ಅನ್ವೇಷಿಸಿ › ವಿಷಯಗಳು › ಪಾದಗಳನ್ನೂ ಕೈಗಳನ್ನೂ ತೊಳೆಯುವುದು
ಆಶ್ಚರ್ಯಕರ ವಿವರಗಳು
ಬೈಬಲಿನಲ್ಲಿ ಪಾದಗಳನ್ನೂ ಕೈಗಳನ್ನೂ ತೊಳೆಯುವುದು
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 27 ವಾಕ್ಯಭಾಗಗಳು, ಸಾಲು ಸಾಲಾಗಿ.
- ಅಬ್ರಹಾಮನು ತನ್ನ ಅತಿಥಿಗಳಿಗೆ ಕಾಲು ತೊಳೆದುಕೊಂಡು ವಿಶ್ರಮಿಸಿಕೊಳ್ಳಲು ನೀರು ಕೊಡುತ್ತಾನೆಆದಿ 18:4
ವಚನಗಳು
ಆದಿ 18:4ನೀರು ತರಿಸಿಕೊಡುತ್ತೇನೆ; ನಿಮ್ಮ ಕಾಲುಗಳನ್ನು ತೊಳೆದುಕೊಂಡು ಮರದ ನೆರಳಿನಲ್ಲಿ ವಿಶ್ರಮಿಸಿಕೊಳ್ಳಿರಿ.
- ಲೋಟನು: ‘ಕಾಲುಗಳನ್ನು ತೊಳೆದುಕೊಳ್ಳಿರಿ’, ರಾತ್ರಿ ಇಲ್ಲಿ ಕಳೆಯಿರಿಆದಿ 19:2
ವಚನಗಳು
ಆದಿ 19:2“ಸ್ವಾಮಿಗಳೇ, ನಿಮ್ಮ ದಾಸನ ಮನೆಗೆ ಬಂದು ಇಳಿದುಕೊಂಡು ಕಾಲುಗಳನ್ನು ತೊಳೆದುಕೊಳ್ಳಿರಿ; ಬೆಳಿಗ್ಗೆ ನಿಮ್ಮ ಮಾರ್ಗ ಹಿಡಿದುಕೊಂಡು ಹೋಗಬಹುದು” ಅಂದನು. ಅವರು, “ಹಾಗಲ್ಲ, ಬೀದಿಯಲ್ಲೇ ರಾತ್ರಿ ಕಳೆಯುತ್ತೇವೆ” ಎನ್ನಲು
- ಲಾಬಾನನ ಮನೆಯವರು ಅಬ್ರಹಾಮನ ಸೇವಕನಿಗೂ ಅವನ ಜನರಿಗೂ ಕಾಲು ತೊಳೆಯಲು ನೀರು ಕೊಡುತ್ತಾರೆಆದಿ 24:32
ವಚನಗಳು
ಆದಿ 24:32ಆ ಮನುಷ್ಯನು ಮನೆಯೊಳಕ್ಕೆ ಬಂದಾಗ ಲಾಬಾನನು ಒಂಟೆಗಳ ಹೊರೆಗಳನ್ನು ಇಳಿಸಿ ಅವುಗಳಿಗೆ ಹುಲ್ಲನ್ನು, ಮೇವನ್ನು ಕೊಡಿಸಿ ಆ ಮನುಷ್ಯನ ಮತ್ತು ಅವನ ಸಂಗಡ ಇದ್ದವರ ಕಾಲುಗಳನ್ನು ತೊಳೆಯುವುದಕ್ಕೆ ನೀರನ್ನು ಕೊಟ್ಟನು.
- ಯೋಸೇಫನ ಮನೆವಾರ್ತೆಯವನು ಅಣ್ಣಂದಿರಿಗೆ ಕಾಲು ತೊಳೆಯಲು ನೀರು ಕೊಡುತ್ತಾನೆಆದಿ 43:24
ವಚನಗಳು
ಆದಿ 43:24ಅವರೆಲ್ಲರನ್ನೂ ಯೋಸೇಫನ ಮನೆಯೊಳಗೆ ಕರೆದುಕೊಂಡು ಬಂದನು. ಕಾಲುಗಳನ್ನು ತೊಳೆಯುವುದಕ್ಕೆ ನೀರನ್ನು ಕೊಡಿಸಿ, ಅವರ ಕತ್ತೆಗಳಿಗೂ ಮೇವು ಹಾಕಿಸಿದನು.
- ಗಿಬೆಯದ ಮುದುಕನ ಮನೆಯಲ್ಲಿ ಅವರು ಕಾಲು ತೊಳೆದುಕೊಂಡು ಅನ್ನಪಾನ ಮಾಡಿದರುನ್ಯಾಯ 19:21
ವಚನಗಳು
ನ್ಯಾಯ 19:21ಈ ರಾತ್ರಿಯನ್ನು ಬೀದಿಯಲ್ಲಿ ಕಳೆಯಬೇಡ, ನನ್ನ ಮನೆಗೆ ಬಾ” ಎಂದು ಹೇಳಿ ಅವನನ್ನು ಕರೆದುಕೊಂಡು ಹೋಗಿ ಅವನ ಕತ್ತೆಗಳಿಗೆ ಮೇವು ಕೊಟ್ಟನು. ಅವರು ತಮ್ಮ ಕೈಕಾಲುಗಳನ್ನು ತೊಳೆದುಕೊಂಡು ಅಲ್ಲಿ ಅನ್ನಪಾನಗಳನ್ನು ತೆಗೆದುಕೊಂಡರು.
- ಅಬೀಗೈಲಳು: ನನ್ನ ಒಡೆಯನ ಸೇವಕರ ಪಾದಗಳನ್ನು ತೊಳೆಯಲು ಸಿದ್ಧಳು1 ಸಮು 25:41
ವಚನಗಳು
1 ಸಮು 25:41ಆಕೆ ಎದ್ದು ನಮಸ್ಕಾರಮಾಡಿ ಸೇವಕರಿಗೆ, “ನಿನ್ನ ದಾಸಿಯಾದ ನಾನು ನನ್ನ ಸ್ವಾಮಿಯ ಸೇವಕರ ಪಾದಗಳನ್ನು ತೊಳೆಯುವ ಸೇವಕಿಯಾಗುವುದಕ್ಕೆ ಸಿದ್ಧಳಾಗಿದ್ದೇನೆ” ಎಂದು ಉತ್ತರಕೊಟ್ಟು,
- ದಾವೀದನು ಊರೀಯನಿಗೆ: “ಮನೆಗೆ ಹೋಗಿ ಕೈಕಾಲು ತೊಳೆದುಕೋ”2 ಸಮು 11:8
ವಚನಗಳು
2 ಸಮು 11:8ಅವನಿಗೆ, “ಮನೆಗೆ ಹೋಗಿ ಕೈಕಾಲು ತೊಳೆದುಕೋ” ಎಂದು ಹೇಳಿದನು. ಊರೀಯನು ಅರಮನೆಯಿಂದ ಹೊರಟ ಕೂಡಲೆ ಅವನ ಹಿಂದೆಯೆ ಅರಸನ ಭೋಜನ ಪದಾರ್ಥಗಳು ಹೋದವು.
- ದಾವೀದನು ಹೊರಟುಹೋಗಿದ್ದಾಗ ಮೆಫೀಬೋಶೆತನು ತನ್ನ ಪಾದಗಳನ್ನು ಉಪಚರಿಸಿಕೊಂಡಿರಲಿಲ್ಲ2 ಸಮು 19:24
ವಚನಗಳು
2 ಸಮು 19:24ತರುವಾಯ ಸೌಲನ ಮೊಮ್ಮಗನಾದ ಮೆಫೀಬೋಶೆತನು ಅರಸನನ್ನು ಎದುರುಗೊಳ್ಳುವುದಕ್ಕಾಗಿ ಬಂದನು. ಅರಸನು ಯೆರೂಸಲೇಮನ್ನು ಬಿಟ್ಟಂದಿನಿಂದ ಸುರಕ್ಷಿತವಾಗಿ ಹಿಂದಿರುಗುವ ವರೆಗೂ ಇವನು ತನ್ನ ಕಾಲುಗಳನ್ನು ತೊಳೆದುಕೊಂಡಿರಲಿಲ್ಲ, ಮೀಸೆಯನ್ನು ಕತ್ತರಿಸಿರಲಿಲ್ಲ, ಬಟ್ಟೆಯನ್ನು ಒಗೆಸಿಕೊಂಡಿರಲಿಲ್ಲ.
- ಪರಮಗೀತೆ: “ಪಾದಗಳನ್ನು ತೊಳೆದುಕೊಂಡೆನಲ್ಲಾ, ಅವುಗಳನ್ನು ಹೇಗೆ ಕೊಳೆಮಾಡಿಕೊಳ್ಳಲಿ?”ಪ.ಗೀ 5:3
ವಚನಗಳು
ಪ.ಗೀ 5:3“ನನ್ನ ಒಳಂಗಿಯನ್ನು ತೆಗೆದೆನಲ್ಲಾ, ಅದನ್ನು ಹೇಗೆ ಹಾಕಿಕೊಂಡೇನು? ಪಾದಗಳನ್ನು ತೊಳೆದುಕೊಂಡೆನಲ್ಲಾ, ಅವುಗಳನ್ನು ಹೇಗೆ ಕೊಳೆಮಾಡಿಕೊಳ್ಳಲಿ?” ಎಂದು ನಾನು ಅಂದುಕೊಂಡಾಗ,
ಸುವಾರ್ತೆಗಳಲ್ಲಿ
- ಯೇಸು ಸೀಮೋನನಿಗೆ: ನೀನು ನನ್ನ ಕಾಲುಗಳಿಗೆ ನೀರು ಕೊಡಲಿಲ್ಲಲೂಕ 7:44
ವಚನಗಳು
ಲೂಕ 7:44ಆ ಹೆಂಗಸಿನ ಕಡೆಗೆ ತಿರುಗಿಕೊಂಡು ಸೀಮೋನನಿಗೆ ಹೇಳಿದ್ದೇನಂದರೆ, “ಈ ಹೆಂಗಸನ್ನು ನೋಡಿದ್ದಿಯಾ? ನಾನು ನಿನ್ನ ಮನೆಗೆ ಬಂದಾಗ ನೀನು ನನ್ನ ಕಾಲಿಗೆ ನೀರು ಕೊಡಲಿಲ್ಲ; ಇವಳಾದರೋ ನನ್ನ ಕಾಲುಗಳನ್ನು ಕಣ್ಣೀರಿನಿಂದ ನೆನಸಿ ತನ್ನ ತಲೆಯಕೂದಲಿನಿಂದ ಒರಸಿದಳು.
- ಒಬ್ಬ ಸ್ತ್ರೀಯು ತನ್ನ ಕಣ್ಣೀರಿನಿಂದ ಆತನ ಪಾದಗಳನ್ನು ತೋಯಿಸಿ ತನ್ನ ತಲೆಕೂದಲಿನಿಂದ ಒರಸಿದಳುಲೂಕ 7:38
ವಚನಗಳು
ಲೂಕ 7:38ಯೇಸುವಿನ ಹಿಂದೆ ಪಾದಗಳ ಬಳಿಯಲ್ಲಿ ನಿಂತುಕೊಂಡು ಅಳುತ್ತಾ ತನ್ನ ಕಣ್ಣೀರಿನಿಂದ ಆತನ ಪಾದಗಳನ್ನು ನೆನಸುತ್ತಾ ತನ್ನ ತಲೆ ಕೂದಲಿನಿಂದ ಒರಸಿ, ಪಾದಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು.
- ಮರಿಯಳು ಜಟಾಮಾಂಸಿ ತೈಲದಿಂದ ಯೇಸುವಿನ ಪಾದಗಳಿಗೆ ಹಚ್ಚಿ ತನ್ನ ತಲೆಕೂದಲಿನಿಂದ ಒರಸಿದಳುಯೋಹಾ 12:3
ವಚನಗಳು
ಯೋಹಾ 12:3ಆಗ ಮರಿಯಳು ಬಹು ಬೆಲೆಯುಳ್ಳ ಸ್ವಚ್ಛ ಜಟಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು. ಆ ತೈಲದ ಪರಿಮಳವು ಮನೆಯಲ್ಲೆಲ್ಲಾ ತುಂಬಿಕೊಂಡಿತ್ತು.
- ಊಟದ ಸಮಯದಲ್ಲಿ ಯೇಸು ಸೊಂಟಕ್ಕೆ ಕೈಪಾವಡವನ್ನು ಸುತ್ತಿಕೊಂಡು ಶಿಷ್ಯರ ಪಾದಗಳನ್ನು ತೊಳೆದನುಯೋಹಾ 13:4–5
ವಚನಗಳು
ಯೋಹಾ 13:4–5ಆತನು ಊಟದಿಂದ ಎದ್ದು ತನ್ನ ಮೇಲುಹೊದಿಕೆಯನ್ನು ತೆಗೆದಿಟ್ಟು ಅಂಗ ವಸ್ತ್ರವನ್ನು ತೆಗೆದುಕೊಂಡು ನಡುವಿಗೆ ಕಟ್ಟಿಕೊಂಡನು. ಅನಂತರ ಬೋಗುಣಿಯಲ್ಲಿ ನೀರು ಹಾಕಿಕೊಂಡು ಶಿಷ್ಯರ ಪಾದಗಳನ್ನು ತೊಳೆಯುತ್ತಾ, ತಾನು ಸೊಂಟಕ್ಕೆ ಕಟ್ಟಿಕೊಂಡ ಅಂಗವಸ್ತ್ರದಿಂದ ಪಾದಗಳನ್ನು ಒರಸುವುದಕ್ಕೂ ಪ್ರಾರಂಭಿಸಿದನು.
- ಪೇತ್ರನು: “ನೀನು ನನ್ನ ಪಾದಗಳನ್ನು ಎಂದಿಗೂ ತೊಳೆಯಬಾರದು”ಯೋಹಾ 13:8
ವಚನಗಳು
ಯೋಹಾ 13:8ಪೇತ್ರನು ಆತನಿಗೆ, “ನೀನು ನನ್ನ ಪಾದಗಳನ್ನು ಎಂದಿಗೂ ತೊಳೆಯಬಾರದು” ಎಂದು ಹೇಳಿದ್ದಕ್ಕೆ, ಯೇಸು, “ನಾನು ನಿನ್ನನ್ನು ತೊಳೆಯದಿದ್ದರೆ ನನ್ನೊಂದಿಗೆ ನಿನಗೆ ಪಾಲು ಇರುವುದಿಲ್ಲ” ಎಂದನು.
- ಯೇಸು: ಸ್ನಾನಮಾಡಿದವನು ಪಾದಗಳನ್ನು ಮಾತ್ರ ತೊಳೆದುಕೊಂಡರೆ ಸಾಕುಯೋಹಾ 13:10
ವಚನಗಳು
ಯೋಹಾ 13:10ಯೇಸು ಅವನಿಗೆ, “ಸ್ನಾನಮಾಡಿಕೊಂಡವನಿಗೆ ತನ್ನ ಪಾದಗಳನ್ನು ಮಾತ್ರ ತೊಳೆದುಕೊಂಡರೆ ಸಾಕು, ಅವನು ಸಂಪೂರ್ಣವಾಗಿ ಶುದ್ಧನಾಗಿದ್ದಾನೆ. ನೀವೂ ಶುದ್ಧರಾಗಿದ್ದೀರಿ. ಆದರೆ ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ” ಎಂದು ಹೇಳಿದನು.
- ‘ನೀವು ಸಹ ಒಬ್ಬರ ಪಾದಗಳನ್ನೊಬ್ಬರು ತೊಳೆಯಬೇಕು’ಯೋಹಾ 13:14
ವಚನಗಳು
ಯೋಹಾ 13:14ಹಾಗಾದರೆ ಕರ್ತನೂ, ಗುರುವೂ ಆಗಿರುವ ನಾನೇ ನಿಮ್ಮ ಪಾದಗಳನ್ನು ತೊಳೆದಿರುವಾಗ, ನೀವು ಸಹ ಒಬ್ಬರ ಪಾದಗಳನ್ನೊಬ್ಬರು ತೊಳೆಯಬೇಕು.
- ದೇವಜನರ ಪಾದಗಳನ್ನು ತೊಳೆದದ್ದಕ್ಕಾಗಿ ಹೆಸರುವಾಸಿಯಾದ ವಿಧವೆ1 ತಿಮೊ 5:10
ವಚನಗಳು
1 ತಿಮೊ 5:10ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡವಳೂ ಆಗಿದ್ದಲ್ಲಿ, ಅವರು ಮಕ್ಕಳನ್ನು ಸಾಕಿಕೊಂಡು, ಅತಿಥಿಸತ್ಕಾರವನ್ನು ಮಾಡುತ್ತಾ, ದೇವಜನರಿಗೆ ಉಪಚಾರಮಾಡಿದವಳಾಗಲಿ, ಸಂಕಟದಲ್ಲಿ ಬಿದ್ದವರಿಗೆ ಸಹಾಯಮಾಡುತ್ತಾ ಎಲ್ಲಾ ಸತ್ಕಾರ್ಯಗಳಲ್ಲಿ ಆಸಕ್ತಿಯುಳ್ಳವಳಾಗಿರಲಿ.
ಕೈ ತೊಳೆಯುವುದು
- ಸೇವೆ ಮಾಡುವ ಮೊದಲು ಯಾಜಕರು ತಾಮ್ರದ ಗಂಗಾಳದ ಬಳಿ ಕೈಕಾಲು ತೊಳೆದುಕೊಳ್ಳುತ್ತಿದ್ದರುವಿಮೋ 30:18–21, ವಿಮೋ 40:31
ವಚನಗಳು
ವಿಮೋ 30:18–21“ಸ್ನಾನಕ್ಕಾಗಿ ಒಂದು ತಾಮ್ರದ ತೊಟ್ಟಿಯನ್ನೂ ಅದಕ್ಕೆ ತಾಮ್ರದ ಪೀಠವನ್ನೂ ಮಾಡಿಸಿ ದೇವದರ್ಶನದ ಗುಡಾರಕ್ಕೂ, ಯಜ್ಞವೇದಿಗೂ ನಡುವೆ ಇಟ್ಟು ಅದರಲ್ಲಿ ನೀರು ತುಂಬಿಸಬೇಕು. ಆರೋನನೂ ಅವನ ಮಕ್ಕಳೂ ಅದರಿಂದ ಕೈಕಾಲುಗಳನ್ನು ತೊಳೆದುಕೊಳ್ಳಬೇಕು. ಅವರು ದೇವದರ್ಶನದ ಗುಡಾರದೊಳಗೆ ಹೋಗುವಾಗ ಹಾಗೂ ದೇವರ ಸೇವೆಯನ್ನು ಮಾಡುವವರಾಗಿ ಯೆಹೋವನಿಗೆ ಹೋಮವನ್ನು ಸಮರ್ಪಿಸುವುದಕ್ಕಾಗಿ ಯಜ್ಞವೇದಿಯ ಬಳಿಗೆ ಬರುವಾಗ ಜೀವದಿಂದಿರಲು ಕೈಕಾಲುಗಳನ್ನು ತೊಳೆದುಕೊಂಡು ಬರಬೇಕು. ತೊಳೆದುಕೊಳ್ಳದೆ ಬಂದರೆ ಮರಣ ಶಿಕ್ಷೆಯಾಗುವುದು. ಇದು ಅವನಿಗೂ ಮತ್ತು ಅವನ ಸಂತತಿಯವರಿಗೂ ಶಾಶ್ವತ ನಿಯಮವಾಗಿರಬೇಕು.”
ವಿಮೋ 40:31ಮೋಶೆಯು, ಆರೋನನು ಮತ್ತು ಅವನ ಮಕ್ಕಳೂ ಅದರಲ್ಲಿ ಕೈಕಾಲು ತೊಳೆದುಕೊಂಡರು.
- ಕೊಲೆಗಾರನು ಗೊತ್ತಿಲ್ಲದ ಕೊಲೆಗಾಗಿ ಹಿರಿಯರು ಕಡಸಿನ ಮೇಲೆ ತಮ್ಮ ಕೈಗಳನ್ನು ತೊಳೆದುಕೊಳ್ಳುತ್ತಾರೆಧರ್ಮೋ 21:1, ಧರ್ಮೋ 21:6
ವಚನಗಳು
ಧರ್ಮೋ 21:1ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗಿ ಕೊಡುವ ದೇಶದಲ್ಲಿ ಹತನಾದ ಮನುಷ್ಯನ ಶವವು ಅಡವಿಯಲ್ಲಿ ಬಿದ್ದಿರುವುದನ್ನು ನೀವು ಕಂಡರೆ ಮತ್ತು ಅವನನ್ನು ಕೊಂದವನು ಯಾರೆಂಬುದು ತಿಳಿಯದೆ ಹೋದರೆ,
ಧರ್ಮೋ 21:6ಹತನಾದ ಮನುಷ್ಯನಿಗೆ ಹತ್ತಿರವಿರುವ ಗ್ರಾಮದ ಹಿರಿಯರು, ತಗ್ಗಿನಲ್ಲಿ ಕುತ್ತಿಗೆ ಮುರಿಯಲ್ಪಟ್ಟ ಆ ಮಣಕದ ಮೇಲೆ ತಮ್ಮ ಕೈಗಳನ್ನು ತೊಳೆದುಕೊಂಡು,
- ಪಿಲಾತನು ಜನರ ಮುಂದೆ ಕೈ ತೊಳೆದುಕೊಂಡನು: “ಈ ನೀತಿವಂತನನ್ನು ಕೊಲ್ಲಿಸುವುದರಲ್ಲಿ ನಾನು ನಿರಪರಾಧಿ”ಮತ್ತಾ 27:24
ವಚನಗಳು
ಮತ್ತಾ 27:24ಆಗ ಪಿಲಾತನು ತನ್ನ ಯತ್ನ ನಡೆಯುವುದಿಲ್ಲ ಗದ್ದಲ ಮಾತ್ರ ಹೆಚ್ಚಾಗುತ್ತದೆ ಎಂದು ತಿಳಿದು ನೀರನ್ನು ತೆಗೆದುಕೊಂಡು ಜನರ ಮುಂದೆ ಕೈ ತೊಳೆದುಕೊಂಡು, “ಈ ನೀತಿವಂತನನ್ನು ಕೊಲ್ಲಿಸುವುದರಲ್ಲಿ ನಾನು ನಿರಪರಾಧಿ, ನೀವೇ ನೋಡಿಕೊಳ್ಳಿರಿ” ಎನ್ನಲು
- ಹಿರಿಯರ ಸಂಪ್ರದಾಯದ ಪ್ರಕಾರ ಫರಿಸಾಯರು ಕೈ ತೊಳೆದುಕೊಳ್ಳದೆ ಊಟಮಾಡುವುದಿಲ್ಲಮಾರ್ಕ 7:3–4
ವಚನಗಳು
ಮಾರ್ಕ 7:3–4ಫರಿಸಾಯರೂ ಯೆಹೂದ್ಯರೆಲ್ಲರೂ ಹಿರಿಯರಿಂದ ಬಂದ ಪದ್ಧತಿಯಂತೆ ತಮ್ಮ ಕೈಗಳನ್ನು ವಿಧಿಬದ್ಧವಾಗಿ ತೊಳೆಯದೆ ಆಹಾರ ತೆಗೆದುಕೊಳ್ಳುತ್ತಿರಲಿಲ್ಲ. ಮತ್ತು ಸಂತೆಗೆ ಹೋಗಿ ಬಂದರೆ ನೀರನ್ನು ಪ್ರೋಕ್ಷಿಸಿಕೊಳ್ಳದೆ ಇರುತ್ತಿರಲಿಲ್ಲ. ಬಹು ಸ್ವಚ್ಛವಾಗಿ ಸ್ನಾನಮಾಡಿಯೇ ಊಟಮಾಡುವುದು; ತಂಬಿಗೆ, ಚೆಂಬು, ತಪ್ಪಲೆಗಳನ್ನು ತೊಳೆಯುವುದು; ಇವೇ ಮೊದಲಾದ ಅನೇಕ ಆಚಾರಗಳು ಅವರಲ್ಲಿ ರೂಢಿಯಲ್ಲಿದ್ದುವು.
- ಯೇಸುವಿನ ಶಿಷ್ಯರು ಕೈ ತೊಳೆದುಕೊಳ್ಳದೆ ಏಕೆ ಊಟಮಾಡುತ್ತಾರೆಂದು ಅವರು ಕೇಳುತ್ತಾರೆಮತ್ತಾ 15:2, ಮಾರ್ಕ 7:5
ವಚನಗಳು
ಮತ್ತಾ 15:2“ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯವನ್ನು ಏಕೆ ಉಲ್ಲಂಘಿಸುತ್ತಾರೆ? ಅವರು ತಿನ್ನುವಾಗ ತಮ್ಮ ಕೈ ತೊಳೆದುಕೊಳ್ಳುವುದಿಲ್ಲ” ಎಂದು ಕೇಳಿದರು.
ಮಾರ್ಕ 7:5ಆದುದರಿಂದ ಫರಿಸಾಯರೂ ಶಾಸ್ತ್ರಿಗಳೂ ಯೇಸುವನ್ನು, “ನಿನ್ನ ಶಿಷ್ಯರು ಹಿರಿಯರ ಆಚಾರಗಳನ್ನೇಕೆ ಅನುಸರಿಸುವುದಿಲ್ಲ? ಅಶುದ್ಧವಾದ ಕೈಗಳಿಂದಲೇ ಅವರು ಊಟಮಾಡುತ್ತಿದ್ದಾರಲ್ಲಾ?” ಎಂದು ಕೇಳಿದರು.
- ಊಟಕ್ಕೆ ಮೊದಲು ಯೇಸು ತೊಳೆದುಕೊಳ್ಳಲಿಲ್ಲವೆಂದು ಒಬ್ಬ ಫರಿಸಾಯನು ಆಶ್ಚರ್ಯಪಟ್ಟನುಲೂಕ 11:38
ವಚನಗಳು
ಲೂಕ 11:38ಆತನು ಕೈತೊಳೆದುಕೊಳ್ಳದೆ ಊಟಕ್ಕೆ ಕುಳಿತದ್ದನ್ನು ಆ ಫರಿಸಾಯನು ಕಂಡು ಆಶ್ಚರ್ಯಪಟ್ಟನು.
- ಕಾನಾ ಊರಿನಲ್ಲಿ ಶುದ್ಧೀಕರಣದ ಆಚಾರಕ್ಕಾಗಿ ನೀರಿದ್ದ ಆರು ಕಲ್ಲಿನ ಬಾನೆಗಳುಯೋಹಾ 2:6
ವಚನಗಳು
ಯೋಹಾ 2:6ಯೆಹೂದ್ಯರ ಶುದ್ಧಾಚಾರ ಪದ್ಧತಿಯ ಪ್ರಕಾರ ಅಲ್ಲಿ ಆರು ಕಲ್ಲಿನ ಬಾನೆಗಳು ಇದ್ದವು. ಪ್ರತಿಯೊಂದು ಬಾನೆಯೂ ಎರಡು ಇಲ್ಲವೆ ಮೂರು ಕೊಳಗ ನೀರು ಹಿಡಿಯುವ ಅಳತೆಯುಳ್ಳದ್ದಾಗಿತ್ತು.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು