ಅನ್ವೇಷಿಸಿ › ವಿಷಯಗಳು › ವಿಧವೆಯರು
ದೈನಂದಿನ ಜೀವನ
ಬೈಬಲಿನಲ್ಲಿ ವಿಧವೆಯರು
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 37 ವಾಕ್ಯಭಾಗಗಳು, ಸಾಲು ಸಾಲಾಗಿ.
ಧರ್ಮಶಾಸ್ತ್ರದಲ್ಲಿ
- ಯಾವ ವಿಧವೆಯನ್ನಾಗಲಿ ತಂದೆಯಿಲ್ಲದವರನ್ನಾಗಲಿ ಬಾಧಿಸಬಾರದುವಿಮೋ 22:22–24
ವಚನಗಳು
ವಿಮೋ 22:22–24ವಿಧವೆಯರನ್ನಾಗಲಿ, ದಿಕ್ಕಿಲ್ಲದ ಮಕ್ಕಳನ್ನಾಗಲಿ, ತೊಂದರೆಪಡಿಸಬಾರದು. ನೀವು ಇಂಥವರನ್ನು ತೊಂದರೆಪಡಿಸಿದರೆ ಅವರು ನನಗೆ ಮೊರೆಯಿಡುವರು ಆ ಮೊರೆಗೆ ನಾನು ಕಿವಿಗೊಡುವೆನೆಂದು ತಿಳಿದುಕೊಳ್ಳಿರಿ. ನಾನು ಕೋಪಗೊಂಡು ನಿಮ್ಮ ಶತ್ರುಗಳನ್ನು ಕತ್ತಿಯಿಂದ ಸಂಹಾರಮಾಡಿಸುವೆನು. ನಿಮ್ಮ ಹೆಂಡತಿಯರು ವಿಧವೆಯರಾಗುವರು. ನಿಮ್ಮ ಮಕ್ಕಳು ದಿಕ್ಕಿಲ್ಲದವರಾಗುವರು.
- ಉಳಿದ ಸಿವುಡುಗಳೂ ಎಣ್ಣೆಮರದ ಕಾಯಿಗಳೂ ದ್ರಾಕ್ಷಿಗಳೂ ವಿಧವೆಗಾಗಿ ಬಿಡಲ್ಪಡುತ್ತವೆಧರ್ಮೋ 24:19–21
ವಚನಗಳು
ಧರ್ಮೋ 24:19–21ನೀವು ಪೈರುಗಳನ್ನು ಕೊಯ್ಯುವಾಗ ಒಂದು ಸಿವುಡನ್ನು ಹೊಲದಲ್ಲೇ ಮರೆತುಬಂದರೆ ಅದನ್ನು ತರುವುದಕ್ಕೆ ಹಿಂದಕ್ಕೆ ಹೋಗಬಾರದು; ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು. ಎಣ್ಣೆಯಮರಗಳ ರೆಂಬೆಗಳನ್ನು ಹೊಡೆದು ಕಾಯಿಗಳನ್ನು ಉದುರಿಸಿದ ಮೇಲೆ ಪುನಃ ಉದುರಿಸುವುದಕ್ಕೆ ಹೋಗಬಾರದು; ಮಿಕ್ಕ ಕಾಯಿಗಳು ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ. ದ್ರಾಕ್ಷಿತೋಟದ ಬೆಳೆಯನ್ನು ಕೂಡಿಸಿಕೊಳ್ಳುವಾಗ ಹಕ್ಕಲಾಯಬಾರದು; ಅದು ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ.
- ಪ್ರತಿ ಮೂರನೆಯ ವರ್ಷದ ದಶಮಾಂಶವು ವಿಧವೆಗೂ ತಂದೆಯಿಲ್ಲದವನಿಗೂ ಪರದೇಶಿಗೂ ಆಹಾರವಾಗುತ್ತದೆಧರ್ಮೋ 14:28–29
ವಚನಗಳು
ಧರ್ಮೋ 14:28–29ಪ್ರತಿ ಮೂರನೆಯ ವರ್ಷದ ಬೆಳೆಯ ದಶಮಭಾಗವನ್ನು ತಂದು ನೀವು ಇರುವ ಊರಿನಲ್ಲಿಯೇ ಕೂಡಿಸಬೇಕು. ಆಗ ಊರಿನಲ್ಲಿರುವ ಅನ್ಯದೇಶದವರೂ, ಅನಾಥರು, ವಿಧವೆಯರೂ ಮತ್ತು ನಿಮ್ಮೊಡನೆ ಸ್ವತ್ತನ್ನು ಹೊಂದದೆಹೋದ ಲೇವಿಯರೂ ಊಟಮಾಡಿ ಸಂತೋಷವಾಗಿರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಮಾಡುವನು.
- ವಿಧವೆಯರೂ ಹಬ್ಬಗಳ ಸಂತೋಷದಲ್ಲಿ ಪಾಲುಗೊಳ್ಳುತ್ತಾರೆಧರ್ಮೋ 16:11, ಧರ್ಮೋ 16:14
ವಚನಗಳು
ಧರ್ಮೋ 16:11ಮತ್ತು ಆತನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮಿಸಬೇಕು.
ಧರ್ಮೋ 16:14ಅದರಲ್ಲಿ ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ಮತ್ತು ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ಸಂಭ್ರಮಿಸಬೇಕು.
- ವಿಧವೆಯ ಮೇಲಂಗಿಯನ್ನು ಒತ್ತೆಯಾಗಿ ತೆಗೆದುಕೊಳ್ಳಬಾರದುಧರ್ಮೋ 24:17
ವಚನಗಳು
ಧರ್ಮೋ 24:17ನೀವು ಪರದೇಶಿಯ ಅಥವಾ ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವಾಗ ನ್ಯಾಯವನ್ನು ಬಿಟ್ಟು ತೀರ್ಪು ಕೊಡಬಾರದು. ವಿಧವೆಯಿಂದ ಉಡುವ ಬಟ್ಟೆಯನ್ನು ಒತ್ತೆಯಿಡಿಸಿಕೊಳ್ಳಬಾರದು.
- ವಿಧವೆಯ ಹರಕೆಯು ಅವಳಿಗೆ ಬದ್ಧವಾಗಿರುತ್ತದೆಅರಣ್ಯ 30:9
ವಚನಗಳು
ಅರಣ್ಯ 30:9“ವಿಧವೆಯು ಇಲ್ಲವೆ ಗಂಡನಿಂದ ಬಿಡಲ್ಪಟ್ಟ ಸ್ತ್ರೀಯು ಇಂತಹ ಪ್ರಮಾಣಮಾಡಿಕೊಂಡರೆ ಅದು ನಿಲ್ಲುವುದು. ಅವಳು ಅದನ್ನು ನೆರವೇರಿಸಬೇಕು.
- ಮಕ್ಕಳಿಲ್ಲದೆ ವಿಧವೆಯಾದ ಯಾಜಕನ ಮಗಳು ತಂದೆಯ ಮೇಜಿನಲ್ಲಿ ಊಟಮಾಡಬಹುದುಯಾಜ 22:13
ವಚನಗಳು
ಯಾಜ 22:13ಯಾಜಕನ ಮಗಳು ವಿಧವೆಯಾಗಲಿ ಅಥವಾ ಗಂಡನಿಂದ ಬಿಡಲ್ಪಟ್ಟವಳಾಗಲಿ, ಮಕ್ಕಳಿಲ್ಲದೆ ಇದ್ದರೆ ಬಾಲ್ಯದಲ್ಲಿ ತಂದೆಯ ಬಳಿಯಲ್ಲಿ ಇದ್ದಂತೆಯೇ ಕನ್ಯೆಯಾಗಿಯೇ ತಂದೆಯ ಮನೆಯನ್ನು ಸೇರಿ ತಂದೆಯ ಆಹಾರದಲ್ಲಿ ಭಾಗಿಯಾಗಬಹುದು. ಯಾಜಕರಲ್ಲದ ಇತರರು ಅದನ್ನು ಊಟಮಾಡಲೇಬಾರದು.
- ಮಹಾಯಾಜಕನು ವಿಧವೆಯನ್ನು ಮದುವೆಯಾಗಬಾರದುಯಾಜ 21:14
ವಚನಗಳು
ಯಾಜ 21:14ಅವನು ವಿಧವೆಯನ್ನಾಗಲಿ, ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ, ಮಾನವನ್ನು ಭಂಗಪಡಿಸಿಕೊಂಡ ಸ್ತ್ರೀಯನ್ನಾಗಲಿ ಅಥವಾ ವೇಶ್ಯ ಸ್ತ್ರೀಯನ್ನಾಗಲಿ ಹೆಂಡತಿಯನ್ನಾಗಿ ಮಾಡಿಕೊಳ್ಳಬಾರದು. ಸ್ವದೇಶದವರಲ್ಲಿಯ ಕನ್ನಿಕೆಯನ್ನೇ ಮದುವೆ ಮಾಡಿಕೊಳ್ಳಬೇಕು.
- ಮಕ್ಕಳಿಲ್ಲದೆ ವಿಧವೆಯಾದ ಅತ್ತಿಗೆಯನ್ನು ಮೈದುನನು ಮದುವೆಯಾಗುತ್ತಾನೆಧರ್ಮೋ 25:5–10
ವಚನಗಳು
ಧರ್ಮೋ 25:5–10ಅಣ್ಣತಮ್ಮಂದಿರು ಒಂದೇ ಕುಟುಂಬದಲ್ಲಿರುವಾಗ ಅಣ್ಣನು ಮಗನಿಲ್ಲದೆ ಸತ್ತರೆ, ಅವನ ಹೆಂಡತಿ ಬೇರೆ ಪುರುಷನನ್ನು ಮದುವೆಯಾಗಬಾರದು. ಅವಳ ಮೈದುನನು ಅವಳನ್ನು ಹೆಂಡತಿಯನ್ನಾಗಿ ತೆಗೆದುಕೊಂಡು ಮೈದುನಧರ್ಮವನ್ನು ನೆರವೇರಿಸಬೇಕು. ಅವಳಲ್ಲಿ ಹುಟ್ಟುವ ಚೊಚ್ಚಲಮಗನು ಸತ್ತವನ ಮಗನೆಂದು ಎಣಿಸಲ್ಪಡಬೇಕು. ಹೀಗೆ ಮಾಡುವುದರಿಂದ ಸತ್ತವನ ಹೆಸರು ಇಸ್ರಾಯೇಲರೊಳಗಿಂದ ಅಳಿಸಿ ಹೋಗುವುದಿಲ್ಲ. ತಮ್ಮನು ಅಣ್ಣನ ಹೆಂಡತಿಯನ್ನು ಪರಿಗ್ರಹಿಸದೆ ಹೋದರೆ ಅವಳು ಊರ ಬಾಗಿಲಿಗೆ ಹೋಗಿ ಅಲ್ಲಿಯ ಹಿರಿಯರಿಗೆ, “ನನ್ನ ಗಂಡನ ತಮ್ಮನು ತನ್ನ ಅಣ್ಣನ ಹೆಸರನ್ನು ಉಳಿಸುವುದಕ್ಕೆ ಸಿದ್ಧನಿಲ್ಲ. ಅವನು ಮೈದುನಧರ್ಮವನ್ನು ನಡೆಸುವುದಿಲ್ಲ ಅನ್ನುತ್ತಾನೆ” ಎಂದು ತಿಳಿಸಬೇಕು. ಆಗ ಆ ಊರಿನ ಹಿರಿಯರು ಅವನನ್ನು ಕರೆಯಿಸಿ ವಿಚಾರಿಸಿದಲ್ಲಿ ಅವನು ಅವರ ಮುಂದೆ ನಿಂತು, “ಈಕೆಯನ್ನು ಪರಿಗ್ರಹಿಸುವುದಕ್ಕೆ ನನಗೆ ಇಷ್ಟವಿಲ್ಲ” ಎಂದು ಹೇಳುವ ಪಕ್ಷಕ್ಕೆ, ಅವನ ಅತ್ತಿಗೆ ಹಿರಿಯರ ಎದುರಿನಲ್ಲಿ ಅವನ ಕೆರವನ್ನು ಅವನ ಕಾಲಿನಿಂದ ತೆಗೆದುಬಿಟ್ಟು, ಅವನ ಮುಖದ ಮೇಲೆ ಉಗುಳಿ, “ಅಣ್ಣನಿಗೋಸ್ಕರ ಸಂತಾನವನ್ನು ವೃದ್ಧಿಗೊಳಿಸುವುದಕ್ಕೆ ಮನಸ್ಸಿಲ್ಲದವರೆಲ್ಲರಿಗೆ ಇಂಥ ಅವಮಾನವಾಗಲಿ” ಎಂದು ಹೇಳಬೇಕು. ಇಸ್ರಾಯೇಲರಲ್ಲಿ ಆ ಮನುಷ್ಯನ ಮನೆಯವರಿಗೆ, “ಕೆರವನ್ನು ಬಿಚ್ಚಿಸಿಕೊಂಡವನ ಮನೆಯವರು” ಎಂದು ಹೆಸರುಂಟಾಗುವುದು.
ನುಡಿಗಳು
- ದೇವರು “ವಿಧವೆಯರಿಗೆ ಸಹಾಯಕನೂ” ಆಗಿದ್ದಾನೆಕೀರ್ತ 68:5, ಕೀರ್ತ 146:9
ವಚನಗಳು
ಕೀರ್ತ 68:5ಪರಿಶುದ್ಧ ವಾಸಸ್ಥಾನದಲ್ಲಿರುವ ದೇವರು ದಿಕ್ಕಿಲ್ಲದವರಿಗೆ ತಂದೆಯೂ, ವಿಧವೆಯರಿಗೆ ಸಹಾಯಕನೂ ಆಗಿದ್ದಾನೆ.
ಕೀರ್ತ 146:9ಯೆಹೋವನು ಪರದೇಶದವರನ್ನು ಕಾಪಾಡುತ್ತಾನೆ. ಆತನು ಅನಾಥರಿಗೂ, ವಿಧವೆಯರಿಗೂ ಆಧಾರವಾಗಿದ್ದಾನೆ. ಆದರೆ ದುಷ್ಟರ ಮಾರ್ಗವನ್ನು ಡೊಂಕು ಮಾಡುತ್ತಾನೆ.
- ಪ್ರವಾದಿಗಳು: ವಿಧವೆಯ ಪರವಾಗಿ ವಾದಿಸಿರಿಯೆಶಾ 1:17, ಯೆರೆ 22:3, ಜೆಕ 7:10
ವಚನಗಳು
ಯೆಶಾ 1:17ಸದಾಚಾರವನ್ನು ಅಭ್ಯಾಸ ಮಾಡಿಕೊಳ್ಳಲು ಕಲಿಯಿರಿ, ನ್ಯಾಯವನ್ನು ಅನುಸರಿಸಿ ನಡೆಯಿರಿ. ಹಿಂಸೆಗೆ ಒಳಗಾದವನಿಗೆ ಸಹಾಯಮಾಡಿರಿ. ಅನಾಥನಿಗೆ ನ್ಯಾಯತೀರಿಸಿರಿ. ವಿಧವೆಯ ಪಕ್ಷವಾಗಿ ವಾದಿಸಿರಿ.”
ಯೆರೆ 22:3ಯೆಹೋವನು, ನೀತಿ, ನ್ಯಾಯಗಳನ್ನು ಆಚರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ. ವಿದೇಶಿ, ಅನಾಥ, ವಿಧವೆ ಇವರಿಗೆ ಯಾವ ಅನ್ಯಾಯವನ್ನೂ ಮತ್ತು ಹಿಂಸೆಯನ್ನೂ ಮಾಡಬೇಡಿರಿ; ನಿರ್ದೋಷಿಯ ರಕ್ತವನ್ನು ಈ ಸ್ಥಳದಲ್ಲಿ ಸುರಿಸಬೇಡಿರಿ” ಎಂದು ಹೇಳುತ್ತಾನೆ.
ಜೆಕ 7:10ಒಬ್ಬರಿಗೊಬ್ಬರು ಪ್ರೀತಿ, ಕರುಣೆಗಳನ್ನು ತೋರಿಸಿರಿ; ವಿಧವೆ, ಅನಾಥ, ವಿದೇಶಿ, ದರಿದ್ರರಿಗೂ ಅನ್ಯಾಯಮಾಡಬೇಡಿರಿ; ನಿಮ್ಮಲ್ಲಿ ಯಾವನೂ ತನ್ನ ಸಹೋದರನಿಗೆ ಕೇಡನ್ನು ಬಗೆಯದಿರಲಿ.’
- ಯೋಬನು: “ವಿಧವೆಯ ಹೃದಯವನ್ನು ಉತ್ಸಾಹಗೊಳಿಸುತ್ತಿದ್ದೆನು”ಯೋಬ 29:13, ಯೋಬ 31:16
- ವಿಧವೆಯರ ಮನೆಗಳನ್ನು ಕಬಳಿಸುವವರ ಬಗ್ಗೆ ಯೇಸು ಎಚ್ಚರಿಸುತ್ತಾನೆಮಾರ್ಕ 12:40
ವಚನಗಳು
ಮಾರ್ಕ 12:40ಇವರು ವಿಧವೆಯರ ಮನೆಗಳನ್ನು ದೋಚಿ ತೋರಿಕೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಿನ ದಂಡನೆಯನ್ನು ಹೊಂದುವರು” ಎಂದನು.
- ಪೌಲನು: ಕುಟುಂಬಗಳು ತಮ್ಮ ವಿಧವೆಯರನ್ನು ತಾವೇ ಪೋಷಿಸಬೇಕು1 ತಿಮೊ 5:3–5, 1 ತಿಮೊ 5:16
ವಚನಗಳು
1 ತಿಮೊ 5:3–5ದಿಕ್ಕಿಲ್ಲದ ವಿಧವೆಯರನ್ನು ಸಂರಕ್ಷಿಸು. ಆದರೆ ಒಬ್ಬ ವಿಧವೆಗೆ ಮಕ್ಕಳಾಗಲಿ ಮೊಮ್ಮಕ್ಕಳಾಗಲಿ ಇದ್ದರೆ ಅವರೇ ಮೊದಲು ತಮ್ಮ ಮನೆಯವರಿಗೆ ಭಕ್ತಿತೋರಿಸುವುದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪಕಾರ ಮಾಡುವುದಕ್ಕೂ ಕಲಿತುಕೊಳ್ಳಲಿ. ಇದು ದೇವರ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ. ದಿಕ್ಕಿಲ್ಲದೆ ಒಬ್ಬೊಂಟಿಗಳಾಗಿರುವ ವಿಧವೆಯು, ದೇವರ ಮೇಲೆ ನಿರೀಕ್ಷೆಯನ್ನಿಟ್ಟು, ಹಗಲಿರುಳು ವಿಜ್ಞಾಪನೆಗಳಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು.
1 ತಿಮೊ 5:16ನಂಬುವವಳಾದ ಸ್ತ್ರೀಯ ಬಂಧುಭಾಂಧವರಲ್ಲಿ ವಿಧವೆಯರಿದ್ದರೆ ಆಕೆಯೇ ಅವರನ್ನು ಸಂರಕ್ಷಿಸಲಿ. ಸಭೆಯು ದಿಕ್ಕಿಲ್ಲದ ವಿಧವೆಯರಿಗೆ ಸಹಾಯ ಮಾಡಬೇಕಾಗಿರುವುದರಿಂದ ಆಕೆಯು ಆ ಭಾರವನ್ನು ಸಭೆಯ ಮೇಲೆ ಹಾಕಬಾರದು.
- ಸಹಾಯಕ್ಕಾಗಿ ಪಟ್ಟಿಯಲ್ಲಿ ಸೇರಿಸಲ್ಪಡುವ ವಿಧವೆಗೆ ಕನಿಷ್ಠ ಅರುವತ್ತು ವರ್ಷವಾಗಿರಬೇಕಿತ್ತು1 ತಿಮೊ 5:9–10
ವಚನಗಳು
1 ತಿಮೊ 5:9–10ವಯಸ್ಸಿನಲ್ಲಿ ಅರುವತ್ತು ವರ್ಷ ಮೇಲ್ಪಟ್ಟ, ವಿಧವೆಯನ್ನು ವಿಧವೆಯರ ಪಟ್ಟಿಯಲ್ಲಿ ಸೇರಿಸಬಹುದು. ಅಂಥವಳಾದರೂ ಒಬ್ಬ ಗಂಡನಿಗೆ ಮಾತ್ರ ಹೆಂಡತಿಯಾಗಿದ್ದವಳಾಗಿ, ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡವಳೂ ಆಗಿದ್ದಲ್ಲಿ, ಅವರು ಮಕ್ಕಳನ್ನು ಸಾಕಿಕೊಂಡು, ಅತಿಥಿಸತ್ಕಾರವನ್ನು ಮಾಡುತ್ತಾ, ದೇವಜನರಿಗೆ ಉಪಚಾರಮಾಡಿದವಳಾಗಲಿ, ಸಂಕಟದಲ್ಲಿ ಬಿದ್ದವರಿಗೆ ಸಹಾಯಮಾಡುತ್ತಾ ಎಲ್ಲಾ ಸತ್ಕಾರ್ಯಗಳಲ್ಲಿ ಆಸಕ್ತಿಯುಳ್ಳವಳಾಗಿರಲಿ.
- ವಿಧವೆಯು ಮತ್ತೆ ಮದುವೆಯಾಗಲು ಸ್ವತಂತ್ರಳು1 ಕೊರಿ 7:39
ವಚನಗಳು
1 ಕೊರಿ 7:39ಮುತೈದೆಯು ತನ್ನ ಗಂಡನು ಜೀವದಿಂದಿರುವ ತನಕ ಅವನಿಗೆ ಬದ್ಧಳಾಗಿದ್ದಾಳೆ. ಗಂಡನು ಮರಣಹೊಂದಿದ್ದರೆ ಆಕೆಯು ಬೇಕಾದವನನ್ನು ಮದುವೆಮಾಡಿಕೊಳ್ಳುವುದಕ್ಕೆ ಸ್ವತಂತ್ರಳಾಗಿದ್ದಾಳೆ. ಆದರೆ ಕರ್ತನಲ್ಲಿ ವಿಶ್ವಾಸಿಯಾದವನನ್ನು ಮಾತ್ರ ಆಗಬೇಕು.
ಉದಾಹರಣೆಗಳು
- ತಾಮಾರಳು ವಿಧವೆಯ ಉಡುಪು ಧರಿಸಿ ತನ್ನ ತಂದೆಯ ಮನೆಯಲ್ಲಿ ವಿಧವೆಯಾಗಿ ವಾಸಿಸುತ್ತಾಳೆಆದಿ 38:11, ಆದಿ 38:14, ಆದಿ 38:19
ವಚನಗಳು
ಆದಿ 38:11ಆ ಮೇಲೆ ಯೆಹೂದನು ಒಂದು ವೇಳೆ ಶೇಲಹನು ತನ್ನ ಅಣ್ಣಂದಿರಂತೆಯೇ ಸತ್ತಾನೆಂದು ಯೋಚಿಸಿ ತನ್ನ ಸೊಸೆಯಾದ ತಾಮಾರಳಿಗೆ, “ನನ್ನ ಮಗನಾದ ಶೇಲಹನು ಪ್ರಾಯಸ್ಥನಾಗುವ ತನಕ ನೀನು ವಿಧವೆಯಾಗಿದ್ದು ನಿನ್ನ ತಂದೆಯ ಮನೆಯಲ್ಲಿರು” ಎಂದು ಹೇಳಿದನು. ಅವಳು ತಂದೆಯ ಮನೆಗೆ ಹೋಗಿ ಅಲ್ಲೇ ವಾಸಮಾಡಿದಳು.
ಆದಿ 38:14ಆಗ ಆಕೆಯು ಶೇಲಹನು ಪ್ರಾಯಸ್ಥನಾದಾಗ್ಯೂ ನನ್ನನ್ನು ಅವನಿಗೆ ಮದುವೆ ಮಾಡಿಸಲಿಲ್ಲವಲ್ಲಾ ಅಂದುಕೊಂಡು ತನ್ನ ವಿಧವಾ ವಸ್ತ್ರವನ್ನು ತೆಗೆದಿಟ್ಟು ಮುಸುಕನ್ನು ಹಾಕಿಕೊಂಡು ವೇಶ್ಯಾಸ್ತ್ರೀಯಂತೆ ಅಲಂಕೃತಳಾಗಿ ತಿಮ್ನಾ ಊರಿನ ದಾರಿಯಲ್ಲಿರುವ ಏನಯಿಮ್ ಊರಿನ ಬಾಗಿಲ ಬಳಿಯಲ್ಲಿ ಕುಳಿತುಕೊಂಡಳು.
ಆದಿ 38:19ತರುವಾಯ ಆಕೆ ತಾನು ಹಾಕಿಕೊಂಡಿದ್ದ ಮುಸುಕನ್ನು ತೆಗೆದಿಟ್ಟು ತಿರುಗಿ ವಿಧವೆಯ ವಸ್ತ್ರಗಳನ್ನು ಉಟ್ಟುಕೊಂಡಳು.
- ನವೊಮಿಯು ಮೋವಾಬಿನಲ್ಲಿ ತನ್ನ ಗಂಡನನ್ನೂ ಇಬ್ಬರು ಮಕ್ಕಳನ್ನೂ ಕಳೆದುಕೊಳ್ಳುತ್ತಾಳೆರೂತ 1:3–5
ವಚನಗಳು
ರೂತ 1:3–5ನವೊಮಿಯ ಗಂಡನಾದ ಎಲೀಮೆಲೆಕನು ಮರಣ ಹೊಂದಿದನು. ಆಕೆಯು ಇಬ್ಬರು ಮಕ್ಕಳೊಡನೆ ಅಲ್ಲಿಯೇ ಉಳಿದಳು. ಈ ಮಕ್ಕಳು ಒರ್ಫಾ, ರೂತ್ ಎಂಬ ಹೆಸರಿನ ಮೋವಾಬ್ ಸ್ತ್ರೀಯರನ್ನು ಮದುವೆಮಾಡಿಕೊಂಡು ಸುಮಾರು ಹತ್ತು ವರ್ಷಗಳ ಕಾಲ ಅಲ್ಲಿ ವಾಸವಾಗಿದ್ದರು. ಅವರು ಅಲ್ಲಿದ್ದಾಗ ನವೊಮಿಯ ಮಕ್ಕಳಾದ ಮಹ್ಲೋನ್ ಮತ್ತು ಕಿಲ್ಯೋನ್ ಇಬ್ಬರೂ ತೀರಿಹೋದರು. ಹೀಗೆ ನವೊಮಿ ಗಂಡನನ್ನೂ, ಇಬ್ಬರು ಮಕ್ಕಳನ್ನೂ ಕಳೆದುಕೊಂಡು ಸೊಸೆಯರೊಂದಿಗೆ ಅಲ್ಲೇ ಉಳಿದಳು.
- ನವೊಮಿಯನ್ನು ಪೋಷಿಸಲು ರೂತಳು ಹೊಲಗಳಲ್ಲಿ ಹಕ್ಕಲಾಯುತ್ತಾಳೆರೂತ 2:2–3
ವಚನಗಳು
ರೂತ 2:2–3ಮೋವಾಬ್ಯಳಾದ ರೂತಳು ನವೊಮಿಗೆ, “ನಾನು ಹೋಗಿ, ಹಕ್ಕಲ ತೆನೆಗಳನ್ನು ಆಯ್ದುಕೊಳ್ಳಲು ಅವಕಾಶ ಮಾಡಿಕೊಡುವವರ ಹೊಲದಿಂದ ತೆನೆಗಳನ್ನು ಸಂಗ್ರಹಿಸಿಕೊಂಡು ಬರುತ್ತೇನೆ” ಅಂದಳು. ಅದಕ್ಕೆ ನವೊಮಿ “ಹೋಗಿ ಬಾ ಮಗಳೆ” ಅಂದಳು. ಆಕೆಯು ದೈವಯೋಗದಿಂದ ಎಲೀಮೆಲೆಕನ ಗೋತ್ರದವನಾದ ಬೋವಜನ ಸ್ವತ್ತಾಗಿದ್ದ ಹೊಲಕ್ಕೆ ಹೋಗಿ ತೆನೆ ಕೊಯ್ಯುವವರ ಹಿಂದಿನಿಂದ ಹಕ್ಕಲಾಯುತ್ತಾ ಇದ್ದಳು.
- ತೆಕೋವದ ಒಬ್ಬ ಸ್ತ್ರೀಯು ದಾವೀದನ ಮುಂದೆ ವಿಧವೆಯಂತೆ ನಟಿಸುತ್ತಾಳೆ2 ಸಮು 14:2–5
ವಚನಗಳು
2 ಸಮು 14:2–5ತೆಕೋವ ಪಟ್ಟಣದಿಂದ ಒಬ್ಬ ಬುದ್ಧಿವಂತೆಯಾದ ಸ್ತ್ರೀಯನ್ನು ಕರೆದುಕೊಂಡು ಬರಲು ತಿಳಿಸಿದನು. ಅವನು ಆಕೆಗೆ, “ನೀನು ಪ್ರಿಯರನ್ನು ಕಳೆದುಕೊಂಡು ಬಹು ದಿನಗಳಿಂದ ಶೋಕಪಡುತ್ತಿರುವ ಸ್ತ್ರೀಯೋ ಎಂಬಂತೆ ಶೋಕವಸ್ತ್ರಗಳನ್ನು ಧರಿಸಿಕೊಂಡು ಎಣ್ಣೆಹಚ್ಚಿಕೊಳ್ಳದೆ, ಅರಸನ ಬಳಿಗೆ ಹೋಗಿ ಈ ಮಾತುಗಳನ್ನು ಅವನಿಗೆ ಹೇಳು” ಎಂದು ಆಜ್ಞಾಪಿಸಿ, ಹೇಳಬೇಕಾದ ಮಾತುಗಳನ್ನು ಆಕೆಗೆ ಕಲಿಸಿಕೊಟ್ಟನು. ತೆಕೋವದ ಸ್ತ್ರೀಯು ಅರಸನ ಹತ್ತಿರ ಹೋಗಿ ಅವನ ಮುಂದೆ ನೆಲಕ್ಕೆ ಬಿದ್ದು, “ಅರಸನೇ ರಕ್ಷಿಸು” ಎಂದು ಕೂಗಿದಳು. ಅರಸನು, “ನಿನಗೇನಾಯಿತು?” ಎಂದು ಆಕೆಯನ್ನು ಕೇಳಲು ಆಕೆಯು,
- ಸೊಲೊಮೋನನ ಕಂಚಿನ ಕೆಲಸಗಾರನಾದ ಹೂರಾಮನು ವಿಧವೆಯ ಮಗನಾಗಿದ್ದನು1 ಅರಸು 7:14
ವಚನಗಳು
1 ಅರಸು 7:14ಅವನು ನಫ್ತಾಲಿ ಕುಲದ ಒಬ್ಬ ವಿಧವೆಯಲ್ಲಿ ತೂರ್ ಪಟ್ಟಣದ ಒಬ್ಬ ಕಂಚುಗಾರನಿಗೆ ಹುಟ್ಟಿದವನು. ಜಾಣನೂ, ತಾಮ್ರದ ಕೆಲಸದಲ್ಲಿ ನಿಪುಣನೂ, ಅನುಭವಶಾಲಿಯೂ ಆಗಿದ್ದ ಅವನು ಅರಸನ ಬಳಿಗೆ ಬಂದು ಅರಸನು ಆಜ್ಞಾಪಿಸಿದ ಎಲ್ಲಾ ಕಾರ್ಯಗಳನ್ನು ಮಾಡಿ ಮುಗಿಸಿದನು.
- ಯಾರೊಬ್ಬಾಮನ ತಾಯಿಯಾದ ಚೆರೂಗಳು ವಿಧವೆಯಾಗಿದ್ದಳು1 ಅರಸು 11:26
ವಚನಗಳು
1 ಅರಸು 11:26ಅರಸನಾದ ಸೊಲೊಮೋನನಿಗೆ ವಿರುದ್ಧವಾಗಿ ಎದ್ದವರಲ್ಲಿ ಅವನ ಸೇವಕನೂ ಚರೇದ ಊರಿನ ಎಫ್ರಾಯೀಮ್ಯನಾದ ನೆಬಾಟನ ಮಗನಾದ ಯಾರೊಬ್ಬಾಮನೆಂಬವನು ಮತ್ತೊಬ್ಬನು. ಚೆರೂಗಳೆಂಬ ವಿಧವೆಯು ಅವನ ತಾಯಿ.
- ಚಾರೆಪ್ತದ ವಿಧವೆಯ ಬಳಿ ಒಂದು ಹಿಡಿ ಹಿಟ್ಟೂ ಸ್ವಲ್ಪ ಎಣ್ಣೆಯೂ ಮಾತ್ರ ಇದೆ1 ಅರಸು 17:10–16
ವಚನಗಳು
1 ಅರಸು 17:10–16ಅವನು ಅಲ್ಲಿಂದ ಹೊರಟು ಚಾರೆಪ್ತಾದ ಊರುಬಾಗಿಲಿನ ಸಮೀಪಕ್ಕೆ ಬಂದಾಗ ಸೌದೆಯನ್ನು ಕೂಡಿಸುತ್ತಿರುವ ಒಬ್ಬ ವಿಧವೆಯನ್ನು ಕಂಡನು. ಅವನು ಆಕೆಯನ್ನು ಕೂಗಿ, “ದಯವಿಟ್ಟು ಕುಡಿಯುವುದಕ್ಕೆ ಒಂದು ತಂಬಿಗೆಯಲ್ಲಿ ನೀರು ತೆಗೆದುಕೊಂಡು ಬಾ” ಎಂದು ಹೇಳಿದನು. ಆಕೆಯು ಹೋಗುತ್ತಿರುವಾಗ ಪುನಃ ಆಕೆಯನ್ನು ಕರೆದು, “ನೀನು ಬರುವಾಗ ನನಗೋಸ್ಕರ ಒಂದು ತುಂಡು ರೊಟ್ಟಿಯನ್ನೂ ತೆಗೆದುಕೊಂಡು ಬಾ” ಅಂದನು. ಆಕೆಯು ಅವನಿಗೆ, “ನಿನ್ನ ದೇವರಾದ ಯೆಹೋವನಾಣೆ, ನನ್ನ ಹತ್ತಿರ ರೊಟ್ಟಿ ಇರುವುದಿಲ್ಲ, ಮಡಿಕೆಯಲ್ಲಿ ಒಂದು ಹಿಡಿ ಹಿಟ್ಟು, ಮೊಗೆಯಲ್ಲಿ ಸ್ವಲ್ಪ ಎಣ್ಣೆ ಇವುಗಳ ಹೊರತಾಗಿ ಬೇರೇನೂ ಇರುವುದಿಲ್ಲ. ಈಗ ಎರಡು ಕಟ್ಟಿಗೆಗಳನ್ನು ಆರಿಸಿಕೊಂಡು ನನಗೋಸ್ಕರವೂ ನನ್ನ ಮಗನಿಗೋಸ್ಕರವೂ ರೊಟ್ಟಿ ಮಾಡುತ್ತೇನೆ, ಬೇರೆ ಹಿಟ್ಟು, ಎಣ್ಣೆ ಇಲ್ಲ ಇದನ್ನು ತಿಂದ ಮೇಲೆ ಆಹಾರವಿಲ್ಲದ ಕಾರಣ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ” ಎಂದು ಉತ್ತರಕೊಟ್ಟಳು. ಆಗ ಎಲೀಯನು ಆಕೆಗೆ, “ಹೆದರಬೇಡ, ನೀನು ಹೇಳಿದಂತೆಯೇ ಮಾಡು. ಆದರೆ ಮೊದಲು ಅದರಿಂದ ನನಗೋಸ್ಕರ ಒಂದು ಚಿಕ್ಕ ರೊಟ್ಟಿಯನ್ನು ಮಾಡಿಕೊಂಡು ಬಾ. ತರುವಾಯ ನಿನಗೂ ನಿನ್ನ ಮಗನಿಗೂ ಮಾಡಿಕೋ. ಇಸ್ರಾಯೇಲ್ ದೇವರಾದ ಯೆಹೋವನು ನಿನಗೆ, ‘ನಾನು ದೇಶಕ್ಕೆ ಮಳೆಯನ್ನು ಕಳುಹಿಸುವವರೆಗೆ ನಿನ್ನ ಮಡಿಕೆಯಲ್ಲಿರುವ ಹಿಟ್ಟು ತೀರುವುದಿಲ್ಲ ಮತ್ತು ಮೊಗೆಯಲ್ಲಿರುವ ಎಣ್ಣೆಯು ಮುಗಿದುಹೋಗುವುದಿಲ್ಲ’” ಎಂದು ಹೇಳುತ್ತಾನೆ. ಆಕೆಯು ಹೋಗಿ ಅವನು ಹೇಳಿದಂತೆಯೇ ಮಾಡಿದಳು. ಆಕೆಯೂ, ಆಕೆಯ ಮನೆಯವರೂ ಮತ್ತು ಎಲೀಯನು ಅದನ್ನು ಅನೇಕ ದಿನಗಳವರೆಗೆ ಊಟಮಾಡಿದರು. ಯೆಹೋವನು ಎಲೀಯನ ಮುಖಾಂತರವಾಗಿ ಹೇಳಿದಂತೆ ಮಡಿಕೆಯಲ್ಲಿದ್ದ ಹಿಟ್ಟು ತೀರಲಿಲ್ಲ ಮತ್ತು ಮೊಗೆಯಲ್ಲಿದ್ದ ಎಣ್ಣೆಯು ಮುಗಿದುಹೋಗಲಿಲ್ಲ.
- ಎಲೀಷನು ಎಣ್ಣೆಯ ಮೂಲಕ ವಿಧವೆಯ ಮಕ್ಕಳನ್ನು ಸಾಲಗಾರನಿಂದ ಕಾಪಾಡುತ್ತಾನೆ2 ಅರಸು 4:1–7
ವಚನಗಳು
2 ಅರಸು 4:1–7ಒಂದು ದಿನ ಪ್ರವಾದಿ ಮಂಡಳಿಯಲ್ಲಿನ ಒಬ್ಬನ ಹೆಂಡತಿಯು ಎಲೀಷನ ಹತ್ತಿರ ಬಂದು ಅವನಿಗೆ, “ನಿನ್ನ ಸೇವಕನಾದ ನನ್ನ ಗಂಡನು ಮರಣಹೊಂದಿದನು. ಅವನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿದ್ದನು ಎಂಬುದು ನಿನಗೆ ಗೊತ್ತಿದೆಯಲ್ಲಾ. ಸಾಲಕೊಟ್ಟವನು, ನನ್ನ ಇಬ್ಬರು ಮಕ್ಕಳನ್ನು ದಾಸರನ್ನಾಗಿ ಕರೆದುಕೊಂಡು ಹೋಗುವುದಕ್ಕೆ ಬಂದಿದ್ದಾನೆ” ಎಂದು ಮೊರೆಯಿಟ್ಟಳು. ಎಲೀಷನು ಆಕೆಗೆ, “ನಾನು ನಿನಗೇನು ಮಾಡಬೇಕೆನ್ನುತ್ತೀ? ನಿನ್ನ ಮನೆಯಲ್ಲಿ ಏನಿರುತ್ತದೆ? ಹೇಳು ಎಂದನು.” ಅದಕ್ಕೆ ಆಕೆಯು, “ನಿನ್ನ ದಾಸಿಯ ಮನೆಯಲ್ಲಿ ಒಂದು ಮೊಗೆ ಎಣ್ಣೆ ಹೊರತಾಗಿ ಏನೂ ಇಲ್ಲ” ಎಂದು ಉತ್ತರ ಕೊಟ್ಟಳು. ಆಗ ಎಲೀಷನು ಆಕೆಗೆ, “ಹೋಗಿ, ನಿನ್ನ ನೆರೆಯವರಿಂದ ಸಿಕ್ಕುವಷ್ಟು ಬರಿದಾದ ಪಾತ್ರೆಗಳನ್ನು ಕೇಳಿ ತೆಗೆದುಕೊಂಡು ಬಾ. ಅನಂತರ, ನೀನು, ನಿನ್ನ ಮಕ್ಕಳನ್ನು ಒಳಗೆ ಕರೆದುಕೊಂಡು ಬಾಗಿಲನ್ನು ಮುಚ್ಚಿ, ಎಣ್ಣೆಯನ್ನು ಪಾತ್ರೆಗಳಲ್ಲಿ ಹೊಯ್ದು ತುಂಬಿದವುಗಳನ್ನೆಲ್ಲಾ ಒಂದು ಕಡೆಯಿಡು” ಎಂದು ಹೇಳಿದನು. ಆಕೆಯು ಹೋಗಿ ಮಕ್ಕಳನ್ನು ಒಳಗೆ ಕರೆದುಕೊಂಡು, ಬಾಗಿಲನ್ನು ಮುಚ್ಚಿ, ಅವರು ಮುಂದಿಟ್ಟ ಪಾತ್ರೆಗಳಲ್ಲೆಲ್ಲಾ ಎಣ್ಣೆ ಹೊಯ್ದಳು. ಪಾತ್ರೆಗಳೆಲ್ಲಾ ತುಂಬಿದಾಗ ಆಕೆಯು ಮಗನಿಗೆ, “ಇನ್ನೊಂದು ಪಾತ್ರೆಯನ್ನು ತಂದಿಡು” ಎನ್ನಲು ಅವನು, “ಪಾತ್ರೆಗಳೆಲ್ಲ ಮುಗಿದು ಹೋದವು” ಎಂದು ಉತ್ತರಕೊಟ್ಟನು. ಕೂಡಲೇ ಎಣ್ಣೆ ಉಕ್ಕುವುದು ನಿಂತುಹೋಯಿತು. ತರುವಾಯ ಆಕೆಯು ದೇವರ ಮನುಷ್ಯನ ಹತ್ತಿರ ಬಂದು ನಡೆದದ್ದನ್ನೆಲ್ಲಾ ತಿಳಿಸಿದಳು. ಅವನು ಆಕೆಗೆ, “ಹೋಗಿ, ಎಣ್ಣೆಯನ್ನು ಮಾರಿ ಸಾಲತೀರಿಸು. ಉಳಿದ ಹಣದಿಂದ ನೀನೂ, ನಿನ್ನ ಮಕ್ಕಳು ಜೀವನಮಾಡಿರಿ” ಎಂದನು.
- ಎಂಬತ್ತನಾಲ್ಕು ವರ್ಷದ ವಿಧವೆಯಾದ ಅನ್ನಳು ದೇವಾಲಯವನ್ನು ಬಿಟ್ಟು ಹೋಗುತ್ತಿರಲಿಲ್ಲಲೂಕ 2:36–38
ವಚನಗಳು
ಲೂಕ 2:36–38ಇದಲ್ಲದೆ ಅಸೇರನ ಕುಲದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿ ಇದ್ದಳು. ಆಕೆ ಬಹಳ ಮುಪ್ಪಿನವಳು. ಮದುವೆಯಾಗಿ ಏಳು ವರ್ಷ ಗಂಡನ ಕೂಡ ಸಂಸಾರ ಮಾಡಿ ವಿಧವೆಯಾಗಿದ್ದಳು, ಅವಳು ಎಂಭತ್ತುನಾಲ್ಕು ವರ್ಷದವಳಾಗಿದ್ದಳು. ಆಕೆ ದೇವಾಲಯವನ್ನು ಬಿಟ್ಟುಹೋಗದೆ ಉಪವಾಸ ವಿಜ್ಞಾಪನೆಗಳಿಂದ ರಾತ್ರಿ ಹಗಲೂ ದೇವರನ್ನು ಆರಾಧಿಸುತ್ತಿದ್ದಳು. ಆಕೆ ಅದೇ ಗಳಿಗೆಯಲ್ಲಿ ಅವರ ಹತ್ತಿರಕ್ಕೆ ಬಂದು ದೇವರಿಂದಾದ ಉಪಕಾರವನ್ನು ನೆನಸಿ ಕೊಂಡಾಡಿದ್ದಲ್ಲದೆ ಯೆರೂಸಲೇಮಿನ ಬಿಡುಗಡೆಯನ್ನು ಹಾರೈಸುತ್ತಿದ್ದವರೆಲ್ಲರ ಸಂಗಡ ಆತನ ವಿಷಯವಾಗಿ ಮಾತನಾಡುವವಳಾದಳು.
- ಬಡ ವಿಧವೆಯು ಕಾಣಿಕೆಯ ಪೆಟ್ಟಿಗೆಯಲ್ಲಿ ಎರಡು ಚಿಕ್ಕ ತಾಮ್ರದ ನಾಣ್ಯಗಳನ್ನು ಹಾಕುತ್ತಾಳೆಮಾರ್ಕ 12:41–44
ವಚನಗಳು
ಮಾರ್ಕ 12:41–44ಯೇಸು ದೇವಾಲಯದ ಆವರಣದಲ್ಲಿ ಕಾಣಿಕೆ ಪೆಟ್ಟಿಗೆಯ ಎದುರಿಗೆ ಕುಳಿತುಕೊಂಡು ಜನರು ಅದರಲ್ಲಿ ಹಣ ಹಾಕುವುದನ್ನು ಗಮನಿಸುತ್ತಿದ್ದನು. ಅನೇಕ ಮಂದಿ ಐಶ್ವರ್ಯವಂತರು ಹೆಚ್ಚೆಚ್ಚು ಹಣ ಹಾಕುತ್ತಿದ್ದರು. ಒಬ್ಬ ಬಡ ವಿಧವೆಯು ಬಂದು, ಎರಡು ಕಾಸು ಬೆಲೆಯುಳ್ಳ ಒಂದು ದುಗ್ಗಾಣಿ ಹಾಕಿದಳು. ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, “ಈ ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಿದವರೆಲ್ಲರಿಗಿಂತಲೂ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ. ಹೇಗೆಂದರೆ, ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು. ಆದರೆ ಈ ವಿಧವೆಯೋ ತನ್ನ ಬಡತನದಲ್ಲಿಯೂ ತನಗಿದ್ದದ್ದನ್ನೆಲ್ಲಾ ಎಂದರೆ, ತನ್ನ ಜೀವನಕ್ಕೆ ಆಧಾರವಾಗಿದ್ದ ಎಲ್ಲವನ್ನೂ ಕಾಣಿಕೆಯಾಗಿ ಹಾಕಿದ್ದಾಳೆ” ಎಂದನು.
- ಯೇಸು ನಾಯಿನ್ ಊರಿನ ವಿಧವೆಯ ಒಬ್ಬನೇ ಮಗನನ್ನು ಎಬ್ಬಿಸುತ್ತಾನೆಲೂಕ 7:11–15
ವಚನಗಳು
ಲೂಕ 7:11–15ಸ್ವಲ್ಪಕಾಲದ ನಂತರ ಆತನು ನಾಯಿನ್ ಎಂಬ ಊರಿಗೆ ಹೋದನು. ಆತನ ಜೊತೆಯಲ್ಲಿ ಆತನ ಶಿಷ್ಯರು ಮತ್ತು ಬಹುಜನರು ಹೋದರು. ಆತನು ಊರು ಬಾಗಿಲಿನ ಹತ್ತಿರಕ್ಕೆ ಬಂದಾಗ ಸತ್ತುಹೋಗಿದ್ದ ಒಬ್ಬನನ್ನು ಹೊತ್ತುಕೊಂಡು ಹೊರಗೆ ತರುತ್ತಿದ್ದರು. ಅವನು ತನ್ನ ತಾಯಿಗೆ ಒಬ್ಬನೇ ಮಗನಾಗಿದ್ದನು; ಆಕೆಯು ವಿಧವೆಯಾಗಿದ್ದಳು. ಆಕೆಯ ಸಂಗಡ ಊರಿನವರು ಅನೇಕರಿದ್ದರು. ಕರ್ತನು ಆಕೆಯನ್ನು ಕಂಡು ಕನಿಕರಿಸಿ, “ಅಳಬೇಡ” ಎಂದು ಆಕೆಗೆ ಹೇಳಿ, ಚಟ್ಟದ ಹತ್ತಿರಕ್ಕೆ ಹೋಗಿ ಅದನ್ನು ಮುಟ್ಟಲು ಹೊತ್ತುಕೊಂಡವರು ನಿಂತರು. ಆಗ ಆತನು, “ಯೌವನಸ್ಥನೇ, ಏಳು ಎಂದು ನಿನಗೆ ಹೇಳುತ್ತೇನೆ” ಅಂದನು. ಅನ್ನುತ್ತಲೇ ಸತ್ತಿದ್ದವನು ಎದ್ದು ಕುಳಿತುಕೊಂಡು ಮಾತನಾಡುವುದಕ್ಕೆ ತೊಡಗಿದನು. ಯೇಸು ಅವನನ್ನು ಅವನ ತಾಯಿಗೆ ಒಪ್ಪಿಸಿದನು.
- ಅನುದಿನದ ಆಹಾರ ಹಂಚಿಕೆಯಲ್ಲಿ ಗ್ರೀಕ್ ಭಾಷೆಯವರ ವಿಧವೆಯರನ್ನು ಕಡೆಗಣಿಸಲಾಗುತ್ತದೆಅ. ಕೃ 6:1
ವಚನಗಳು
ಅ. ಕೃ 6:1ಆ ದಿನಗಳಲ್ಲಿ ಶಿಷ್ಯರು ಹೆಚ್ಚುತ್ತಾ ಬರಲಾಗಿ ಅವರೊಳಗೆ ಗ್ರೀಕ್ ಭಾಷೆಯವರು ಇಬ್ರಿಯ ಭಾಷೆಯವರ ಮೇಲೆ ದೂರು ನೀಡುತ್ತಾ ಅನುದಿನದ ಉಪಚಾರದಲ್ಲಿ ನಮ್ಮ ವಿಧವೆಯರನ್ನು ಸರಿಯಾಗಿ ಪರಾಂಬರಿಸುವುದಿಲ್ಲವೆಂದು ಗೊಣಗುಟ್ಟಿದರು.
- ದೊರ್ಕಳು ಮಾಡಿದ್ದ ವಸ್ತ್ರಗಳನ್ನು ವಿಧವೆಯರು ಪೇತ್ರನಿಗೆ ತೋರಿಸುತ್ತಾರೆಅ. ಕೃ 9:39
ವಚನಗಳು
ಅ. ಕೃ 9:39ಪೇತ್ರನು ಎದ್ದು ಅವರ ಜೊತೆಯಲ್ಲಿ ಹೋದನು. ಅವನು ಬಂದ ಕೂಡಲೆ ಅವರು ಅವನನ್ನು ಮೇಲಂತಸ್ತಿಗೆ ಕರೆದುಕೊಂಡು ಹೋದರು. ಅಲ್ಲಿ ವಿಧವೆಯರೆಲ್ಲ ಅಳುತ್ತಾ, ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಒಳಂಗಿಗಳನ್ನೂ, ಮೇಲಂಗಿಗಳನ್ನೂ ತೋರಿಸಿದರು.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು