Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ವಿಷಯಗಳು › ಗಾಳಿಗಳು

ಪ್ರಕೃತಿ

ಬೈಬಲಿನಲ್ಲಿ ಗಾಳಿಗಳು

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 32 ವಾಕ್ಯಭಾಗಗಳು, ಸಾಲು ಸಾಲಾಗಿ.

ಮೂಡಣ ಗಾಳಿ

  • ಫರೋಹನ ಕನಸು: ಮೂಡಣ ಗಾಳಿಯಿಂದ ಬಾಡಿದ ತೆನೆಗಳುಆದಿ 41:6, ಆದಿ 41:23
    ವಚನಗಳು
    ಆದಿ 41:6ಅವುಗಳ ಹಿಂದೆ ಮೂಡಣ ಗಾಳಿಯಿಂದ ಬತ್ತಿ ಒಣಗಿಹೋಗಿದ್ದ ಬೇರೆ ಏಳು ತೆನೆಗಳು ಮೊಳೆತು ಬಂದವು.
    ಆದಿ 41:23ಅವುಗಳ ಹಿಂದೆ ಮೂಡಣ ಗಾಳಿಯಿಂದ ಬತ್ತಿ ಒಣಗಿ ಹೋಗಿದ್ದ ಬೇರೆ ಏಳು ತೆನೆಗಳು ಮೊಳೆತು ಬಂದವು.
  • ಮೂಡಣ ಗಾಳಿಯು ಹಗಲೂ ರಾತ್ರಿಯೂ ಬೀಸಿ ಮಿಡತೆಗಳನ್ನು ತಂದಿತುವಿಮೋ 10:13
    ವಚನಗಳು
    ವಿಮೋ 10:13ಮೋಶೆ ತನ್ನ ಕೋಲನ್ನು ಐಗುಪ್ತ ದೇಶದ ಮೇಲೆ ಚಾಚಿದಾಗ, ಯೆಹೋವನು ಹಗಲಿರುಳು ಮೂಡಣದಿಕ್ಕಿನಿಂದ ಗಾಳಿಯನ್ನು ಬೀಸುವಂತೆ ಮಾಡಿದನು. ಹೊತ್ತಾರೆ ಗಾಳಿಯ ದೆಸೆಯಿಂದ ಮಿಡತೆಗಳು ಬಂದಿದ್ದವು.
  • ಬಲವಾದ ಮೂಡಣ ಗಾಳಿಯು ರಾತ್ರಿಯೆಲ್ಲಾ ಸಮುದ್ರವನ್ನು ಹಿಂದಕ್ಕೆ ಸರಿಸಿತುವಿಮೋ 14:21
    ವಚನಗಳು
    ವಿಮೋ 14:21ಮೋಶೆ ಸಮುದ್ರದ ಮೇಲೆ ಕೈಚಾಚಿದಾಗ, ಯೆಹೋವನು ಆ ರಾತ್ರಿಯೆಲ್ಲಾ ಮೂಡಣ ದಿಕ್ಕಿನಿಂದ ಬಲವಾದ ಬಿರುಗಾಳಿಯನ್ನು ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದು ಕಡೆಗೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದನು. ನೀರು ಇಬ್ಭಾಗವಾಯಿತು.
  • ಸುಡುವ ಮೂಡಣ ಗಾಳಿಯೂ ಬಿಸಿಲೂ ಯೋನನನ್ನು ಮೂರ್ಛೆಗೊಳಿಸಿದವುಯೋನ 4:8
    ವಚನಗಳು
    ಯೋನ 4:8ಸೂರ್ಯನು ಉದಯಿಸಿದಾಗ ದೇವರು ಬಿಸಿಯಾದ ಮೂಡಣ ಗಾಳಿಯನ್ನು ಏರ್ಪಡಿಸಿದನು; ಬಿಸಿಲು ಯೋನನ ತಲೆಗೆ ಹೊಡೆಯಲು ಅವನು ಮೂರ್ಛೆಹೋಗುವವನಾಗಿ “ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು” ಎಂದು ಸಾಯಲು ಬಯಸಿದನು.
  • ಮೂಡಣ ಗಾಳಿಯು ಸಮುದ್ರದಲ್ಲಿ ಹಡಗುಗಳನ್ನು ಒಡೆಯುತ್ತದೆಕೀರ್ತ 48:7, ಯೆಹೆ 27:26
    ವಚನಗಳು
    ಕೀರ್ತ 48:7ದೇವರೇ, ನೀನು ಬಿರುಗಾಳಿಯಿಂದ ತಾರ್ಷಿಷ್ ದೇಶದ ದೊಡ್ಡ ದೊಡ್ಡ ಹಡಗುಗಳನ್ನು ಒಡೆದುಬಿಟ್ಟಂತಾಯಿತು.
    ಯೆಹೆ 27:26ಹುಟ್ಟುಹಾಕುವವರು ನಿನ್ನನ್ನು ಮಹಾ ತರಂಗಗಳಿಗೆ ಸಿಕ್ಕಿಸಿದ್ದಾರೆ; ಮೂಡಣ ಗಾಳಿಯು ನಿನ್ನನ್ನು ಸಾಗರದ ಮಧ್ಯದಲ್ಲಿ ಒಡೆದುಬಿಟ್ಟಿದೆ.

ಇತರ ಗಾಳಿಗಳು

  • ಬಹಳ ಬಲವಾದ ಪಡುವಣ ಗಾಳಿಯು ಮಿಡತೆಗಳನ್ನು ಕೆಂಪುಸಮುದ್ರಕ್ಕೆ ಬಡಿದುಕೊಂಡು ಹೋಯಿತುವಿಮೋ 10:19
    ವಚನಗಳು
    ವಿಮೋ 10:19ಯೆಹೋವನು ಪಶ್ಚಿಮದಿಂದ ಬಿರುಗಾಳಿ ಬೀಸುವಂತೆ ಮಾಡಿದನು. ಅದು ಆ ಮಿಡತೆಗಳನ್ನು ಎತ್ತಿಕೊಂಡು ಹೋಗಿ ಕೆಂಪುಸಮುದ್ರದೊಳಗೆ ಹಾಕಿಬಿಟ್ಟಿತು. ಐಗುಪ್ತ ದೇಶದ ಮೇರೆಗಳೊಳಗೆ ಒಂದು ಮಿಡತೆಯೂ ನಿಲ್ಲಲಿಲ್ಲ.
  • “ಉತ್ತರದ ಗಾಳಿ ಮಳೆ ಬರಮಾಡುವುದು”ಜ್ಞಾನೋ 25:23
    ವಚನಗಳು
    ಜ್ಞಾನೋ 25:23ಉತ್ತರದ ಗಾಳಿ ಮಳೆ ಬರಮಾಡುವುದು, ಚಾಡಿಯ ನಾಲಿಗೆ ಕೋಪದ ಮುಖ ಮಾಡುವುದು.
  • ಬಡಿಯುವ ಉತ್ತರದ ಗಾಳಿಗಳಿಂದ ಚಳಿ ಬರುತ್ತದೆಯೋಬ 37:9
    ವಚನಗಳು
    ಯೋಬ 37:9ಆತನ ಭಂಡಾರದ ದಕ್ಷಿಣದಿಕ್ಕಿನಿಂದ ಬಿರುಗಾಳಿಯೂ, ಉತ್ತರದಿಕ್ಕಿನಿಂದ ಚಳಿಗಾಳಿಯೂ ಬರುವವು.
  • ತೆಂಕಣ ಗಾಳಿಯಿಂದ ದೇಶವು ನಿಶ್ಚಲವಾಗಿರುವಾಗ ಬಟ್ಟೆಗಳು ಬಿಸಿಯಾಗುತ್ತವೆಯೋಬ 37:17
    ವಚನಗಳು
    ಯೋಬ 37:17ಭೂಮಿಯು ದಕ್ಷಿಣ ಗಾಳಿಯ ದೆಸೆಯಿಂದ ಸ್ತಬ್ಧವಾಗಿರುವ ಸಮಯದಲ್ಲಿ, ಉಡುಪಿನ ಬಿಸಿಯನ್ನು ಅನುಭವಿಸುವ ಅರಿವು ನಿನಗಿರುತ್ತದೆಯೇ?
  • “ದಕ್ಷಿಣ ದಿಕ್ಕಿನಿಂದ ಗಾಳಿ ಬೀಸಲಾಗಿ ಸೆಕೆ ಹುಟ್ಟುತ್ತದೆ ಅನ್ನುತ್ತೀರಿ”ಲೂಕ 12:55
    ವಚನಗಳು
    ಲೂಕ 12:55ದಕ್ಷಿಣ ದಿಕ್ಕಿನಿಂದ ಗಾಳಿ ಬೀಸಲಾಗಿ ಸೆಕೆ ಹುಟ್ಟುತ್ತದೆ ಅನ್ನುತ್ತೀರಿ. ಅದೂ ಹಾಗೆಯೇ ಆಗುತ್ತದೆ.
  • ಗಾಳಿ ಬೀಸಿ ಆಕಾಶವನ್ನು ಶುಭ್ರಮಾಡಿದ ಮೇಲೆ ಸೂರ್ಯನನ್ನು ಯಾರೂ ದಿಟ್ಟಿಸಿ ನೋಡಲಾರರುಯೋಬ 37:21
    ವಚನಗಳು
    ಯೋಬ 37:21ಇಗೋ, ಗಾಳಿಯು ಬೀಸಿ ಗಗನವನ್ನು ಶುಭ್ರಪಡಿಸಲು, ಅಲ್ಲಿ ಪ್ರಜ್ವಲಿಸುವ ಪ್ರಕಾಶವನ್ನು ಯಾರೂ ದಿಟ್ಟಿಸಿ ನೋಡಲಾರರು.

ಕಥೆಗಳಲ್ಲಿ

  • ಭೂಮಿಯ ಮೇಲೆ ಗಾಳಿ ಬೀಸಿತು, ಜಲಪ್ರಳಯದ ನೀರು ಇಳಿಯಲಾರಂಭಿಸಿತುಆದಿ 8:1
    ವಚನಗಳು
    ಆದಿ 8:1ತರುವಾಯ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಮೃಗಪಶುಗಳನ್ನೂ ನೆನಪಿಗೆ ತಂದುಕೊಂಡು ಭೂಲೋಕದ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.
  • ಗಾಳಿಯು ಸಮುದ್ರದಿಂದ ಲಾವಕ್ಕಿಗಳನ್ನು ಬಡಿದುಕೊಂಡು ಬಂತುಅರಣ್ಯ 11:31
    ವಚನಗಳು
    ಅರಣ್ಯ 11:31ಆಗ ಯೆಹೋವನ ಬಳಿಯಿಂದ ಗಾಳಿ ಹೊರಟು ಸಮುದ್ರದಿಂದ ಲಾವಕ್ಕಿಗಳನ್ನು ಹೊಡೆದುಕೊಂಡು ಪಾಳೆಯದ ಸುತ್ತಲೂ ಒಂದು ದಿನದ ಪ್ರಯಾಣದಷ್ಟು ದೂರದವರೆಗೆ ಭೂಮಿಗಿಂತ ಎರಡು ಮೊಳ ಎತ್ತರದಲ್ಲಿ ಹಾರುತ್ತಾ ಬರುವಂತೆಮಾಡಿತು.
  • ಅರಣ್ಯದ ಗಾಳಿಯು ಯೋಬನ ಮಕ್ಕಳ ಮನೆಯ ನಾಲ್ಕು ಮೂಲೆಗಳಿಗೆ ಬಡಿಯಿತುಯೋಬ 1:18–19
    ವಚನಗಳು
    ಯೋಬ 1:18–19ಅವನು ಇನ್ನು ಮಾತನಾಡುತ್ತಿರುವಾಗಲೆ ಬೇರೊಬ್ಬನು ಬಂದು, “ನಿನ್ನ ಗಂಡು, ಹೆಣ್ಣು ಮಕ್ಕಳು ತಮ್ಮ ಅಣ್ಣನ ಮನೆಯಲ್ಲಿ ತಿಂದು ಕುಡಿಯುತ್ತಿರುವಾಗ, ಅರಣ್ಯದ ಕಡೆಯಿಂದ ಬಿರುಗಾಳಿಯು ಬೀಸಿ ಮನೆಯ ನಾಲ್ಕು ಮೂಲೆಗಳಿಗೆ ಬಡಿದು, ಮನೆಯು ಯೌವನಸ್ಥರ ಮೇಲೆ ಬಿದ್ದಿತು. ಅವರೆಲ್ಲರು ಸತ್ತು ಹೋದರು. ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ” ಎಂದನು.
  • ಹೋರೇಬಿನಲ್ಲಿ ಮಹಾ ಗಾಳಿಯು ಬಂಡೆಗಳನ್ನು ಒಡೆಯಿತು, ಆ ಮೇಲೆ ಭೂಕಂಪ ಬಂತು1 ಅರಸು 19:11
    ವಚನಗಳು
    1 ಅರಸು 19:11ಆಗ ಪುನಃ, “ನೀನು ಹೊರಗೆ ಬಂದು ಬೆಟ್ಟದ ಮೇಲೆ ಯೆಹೋವನ ಮುಂದೆ ನಿಲ್ಲು” ಎಂಬ ವಾಣಿಯಾಯಿತು. ಆಹಾ ಯೆಹೋವನು ಅಲ್ಲಿ ಹಾದು ಹೋದನು. ಆತನ ಮುಂದೆ ಪರ್ವತಗಳು ಭೇದಿಸಿ ಬಂಡೆಗಳನ್ನು ಪುಡಿ ಪುಡಿಮಾಡುವಂಥ ದೊಡ್ಡ ಬಿರುಗಾಳಿಯು ಬೀಸಿತು. ಯೆಹೋವನು ಅದರಲ್ಲಿ ಇರಲಿಲ್ಲ. ತರುವಾಯ ಭೂಕಂಪವಾಯಿತು, ಅದರಲ್ಲಿಯೂ ಆತನಿರಲಿಲ್ಲ.
  • ಸಮುದ್ರದ ಮೇಲೆ ಮಹಾ ಗಾಳಿಯು ಯೋನನ ಹಡಗನ್ನು ಬಹುತೇಕ ಒಡೆದುಬಿಟ್ಟಿತುಯೋನ 1:4
    ವಚನಗಳು
    ಯೋನ 1:4ಆಗ ಯೆಹೋವನು ದೊಡ್ಡ ಬಿರುಗಾಳಿಯನ್ನು ಸಮುದ್ರದ ಮೇಲೆ ಬರಮಾಡಿದನು. ಸಮುದ್ರದಲ್ಲಿ ದೊಡ್ಡ ತುಫಾನು ಎದ್ದು ಹಡಗು ಒಡೆದುಹೋಗುವ ಹಾಗಾಯಿತು.
  • ಯೇಸು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು, ಆಗ ಸಂಪೂರ್ಣ ಶಾಂತವಾಯಿತುಮತ್ತಾ 8:24–27
    ವಚನಗಳು
    ಮತ್ತಾ 8:24–27ಅವರು ಹೋಗುತ್ತಿರುವಾಗ ಸಮುದ್ರವು ಅಲ್ಲೋಲಕಲ್ಲೋಲವಾಗಿ ದೋಣಿಯು ಅಲೆಗಳಿಂದ ಮುಚ್ಚುವಂತೆ ಆಯಿತು; ಆದರೆ ಯೇಸು ನಿದ್ರಿಸುತ್ತಿದ್ದನು. ಆಗ ಶಿಷ್ಯರು ಆತನ ಹತ್ತಿರ ಬಂದು ಆತನನ್ನು ಎಬ್ಬಿಸಿ, “ಕರ್ತನೇ, ನಮ್ಮನ್ನು ಕಾಪಾಡು, ಸಾಯುತ್ತಿದ್ದೇವೆ” ಎಂದರು. ಆತನು ಅವರಿಗೆ, “ಅಲ್ಪ ವಿಶ್ವಾಸಿಗಳೇ, ಏಕೆ ಹೆದರುತ್ತೀರಿ?” ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಅಲ್ಲಿ ಸಂಪೂರ್ಣವಾಗಿ ಶಾಂತವಾಯಿತು. ಆ ಜನರು ಬೆರಗಾಗಿ, “ಈತನು ಎಂಥವನಾಗಿರಬಹುದು! ಗಾಳಿಯೂ ಸಮುದ್ರವೂ ಸಹ ಈತನಿಗೆ ವಿಧೇಯವಾಗುತ್ತವಲ್ಲಾ” ಅಂದರು.
  • ಗಾಳಿ ಎದುರಾಗಿದ್ದುದರಿಂದ ಶಿಷ್ಯರು ಹುಟ್ಟು ಹಾಕುತ್ತಾ ಬಹಳ ಕಷ್ಟಪಟ್ಟರುಮಾರ್ಕ 6:48, ಮತ್ತಾ 14:24, ಯೋಹಾ 6:18
    ವಚನಗಳು
    ಮಾರ್ಕ 6:48ಎದುರು ಗಾಳಿ ಬೀಸುತ್ತಿದ್ದುದರಿಂದ ಶಿಷ್ಯರು ಹುಟ್ಟುಗೋಲು ಹಾಕಿ ದಣಿದು ಹೋದದ್ದನ್ನು ಯೇಸು ಕಂಡು ಹೆಚ್ಚುಕಡಿಮೆ ರಾತ್ರಿಯ ನಾಲ್ಕನೆಯ ಜಾವದಲ್ಲಿ ಸಮುದ್ರದ ಮೇಲೆ ನಡೆದು ಅವರ ಕಡೆಗೆ ಬಂದು ಅವರನ್ನು ದಾಟಿ ಮುಂದಕ್ಕೆ ಹೋಗಬೇಕೆಂದಿದ್ದನು.
    ಮತ್ತಾ 14:24ಆದರೆ ದೋಣಿಯು ಸಮುದ್ರದ ನಡುವೆಯಿತ್ತು, ಎದುರು ಗಾಳಿ ಬೀಸುತ್ತಿದ್ದುದರಿಂದ ಅಲೆಗಳ ಬಡಿತಕ್ಕೆ ಸಿಕ್ಕಿ ಹೊಯ್ದಾಡುತ್ತಿತ್ತು.
    ಯೋಹಾ 6:18ಬಿರುಗಾಳಿ ಬೀಸುತ್ತಿದ್ದುದರಿಂದ ಸಮುದ್ರವು ಅಲ್ಲೋಲಕಲ್ಲೋಲವಾಯಿತು.
  • ಮೆಲ್ಲನೆ ಬೀಸಿದ ತೆಂಕಣ ಗಾಳಿ, ಆ ಮೇಲೆ ಈಶಾನ್ಯ ಮಾರುತ ಎಂಬ ಬಿರುಗಾಳಿಅ. ಕೃ 27:13–15
    ವಚನಗಳು
    ಅ. ಕೃ 27:13–15ತೆಂಕಣ ಗಾಳಿ ಮೆಲ್ಲಗೆ ಬೀಸಲಾಗಿ ತಮ್ಮ ಉದ್ದೇಶವು ಸಾರ್ಥಕವಾಯಿತೆಂದು ಭಾವಿಸಿ ಲಂಗರುಗಳನ್ನು ತೆಗೆದು ಕ್ರೇತ ದ್ವೀಪವನ್ನು ಅನುಸರಿಸಿ ತೀರದ ಮಗ್ಗುಲಲ್ಲೇ ಹೋಗುತ್ತಿದ್ದರು. ಸ್ವಲ್ಪ ಹೊತ್ತಿನಮೇಲೆ ಆ ದ್ವೀಪದ ಮೇಲೆ ಈಶಾನ್ಯ ಮಾರುತ ಎಂಬ ಉರಕಲೋನ್ ಗಾಳಿಯು ಅಪ್ಪಳಿಸಿತು. ಆ ಹೊಡೆತಕ್ಕೆ ಹಡಗು ಸಿಕ್ಕಿಕೊಂಡು ಗಾಳಿಗೆದುರಾಗಿ ನಿಲ್ಲುವುದಕ್ಕೆ ಆಗದೆಹೋದುದರಿಂದ ಗಾಳಿ ಬಂದ ಕಡೆಗೆ ಹಡಗನ್ನು ನೂಕಿಸಿಕೊಂಡು ಹೋದೆವು.
  • ತೆಂಕಣ ಗಾಳಿಯಿಂದ ಪೌಲನ ಹಡಗು ರೇಗಿಯದಿಂದ ಪೊತಿಯೋಲಕ್ಕೆ ಎರಡು ದಿನಗಳಲ್ಲಿ ಹೋಯಿತುಅ. ಕೃ 28:13
    ವಚನಗಳು
    ಅ. ಕೃ 28:13ಅಲ್ಲಿಂದ ಮುಂದುವರೆದು ರೇಗಿಯ ಪಟ್ಟಣಕ್ಕೆ ಸೇರಿದೆವು. ಒಂದು ದಿನವಾದ ಮೇಲೆ ತೆಂಕಣ ಗಾಳಿ ಬೀಸಿದ್ದರಿಂದ, ಎರಡನೆಯ ದಿನದಲ್ಲಿ ಪೊತಿಯೋಲಕ್ಕೆ ಬಂದೆವು.

ನುಡಿಗಳು

  • “ಗಾಳಿಯು ದಕ್ಷಿಣದ ಕಡೆಗೆ ಬೀಸುತ್ತದೆ. ಉತ್ತರದ ಕಡೆಗೆ ತಿರುಗುವುದು. ಅದು ಸುತ್ತುತ್ತಾ ಸುತ್ತುತ್ತಾ ಹೋಗಿ”ಪ್ರಸ 1:6
    ವಚನಗಳು
    ಪ್ರಸ 1:6ಗಾಳಿಯು ದಕ್ಷಿಣದ ಕಡೆಗೆ ಬೀಸುತ್ತದೆ. ಉತ್ತರದ ಕಡೆಗೆ ತಿರುಗುವುದು. ಅದು ಸುತ್ತುತ್ತಾ ಸುತ್ತುತ್ತಾ ಹೋಗಿ, ಗಾಳಿ ಸುತ್ತಳತೆಯ ಪ್ರಕಾರ ಹಿಂದಿರುಗುತ್ತವೆ.
  • “ಗಾಳಿಯನ್ನು ನೋಡುತ್ತಲೇ ಇರುವವನು ಬೀಜವನ್ನು ಬಿತ್ತುವುದಿಲ್ಲ”ಪ್ರಸ 11:4
    ವಚನಗಳು
    ಪ್ರಸ 11:4ಗಾಳಿಯನ್ನು ನೋಡುತ್ತಲೇ ಇರುವವನು ಬೀಜವನ್ನು ಬಿತ್ತುವುದಿಲ್ಲ, ಮೋಡಗಳನ್ನು ಗಮನಿಸುತ್ತಲೇ ಇರುವವನು ಪೈರನ್ನು ಕೊಯ್ಯುವುದಿಲ್ಲ.
  • “ಗಾಳಿಯ ಮಾರ್ಗವನ್ನೂ” ನೀನು ತಿಳಿಯುವುದಿಲ್ಲಪ್ರಸ 11:5
    ವಚನಗಳು
    ಪ್ರಸ 11:5ಗಾಳಿಯ ಮಾರ್ಗವನ್ನೂ, ಗರ್ಭಿಣಿಯ ಗರ್ಭದಲ್ಲಿ ಎಲುಬುಗಳು ಬೆಳೆಯುವ ರೀತಿಯನ್ನೂ, ನೀನು ಹೇಗೆ ತಿಳಿಯುವುದಿಲ್ಲವೋ ಹಾಗೆಯೇ, ಸರ್ವಶಕ್ತನಾದ ದೇವರ ಕಾರ್ಯವನ್ನು ಅರಿಯುವುದಿಲ್ಲ.
  • “ಗಾಳಿಯು ಇಷ್ಟ ಬಂದ ಕಡೆ ಬೀಸುತ್ತದೆ. ನೀನು ಅದರ ಶಬ್ದವನ್ನು ಕೇಳುತ್ತೀ”ಯೋಹಾ 3:8
    ವಚನಗಳು
    ಯೋಹಾ 3:8ಗಾಳಿಯು ಇಷ್ಟ ಬಂದ ಕಡೆ ಬೀಸುತ್ತದೆ. ನೀನು ಅದರ ಶಬ್ದವನ್ನು ಕೇಳುತ್ತೀ, ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು. ಆತ್ಮನಿಂದ ಹುಟ್ಟಿದವರೆಲ್ಲರೂ ಅದರಂತೆಯೇ” ಎಂದನು.
  • ಗಾಳಿಯಿಂದ ಹಾರಿಹೋಗುವ ಹೊಟ್ಟಿನಂತೆಕೀರ್ತ 1:4
    ವಚನಗಳು
    ಕೀರ್ತ 1:4ದುಷ್ಟರೋ ಹಾಗಲ್ಲ; ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತೆ ಇದ್ದಾರೆ.
  • “ಗಾಳಿಯಿಂದ ಅಲ್ಲಾಡುವ ದಂಟನ್ನೋ?”ಮತ್ತಾ 11:7
    ವಚನಗಳು
    ಮತ್ತಾ 11:7ಅವರು ಹೊರಟು ಹೋಗುತ್ತಿರಲು ಯೇಸು ಯೋಹಾನನ ವಿಷಯವಾಗಿ ಆ ಜನರ ಗುಂಪುಗಳಿಗೆ ಹೇಳತೊಡಗಿದ್ದೇನಂದರೆ, “ನೀವು ಏನು ನೋಡಬೇಕೆಂದು ಅಡವಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ?
  • ಬಲವಾದ ಗಾಳಿಗಳಿಂದ ನೂಕಲ್ಪಡುವ ದೊಡ್ಡ ಹಡಗುಗಳನ್ನು ಚಿಕ್ಕ ಚುಕ್ಕಾಣಿಯಿಂದ ನಡೆಸಲಾಗುತ್ತದೆಯಾಕೋ 3:4
    ವಚನಗಳು
    ಯಾಕೋ 3:4ಹಡಗುಗಳನ್ನು ಸಹ ಗಮನಿಸಿರಿ. ಅವು ಬಹು ದೊಡ್ಡವುಗಳಾಗಿದ್ದರೂ ಬಲವಾದ ಗಾಳಿಯಿಂದ ದಿಕ್ಕು ತಪ್ಪುತ್ತದೆ. ಆದರೂ ನಾವಿಕನು ಬಹಳ ಸಣ್ಣ ಚುಕ್ಕಾಣಿಯಿಂದ ಅವುಗಳನ್ನು ತಾನು ಹೋಗ ಬೇಕಾದ ಕಡೆಗೆ ತಿರುಗಿಸಿಕೊಳ್ಳುತ್ತಾನೆ.
  • “ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ಅಲೆಯಂತೆ”ಯಾಕೋ 1:6
    ವಚನಗಳು
    ಯಾಕೋ 1:6ಆದರೆ ದೇವರ ಬಳಿ ಬೇಡುವವನು ಸ್ವಲ್ಪವೂ ಸಂದೇಹಪಡದೆ ನಂಬಿಕೆಯಿಂದ ಬೇಡಿಕೊಳ್ಳಲಿ. ಸಂದೇಹಪಡುವವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ಅಲೆಯಂತೆ ಅತ್ತಿತ್ತ ಅಲೆಯುತ್ತಿರುತ್ತಾನೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು