ಹಣದ ಚೀಲವನ್ನು ತನ್ನ ಬಳಿಯಲ್ಲಿ ಇಟ್ಟುಕೊಂಡಿರಲಾಗಿ ಅದರಲ್ಲಿ ಹಾಕಿದ್ದನ್ನು ತನ್ನ ಸ್ವಂತ ಉಪಯೋಗಕ್ಕಾಗಿ ತೆಗೆದುಕೊಳ್ಳುತ್ತಿದ್ದನು, ಆದುದರಿಂದಲೇ ಹೀಗೆ ಹೇಳಿದನು.
- ತನಗೆ ಏನು ಕೊಡುವಿರೆಂದು ಅವನು ಮುಖ್ಯಯಾಜಕರನ್ನು ಕೇಳಿದನು: ಮೂವತ್ತು ಬೆಳ್ಳಿ ನಾಣ್ಯಗಳುಮತ್ತಾ 26:14–15
ವಚನಗಳು
ಮತ್ತಾ 26:14–15ಆ ಮೇಲೆ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನೆಂಬುವವನು ಮುಖ್ಯಯಾಜಕರ ಬಳಿಗೆ ಹೋಗಿ, “ನಾನು ಆತನನ್ನು ಹಿಡಿಯಲು ನಿಮಗೆ ಸಹಾಯಮಾಡಿದರೆ ನನಗೆ ಏನು ಕೊಡುತ್ತೀರಿ?” ಅಂದನು. ಅವರು ಅವನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ತೂಗಿ ಕೊಟ್ಟರು.
- ಅಂದಿನಿಂದ ಜನಸಮೂಹವಿಲ್ಲದ ಸಮಯದಲ್ಲಿ ಸಂದರ್ಭಕ್ಕಾಗಿ ಹುಡುಕುತ್ತಿದ್ದನುಮತ್ತಾ 26:16, ಮಾರ್ಕ 14:11, ಲೂಕ 22:6
ವಚನಗಳು
ಮತ್ತಾ 26:16ಅಂದಿನಿಂದ ಅವನು ಆತನನ್ನು ಹಿಡಿದುಕೊಡುವುದಕ್ಕಾಗಿ ಸಂದರ್ಭ ಹುಡುಕುತ್ತಿದ್ದನು.
ಮಾರ್ಕ 14:11ಅವರು ಅದನ್ನು ಕೇಳಿ ಸಂತೋಷಪಟ್ಟು, ನಿನಗೆ ಹಣಕೊಡುತ್ತೇವೆ ಎಂದು ಮಾತುಕೊಟ್ಟರು. ಅಂದಿನಿಂದ ಯೂದನು ಯೇಸುವನ್ನು ಹಿಡಿದುಕೊಡುವುದಕ್ಕೆ ಅನುಕೂಲವಾದ ಸಂದರ್ಭವನ್ನು ಹುಡುಕುತ್ತಿದ್ದನು.
ಲೂಕ 22:6ಅವನು ಒಪ್ಪಿಕೊಂಡು, ಜನಸಮೂಹವಿಲ್ಲದಿರುವಾಗ ಆತನನ್ನು ಅವರಿಗೆ ಹಿಡಿದುಕೊಡುವುದಕ್ಕೆ ಅನುಕೂಲವಾದ ಸಂದರ್ಭವನ್ನು ನೋಡುತ್ತಿದ್ದನು.
- ಊಟದ ಸಮಯದಲ್ಲಿ ಯೇಸು ಹೇಳಿದನು: ‘ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದುಕೊಡುವನು’ಮತ್ತಾ 26:21
ವಚನಗಳು
ಮತ್ತಾ 26:21ಅವರು ಊಟಮಾಡುತ್ತಿರುವಾಗ ಆತನು, “ನಿಮಗೆ ಸತ್ಯವಾಗಿ ಹೇಳುತ್ತೇನೆ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದುಕೊಡುವನು” ಅಂದನು.
- ಯೂದನು: ‘ಗುರುವೇ, ನಾನೋ?’ಮತ್ತಾ 26:25
ವಚನಗಳು
ಮತ್ತಾ 26:25ಆಗ ಆತನನ್ನು ಹಿಡಿದುಕೊಡಬೇಕೆಂದಿದ್ದ ಯೂದನು, “ಗುರುವೇ, ನಾನೋ?” ಎಂದು ಕೇಳಲು ಯೇಸು ಅವನಿಗೆ, “ನೀನೇ ಹಾಗೆ ಹೇಳಿದ್ದೀ” ಎಂದು ಹೇಳಿದನು.
- ಯೇಸು ಅದ್ದಿದ ತುತ್ತನ್ನು ಯೂದನಿಗೆ ಕೊಟ್ಟನು, ಯೂದನು ರಾತ್ರಿಯಲ್ಲಿ ಹೊರಗೆ ಹೋದನುಯೋಹಾ 13:26, ಯೋಹಾ 13:30
ವಚನಗಳು
ಯೋಹಾ 13:26ಅದಕ್ಕೆ ಯೇಸು, “ನಾನು ಈ ರೊಟ್ಟಿಯ ತುಂಡನ್ನು ಅದ್ದಿ ಯಾರಿಗೆ ಕೊಡುತ್ತೇನೋ ಅವನೇ!” ಎಂದು ಉತ್ತರಿಸಿ ಆ ರೊಟ್ಟಿಯ ತುಂಡನ್ನು ಅದ್ದಿ, ತೆಗೆದು, ಸೀಮೋನ್ ಇಸ್ಕರಿಯೋತನ ಮಗನಾದ ಯೂದನಿಗೆ ಕೊಟ್ಟನು.
ಯೋಹಾ 13:30ಇಸ್ಕರಿಯೋತ ಯೂದನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ, ಅಲ್ಲಿಂದ ಎದ್ದು ಹೊರಗೆ ಹೋದನು. ಆಗ ರಾತ್ರಿಯಾಗಿತ್ತು.
- ಯೇಸು ತನ್ನ ಶಿಷ್ಯರೊಂದಿಗೆ ಅನೇಕಸಾರಿ ಅಲ್ಲಿ ಸೇರುತ್ತಿದ್ದುದರಿಂದ ಯೂದನಿಗೆ ಆ ತೋಟವು ಗೊತ್ತಿತ್ತುಯೋಹಾ 18:2
ವಚನಗಳು
ಯೋಹಾ 18:2ಆತನನ್ನು ಹಿಡಿದುಕೊಡಲಿದ್ದ ಯೂದನಿಗೂ ಆ ಸ್ಥಳವು ಗೊತ್ತಿತ್ತು ಏಕೆಂದರೆ, ಆಗಾಗ ಯೇಸು ತನ್ನ ಶಿಷ್ಯರೊಂದಿಗೆ ಅಲ್ಲಿ ಸೇರಿಬರುತ್ತಿದ್ದರು.
- ಅವನು ಲಾಟೀನು, ಪಂಜು ಮತ್ತು ಆಯುಧಗಳನ್ನು ಹಿಡಿದ ಸೈನಿಕರೊಂದಿಗೆ ಬಂದನುಯೋಹಾ 18:3
ವಚನಗಳು
ಯೋಹಾ 18:3ಹೀಗಿರಲಾಗಿ ಯೂದನು ಮುಖ್ಯಯಾಜಕರಿಂದ ಮತ್ತು ಫರಿಸಾಯರಿಂದ ಸೈನಿಕರ ಗುಂಪನ್ನೂ, ಕಾವಲಾಳುಗಳನ್ನೂ ಕರೆದುಕೊಂಡು ದೀಪಗಳನ್ನೂ, ಪಂಜುಗಳನ್ನೂ ಮತ್ತು ಆಯುಧಗಳನ್ನೂ ಹಿಡಿದುಕೊಂಡು ಅಲ್ಲಿಗೆ ಬಂದನು.
- ಗುರುತು: ‘ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಆತನು’ಮತ್ತಾ 26:48–49, ಮಾರ್ಕ 14:44–45
ವಚನಗಳು
ಮತ್ತಾ 26:48–49ಇದಲ್ಲದೆ ಆತನನ್ನು ಹಿಡಿದುಕೊಡುವವನು ಅವರಿಗೆ, “ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಆತನು; ಅವನನ್ನು ಹಿಡಿಯಿರಿ” ಎಂದು ಮುನ್ಸೂಚನೆ ನೀಡಿದ್ದನು. ಕೂಡಲೇ ಅವನು ಯೇಸುವಿನ ಬಳಿಗೆ ಬಂದು, “ಗುರುವೇ ನಮಸ್ಕಾರ” ಎಂದು ಹೇಳಿ ಆತನಿಗೆ ಮುದ್ದಿಟ್ಟನು.
ಮಾರ್ಕ 14:44–45ಇದಲ್ಲದೆ ಆತನನ್ನು ಹಿಡಿದುಕೊಡುವವನು ಅವರಿಗೆ, “ನಾನು ಯಾರಿಗೆ ಮುದ್ದಿಡುವೆನೊ ಅವನೇ ಆತನು! ಅವನನ್ನು ಹಿಡಿದು ಭದ್ರವಾಗಿ ಕರೆದೊಯ್ಯಿರಿ” ಎಂದು ಮೊದಲೇ ಸೂಚನೆಕೊಟ್ಟಿದ್ದನು. ಅದರಂತೆಯೇ ಯೂದನು ಅಲ್ಲಿಗೆ ಬಂದಕೂಡಲೇ ಅವನು ಯೇಸುವಿನ ಬಳಿಗೆ ಹೋಗಿ, “ಗುರುವೇ” ಎಂದು ಹೇಳಿ ಆತನಿಗೆ ಮುದ್ದಿಟ್ಟನು.
- ‘ಯೂದನೇ, ಮುದ್ದಿಟ್ಟು ಮನುಷ್ಯಕುಮಾರನನ್ನು ಹಿಡಿದುಕೊಡುತ್ತೀಯಾ?’ಲೂಕ 22:47–48
ವಚನಗಳು
ಲೂಕ 22:47–48ಆತನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಜನರ ಗುಂಪು ಕಾಣಿಸಿತು. ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನೆಂಬುವನು ಆ ಜನರ ಗುಂಪಿನ ಮುಂದೆ ನಡೆಯುತ್ತಾ, ಯೇಸುವಿಗೆ ಮುದ್ದಿಡುವುದಕ್ಕಾಗಿ ಆತನ ಬಳಿಗೆ ಬರಲು, ಯೇಸು ಅವನಿಗೆ, “ಯೂದನೇ, ಮುದ್ದಿಟ್ಟು ಮನುಷ್ಯಕುಮಾರನನ್ನು ಹಿಡಿದುಕೊಡುತ್ತೀಯಾ?” ಎಂದು ಕೇಳಿದನು.
- ಪಶ್ಚಾತ್ತಾಪದಿಂದ ತುಂಬಿದವನಾಗಿ ಅವನು ಬೆಳ್ಳಿಯನ್ನು ಹಿಂದಿರುಗಿಸಿ ನೇಣುಹಾಕಿಕೊಂಡನುಮತ್ತಾ 27:3–5
ವಚನಗಳು
ಮತ್ತಾ 27:3–5ಆಗ ಆತನನ್ನು ದ್ರೋಹದಿಂದ ಹಿಡಿದುಕೊಟ್ಟಿದ್ದ ಯೂದನು ಯೇಸುವಿಗೆ ಮರಣದಂಡನೆಯ ತೀರ್ಪು ಆಗಿರುವುದನ್ನು ನೋಡಿ, ಪಶ್ಚಾತ್ತಾಪಪಟ್ಟು, ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ಮುಖ್ಯಯಾಜಕರಿಗೂ ಹಿರಿಯರಿಗೂ ಹಿಂದಿರುಗಿಸಿದನು. “ನಿರಪರಾಧಿಯನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಾನು ಪಾಪ ಮಾಡಿದ್ದೇನೆ” ಅಂದನು. ಅದಕ್ಕವರು, “ಅದು ನಮಗೇನು? ನೀನೇ ನೋಡಿಕೋ” ಅಂದರು. ಆಗ ಅವನು ದೇವಾಲಯದಲ್ಲಿ ಆ ಹಣವನ್ನು ಎಸೆದು ಹೊರಟುಹೋಗಿ ನೇಣು ಹಾಕಿಕೊಂಡು ಸತ್ತನು.
- ಆ ಹಣದಿಂದ ಕುಂಬಾರನ ಹೊಲವನ್ನು ಕೊಂಡರು, ಅದನ್ನು ರಕ್ತದ ಹೊಲವೆಂದು ಕರೆಯುತ್ತಾರೆಮತ್ತಾ 27:7–8
ವಚನಗಳು
ಮತ್ತಾ 27:7–8ಬಳಿಕ ಆಲೋಚನೆಮಾಡಿ ಪರದೇಶಿಗಳನ್ನು ಹೂಣಿಡುವುದಕ್ಕೋಸ್ಕರ ಅದರಿಂದ ಕುಂಬಾರನ ಹೊಲವೆಂಬ ಭೂಮಿಯನ್ನು ಕೊಂಡುಕೊಂಡರು. ಈ ಕಾರಣದಿಂದ ಇಂದಿನವರೆಗೂ ಆ ಹೊಲಕ್ಕೆ “ಜೀವಹತ್ಯದ ಹೊಲವೆಂಬ” ಹೆಸರು ಇದೆ.
- ಅಪೊಸ್ತಲರ ಕೃತ್ಯಗಳಲ್ಲಿ ಆ ಹೊಲವನ್ನು ಅಕೆಲ್ದಾಮಾ ಎಂದು ಕರೆಯಲಾಗಿದೆಅ. ಕೃ 1:18–19
ವಚನಗಳು
ಅ. ಕೃ 1:18–19(ಈ ಮನುಷ್ಯನು ತನ್ನ ದ್ರೋಹದ ಪ್ರತಿಫಲವಾಗಿ ಹೊಲವನ್ನು ಪಡೆದನು ಮತ್ತು ತಲೆಕೆಳಗಾಗಿ ಬಿದ್ದು ಹೊಟ್ಟೆ ಒಡೆದು ಕರುಳುಗಳೆಲ್ಲಾ ಹೊರಗೆ ಚೆಲ್ಲಿದವು. ಇದು ಯೆರೂಸಲೇಮ್ ಪಟ್ಟಣದ ನಿವಾಸಿಗಳಿಗೆಲ್ಲಾ ತಿಳಿದುಬಂದುದರಿಂದ ಆ ಹೊಲಕ್ಕೆ ಅವರ ಭಾಷೆಯಲ್ಲಿ ‘ಅಕೆಲ್ದಾಮಾ,’ ಅಂದರೆ ರಕ್ತದ ಹೊಲ ಎಂಬ ಹೆಸರು ಬಂದಿತು.)
ಇತರರು
- ಬೇತೇಲಿನ ಒಬ್ಬ ಮನುಷ್ಯನು ಗೂಢಚಾರರಿಗೆ ಒಳಗೆ ಹೋಗುವ ದಾರಿಯನ್ನು ತೋರಿಸಿದನು; ಅವನ ಕುಟುಂಬವು ಉಳಿಸಲ್ಪಟ್ಟಿತುನ್ಯಾಯ 1:23–25
ವಚನಗಳು
ನ್ಯಾಯ 1:23–25ಅವರು ಲೂಜ್ ಎಂದು ಕರೆಯುತ್ತಿದ್ದ ಬೇತೇಲ್ ಊರನ್ನು ಸಂಚರಿಸಿ ನೋಡುವುದಕ್ಕೆ ಗೂಢಚಾರರನ್ನು ಕಳುಹಿಸಿದರು. ಅವರು ಆ ಊರೊಳಗಿನಿಂದ ಬರುವ ಒಬ್ಬ ಮನುಷ್ಯನನ್ನು ಕಂಡು ಅವನಿಗೆ, “ದಯವಿಟ್ಟು ಪಟ್ಟಣದೊಳಗೆ ನುಗ್ಗಬಹುದಾದ ದಾರಿಯನ್ನು ನಮಗೆ ತೋರಿಸು; ನಾವೂ ನಿನಗೆ ದಯೆತೋರಿಸುವೆವು” ಎಂದು ಹೇಳಲು ಅವನು ಅವರಿಗೆ ಆ ದಾರಿಯನ್ನು ತೋರಿಸಿದನು. ಆಗ ಅವರು ಆ ಪಟ್ಟಣವನ್ನು ಕತ್ತಿಯಿಂದ ಸಂಹರಿಸಿದರು. ಆದರೆ ಆ ಮನುಷ್ಯನನ್ನೂ ಅವನ ಕುಟುಂಬವನ್ನೂ ಏನು ಮಾಡದೆ ಕಳುಹಿಸಿಬಿಟ್ಟರು.
- ಸಂಸೋನನ ಬಲದ ರಹಸ್ಯಕ್ಕಾಗಿ ಫಿಲಿಷ್ಟಿಯರ ಪ್ರತಿಯೊಬ್ಬ ಅಧಿಪತಿಯೂ ದೆಲೀಲಳಿಗೆ ಬೆಳ್ಳಿಯನ್ನು ಕೊಡುವುದಾಗಿ ಹೇಳಿದನುನ್ಯಾಯ 16:5
ವಚನಗಳು
ನ್ಯಾಯ 16:5ಫಿಲಿಷ್ಟಿಯ ಪ್ರಭುಗಳು ಅವಳ ಬಳಿಗೆ ಹೋಗಿ ಅವಳಿಗೆ, “ನೀನು ಅವನನ್ನು ಮರುಳುಗೊಳಿಸಿ, ಅವನ ಮಹಾಶಕ್ತಿಯ ಮೂಲ ಯಾವುದೆಂಬುದನ್ನೂ, ನಾವು ಅವನನ್ನೂ ಗೆದ್ದು, ಬಲವನ್ನು ಕುಂದಿಸುವುದು ಹೇಗೆಂಬುದನ್ನೂ ಗೊತ್ತುಮಾಡಿಕೊಂಡು ನಮಗೆ ತಿಳಿಸು; ನಮ್ಮಲ್ಲಿ ಪ್ರತಿಯೊಬ್ಬನೂ ನಿನಗೆ ಸಾವಿರದ ನೂರು ರೂಪಾಯಿ ಕೊಡುವೆವು” ಎಂದು ಹೇಳಿದರು.
- ಸಂಸೋನನು ತನ್ನ ಗುಟ್ಟನ್ನು ಹೇಳಿದಾಗ ಅವಳು ಅವರನ್ನು ಕರೆಯಿಸಿದಳು, ಅವರು ಹಣವನ್ನು ತಂದರುನ್ಯಾಯ 16:18
ವಚನಗಳು
ನ್ಯಾಯ 16:18ಅವನು ಇದ್ದದ್ದನ್ನು ಇದ್ದ ಹಾಗೆಯೇ ಹೇಳಿದನೆಂದು ದೆಲೀಲಳು ತಿಳಿದು ಫಿಲಿಷ್ಟಿಯ ಪ್ರಭುಗಳ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ಇದೊಂದು ಸಾರಿ ಬನ್ನಿರಿ: ಅವನು ನನಗೆ ತನ್ನ ಹೃದಯವನ್ನೆಲ್ಲಾ ತಿಳಿಸಿದ್ದಾನೆ” ಎಂದು ಹೇಳಿ, ಕರೆಕಳುಹಿಸಿದಳು. ಅವರು ಹಣವನ್ನು ತೆಗೆದುಕೊಂಡು ಆಕೆಯ ಬಳಿಗೆ ಬಂದರು.
- ನೋಬಿನ ಯಾಜಕನು ದಾವೀದನಿಗೆ ಸಹಾಯಮಾಡಿದನೆಂದು ಎದೋಮ್ಯನಾದ ದೋಯೇಗನು ಸೌಲನಿಗೆ ಹೇಳಿದನು1 ಸಮು 22:9–10
ವಚನಗಳು
1 ಸಮು 22:9–10ಆಗ ಸೌಲನ ಸೇವಕರ ಬಳಿಯಲ್ಲಿ ನಿಂತಿದ್ದ ಎದೋಮ್ಯನಾದ ದೋಯೇಗನು, “ಇಷಯನ ಮಗನು ನೋಬದಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ಕಂಡೆನು. ಅವನು ಇವನಿಗೆ ಯೆಹೋವನ ಚಿತ್ತವನ್ನು ತಿಳಿಸಿ, ಆಹಾರವನ್ನೂ, ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನೂ ಕೊಟ್ಟನು” ಎಂದು ಹೇಳಿದನು.
- ಕೆಯೀಲದ ಪೌರರು ತನ್ನನ್ನು ಸೌಲನಿಗೆ ಒಪ್ಪಿಸಿಬಿಡುವರೆಂದು ದಾವೀದನಿಗೆ ತಿಳಿಯುತ್ತದೆ1 ಸಮು 23:12
ವಚನಗಳು
1 ಸಮು 23:12ದಾವೀದನು ತಿರುಗಿ ಯೆಹೋವನನ್ನು, “ಕೆಯೀಲದವರು ನನ್ನನ್ನೂ, ನನ್ನ ಜನರನ್ನೂ ಸೌಲನ ಕೈಗೆ ಒಪ್ಪಿಸುವರೋ” ಎಂದು ಕೇಳಿದಾಗ ಆತನು, “ಒಪ್ಪಿಸಿಕೊಡುವರು” ಎಂದು ಉತ್ತರಕೊಟ್ಟನು.
- ದಾವೀದನ ಆಲೋಚನೆಗಾರನಾದ ಅಹೀತೋಫೆಲನು ಅಬ್ಷಾಲೋಮನ ಒಳಸಂಚಿನಲ್ಲಿ ಸೇರಿಕೊಂಡನು2 ಸಮು 15:12, 2 ಸಮು 15:31
ವಚನಗಳು
2 ಸಮು 15:12ಇದಲ್ಲದೆ ಅವನು ಸಮಾಧಾನ ಯಜ್ಞವನ್ನು ಮಾಡುತ್ತಿರುವಾಗ ದಾವೀದನ ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನೆಂಬುವನನ್ನು ಅವನ ಊರಾದ ಗೀಲೋವಿನಿಂದ ಬರುವಂತೆ ತಿಳಿಸಿದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದದ್ದರಿಂದ ಒಳಸಂಚು ಪ್ರಬಲವಾಗುತ್ತಾ ಹೋಯಿತು.
2 ಸಮು 15:31ಅಬ್ಷಾಲೋಮನ ಸಂಗಡ ಒಳಸಂಚು ಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು, “ಯೆಹೋವನೇ ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು” ಎಂದು ಪ್ರಾರ್ಥಿಸಿದನು.
- ತನ್ನ ಆಲೋಚನೆಯಂತೆ ನಡೆಯದಿದ್ದಾಗ ಅಹೀತೋಫೆಲನು ಮನೆಗೆ ಹೋಗಿ ನೇಣುಹಾಕಿಕೊಂಡನು2 ಸಮು 17:23
ವಚನಗಳು
2 ಸಮು 17:23ಅಹೀತೋಫೆಲನು ತನ್ನ ಆಲೋಚನೆಯು ನಡೆಯಲಿಲ್ಲವೆಂದು ತಿಳಿದಾಗ ಅವನು ಕತ್ತೆಗೆ ತಡಿಹಾಕಿಸಿ, ಅದರ ಮೇಲೆ ತನ್ನ ಊರಿಗೆ ಹೋದನು. ತನ್ನ ಮನೆಯಲ್ಲಿ ವ್ಯವಸ್ಥೆಮಾಡಿದ ನಂತರ, ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು