Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › 1 ಕೊರಿಂಥದವರಿಗೆ 15:33

ಬೈಬಲ್ ವಚನ · IRV

1 ಕೊರಿಂಥದವರಿಗೆ 15:33

ಮೋಸಹೋಗಬೇಡಿರಿ; “ಕೆಟ್ಟ ಸಹವಾಸವು ಸದಾಚಾರವನ್ನು ಕೆಡಿಸುತ್ತವೆ.”

ಇಡೀ ಅಧ್ಯಾಯ ಓದಿ: 1 ಕೊರಿಂಥದವರಿಗೆ 15

ಸಂದರ್ಭದಲ್ಲಿ

30ನಾವು ಸಹ ಯಾಕೆ ಪ್ರತಿ ಗಳಿಗೆಯಲ್ಲಿಯೂ ಭಯದಲ್ಲಿದ್ದೇವೆ?

31ಪ್ರಿಯರೇ, ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ನಿಮ್ಮನ್ನು ಕುರಿತಾಗಿ ನನಗಿರುವ ಹೆಮ್ಮೆಯ ನಿಮಿತ್ತ ನಾನು ದಿನಾಲು ಸಾಯುತ್ತಲಿದ್ದೇನೆ ಎಂದು ಹೇಳುತ್ತೇನೆ.

32ನಾನು ಎಫೆಸದಲ್ಲಿ ಮೃಗ ಯುದ್ಧ ಮಾಡಿದ್ದು ಕೇವಲ ಮಾನುಷಾಭಿಪ್ರಾಯದಿಂದಾದರೆ ನನಗೇನು ಪ್ರಯೋಜನ? ಸತ್ತವರು ಎದ್ದು ಬರುವುದಿಲ್ಲವಾದರೆ, ನಾವು ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.

33ಮೋಸಹೋಗಬೇಡಿರಿ; “ಕೆಟ್ಟ ಸಹವಾಸವು ಸದಾಚಾರವನ್ನು ಕೆಡಿಸುತ್ತವೆ.”

34ಗಂಭೀರವಾಗಿ ಯೋಚಿಸಿರಿ! ನೀತಿವಂತರಾಗಿ ಎಚ್ಚರದಿಂದಿರಿ. ಪಾಪಮಾಡಬೇಡಿರಿ. ಕೆಲವರಿಗೆ ದೇವರ ಕುರಿತಾಗಿ ಜ್ಞಾನವೇ ಇಲ್ಲ; ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ.

35“ಸತ್ತವರನ್ನು ಮರಳಿ ಜೀವಂತರಾಗಿಸುವುದು ಹೇಗೆ ಸಾಧ್ಯ? ಎಂಥ ದೇಹದಿಂದ ಎದ್ದುಬರುತ್ತಾರೆ?” ಎಂದು ಯಾರಾದರೂ ಪ್ರಶ್ನಿಸಬಹುದು.

36ಮೂರ್ಖನೇ; ನೀನು ಬಿತ್ತುವ ಬೀಜವು ಸಾಯದಿದ್ದರೆ, ಅದು ಜೀವ ತಾಳುವುದುಂಟೆ? ಇಲ್ಲ.

1 ಕೊರಿಂಥದವರಿಗೆ 15

ಇಂಗ್ಲಿಷ್‌ನಲ್ಲಿ

Berean Standard Bible1 Corinthians 15:33Do not be deceived: “Bad company corrupts good character.”

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಜ್ಞಾನೋ 13:20ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು, ಜ್ಞಾನಹೀನರ ಒಡನಾಡಿ ಸಂಕಟಪಡುವನು.
ಮತ್ತಾ 24:4ಯೇಸು ಅವರಿಗೆ ಉತ್ತರವಾಗಿ ಹೇಳಿದ್ದೇನೆಂದರೆ, “ಯಾರೊಬ್ಬರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಿಂದಿರಿ.
1 ಕೊರಿ 5:6ನೀವು ಹೊಗಳಿಕೊಳ್ಳುವುದು ಒಳ್ಳೆಯದಲ್ಲ. ಸ್ವಲ್ಪ ಹುಳಿ ಕಲಸಿದರೆ ಕಣಕವೆಲ್ಲಾ ಹುಳಿಯಾಗುತ್ತದೆಂಬುದು ನಿಮಗೆ ತಿಳಿಯದೋ?
ಜ್ಞಾನೋ 9:6ಮೂಢರೇ ಮೂಢತ್ವವನ್ನು ಬಿಟ್ಟು ಬಾಳಿರಿ, ವಿವೇಕಮಾರ್ಗದಲ್ಲಿ ನೆಟ್ಟಗೆ ನಡೆಯಿರಿ” ಎಂದು ಪ್ರಬೋಧಿಸುತ್ತಾಳೆ.
ಎಫೆ 5:6ಹುರುಳಿಲ್ಲದ ಮಾತುಗಳಿಂದ ಯಾರು ನಿಮ್ಮನ್ನು ವಂಚಿಸದಿರಲಿ, ಇಂಥ ಕೃತ್ಯಗಳ ನಿಮಿತ್ತ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ.
ಗಲಾ 6:7ಮೋಸಹೋಗಬೇಡಿರಿ. ದೇವರನ್ನು ಅಪಹಾಸ್ಯ ಮಾಡಲಾಗುವುದಿಲ್ಲ. ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.
2 ತಿಮೊ 2:16–18ಪ್ರಾಪಂಚಿಕವಾದ ವ್ಯರ್ಥ ಹರಟೆ ಮಾತುಗಳಿಂದ ದೂರವಾಗಿರು, ಅವುಗಳಿಗೆ ಮನಸ್ಸುಕೊಡುವವರು ಹೆಚ್ಚೆಚ್ಚಾಗಿ ಭಕ್ತಿಹೀನರಾಗುವರು. ಅವರ ಮಾತು ಹುಣ್ಣುವ್ಯಾಧಿಯಂತೆ ಹರಡಿಕೊಳ್ಳುವುದು. ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ. ಅವರು ಸತ್ಯಭ್ರಷ್ಟರಾಗಿ ಪುನರುತ್ಥಾನವು ಆಗಿಹೋಯಿತೆಂದು ಹೇಳುತ್ತಾ ಹಲವರ ನಂಬಿಕೆಯನ್ನು ಕೆಡಿಸುವವರಾಗಿದ್ದಾರೆ.
1 ಕೊರಿ 6:9ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಪುರುಷಗಾಮಿಗಳು, ಕಳ್ಳರು,

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು