Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ವಿಷಯಗಳು › ಬುದ್ದಲಿಗಳು, ಕೊಡಗಳು ಮತ್ತು ಕುಪ್ಪಿಗಳು

ಆಶ್ಚರ್ಯಕರ ವಿವರಗಳು

ಬೈಬಲಿನಲ್ಲಿ ಬುದ್ದಲಿಗಳು, ಕೊಡಗಳು ಮತ್ತು ಕುಪ್ಪಿಗಳು

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ ನ 31 ವಾಕ್ಯಭಾಗಗಳು, ಸಾಲು ಸಾಲಾಗಿ.

ನೀರು, ದ್ರಾಕ್ಷಾರಸ ಮತ್ತು ಹಾಲಿಗಾಗಿ ಚರ್ಮದ ಬುದ್ದಲಿಗಳು

  • ಅಬ್ರಹಾಮನು ಹಾಗರಳಿಗೆ ರೊಟ್ಟಿಯನ್ನೂ ಒಂದು ಬುದ್ದಲಿ ನೀರನ್ನೂ ಕೊಟ್ಟನುಆದಿ 21:14
    ವಚನಗಳು
    ಆದಿ 21:14ಮಾರನೆಯ ದಿನ ಬೆಳಗ್ಗೆ ಅಬ್ರಹಾಮನು ಎದ್ದು, ಹಾಗರಳಿಗೆ ಬುತ್ತಿಯನ್ನೂ, ಒಂದು ತಿತ್ತಿ ತಣ್ಣೀರನ್ನೂ ಅವಳ ಹೆಗಲಿನ ಮೇಲೆ ಇಟ್ಟು, ಮಗುವನ್ನು ಒಪ್ಪಿಸಿ ಅವಳನ್ನು ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.
  • ಬುದ್ದಲಿ ಬರಿದಾದಾಗ ಅವಳು ಒಂದು ಬಾವಿಯನ್ನು ಕಂಡು ಅದನ್ನು ತುಂಬಿಸಿದಳುಆದಿ 21:15, ಆದಿ 21:19
    ವಚನಗಳು
    ಆದಿ 21:15ತಿತ್ತಿಯಲ್ಲಿದ್ದ ನೀರು ಮುಗಿದ ಮೇಲೆ ಅವಳು ಮಗುವನ್ನು ಒಂದು ಗಿಡದ ನೆರಳಿನಲ್ಲಿ ಮಲಗಿಸಿ,
    ಆದಿ 21:19ಇದಲ್ಲದೆ ದೇವರು ಅವಳ ಕಣ್ಣನ್ನು ತೆರೆದಿದ್ದರಿಂದ, ಅವಳು ಅಲ್ಲಿ ನೀರಿನ ಬಾವಿಯನ್ನು ಕಂಡು ತಿತ್ತಿಯಲ್ಲಿ ನೀರನ್ನು ತುಂಬಿಕೊಂಡು ಮಗನಿಗೆ ಕುಡಿಸಿದಳು.
  • ಯಾಯೇಲಳು ಹಾಲಿನ ಬುದ್ದಲಿಯಿಂದ ಸೀಸೆರನಿಗೆ ಕುಡಿಯಲು ಕೊಟ್ಟಳುನ್ಯಾಯ 4:19
    ವಚನಗಳು
    ನ್ಯಾಯ 4:19ಅವನು ಆಕೆಗೆ, “ದಯವಿಟ್ಟು ಸ್ವಲ್ಪ ನೀರನ್ನು ಕೊಡು, ನನಗೆ ಬಹಳ ಬಾಯಾರಿಕೆಯಾಗಿದೆ” ಅಂದನು. ಆಕೆಯು ಬುದ್ದಲಿಯನ್ನು ಬಿಚ್ಚಿ ಹಾಲನ್ನು ಕುಡಿಯಲು ಕೊಟ್ಟು ಅವನನ್ನು ಪುನಃ ಮುಚ್ಚಿದಳು.
  • ಗಿಬ್ಯೋನ್ಯರು ಹರಿದು ಹೊಲಿದ ಹಳೆಯ ದ್ರಾಕ್ಷಾರಸದ ಬುದ್ದಲಿಗಳನ್ನು ತೋರಿಸಿದರುಯೆಹೋ 9:4, ಯೆಹೋ 9:13
    ವಚನಗಳು
    ಯೆಹೋ 9:4ಅವರು ಒಂದು ಉಪಾಯವನ್ನು ಮಾಡಿದರು. ಅದೇನೆಂದರೆ ಅವರು ತಮ್ಮ ಕತ್ತೆಗಳ ಮೇಲೆ ಹಳೆಯ ಗೋಣಿ ತಟ್ಟುಗಳನ್ನು ಹಾಕಿ, ಅವುಗಳ ಮೇಲೆ ತೇಪೆ ಹಾಕಿದ ದ್ರಾಕ್ಷಾರಸದ ಹಳೆಯ ಬುದ್ದಲಿಗಳನ್ನು ಹೇರಿದರು,
    ಯೆಹೋ 9:13ನಾವು ದ್ರಾಕ್ಷಾರಸ ತುಂಬಿಸಿಕೊಂಡಿದ್ದ ಈ ಬುದ್ದಲಿಗಳು ಹೊಸದಾಗಿದ್ದವು; ಈಗ ಹರಿದುಹೋಗಿವೆ. ನಮ್ಮ ಬಟ್ಟೆಬರೆಗಳು ಹಾಗೂ ಕೆರಗಳು ದೀರ್ಘಪ್ರಯಾಣದಿಂದ ಸವೆದುಹೋಗಿವೆ’” ಎಂದು ವಿವರಿಸಿದರು.
  • ಹನ್ನಳು ಹೋರಿ, ಹಿಟ್ಟು ಮತ್ತು ದ್ರಾಕ್ಷಾರಸದ ಬುದ್ದಲಿಯೊಂದಿಗೆ ಸಮುವೇಲನನ್ನು ಶೀಲೋವಿಗೆ ಕರೆತಂದಳು1 ಸಮು 1:24
    ವಚನಗಳು
    1 ಸಮು 1:24ಅನಂತರ ಆಕೆಯು ಮೂರು ವರ್ಷದ ಒಂದು ಹೋರಿಯನ್ನೂ, ಒಂದು ಏಫಾ ಹಿಟ್ಟನ್ನೂ, ಒಂದು ತಿತ್ತಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಪುತ್ರನೊಂದಿಗೆ ಶೀಲೋವಿನಲ್ಲಿದ್ದ ಯೆಹೋವನ ಮಂದಿರಕ್ಕೆ ಬಂದಳು. ಮಗನು ಇನ್ನೂ ಚಿಕ್ಕವನಾಗಿದ್ದನು.
  • ಬೇತೇಲಿಗೆ ಹೋಗುತ್ತಿದ್ದ ಮೂವರು: ಆಡುಮರಿಗಳು, ಮೂರು ರೊಟ್ಟಿಗಳು ಮತ್ತು ದ್ರಾಕ್ಷಾರಸದ ಬುದ್ದಲಿ1 ಸಮು 10:3
    ವಚನಗಳು
    1 ಸಮು 10:3ನೀನು ಅಲ್ಲಿಂದ ಮುಂದೆ ನಡೆದು ತಾಬೋರಿನ ಹತ್ತಿರವಿರುವ ಏಲೋನ್‌ ವೃಕ್ಷದ ಬಳಿಗೆ ಬಂದಾಗ ದೇವದರ್ಶನಕ್ಕಾಗಿ ಬೇತೇಲಿಗೆ ಹೋಗುವ ಮೂವರು ಜನರು ನಿನ್ನನ್ನು ಎದುರುಗೊಳ್ಳುವರು. ಅವರಲ್ಲೊಬ್ಬನು ಮೂರು ಹೋತಮರಿಗಳನ್ನೂ, ಮತ್ತೊಬ್ಬನು ಮೂರು ರೊಟ್ಟಿಗಳನ್ನೂ, ಇನ್ನೊಬ್ಬನು ದ್ರಾಕ್ಷಾರಸದ ಒಂದು ಬುದ್ದಲಿಯನ್ನೂ ಹೊತ್ತುಕೊಂಡಿರುವರು.
  • ಇಷಯನು ರೊಟ್ಟಿ, ದ್ರಾಕ್ಷಾರಸದ ಬುದ್ದಲಿ ಮತ್ತು ಆಡುಮರಿಯೊಂದಿಗೆ ದಾವೀದನನ್ನು ಸೌಲನ ಬಳಿಗೆ ಕಳುಹಿಸಿದನು1 ಸಮು 16:20
    ವಚನಗಳು
    1 ಸಮು 16:20ಇಷಯನು ರೊಟ್ಟಿಯನ್ನೂ, ಒಂದು ಬುದ್ದಲಿ ದ್ರಾಕ್ಷಾರಸವನ್ನೂ, ಒಂದು ಹೋತಮರಿಯನ್ನೂ, ಕತ್ತೆಯ ಮೇಲೆ ಹೇರಿಸಿ ತನ್ನ ಮಗನಾದ ದಾವೀದನ ಮುಖಾಂತರ ಸೌಲನಿಗೆ ಕಳುಹಿಸಿದನು.
  • ಅಬೀಗೈಲಳು ದಾವೀದನಿಗೆ ಎರಡು ಬುದ್ದಲಿ ದ್ರಾಕ್ಷಾರಸವನ್ನೂ ಬಹಳ ಆಹಾರವನ್ನೂ ತಂದಳು1 ಸಮು 25:18
    ವಚನಗಳು
    1 ಸಮು 25:18ಆಗ ಅಬೀಗೈಲಳು ಶೀಘ್ರವಾಗಿ ಇನ್ನೂರು ರೊಟ್ಟಿ, ಎರಡು ಬುದ್ದಲಿ ದ್ರಾಕ್ಷಾರಸ, ಸಿದ್ಧಮಾಡಿದ ಐದು ಕುರಿಗಳ ಮಾಂಸ, ಐವತ್ತು ಸೇರು ಹುರಿಗಾಳು, ಒಣಗಿದ ನೂರು ದ್ರಾಕ್ಷಿ ಗೊಂಚಲುಗಳು, ಅಂಜೂರ ಹಣ್ಣುಗಳು, ಇನ್ನೂರು ಉಂಡೆಗಳು ಇವುಗಳನ್ನು ಕತ್ತೆಗಳ ಮೇಲೆ ಹೇರಿಸಿ,
  • ಚೀಬನು ಹೇರು ಹೊರಿಸಿದ ಕತ್ತೆಗಳೊಂದಿಗೂ ದ್ರಾಕ್ಷಾರಸದ ಬುದ್ದಲಿಯೊಂದಿಗೂ ದಾವೀದನನ್ನು ಎದುರುಗೊಂಡನು2 ಸಮು 16:1
    ವಚನಗಳು
    2 ಸಮು 16:1ದಾವೀದನು ಗುಡ್ಡದ ತುದಿಯ ಆಚೆಗೆ ಹೋದ ಕೂಡಲೆ ಮೆಫೀಬೋಶೆತನ ಸೇವಕನಾದ ಚೀಬನು ತಡಿಹಾಕಿದ ಎರಡು ಕತ್ತೆಗಳ ಮೇಲೆ ಇನ್ನೂರು ರೊಟ್ಟಿಗಳನ್ನೂ, ನೂರು ಒಣಗಿದ ದ್ರಾಕ್ಷಿ ಗೊಂಚಲುಗಳನ್ನೂ, ನೂರು ಅಂಜೂರ ಹಣ್ಣುಗಳನ್ನೂ, ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಹೇರಿಕೊಂಡು ಬಂದು ಅವನನ್ನು ಎದುರುಗೊಂಡನು.
  • ಯೇಸು: ಹೊಸ ದ್ರಾಕ್ಷಾರಸವನ್ನು ಹಳೆಯ ಬುದ್ದಲಿಗಳಲ್ಲಿ ಯಾರೂ ಹಾಕುವುದಿಲ್ಲಮತ್ತಾ 9:17, ಮಾರ್ಕ 2:22, ಲೂಕ 5:37–38
    ವಚನಗಳು
    ಮತ್ತಾ 9:17ಇದಲ್ಲದೆ ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಹಾಕಿಡುವುದಿಲ್ಲ; ಇಟ್ಟರೆ ಬುದ್ದಲಿಗಳು ಒಡೆದು ದ್ರಾಕ್ಷಾರಸವು ಚೆಲ್ಲಿಹೋಗುವುದಲ್ಲದೆ, ಬುದ್ದಲಿಗಳು ನಾಶವಾಗುವವು; ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡುತ್ತಾರೆ, ಆಗ ಎರಡೂ ಸಂರಕ್ಷಿಸಲ್ಪಡುವವು” ಎಂದು ಹೇಳಿದನು.
    ಮಾರ್ಕ 2:22ಮತ್ತು ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿಡುವುದಿಲ್ಲ, ಹಾಕಿದರೆ ಆ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ದ್ರಾಕ್ಷಾರಸವು ಮತ್ತು ಬುದ್ದಲಿಗಳು ಎರಡೂ ನಾಶವಾಗುವವು. ಆದುದರಿಂದ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು” ಎಂದು ಹೇಳಿದನು.
    ಲೂಕ 5:37–38ಮತ್ತು ಹಳೇ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿಡುವುದಿಲ್ಲ; ಹಾಗೆ ಇಟ್ಟರೆ ಆ ಹೊಸ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ಚೆಲ್ಲಿಹೋಗುವುದಲ್ಲದೆ ಬುದ್ದಲಿಗಳೂ ಒಡೆದು ಹೋಗುವವು. ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು.
  • ಎಲೀಹು: ನನ್ನ ಹೊಟ್ಟೆ ಹೊಸ ಬುದ್ದಲಿಯಂತೆ ಒಡೆದುಹೋಗುವ ಹಾಗಿದೆಯೋಬ 32:19
    ವಚನಗಳು
    ಯೋಬ 32:19ಆಹಾ, ದ್ರಾಕ್ಷಾರಸವನ್ನು ತುಂಬಿ, ಬಾಯಿಕಟ್ಟಿದ ಹೊಸ ಬುದ್ದಲಿಗಳಂತೆ ನನ್ನ ಹೊಟ್ಟೆಯು ಒಡೆದುಹೋಗುವ ಹಾಗಿದೆ.
  • ಒಬ್ಬ ಕೀರ್ತನೆಗಾರನು: ಹೊಗೆಯಿಂದ ಒಣಗಿದ ಬುದ್ದಲಿಯಂತೆಕೀರ್ತ 119:83
    ವಚನಗಳು
    ಕೀರ್ತ 119:83ಹೊಗೆಯಲ್ಲಿ ನೇತು ಹಾಕಿರುವ ಬುದ್ದಲಿಯಂತಿದ್ದೇನೆ, ಆದರೂ ನಿನ್ನ ನಿಬಂಧನೆಗಳನ್ನು ಮರೆಯಲಿಲ್ಲ.
  • ಒಬ್ಬ ಕೀರ್ತನೆಗಾರನು: ‘ನನ್ನ ಕಣ್ಣೀರು ನಿನ್ನ ಬುದ್ದಲಿಯಲ್ಲಿ ತುಂಬಿದೆಯಲ್ಲಾ’ಕೀರ್ತ 56:8
    ವಚನಗಳು
    ಕೀರ್ತ 56:8ನಾನು ದೇಶಭ್ರಷ್ಟನಾಗಿ ಅಲೆದಾಡಿದ್ದನ್ನು ನೀನೇ ಬಲ್ಲೆ. ನನ್ನ ಕಣ್ಣೀರು ನಿನ್ನ ಬುದ್ದಲಿಯಲ್ಲಿ ತುಂಬಿದೆಯಲ್ಲಾ; ಅದರ ವಿಷಯವಾಗಿ ನಿನ್ನ ಪುಸ್ತಕದಲ್ಲಿ ಬರೆದದೆಯಲ್ಲಾ.

ಕೊಡಗಳು ಮತ್ತು ಕುಪ್ಪಿಗಳು

  • ರೆಬೆಕ್ಕಳು ತನ್ನ ಹೆಗಲಿನ ಮೇಲೆ ಕೊಡವನ್ನು ಹೊತ್ತುಕೊಂಡು ಹೊರಗೆ ಬಂದಳುಆದಿ 24:15
    ವಚನಗಳು
    ಆದಿ 24:15ಅವನು ಹೀಗೆ ಅಂದುಕೊಳ್ಳುತ್ತಿರುವಾಗಲೇ ಅಬ್ರಹಾಮನ ತಮ್ಮನಾದ ನಾಹೋರನ ಹೆಂಡತಿಯಾಗಿರುವ ಮಿಲ್ಕಳ ಮಗನಾದ ಬೆತೂವೇಲನಿಗೆ ಹುಟ್ಟಿದ ರೆಬೆಕ್ಕಳು ಹೆಗಲಿನ ಮೇಲೆ ಕೊಡವನ್ನಿಟ್ಟುಕೊಂಡು ಊರ ಹೊರಗೆ ಬರುವುದನ್ನು ಕಂಡನು.
  • ಗಿದ್ಯೋನನ ಜನರು ಕೊಡಗಳೊಳಗೆ ಪಂಜುಗಳನ್ನು ಹಿಡಿದುಕೊಂಡು ಹೋಗಿ ಕೊಡಗಳನ್ನು ಒಡೆದರುನ್ಯಾಯ 7:16, ನ್ಯಾಯ 7:19–20
    ವಚನಗಳು
    ನ್ಯಾಯ 7:16ಮತ್ತು ಅವನು ಆ ಮುನ್ನೂರು ಮಂದಿಯನ್ನು ಮೂರು ಗುಂಪು ಮಾಡಿ ಪ್ರತಿಯೊಬ್ಬನ ಕೈಯಲ್ಲಿ ಕೊಂಬನ್ನೂ, ಉರಿಯುವ ಪಂಜು ಇರುವ ಬರಿಕೊಡವನ್ನೂ ಕೊಟ್ಟು ಅವರಿಗೆ,
    ನ್ಯಾಯ 7:19–20ರಾತ್ರಿಯ ಎರಡನೆಯ ಜಾವದಲ್ಲಿ ಕಾವಲುಗಾರರು ಬದಲಾದ ಕೂಡಲೆ ಗಿದ್ಯೋನನೂ ಅವನ ಸಂಗಡ ಇದ್ದ ನೂರು ಮಂದಿಯೂ (ಶತ್ರುಗಳ) ಪಾಳೆಯದ ಅಂಚಿಗೆ ಬಂದು, ಕೊಂಬುಗಳನ್ನು ಊದಿ, ತಮ್ಮ ಕೈಯಲ್ಲಿದ್ದ ಕೊಡಗಳನ್ನು ಒಡೆದುಬಿಟ್ಟರು. ಕೂಡಲೆ ಮೂರು ಗುಂಪಿನವರೂ ಕೊಂಬುಗಳನ್ನು ಊದಿ, ಕೊಡಗಳನ್ನು ಒಡೆದುಬಿಟ್ಟು, ಎಡಗೈಯಲ್ಲಿ ಪಂಜುಗಳನ್ನೂ ಬಲಗೈಯಲ್ಲಿ ಊದುವ ಕೊಂಬುಗಳನ್ನೂ ಹಿಡಿದು, “ಯೆಹೋವನ ಕತ್ತಿ, ಗಿದ್ಯೋನನ ಕತ್ತಿ ಆಗಿದೆ” ಎಂದು ಕೂಗಿ
  • ಸಮುವೇಲನು ಒಂದು ಕುಪ್ಪಿ ಎಣ್ಣೆಯನ್ನು ಸೌಲನ ತಲೆಯ ಮೇಲೆ ಹೊಯ್ದನು1 ಸಮು 10:1
    ವಚನಗಳು
    1 ಸಮು 10:1ಆ ಆಳು ಮುಂದೆ ಹೋದಾಗ ಸಮುವೇಲನು ತೈಲದ ಕೊಂಬಿನಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು ಅವನನ್ನು ಮುದ್ದಿಟ್ಟು ಅವನಿಗೆ, “ಯೆಹೋವನು ತನ್ನ ಸ್ವತ್ತನ್ನು ಅಳುವುದಕ್ಕೋಸ್ಕರ ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ.
  • ನಿದ್ರಿಸುತ್ತಿದ್ದ ಸೌಲನ ತಲೆಯ ಬಳಿಯಿಂದ ದಾವೀದನು ಈಟಿಯನ್ನೂ ನೀರಿನ ತಂಬಿಗೆಯನ್ನೂ ತೆಗೆದುಕೊಂಡನು1 ಸಮು 26:12
    ವಚನಗಳು
    1 ಸಮು 26:12ಸೌಲನ ತಲೆದಿಂಬಿನ ಬಳಿಯಲ್ಲಿದ್ದ ಬರ್ಜಿ ಮತ್ತು ನೀರಿನ ತಂಬಿಗೆಯನ್ನು ತೆಗೆದುಕೊಂಡು ಹೋದರು. ಯಾರೂ ನೋಡಲಿಲ್ಲ, ಯಾರಿಗೂ ಗೊತ್ತಾಗಲಿಲ್ಲ, ಯಾರೂ ಎಚ್ಚರವಾಗಲಿಲ್ಲ. ಏಕೆಂದರೆ ಯೆಹೋವನು ಅವರಿಗೆ ಗಾಢನಿದ್ರೆಯನ್ನು ಬರಮಾಡಿದ್ದನು. ಒಬ್ಬರಿಗೂ ಎಚ್ಚರವಿಲ್ಲದೆ ಎಲ್ಲರೂ ನಿದ್ರೆಮಾಡುತ್ತಿದ್ದರು.
  • ಚಾರೆಪ್ತದ ವಿಧವೆಯ ಬಳಿ ಮಡಕೆಯಲ್ಲಿ ಒಂದು ಹಿಡಿ ಹಿಟ್ಟೂ ಸ್ವಲ್ಪ ಎಣ್ಣೆಯೂ ಇತ್ತು1 ಅರಸು 17:12
    ವಚನಗಳು
    1 ಅರಸು 17:12ಆಕೆಯು ಅವನಿಗೆ, “ನಿನ್ನ ದೇವರಾದ ಯೆಹೋವನಾಣೆ, ನನ್ನ ಹತ್ತಿರ ರೊಟ್ಟಿ ಇರುವುದಿಲ್ಲ, ಮಡಿಕೆಯಲ್ಲಿ ಒಂದು ಹಿಡಿ ಹಿಟ್ಟು, ಮೊಗೆಯಲ್ಲಿ ಸ್ವಲ್ಪ ಎಣ್ಣೆ ಇವುಗಳ ಹೊರತಾಗಿ ಬೇರೇನೂ ಇರುವುದಿಲ್ಲ. ಈಗ ಎರಡು ಕಟ್ಟಿಗೆಗಳನ್ನು ಆರಿಸಿಕೊಂಡು ನನಗೋಸ್ಕರವೂ ನನ್ನ ಮಗನಿಗೋಸ್ಕರವೂ ರೊಟ್ಟಿ ಮಾಡುತ್ತೇನೆ, ಬೇರೆ ಹಿಟ್ಟು, ಎಣ್ಣೆ ಇಲ್ಲ ಇದನ್ನು ತಿಂದ ಮೇಲೆ ಆಹಾರವಿಲ್ಲದ ಕಾರಣ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ” ಎಂದು ಉತ್ತರಕೊಟ್ಟಳು.
  • ಪಾತ್ರೆಗಳು ಮುಗಿಯುವ ತನಕ ಒಬ್ಬ ವಿಧವೆಯು ಎಣ್ಣೆಯನ್ನು ಹೊಯ್ದಳು2 ಅರಸು 4:2–6
    ವಚನಗಳು
    2 ಅರಸು 4:2–6ಎಲೀಷನು ಆಕೆಗೆ, “ನಾನು ನಿನಗೇನು ಮಾಡಬೇಕೆನ್ನುತ್ತೀ? ನಿನ್ನ ಮನೆಯಲ್ಲಿ ಏನಿರುತ್ತದೆ? ಹೇಳು ಎಂದನು.” ಅದಕ್ಕೆ ಆಕೆಯು, “ನಿನ್ನ ದಾಸಿಯ ಮನೆಯಲ್ಲಿ ಒಂದು ಮೊಗೆ ಎಣ್ಣೆ ಹೊರತಾಗಿ ಏನೂ ಇಲ್ಲ” ಎಂದು ಉತ್ತರ ಕೊಟ್ಟಳು. ಆಗ ಎಲೀಷನು ಆಕೆಗೆ, “ಹೋಗಿ, ನಿನ್ನ ನೆರೆಯವರಿಂದ ಸಿಕ್ಕುವಷ್ಟು ಬರಿದಾದ ಪಾತ್ರೆಗಳನ್ನು ಕೇಳಿ ತೆಗೆದುಕೊಂಡು ಬಾ. ಅನಂತರ, ನೀನು, ನಿನ್ನ ಮಕ್ಕಳನ್ನು ಒಳಗೆ ಕರೆದುಕೊಂಡು ಬಾಗಿಲನ್ನು ಮುಚ್ಚಿ, ಎಣ್ಣೆಯನ್ನು ಪಾತ್ರೆಗಳಲ್ಲಿ ಹೊಯ್ದು ತುಂಬಿದವುಗಳನ್ನೆಲ್ಲಾ ಒಂದು ಕಡೆಯಿಡು” ಎಂದು ಹೇಳಿದನು. ಆಕೆಯು ಹೋಗಿ ಮಕ್ಕಳನ್ನು ಒಳಗೆ ಕರೆದುಕೊಂಡು, ಬಾಗಿಲನ್ನು ಮುಚ್ಚಿ, ಅವರು ಮುಂದಿಟ್ಟ ಪಾತ್ರೆಗಳಲ್ಲೆಲ್ಲಾ ಎಣ್ಣೆ ಹೊಯ್ದಳು. ಪಾತ್ರೆಗಳೆಲ್ಲಾ ತುಂಬಿದಾಗ ಆಕೆಯು ಮಗನಿಗೆ, “ಇನ್ನೊಂದು ಪಾತ್ರೆಯನ್ನು ತಂದಿಡು” ಎನ್ನಲು ಅವನು, “ಪಾತ್ರೆಗಳೆಲ್ಲ ಮುಗಿದು ಹೋದವು” ಎಂದು ಉತ್ತರಕೊಟ್ಟನು. ಕೂಡಲೇ ಎಣ್ಣೆ ಉಕ್ಕುವುದು ನಿಂತುಹೋಯಿತು.
  • ಎಲೀಷನು ಒಬ್ಬ ಯುವ ಪ್ರವಾದಿಯನ್ನು ಕುಪ್ಪಿ ಎಣ್ಣೆಯೊಂದಿಗೆ ರಾಮೋತ್ ಗಿಲ್ಯಾದಿಗೆ ಕಳುಹಿಸಿದನು2 ಅರಸು 9:1
    ವಚನಗಳು
    2 ಅರಸು 9:1ಪ್ರವಾದಿಯಾದ ಎಲೀಷನು ಪ್ರವಾದಿಮಂಡಳಿಯವರಲ್ಲಿ ಒಬ್ಬನನ್ನು ಕರೆದು ಅವನಿಗೆ, “ಈ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ರಾಮೋತ್ ಗಿಲ್ಯಾದಿಗೆ ಹೋಗಲು ಸಿದ್ಧನಾಗು.”
  • ಯೆರೆಮೀಯನು ಕುಂಬಾರನ ಮಣ್ಣಿನ ಕುಡಿಕೆಯನ್ನು ಕೊಂಡು ಹಿರಿಯರ ಮುಂದೆ ಅದನ್ನು ಒಡೆದುಹಾಕಿದನುಯೆರೆ 19:1, ಯೆರೆ 19:10
    ವಚನಗಳು
    ಯೆರೆ 19:1ಯೆಹೋವನು ನನಗೆ ಹೀಗೆ ಹೇಳಿದನು, “ಹೊರಡು, ಕುಂಬಾರನು ಮಾಡಿದ ಮಣ್ಣಿನ ಮಡಕೆಯನ್ನು ಕೊಂಡುಕೊಂಡು, ಜನರ ಹಿರಿಯರಲ್ಲಿಯೂ ಮತ್ತು ಯಾಜಕರ ಹಿರಿಯರಲ್ಲಿಯೂ ಕೆಲವರನ್ನು ಆರಿಸಿಕೋ.
    ಯೆರೆ 19:10ಆಗ ನೀನು ನಿನ್ನ ಸಂಗಡ ಬಂದವರ ಕಣ್ಣೆದುರಿಗೆ ಆ ಮಡಿಕೆಯನ್ನು ಒಡೆದುಬಿಟ್ಟು ಅವರಿಗೆ ಹೀಗೆ ಹೇಳು,
  • ಕಾನಾ ಊರಿನಲ್ಲಿ ತಲಾ ಇಪ್ಪತ್ತರಿಂದ ಮೂವತ್ತು ಗ್ಯಾಲನ್ ಹಿಡಿಸುವ ಆರು ಕಲ್ಲಿನ ಬಾನೆಗಳು ಕಂಠದ ವರೆಗೆ ತುಂಬಿಸಲ್ಪಟ್ಟವುಯೋಹಾ 2:6–7
    ವಚನಗಳು
    ಯೋಹಾ 2:6–7ಯೆಹೂದ್ಯರ ಶುದ್ಧಾಚಾರ ಪದ್ಧತಿಯ ಪ್ರಕಾರ ಅಲ್ಲಿ ಆರು ಕಲ್ಲಿನ ಬಾನೆಗಳು ಇದ್ದವು. ಪ್ರತಿಯೊಂದು ಬಾನೆಯೂ ಎರಡು ಇಲ್ಲವೆ ಮೂರು ಕೊಳಗ ನೀರು ಹಿಡಿಯುವ ಅಳತೆಯುಳ್ಳದ್ದಾಗಿತ್ತು. ಯೇಸು ಅವರಿಗೆ, “ಆ ಬಾನೆಗಳಲ್ಲಿ ನೀರು ತುಂಬಿರಿ” ಎಂದನು. ಅವರು ಅವುಗಳನ್ನು ಕಂಠದವರೆಗೆ ತುಂಬಿದರು.
  • ನೀರಿನ ಕೊಡವನ್ನು ಹೊತ್ತುಕೊಂಡಿರುವ ಒಬ್ಬನು ಶಿಷ್ಯರಿಗೆ ದಾರಿ ತೋರಿಸುವನುಮಾರ್ಕ 14:13
    ವಚನಗಳು
    ಮಾರ್ಕ 14:13ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು ಅವರಿಗೆ, “ನೀವು ಪಟ್ಟಣದೊಳಗೆ ಹೋಗಿರಿ. ಅಲ್ಲಿ ತುಂಬಿದ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು. ಅವನನ್ನು ಹಿಂಬಾಲಿಸಿರಿ.
  • ಸಮಾರ್ಯದ ಸ್ತ್ರೀಯು ತನ್ನ ನೀರಿನ ಕೊಡವನ್ನು ಬಿಟ್ಟು ಊರೊಳಕ್ಕೆ ಹೋದಳುಯೋಹಾ 4:28
    ವಚನಗಳು
    ಯೋಹಾ 4:28ಆಗ ಆ ಸ್ತ್ರೀ ತನ್ನ ನೀರಿನ ಕೊಡವನ್ನು ಅಲ್ಲೇ ಬಿಟ್ಟು ಊರೊಳಕ್ಕೆ ಹೋಗಿ ಜನರಿಗೆ,
  • ಒಬ್ಬ ಸ್ತ್ರೀಯು ಜಟಾಮಾಂಸಿ ತೈಲದ ಭರಣಿಯನ್ನು ಒಡೆದು ಯೇಸುವಿನ ತಲೆಯ ಮೇಲೆ ಹೊಯ್ದಳುಮಾರ್ಕ 14:3
    ವಚನಗಳು
    ಮಾರ್ಕ 14:3ಆತನು ಬೇಥಾನ್ಯದಲ್ಲಿದ್ದ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ ಒಬ್ಬ ಸ್ತ್ರೀಯು ಬಹು ಬೆಲೆಯುಳ್ಳ ಸ್ವಚ್ಛ ಜಟಮಾಂಸಿ ತೈಲದ ಭರಣಿಯನ್ನು ತೆಗೆದುಕೊಂಡು ಬಂದು ಅದನ್ನು ಒಡೆದು ತೈಲವನ್ನು ಯೇಸುವಿನ ತಲೆಯ ಮೇಲೆ ಸುರಿದಳು.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು