ಮುಖಪುಟ › ಜನಪ್ರಿಯ ಬೈಬಲ್ ವಚನಗಳು › 1 ಕೊರಿಂಥದವರಿಗೆ 10:31
ಬೈಬಲ್ ವಚನ · IRV
1 ಕೊರಿಂಥದವರಿಗೆ 10:31
ಹೀಗಿರಲಾಗಿ ನೀವು ತಿಂದರೂ, ಕುಡಿದರೂ, ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.
ಇಡೀ ಅಧ್ಯಾಯ ಓದಿ: 1 ಕೊರಿಂಥದವರಿಗೆ 10
ಸಂದರ್ಭದಲ್ಲಿ
28ಆದರೆ ಒಬ್ಬನು ನಿಮಗೆ “ಇದು ವಿಗ್ರಹಾಲಯದಲ್ಲಿ ಬಲಿಕೊಟ್ಟದ್ದು” ಎಂದು ಹೇಳಿದರೆ ಈ ಸಂಗತಿಯನ್ನು ತಿಳಿಸಿದವನ ನಿಮಿತ್ತವಾಗಿಯೂ ಮನಸ್ಸಾಕ್ಷಿಯ ನಿಮಿತ್ತವಾಗಿಯೂ ಅದನ್ನು ತಿನ್ನಬೇಡಿರಿ.
29ಅದು ನಿನ್ನ ಸ್ವಂತ ಮನಸ್ಸಾಕ್ಷಿಗಾಗಿ ಅಲ್ಲ; ಮತ್ತೊಬ್ಬನ ಮನಸ್ಸಾಕ್ಷಿಗಾಗಿಯೇ ಹೇಳಲಾಗಿದೆ. ಮತ್ತೊಬ್ಬನ ಮನಸ್ಸಾಕ್ಷಿಯ ನಿಮಿತ್ತ ನನ್ನ ಸ್ವಾತಂತ್ರ್ಯಕ್ಕೆ ಯಾಕೆ ತೀರ್ಪಾಗಬೇಕು?
30ನಾನು ಕೃತಜ್ಞತೆಯೊಡನೆ ಊಟಮಾಡಿ ದೇವರನ್ನು ಸ್ತುತಿಸಿದ ಮೇಲೆ ಆ ಪದಾರ್ಥಗಳ ನಿಮಿತ್ತ ನನಗೆ ಯಾಕೆ ದೂಷಣೆಯಾಗಬೇಕು?
31ಹೀಗಿರಲಾಗಿ ನೀವು ತಿಂದರೂ, ಕುಡಿದರೂ, ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.
32ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ.
33ನಾನಂತೂ ಸ್ವಪ್ರಯೋಜನಕ್ಕಾಗಿ ಚಿಂತಿಸದೇ ಮನುಷ್ಯರೆಲ್ಲರು ರಕ್ಷಣೆ ಹೊಂದಬೇಕೆಂದು ಅವರ ಪ್ರಯೋಜನಕ್ಕಾಗಿ ಚಿಂತಿಸಿ, ಎಲ್ಲರನ್ನು ಎಲ್ಲಾ ವಿಷಯಗಳಲ್ಲಿ ಮೆಚ್ಚಿಸುವವನಾಗಿದ್ದೇನೆ.
ಇಂಗ್ಲಿಷ್ನಲ್ಲಿ
So whether you eat or drink or whatever you do, do it all to the glory of God.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನೇ ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ ಮತ್ತು ತಂದೆಯಾದ ದೇವರಿಗೆ ಆತನ ಮೂಲಕ ಕೃತಜ್ಞತಾಸ್ತುತ್ತಿಯನ್ನು ಸಲ್ಲಿಸಿರಿ.ನೀವು ಯಾವ ಕೆಲಸವನ್ನು ಮಾಡಿದರೋ ಅದನ್ನು ಮನುಷ್ಯರಿಗೋಸ್ಕರವೆಂದು ಮಾಡದೇ ಕರ್ತನಿಗೋಸ್ಕರವೇ ಎಂದು ಮನಃಪೂರ್ವಕವಾಗಿ ಮಾಡಿರಿ.ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವುದು. ಯೇಸು ಕ್ರಿಸ್ತನಿಗೆ ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್.ಅಲ್ಲಿಯೇ ಆತನ ಸನ್ನಿಧಿಯಲ್ಲಿ ಊಟಮಾಡಿ, ನಿಮ್ಮ ದೇವರಾದ ಯೆಹೋವನು ನಿಮ್ಮ ಪ್ರಯತ್ನಗಳನ್ನು ಕೈಗೂಡುವಂತೆ ಮಾಡಿದ್ದಕ್ಕಾಗಿ ನೀವೂ ಮತ್ತು ನಿಮ್ಮ ಮನೆಗಳವರೂ ಸಂತೋಷದಿಂದಿರಬೇಕು.ನಿಮ್ಮ ದೇವರಾದ ಯೆಹೋವನು ಆಯ್ದುಕೊಳ್ಳುವ ಸ್ಥಳದಲ್ಲೇ ಆತನ ಸನ್ನಿಧಿಯಲ್ಲಿ ಅವುಗಳನ್ನು ಊಟಮಾಡಬೇಕು. ನಿಮ್ಮ ಎಲ್ಲಾ ಪ್ರಯತ್ನಗಳು ಕೈಗೂಡಿದ್ದಕ್ಕಾಗಿ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷದಿಂದಿದ್ದು, ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ಆಳುಗಳೂ ಮತ್ತು ನಿಮ್ಮ ಊರಿನಲ್ಲಿರುವ ಲೇವಿಯರೂ ಇಂಥವುಗಳನ್ನು ಊಟಮಾಡಬೇಕು.“ನೀನು ಯಾಜಕರಿಗೂ ದೇಶದ ಸಕಲ ಜನರಿಗೂ ಹೀಗೆ ನುಡಿ, ‘ನೀವು ಈ ಎಪ್ಪತ್ತು ವರ್ಷಗಳಿಂದಲೂ ಐದನೆಯ ಮತ್ತು ಏಳನೆಯ ತಿಂಗಳುಗಳಲ್ಲಿ ಉಪವಾಸಮಾಡಿ ಗೋಳಾಡುತ್ತಿದ್ದಾಗ, ಆ ನಿಮ್ಮ ಉಪವಾಸವು ನನಗಾಗಿಯೇ ಮಾಡಿದ್ದೋ? ನೀವು ಭೋಜನ ಮಾಡುವಾಗಲೂ, ಪಾನಮಾಡುವಾಗಲೂ ಆ ನಿಮ್ಮ ಭೋಜನಪಾನಗಳು ನಿಮ್ಮವುಗಳಾಗಿಯೇ ಇರುವುದಲ್ಲವೇ.ಅಲ್ಲಿ ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ದಾಸಿಯರೂ ಮತ್ತು ನಿಮ್ಮೊಡನೆ ಸ್ವತ್ತನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.ಹೇಗೂ ಒಳಗಿರುವಂಥದನ್ನು ದಾನಕೊಡಿರಿ, ಆಗ ಸಕಲವೂ ನಿಮಗೆ ಶುದ್ಧವಾಗಿರುವುದು.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು