ಮುಖಪುಟ › ಜನಪ್ರಿಯ ಬೈಬಲ್ ವಚನಗಳು › 1 ಕೊರಿಂಥದವರಿಗೆ 13:4–7
ಬೈಬಲ್ ವಚನ · IRV
1 ಕೊರಿಂಥದವರಿಗೆ 13:4–7
4ಪ್ರೀತಿಯು ಬಹು ತಾಳ್ಮೆಯುಳ್ಳದ್ದು, ದಯೆಯುಳ್ಳದ್ದು. ಪ್ರೀತಿಯು ಹೊಟ್ಟೆಕಿಚ್ಚುಪಡುವುದಿಲ್ಲ, ಹೊಗಳಿಕೊಳ್ಳುವುದಿಲ್ಲ. ಅದು ಗರ್ವಪಡುವುದಿಲ್ಲ, ಅಸಭ್ಯವಾಗಿ ನಡೆಯುವುದಿಲ್ಲ.
5ಸ್ವಪ್ರಯೋಜನವನ್ನು ಚಿಂತಿಸುವುದಿಲ್ಲ. ಬೇಗ ಸಿಟ್ಟುಗೊಳ್ಳುವುದಿಲ್ಲ. ಅಪಕಾರವನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳುವುದಿಲ್ಲ.
6ಅನ್ಯಾಯದಲ್ಲಿ ಸಂತೋಷಪಡುವುದಿಲ್ಲ ಆದರೆ ಸತ್ಯದಲ್ಲಿ ಸಂತೋಷಪಡುತ್ತದೆ.
7ಎಲ್ಲವನ್ನು ತಾಳಿಕೊಳ್ಳುತ್ತದೆ. ಎಲ್ಲವನ್ನು ನಂಬುತ್ತದೆ. ಎಲ್ಲವನ್ನು ನಿರೀಕ್ಷಿಸುತ್ತದೆ. ಎಲ್ಲವನ್ನು ಸಹಿಸಿಕೊಳ್ಳುತ್ತದೆ.
ಇಡೀ ಅಧ್ಯಾಯ ಓದಿ: 1 ಕೊರಿಂಥದವರಿಗೆ 13
ಸಂದರ್ಭದಲ್ಲಿ
1ನಾನು ಮನುಷ್ಯರ ಭಾಷೆಗಳನ್ನೂ, ದೇವದೂತರ ಭಾಷೆಗಳನ್ನೂ ಮಾತನಾಡುವವನಾದರೂ ಪ್ರೀತಿಯಿಲ್ಲದವನಾಗಿದ್ದರೆ ನಾದಕೊಡುವ ಕಂಚಿನ ಜಾಗಟೆ, ಗಣಗಣಿಸುವ ಘಂಟೆ ಆಗಿದ್ದೇನೆ.
2ನನಗೆ ಪ್ರವಾದನ ವರವಿದ್ದರೂ, ಎಲ್ಲಾ ರಹಸ್ಯಗಳೂ, ಸಕಲ ವಿಧವಾದ ವಿದ್ಯೆಗಳನ್ನು ತಿಳಿದ್ದರೂ, ಬೆಟ್ಟಗಳನ್ನೂ ತೆಗೆದಿಡುವುಷ್ಟು ನಂಬಿಕೆಯಿದ್ದರೂ, ಪ್ರೀತಿಯಿಲ್ಲದವನಾಗಿದ್ದರೆ ನಾನು ಏನೂ ಅಲ್ಲದವನಾಗಿದ್ದೇನೆ.
3ನನಗಿರುವುದೆಲ್ಲವನ್ನು ಬಡವರಿಗೆ ಅನ್ನದಾನಮಾಡಿದರೂ, ನನ್ನ ದೇಹವನ್ನು ಸುಡುವುದಕ್ಕೆ ಒಪ್ಪಿಸಿದರೂ, ಪ್ರೀತಿಯು ನನಗಿಲ್ಲದಿದ್ದರೆ ನನಗೇನು ಪ್ರಯೋಜನವಿಲ್ಲ. ನಾನು ಬರಿದಾಗಿರುವನು.
4ಪ್ರೀತಿಯು ಬಹು ತಾಳ್ಮೆಯುಳ್ಳದ್ದು, ದಯೆಯುಳ್ಳದ್ದು. ಪ್ರೀತಿಯು ಹೊಟ್ಟೆಕಿಚ್ಚುಪಡುವುದಿಲ್ಲ, ಹೊಗಳಿಕೊಳ್ಳುವುದಿಲ್ಲ. ಅದು ಗರ್ವಪಡುವುದಿಲ್ಲ, ಅಸಭ್ಯವಾಗಿ ನಡೆಯುವುದಿಲ್ಲ.
5ಸ್ವಪ್ರಯೋಜನವನ್ನು ಚಿಂತಿಸುವುದಿಲ್ಲ. ಬೇಗ ಸಿಟ್ಟುಗೊಳ್ಳುವುದಿಲ್ಲ. ಅಪಕಾರವನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳುವುದಿಲ್ಲ.
6ಅನ್ಯಾಯದಲ್ಲಿ ಸಂತೋಷಪಡುವುದಿಲ್ಲ ಆದರೆ ಸತ್ಯದಲ್ಲಿ ಸಂತೋಷಪಡುತ್ತದೆ.
7ಎಲ್ಲವನ್ನು ತಾಳಿಕೊಳ್ಳುತ್ತದೆ. ಎಲ್ಲವನ್ನು ನಂಬುತ್ತದೆ. ಎಲ್ಲವನ್ನು ನಿರೀಕ್ಷಿಸುತ್ತದೆ. ಎಲ್ಲವನ್ನು ಸಹಿಸಿಕೊಳ್ಳುತ್ತದೆ.
8ಪ್ರೀತಿಯು ಎಂದಿಗೂ ನಿಂತುಹೋಗುವುದಿಲ್ಲ. ಪ್ರವಾದನೆಗಳಾದರೂ ಇಲ್ಲದಂತಾಗುವವು. ಅನ್ಯಭಾಷೆಗಳೋ ನಿಂತುಹೋಗುವವು. ತಿಳಿವಳಿಕೆಯೋ ಇಲ್ಲದಂತಾಗುವುದು.
9ಅಪೂರ್ಣವಾಗಿ ತಿಳಿದುಕೊಳ್ಳುತ್ತೇವೆ; ಅಪೂರ್ಣವಾಗಿ ಪ್ರವಾದಿಸುತ್ತೇವೆ.
10ಆದರೆ ಸಂಪೂರ್ಣವಾದದ್ದು ಬಂದಾಗ ಅಪೂರ್ಣವಾದದ್ದು ಇಲ್ಲದಂತಾಗುವುದು.
ಇಂಗ್ಲಿಷ್ನಲ್ಲಿ
Love is patient, love is kind. It does not envy, it does not boast, it is not proud. It is not rude, it is not self-seeking, it is not easily angered, it keeps no account of wrongs. Love takes no pleasure in evil, but rejoices in the truth. It bears all things, believes all things, hopes all things, endures all things.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಮೊಟ್ಟಮೊದಲು ನಿಮ್ಮ ನಿಮ್ಮೊಳಗೆ ಪ್ರಾಮಾಣಿಕವಾದ ಪ್ರೀತಿಯಿರಲಿ. ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ.ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದಂತೆ ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.ಮತ್ಸರ, ಕುಡುಕುತನ, ಗಲಭೆ, ಢಂಭಾಚಾರ ಇಂಥವುಗಳೇ. ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂದು ನಾನು ಈ ಮೊದಲು ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ. ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ,ದ್ವೇಷವು ಜಗಳಗಳನ್ನೆಬ್ಬಿಸುತ್ತದೆ, ಪ್ರೀತಿಯು ಪಾಪಗಳನ್ನೆಲ್ಲಾ ಮುಚ್ಚುತ್ತದೆ.ಹೀಗಿರಲಾಗಿ ದೇವರಿಂದ ಆರಿಸಿಕೊಂಡವರಾಗಿ, ಪರಿಶುದ್ಧರೂ ಹಾಗೂ ಪ್ರಿಯರೂ ಆಗಿರುವುದರಿಂದ ಕನಿಕರ, ದಯೆ, ದೀನತೆ, ಸಾತ್ವಿಕತ್ವ ಮತ್ತು ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟತನವನ್ನು ತಿರಸ್ಕರಿಸಿರಿ, ಒಳ್ಳೆಯದನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ.ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವೂ ಸಹ ಒಬ್ಬರನ್ನೊಬ್ಬರು ಪ್ರೀತಿಸುವ ಹಂಗಿನಲ್ಲಿದ್ದೇವೆ.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು