ಆಶ್ಚರ್ಯಕರ ವಿವರಗಳು
ಬೈಬಲಿನಲ್ಲಿ ಅವಳಿಗಳು
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 8 ವಾಕ್ಯಭಾಗಗಳು, ಸಾಲು ಸಾಲಾಗಿ.
ಏಸಾವ ಮತ್ತು ಯಾಕೋಬ
- ರೆಬೆಕ್ಕಳ ಗರ್ಭದಲ್ಲಿ ಅವಳಿ ಮಕ್ಕಳು ಒಂದನ್ನೊಂದು ನೂಕಾಡಿದವುಆದಿ 25:22
ವಚನಗಳು
ಆದಿ 25:22ಆಕೆಯ ಗರ್ಭದಲ್ಲಿ ಶಿಶುಗಳು ಒಂದನ್ನೊಂದು ನೂಕಾಡುತ್ತಿದ್ದಾಗ ಆಕೆಯು, “ಹೀಗಾದರೆ ನಾನು ಹೇಗೆ ಬದುಕಬೇಕು” ಎಂದು ಹೇಳಿ ಇದರ ವಿಷಯದಲ್ಲಿ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ಹೋದಳು.
- ಏಸಾವನು ಕೆಂಪಾಗಿಯೂ ಮೈತುಂಬಾ ಕೂದಲುಳ್ಳವನಾಗಿಯೂ ಮೊದಲು ಹೊರಗೆ ಬಂದನುಆದಿ 25:24–25
ವಚನಗಳು
ಆದಿ 25:24–25ಆಕೆ ದಿನತುಂಬಿದಾಗ ಅವಳಿ ಮಕ್ಕಳನ್ನು ಹೆತ್ತಳು. ಮೊದಲು ಹುಟ್ಟಿದ್ದು ಕೆಂಪಾಗಿಯೂ ಮೈಮೇಲೆಲ್ಲಾ ಕೂದಲಿನ ವಸ್ತ್ರದಂತೆ ರೋಮವುಳ್ಳದ್ದಾಗಿಯೂ ಇತ್ತು. ಅದಕ್ಕೆ “ಏಸಾವ” ಎಂದು ಹೆಸರಿಟ್ಟರು.
- ಯಾಕೋಬನು ಏಸಾವನ ಹಿಮ್ಮಡಿಯನ್ನು ಹಿಡಿದುಕೊಂಡು ಹೊರಗೆ ಬಂದನುಆದಿ 25:26
ವಚನಗಳು
ಆದಿ 25:26ಎರಡನೆಯ ಶಿಶುವು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡಿದುಕೊಂಡು ಹುಟ್ಟಿದ್ದರಿಂದ ಅದಕ್ಕೆ “ಯಾಕೋಬ” ಎಂದು ಹೆಸರಿಟ್ಟರು. ಇವರಿಬ್ಬರು ಹುಟ್ಟಿದಾಗ ಇಸಾಕನು ಅರುವತ್ತು ವರ್ಷದವನಾಗಿದ್ದನು.
- ಅವಳಿಗಳು ಹುಟ್ಟಿದಾಗ ಇಸಾಕನಿಗೆ ಅರುವತ್ತು ವರ್ಷಆದಿ 25:26
ವಚನಗಳು
ಆದಿ 25:26ಎರಡನೆಯ ಶಿಶುವು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡಿದುಕೊಂಡು ಹುಟ್ಟಿದ್ದರಿಂದ ಅದಕ್ಕೆ “ಯಾಕೋಬ” ಎಂದು ಹೆಸರಿಟ್ಟರು. ಇವರಿಬ್ಬರು ಹುಟ್ಟಿದಾಗ ಇಸಾಕನು ಅರುವತ್ತು ವರ್ಷದವನಾಗಿದ್ದನು.
ಪೆರೆಚ್ ಮತ್ತು ಜೆರಹ
- ತಾಮಾರಳು ಅವಳಿಗಳನ್ನು ಹೆತ್ತಳು; ಒಬ್ಬನ ಕೈಗೆ ಕೆಂಪು ದಾರವನ್ನು ಕಟ್ಟಲಾಯಿತುಆದಿ 38:27–28
ವಚನಗಳು
ಆದಿ 38:27–28ತಾಮಾರಳಿಗೆ ಹೆರಿಗೆ ಕಾಲ ಬಂದಾಗ ಆಕೆಯ ಗರ್ಭದಲ್ಲಿ ಅವಳಿ ಮಕ್ಕಳಿರುವುದು ಕಂಡುಬಂದಿತು. ಆಕೆಯು ಹೆರುವಾಗ ಒಂದು ಮಗುವು ಮುಂದಕ್ಕೆ ಕೈಚಾಚಲು ಸೂಲಗಿತ್ತಿಯು, “ಇದು ಮೊದಲು ಹೊರಗೆ ಬಂದದ್ದು” ಎಂದು ಹೇಳಿ ಅದರ ಕೈಗೆ ಕೆಂಪು ದಾರವನ್ನು ಕಟ್ಟಿದಳು.
- ಆದರೆ ಅವನ ತಮ್ಮನು ಮೊದಲು ಹೊರಗೆ ಬಂದನು, ಅವನಿಗೆ ಪೆರೆಚ್ ಎಂದು ಹೆಸರಿಡಲಾಯಿತುಆದಿ 38:29
ವಚನಗಳು
ಆದಿ 38:29ಅದು ಕೈಯನ್ನು ಹಿಂದಕ್ಕೆ ತೆಗೆಯಲು, ಅದರೊಡನೆ ಇದ್ದ ಮತ್ತೊಂದು ಶಿಶುವು ಹೊರಗೆ ಬಂದಿತು. ಸೂಲಗಿತ್ತಿಯು ಇದನ್ನು ಕಂಡು, “ನೀನು ಛೇದಿಸಿಕೊಂಡು ಬಂದೆಯಾ?” ಎಂದು ಹೇಳಿ, ಅದಕ್ಕೆ “ಪೆರೆಚ್” ಎಂದು ಹೆಸರಾಯಿತು.
- ಆ ಮೇಲೆ ಕೈಗೆ ಕೆಂಪು ದಾರವಿದ್ದ ಜೆರಹನು ಬಂದನುಆದಿ 38:30
ವಚನಗಳು
ಆದಿ 38:30ತರುವಾಯ ಕೈಗೆ ಕೆಂಪು ನೂಲು ಕಟ್ಟಿಸಿಕೊಂಡ ಶಿಶುವು ಹೊರಗೆ ಬಂದಿತು. ಅದಕ್ಕೆ “ಜೆರಹ” ಎಂದು ಹೆಸರಾಯಿತು.
ಇದಲ್ಲದೆ
- ಅಶ್ವಿನೀದೇವತೆಗಳೆಂಬ ಚಿಹ್ನೆಯಿದ್ದ ಅಲೆಕ್ಸಾಂದ್ರಿಯದ ಹಡಗಿನಲ್ಲಿ ಪೌಲನು ಪ್ರಯಾಣಮಾಡಿದನುಅ. ಕೃ 28:11
ವಚನಗಳು
ಅ. ಕೃ 28:11ಮೂರು ತಿಂಗಳಾದ ಮೇಲೆ ಅಲೆಕ್ಸಾಂದ್ರಿಯದಿಂದ ಬಂದು, ಆ ದ್ವೀಪದಲ್ಲಿ ಹಿಮಕಾಲವನ್ನು ಕಳೆಯಲು ತಂಗಿದ್ದ ಒಂದು ಹಡಗನ್ನು ಹತ್ತಿ ಹೊರಟೆವು. ಆ ಹಡಗಿಗೆ ಅಶ್ವಿನೀದೇವತೆಗಳೆಂಬ ಚಿಹ್ನೆ ಇತ್ತು.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು