Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ವಿಷಯಗಳು › ಬಾವಿಗಳು

ಆಶ್ಚರ್ಯಕರ ವಿವರಗಳು

ಬೈಬಲಿನಲ್ಲಿ ಬಾವಿಗಳು

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 20 ವಾಕ್ಯಭಾಗಗಳು, ಸಾಲು ಸಾಲಾಗಿ.

  • ಹಾಗರಳು ಒಂದು ಬಾವಿಯನ್ನು ಕಂಡು ಹುಡುಗನಿಗೆ ನೀರು ಕುಡಿಸಿದಳುಆದಿ 21:19
    ವಚನಗಳು
    ಆದಿ 21:19ಇದಲ್ಲದೆ ದೇವರು ಅವಳ ಕಣ್ಣನ್ನು ತೆರೆದಿದ್ದರಿಂದ, ಅವಳು ಅಲ್ಲಿ ನೀರಿನ ಬಾವಿಯನ್ನು ಕಂಡು ತಿತ್ತಿಯಲ್ಲಿ ನೀರನ್ನು ತುಂಬಿಕೊಂಡು ಮಗನಿಗೆ ಕುಡಿಸಿದಳು.
  • ಬೇರ್ಷೆಬದಲ್ಲಿ ತಾನು ಬಾವಿಯನ್ನು ತೋಡಿದ್ದಕ್ಕೆ ಸಾಕ್ಷಿಯಾಗಿ ಅಬ್ರಹಾಮನು ಏಳು ಕುರಿಮರಿಗಳನ್ನು ಕೊಟ್ಟನುಆದಿ 21:25–31
    ವಚನಗಳು
    ಆದಿ 21:25–31ಅಬೀಮೆಲೆಕನ ಆಳುಗಳು ಒಂದು ಬಾವಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಂಡದ್ದರಿಂದ ಅಬ್ರಹಾಮನು ಅಬೀಮೆಲೆಕನ ಮೇಲೆ ತಪ್ಪು ಹೊರಿಸಲು, ಅಬೀಮೆಲೆಕನು, “ಈ ಕೆಲಸವನ್ನು ಮಾಡಿದವರು ಯಾರೋ ನಾನರಿಯೆ; ನೀನು ನನಗೆ ತಿಳಿಸಲೂ ಇಲ್ಲ, ಈಗಿನ ವರೆಗೆ ನಾನು ಈ ಸಂಗತಿಯನ್ನು ಕೇಳಲೂ ಇಲ್ಲ” ಎಂದನು. ಆ ನಂತರ ಅಬ್ರಹಾಮನು ಕುರಿದನಗಳನ್ನು ಅಬೀಮೆಲೆಕನಿಗೆ ದಾನ ಮಾಡಿದನು. ತರುವಾಯ ಅಬ್ರಹಾಮನು ಹಿಂಡಿನ ಏಳು ಹೆಣ್ಣು ಕುರಿಮರಿಗಳನ್ನು ಪ್ರತ್ಯೇಕವಾಗಿ ಇರಿಸಲು, ಅಬೀಮೆಲೆಕನು ಅಬ್ರಹಾಮನಿಗೆ “ನೀನು ಈ ಏಳು ಹೆಣ್ಣು ಕುರಿಮರಿಗಳನ್ನು ಪ್ರತ್ಯೇಕವಾಗಿ ಇರಿಸಲು ಕಾರಣವೇನು?” ಎಂದು ಕೇಳಿದನು. ಅದಕ್ಕೆ ಅಬ್ರಹಾಮನು, “ಈ ಬಾವಿಯನ್ನು ತೋಡಿಸಿದವನು ನಾನೇ ಎಂಬುದಕ್ಕೆ ಸಾಕ್ಷಿಯಾಗಿ ನೀನು ಈ ಏಳು ಹೆಣ್ಣು ಕುರಿಮರಿಗಳನ್ನು ನನ್ನ ಕೈಯಿಂದ ತೆಗೆದುಕೊಳ್ಳಬೇಕು” ಎಂದು ಹೇಳಿ, ಅವರಿಬ್ಬರೂ ಒಡಂಬಡಿಕೆ ಮಾಡಿಕೊಂಡರು. ಅವರಿಬ್ಬರು ಅಲ್ಲಿ ಪ್ರಮಾಣಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಹೆಸರಾಯಿತು.
  • ಫಿಲಿಷ್ಟಿಯರು ಅಬ್ರಹಾಮನ ಬಾವಿಗಳನ್ನು ಮುಚ್ಚಿಬಿಟ್ಟರು; ಇಸಾಕನು ಅವುಗಳನ್ನು ಮತ್ತೆ ತೋಡಿಸಿದನುಆದಿ 26:15, ಆದಿ 26:18
    ವಚನಗಳು
    ಆದಿ 26:15ಅವನ ತಂದೆಯಾದ ಅಬ್ರಹಾಮನ ಸೇವಕರು ಅಬ್ರಹಾಮನ ಕಾಲದಲ್ಲೇ ತೋಡಿದ್ದ ಬಾವಿಗಳನ್ನು ಫಿಲಿಷ್ಟಿಯರು ಮಣ್ಣುಹಾಕಿ ಮುಚ್ಚಿದ್ದರು.
    ಆದಿ 26:18ಅಬ್ರಹಾಮನು ತೋಡಿಸಿದ್ದ ಬಾವಿಗಳನ್ನು ಅವನು ಸತ್ತ ನಂತರ ಫಿಲಿಷ್ಟಿಯರು ಮುಚ್ಚಿ ಹಾಕಿದ್ದರಿಂದ ಇಸಾಕನು ಅವುಗಳನ್ನು ತಿರುಗಿ ಅಗೆಸಿ, ತಂದೆ ಇಟ್ಟಿದ್ದ ಹೆಸರುಗಳನ್ನೇ ಇಟ್ಟನು.
  • ಬಾವಿಗಳಿಗಾಗಿ ಜಗಳಗಳು: ಏಸೆಕ್, ಸಿಟ್ನಾ, ಆ ಮೇಲೆ ರೆಹೋಬೋತ್ಆದಿ 26:20–22
    ವಚನಗಳು
    ಆದಿ 26:20–22ಗೆರಾರಿನ ದನ ಕಾಯುವವರು ಬಂದು ಆ ನೀರು ತಮ್ಮದು ಎಂದು ಹೇಳಿ ಇಸಾಕನ ದನ ಕಾಯುವವರ ಸಂಗಡ ಜಗಳವಾಡಿದ್ದರಿಂದ ಇಸಾಕನು ಆ ಬಾವಿಗೆ “ಏಸೆಕ್” ಎಂದು ಹೆಸರಿಟ್ಟನು. ತರುವಾಯ ಅವನ ಜನರು ಬೇರೊಂದು ಬಾವಿಯನ್ನು ತೋಡಿದಾಗ ಆ ದೇಶದವರು ಅದಕ್ಕಾಗಿಯೂ ಜಗಳವಾಡಿದ್ದರಿಂದ ಅವನು ಅದಕ್ಕೆ “ಸಿಟ್ನಾ” ಎಂದು ಹೆಸರಿಟ್ಟನು. ಅವನು ಅಲ್ಲಿಂದ ಹೊರಟು ಮತ್ತೊಂದು ಬಾವಿಯನ್ನೂ ತೋಡಿಸಿದಾಗ ಅದರ ವಿಷಯದಲ್ಲಿ ಯಾರೂ ಜಗಳವಾಡದೆ ಹೋದುದರಿಂದ ಅವನು, “ಈಗ ಯೆಹೋವನು ನಮಗೋಸ್ಕರ ಸ್ಥಳ ಮಾಡಿದ್ದರಿಂದ ಅಭಿವೃದ್ಧಿಯಾಗುವೆವು” ಎಂದು ಹೇಳಿ ಅದಕ್ಕೆ “ರೆಹೋಬೋತ್” ಎಂದು ಹೆಸರಿಟ್ಟನು.
  • ಇಸಾಕನ ಸೇವಕರು ನೀರನ್ನು ಕಂಡುಕೊಂಡರು: ಷಿಬಾ, ಬೇರ್ಷೆಬಆದಿ 26:32–33
    ವಚನಗಳು
    ಆದಿ 26:32–33ಅದೇ ದಿನದಲ್ಲಿ ಇಸಾಕನ ಸೇವಕರು ಬಂದು, “ನಮಗೆ ನೀರು ಸಿಕ್ಕಿತು” ಎಂದು ಹೇಳಿ ತಾವು ತೋಡಿದ ಬಾವಿಯ ಸಂಗತಿಯನ್ನು ತಿಳಿಸಿದರು. ಅವನು ಆ ಬಾವಿಗೆ “ಷಿಬಾ” ಎಂದು ಹೆಸರಿಟ್ಟನು. ಆದುದರಿಂದ ಅಲ್ಲಿರುವ ಊರಿಗೆ ಇಂದಿನವರೆಗೂ “ಬೇರ್ಷೆಬ” ಎಂದು ಹೆಸರಾಯಿತು.
  • ಬೆರ್ ಲಹೈರೋಯಿ ಎಂಬ ಬಾವಿಆದಿ 16:14
    ವಚನಗಳು
    ಆದಿ 16:14ಈ ಸಂಗತಿಯಿಂದ ಅಲ್ಲಿರುವ ಬಾವಿಗೆ “ಬೆರ್ ಲಹೈರೋಯಿ” ಎಂದು ಹೆಸರಾಯಿತು. ಅದು ಕಾದೇಶಿಗೂ ಬೆರೆದಿಗೂ ಮಧ್ಯದಲ್ಲಿ ಇದೆ.
  • ರೆಬೆಕ್ಕಳು ತನ್ನ ಕೊಡದೊಂದಿಗೆ ಬುಗ್ಗೆಯ ಬಳಿಗೆ ಬಂದಳುಆದಿ 24:16
    ವಚನಗಳು
    ಆದಿ 24:16ಆ ಹುಡುಗಿ ಬಹು ಸುಂದರಿಯೂ ಇನ್ನೂ ಮದುವೆಯಾಗದ ಕನ್ಯೆಯಾಗಿದ್ದಳು.
  • ಹಾರಾನಿನಲ್ಲಿ ಬಾವಿಯ ಬಾಯಿಯನ್ನು ದೊಡ್ಡ ಕಲ್ಲು ಮುಚ್ಚಿತ್ತುಆದಿ 29:2–3
    ವಚನಗಳು
    ಆದಿ 29:2–3ಅವನು ಕಣ್ಣೆತ್ತಿ ನೋಡಲಾಗಿ ಹೊಲದಲ್ಲಿ ಬಾವಿಯನ್ನು ಕಂಡನು. ಬಾವಿಯ ಹತ್ತಿರ ಮೂರು ಕುರಿಹಿಂಡುಗಳು ಮಲಗಿದ್ದವು. ಆ ಬಾವಿಯ ನೀರನ್ನು ಮಂದೆಗಳಿಗೆ ಕುಡಿಸುತ್ತಿದ್ದರು. ಆ ಬಾವಿಯ ಮೇಲೆ ಒಂದು ದೊಡ್ಡ ಕಲ್ಲನ್ನು ಇಡಲಾಗಿತ್ತು. ಹಿಂಡುಗಳೆಲ್ಲಾ ಅಲ್ಲಿ ಕೂಡಿದಾಗ ಕುರಿಕಾಯುವವರು ಬಾವಿಯ ಮೇಲೆ ಮುಚ್ಚಿದ್ದ ಕಲ್ಲನ್ನು ಉರುಳಿಸಿ ಕುರಿಗಳಿಗೆ ನೀರು ಕುಡಿಸಿ ತಿರುಗಿ ಕಲ್ಲನ್ನು ಬಾವಿಯ ಮೇಲೆ ಮುಚ್ಚುತ್ತಿದ್ದರು.
  • ಯಾಕೋಬನು ಕಲ್ಲನ್ನು ಉರುಳಿಸಿ ರಾಹೇಲಳ ಮಂದೆಗೆ ನೀರು ಕುಡಿಸಿದನುಆದಿ 29:10
    ವಚನಗಳು
    ಆದಿ 29:10ಯಾಕೋಬನು ತನ್ನ ತಾಯಿಯ ಅಣ್ಣನಾದ ಲಾಬಾನನ ಮಗಳಾದ ರಾಹೇಲಳನ್ನೂ ಲಾಬಾನನ ಕುರಿಗಳನ್ನೂ ಕಂಡಾಗ ಬಾವಿಯ ಹತ್ತಿರಕ್ಕೆ ಹೋಗಿ ಅದರ ಮೇಲೆ ಮುಚ್ಚಿದ್ದ ಕಲ್ಲನ್ನು ಸರಿಸಿ ಲಾಬನನ ಕುರಿಗಳಿಗೆ ನೀರು ಕುಡಿಸಿದನು.
  • ಮೋಶೆಯು ಮಿದ್ಯಾನಿನ ಒಂದು ಬಾವಿಯ ಬಳಿ ಕುಳಿತು ಏಳು ಮಂದಿ ಅಕ್ಕತಂಗಿಯರಿಗೆ ಸಹಾಯಮಾಡಿದನುವಿಮೋ 2:15–17
    ವಚನಗಳು
    ವಿಮೋ 2:15–17ನಡೆದ ಸಂಗತಿಯು ಫರೋಹನಿಗೆ ತಿಳಿದುಬಂದಾಗ, ಅವನು ಮೋಶೆಯನ್ನು ಕೊಲ್ಲಬೇಕೆಂದು ಆಲೋಚಿಸುತ್ತಿದ್ದನು. ಆದುದರಿಂದ ಮೋಶೆಯು ಫರೋಹನ ಬಳಿಯಿಂದ ಓಡಿಹೋಗಿ ಮಿದ್ಯಾನ್ ದೇಶದಲ್ಲಿದ್ದ ಒಂದು ಬಾವಿಯ ಬಳಿಯಲ್ಲಿ ಕುಳಿತುಕೊಂಡನು. ಮಿದ್ಯಾನರ ಯಾಜಕನಿಗೆ ಏಳು ಮಂದಿ ಹೆಣ್ಣು ಮಕ್ಕಳಿದ್ದರು. ಅವರು ಬಂದು ತಮ್ಮ ತಂದೆಯ ಕುರಿ ಮಂದೆಗಳಿಗೆ ನೀರು ಕುಡಿಸುವುದಕ್ಕಾಗಿ, ನೀರನ್ನು ಸೇದಿ ತೊಟ್ಟಿಗಳಲ್ಲಿ ತುಂಬಿಸುತ್ತಿದ್ದರು. ಕುರುಬರು ಬಂದು ಅವರನ್ನು ಬಾವಿಯ ಬಳಿಯಿಂದ ಓಡಿಸಲು, ಮೋಶೆಯು ಅವರಿಗೆ ಸಹಾಯಕನಾಗಿ ಬಂದು ಅವರ ಕುರಿಗಳಿಗೆ ನೀರನ್ನು ಕುಡಿಸಿದನು.
  • ಇಸ್ರಾಯೇಲರು ಬಾವಿಗೆ ಹಾಡಿದರು: ‘ಬಾವಿಯೇ, ಉಕ್ಕುತ್ತಾ ಬಾ!’ಅರಣ್ಯ 21:16–18
    ವಚನಗಳು
    ಅರಣ್ಯ 21:16–18ಅಲ್ಲಿಂದ ಅವರು ಬೇರ್ ಸ್ಥಳಕ್ಕೆ ಬಂದರು. ಯೆಹೋವನು ಮೋಶೆಗೆ ಹೇಳಿದ ಮಾತು ಇಲ್ಲಿನ ಬಾವಿಯ ವಿಷಯವೇ. ಯೆಹೋವನು ಮೋಶೆಗೆ, “ಜನರನ್ನು ಸೇರಿಸು. ನಾನು ಅವರಿಗೆ ನೀರನ್ನು ಕೊಡುವೆನು” ಅಂದನು. ಆಗ ಇಸ್ರಾಯೇಲರು ಈ ಹಾಡನ್ನು ಗಾನಮಾಡಿದರು; “ಬಾವಿಯೇ, ಉಕ್ಕುತ್ತಾ ಬಾ! ಜನರೇ, ಉಲ್ಲಾಸದಿಂದ ಗಾನಮಾಡಿರಿ ಇದು ಪ್ರಧಾನರು ಕೋಲುಗಳಿಂದ ತೋಡಿದ ಬಾವಿ, ಇದು ಜನಾಧಿಪತಿಗಳು ಕೋಲುಗಳಿಂದ ಅಗೆದ ಬಾವಿ” ಎಂಬುವುದೇ. ಅವರು ಅರಣ್ಯವನ್ನು ಬಿಟ್ಟು ಮತ್ತಾನಕ್ಕೂ,
  • ವಾಗ್ದತ್ತ ದೇಶದಲ್ಲಿ ತಾವು ತೋಡದ ಬಾವಿಗಳಿದ್ದವುಧರ್ಮೋ 6:11
    ವಚನಗಳು
    ಧರ್ಮೋ 6:11ತುಂಬಿದ ಮನೆಗಳನ್ನೂ, ನೀವು ತೋಡದ ನೀರುಗುಂಡಿಗಳನ್ನೂ, ನೀವು ಬೆಳಸದ ದ್ರಾಕ್ಷಿತೋಟಗಳನ್ನೂ ಮತ್ತು ಎಣ್ಣೆಮರಗಳನ್ನೂ ಅನುಭವಿಸುತ್ತಾ ತೃಪ್ತರಾಗಿರುವಾಗ,
  • ದಾವೀದನ ಗೂಢಚಾರರು ಬಹುರೀಮಿನಲ್ಲಿ ಒಂದು ಬಾವಿಯೊಳಗೆ ಅಡಗಿಕೊಂಡರು2 ಸಮು 17:18–19
    ವಚನಗಳು
    2 ಸಮು 17:18–19ಆದರೂ ಒಬ್ಬ ಯೌವನಸ್ಥನು ಅವರನ್ನು ನೋಡಿ ಅಬ್ಷಾಲೋಮನಿಗೆ ತಿಳಿಸಿದನು. ಅಷ್ಟರಲ್ಲಿ ಅವರಿಬ್ಬರೂ ಓಡಿಹೋಗಿ ಬಹುರೀಮಿನಲ್ಲಿ ಇದ್ದ ಒಬ್ಬನ ಮನೆಯನ್ನು ಹೊಕ್ಕರು. ಆ ಮನೆಯ ಅಂಗಳದಲ್ಲಿ ಒಂದು ಬಾವಿಯಿತ್ತು. ಅವರು ಅದರಲ್ಲಿ ಇಳಿದುಕೊಂಡರು. ಕೂಡಲೆ ಆ ಮನೆಯ ಹೆಂಗಸು ಅದರ ಮೇಲೆ ಒಂದು ಬಟ್ಟೆಯನ್ನು ಹಾಸಿ, ಅದರ ಮೇಲೆ ಗೋದಿಯ ನುಚ್ಚನ್ನು ಹರಡಿದಳು. ಇದರಿಂದ ಅವರು ಅಲ್ಲಿ ಅಡಗಿರುವ ವಿಷಯ ಯಾರಿಗೂ ಗೊತ್ತಾಗಲಿಲ್ಲ.
  • ಮೂವರು ಶೂರರು ಬೇತ್ಲೆಹೇಮಿನ ಬಾವಿಯಿಂದ ದಾವೀದನಿಗೆ ನೀರನ್ನು ತಂದರು2 ಸಮು 23:15–16
    ವಚನಗಳು
    2 ಸಮು 23:15–16ಅದೇ ಸಮಯದಲ್ಲಿ ದಾವೀದನು ಲವಲವಿಕೆಯಿಂದ “ಬೇತ್ಲೆಹೇಮ್ ಊರಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಯಾರಾದರೂ ನನಗೆ ತಂದುಕೊಡುವುದಾದರೆ ಎಷ್ಟೋ ಒಳ್ಳೆಯದು” ಎಂದೂ ಕೇಳಿದನು. ಕೂಡಲೇ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿ ಹೋಗಿ, ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತಂದು ಕೊಟ್ಟರು.
  • ಉಜ್ಜೀಯನು ತನ್ನ ದನಕರುಗಳಿಗಾಗಿ ಅನೇಕ ತೊಟ್ಟಿಗಳನ್ನು ತೋಡಿಸಿದನು2 ಪೂರ್ವ 26:10
    ವಚನಗಳು
    2 ಪೂರ್ವ 26:10ಅವನಿಗೆ ಇಳಿಜಾರಿನ ಪ್ರದೇಶದಲ್ಲಿಯೂ, ತಪ್ಪಲ ಸೀಮೆಯಲ್ಲಿಯೂ ಅಲ್ಲದೆ ಅಡವಿಯಲ್ಲಿಯೂ ಪಶುಗಳ ದೊಡ್ಡ ಮಂದೆಗಳು ಇದ್ದವು. ಆದುದರಿಂದ ಆ ಅಡವಿಯಲ್ಲಿ ಗೋಪುರಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿದನು. ಅವನಿಗೆ ವ್ಯವಸಾಯದಲ್ಲಿ ಬಹಳ ಅಭಿರುಚಿ ಇದ್ದುದರಿಂದ ಗುಡ್ಡ, ಫಲವತ್ತಾದ ಬಯಲು, ಇವುಗಳಲ್ಲಿ ಹೊಲ ಹಾಗು ದ್ರಾಕ್ಷಿ ತೋಟಗಳಲ್ಲಿ ಕೆಲಸಗಾರರನ್ನು ನೇಮಿಸಿದನು.
  • ಯೋಸೇಫನನ್ನು ನೀರಿಲ್ಲದ ಬರಿದಾದ ಗುಂಡಿಯೊಳಗೆ ಹಾಕಲಾಯಿತುಆದಿ 37:24
    ವಚನಗಳು
    ಆದಿ 37:24ಅವನನ್ನು ಹಿಡಿದು ಆ ಗುಂಡಿಯೊಳಗೆ ಹಾಕಿದರು. ಆ ಗುಂಡಿ ನೀರಿಲ್ಲದೆ ಬರಿದಾಗಿತ್ತು.
  • ಯೆರೆಮೀಯನು ಒಣಗಿದ ತೊಟ್ಟಿಯ ಕೆಸರಿನಲ್ಲಿ ಹೂತುಹೋದನುಯೆರೆ 38:6
    ವಚನಗಳು
    ಯೆರೆ 38:6ಆಗ ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದಿಳಿಸಿ ಹಾಕಿಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು; ಅದರೊಳಗೆ ಯೆರೆಮೀಯನು ಸಿಕ್ಕಿಕೊಂಡನು.
  • ಸುಮಾರು ಆರನೆಯ ತಾಸಿನಲ್ಲಿ ಯೇಸು ಯಾಕೋಬನ ಬಾವಿಯ ಬಳಿ ಕುಳಿತುಕೊಂಡನುಯೋಹಾ 4:6
    ವಚನಗಳು
    ಯೋಹಾ 4:6ಅಲ್ಲಿ ಯಾಕೋಬನು ತೆಗೆಸಿದ ಬಾವಿಯಿತ್ತು. ಯೇಸು ಪ್ರಯಾಣಮಾಡಿದ್ದರಿಂದ ಆಯಾಸಗೊಂಡು ಆ ಬಾವಿಯ ಬಳಿಯಲ್ಲಿ ಹಾಗೆ ಕುಳಿತುಕೊಂಡನು. ಆಗ ಹೆಚ್ಚು ಕಡಿಮೆ ಮಧ್ಯಾಹ್ನವಾಗಿತ್ತು.
  • ಸ್ತ್ರೀಯು: ಸೇದುವುದಕ್ಕೆ ನಿನ್ನ ಬಳಿ ಏನೂ ಇಲ್ಲ, ಬಾವಿಯೂ ಆಳವಾಗಿದೆಯೋಹಾ 4:11
    ವಚನಗಳು
    ಯೋಹಾ 4:11ಆ ಸ್ತ್ರೀ ಆತನಿಗೆ, “ಅಯ್ಯಾ, ಸೇದುವುದಕ್ಕೆ ನಿನ್ನಲ್ಲಿ ಏನೂ ಇಲ್ಲ ಮತ್ತು ಬಾವಿ ಆಳವಾಗಿದೆ, ಹೀಗಿರುವಾಗ, ಆ ಜೀವಕರವಾದ ನೀರು ನಿನಗೆ ಎಲ್ಲಿಂದ ಬಂದಿತು?

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು