Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › 1 ಕೊರಿಂಥದವರಿಗೆ 10:13

ಬೈಬಲ್ ವಚನ · IRV

1 ಕೊರಿಂಥದವರಿಗೆ 10:13

ಮನುಷ್ಯರಿಗೆ ಸಾಧಾರಣವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲವಲ್ಲ. ದೇವರು ನಂಬಿಗಸ್ತನು. ನಿಮ್ಮ ಶಕ್ತಿಗೆ ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವುದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.

ಇಡೀ ಅಧ್ಯಾಯ ಓದಿ: 1 ಕೊರಿಂಥದವರಿಗೆ 10

ಸಂದರ್ಭದಲ್ಲಿ

10ಇದಲ್ಲದೆ ಅವರಲ್ಲಿ ಕೆಲವರು ಗೊಣಗುಟ್ಟಿ ಸಂಹಾರಕ ದೂತನ ಕೈಯಿಂದ ನಾಶವಾದರು. ನೀವು ಗುಣಗುಟ್ಟಬೇಡಿರಿ.

11ಅವರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನರೂಪವಾಗಿವೆ. ಮತ್ತು ಯುಗಾಂತ್ಯಕ್ಕೆ ಬಂದಿರುವವರಾದ ನಮಗೆ ಇದು ಎಚ್ಚರಿಕೆಯ ಮಾತುಗಳಾಗಿ ಬರೆದಿವೆ.

12ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳದಂತೆ ಎಚ್ಚರಿಕೆಯಾಗಿರಲಿ.

13ಮನುಷ್ಯರಿಗೆ ಸಾಧಾರಣವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲವಲ್ಲ. ದೇವರು ನಂಬಿಗಸ್ತನು. ನಿಮ್ಮ ಶಕ್ತಿಗೆ ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವುದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.

14ಆದ್ದರಿಂದ ಪ್ರಿಯರೇ, ವಿಗ್ರಹಾರಾಧನೆಯನ್ನು ಬಿಟ್ಟು ದೂರವಾಗಿರಿ.

15ನೀವು ವಿವೇಕಿಗಳೆಂದು ಇದನ್ನು ಹೇಳುತ್ತೇನೆ. ನಾನು ಹೇಳುವುದನ್ನು ನೀವೇ ಯೋಚಿಸಿರಿ.

16ನಾವು ದೇವರ ಸ್ತೋತ್ರಮಾಡಿ ಪಾನಪಾತ್ರೆಯಲ್ಲಿ ಪಾನ ಮಾಡುವುದು ಕ್ರಿಸ್ತನ ರಕ್ತದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ? ನಾವು ರೊಟ್ಟಿಯನ್ನು ಮುರಿದು ತಿನ್ನುವುದು ಕ್ರಿಸ್ತನ ದೇಹದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ?

1 ಕೊರಿಂಥದವರಿಗೆ 10

ಇಂಗ್ಲಿಷ್‌ನಲ್ಲಿ

Berean Standard Bible1 Corinthians 10:13No temptation has seized you except what is common to man. And God is faithful; He will not let you be tempted beyond what you can bear. But when you are tempted, He will also provide an escape, so that you can stand up under it.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

2 ಪೇತ್ರ 2:9ಕರ್ತನು ಭಕ್ತರನ್ನು ಕಷ್ಟಗಳಿಂದ ರಕ್ಷಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವನಾಗಿದ್ದಾನೆ.
2 ತಿಮೊ 4:18ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ನನ್ನನ್ನು ಕಾಪಾಡಿ ತನ್ನೊಂದಿಗೆ ಪರಲೋಕ ರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.
2 ಥೆಸ 3:3ಆದರೆ ಕರ್ತನು ನಂಬಿಗಸ್ತನು, ಆತನು ನಿಮ್ಮನ್ನು ದೃಢಪಡಿಸಿ ನೀವು ಕೆಡುಕನ ಕೈಗೆ ಸಿಕ್ಕದಂತೆ ಕಾಪಾಡುವನು.
1 ಪೇತ್ರ 5:8–9ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ. ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ. ಲೋಕದಲ್ಲಿರುವ ನಿಮ್ಮ ಸಹೋದರರೂ ಅಂಥ ಬಾಧೆಗಳನ್ನೇ ಅನುಭವಿಸುತ್ತಿದ್ದಾರೆಂಬುದು ನಿಮಗೆ ತಿಳಿದಿದೆ.
ಇಬ್ರಿ 12:4ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವುದರಲ್ಲಿ ರಕ್ತವನ್ನು ಸುರಿಸುವಷ್ಟು ಹೋರಾಡಲಿಲ್ಲವಲ್ಲ.
1 ಥೆಸ 5:24ನಿಮ್ಮನ್ನು ಕರೆದವನು ನಂಬಿಗಸ್ತನು, ಆತನು ತನ್ನ ಕಾರ್ಯವನ್ನು ಸಾಧಿಸುವನು.
2 ಕೊರಿ 12:8–10ಈ ನೋವು ನನ್ನನ್ನು ಬಿಟ್ಟುಹೋಗುವಂತೆ ಮೂರು ಸಾರಿ ಕರ್ತನನ್ನು ಬೇಡಿಕೊಂಡೆನು ಆದರೆ ಅದಕ್ಕಾತನು, “ನನ್ನ ಕೃಪೆಯೇ ನಿನಗೆ ಸಾಕು, ಬಲಹೀನತೆಯಲ್ಲಿಯೇ ನನ್ನ ಬಲವು ಪೂರ್ಣಸಾಧಕವಾಗುತ್ತದೆ” ಎಂದು ನನಗೆ ಹೇಳಿದನು. ಹೀಗಿರಲಾಗಿ, ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿರಬೇಕೆಂದು ನನಗುಂಟಾಗುವ ಬಲಹೀನತೆಯಲ್ಲಿಯೂ ಬಹು ಸಂತೋಷವಾಗಿ ಹೆಚ್ಚಳಪಡುವೆನು. ಆದ್ದರಿಂದ ಕ್ರಿಸ್ತನ ನಿಮಿತ್ತ ನನಗೆ ಬಲಹೀನತೆಯಲ್ಲಿಯೂ, ತಿರಸ್ಕಾರದಲ್ಲಿಯೂ, ಕೊರತೆಯಲ್ಲಿಯೂ, ಹಿಂಸೆಯಲ್ಲಿಯೂ ಮತ್ತು ಇಕ್ಕಟ್ಟೂ ಸಂಭವಿಸಿದಾಗಲೂ ಸಂತುಷ್ಟನಾಗಿದ್ದೇನೆ. ಯಾಕೆಂದರೆ ನಾನು ಯಾವಾಗ ದುರ್ಬಲನಾಗಿರುವೆನೋ, ಆವಾಗಲೇ ಬಲವುಳ್ಳವನೂ ಆಗಿರುತ್ತೇನೆ.
ಎಫೆ 6:12–13ನಮಗೆ ಹೋರಾಟವಿರುವುದು ಮನುಷ್ಯಮಾತ್ರದವರ ಸಂಗಡವಲ್ಲ. ರಾಜತ್ವಗಳ ಮೇಲೆಯೂ, ಅಧಿಕಾರಿಗಳ ಮೇಲೆಯೂ, ಈ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ, ಆಕಾಶ ಮಂಡಲಗಳಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ. ಆದ್ದರಿಂದ ಆ ದುಷ್ಟ ದಿನದಲ್ಲಿ ವೈರಿಗಳನ್ನು ಎದುರಿಸುವುದಕ್ಕೂ ಮಾಡಬೇಕಾದದ್ದೆಲ್ಲವನ್ನು ಮಾಡಿ ದೃಢವಾಗಿ ನಿಲ್ಲುವುದಕ್ಕೂ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು