Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › 1 ಕೊರಿಂಥದವರಿಗೆ 3:16–17

ಬೈಬಲ್ ವಚನ · IRV

1 ಕೊರಿಂಥದವರಿಗೆ 3:16–17

16ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?

17ಯಾವನಾದರೂ ದೇವರ ಆಲಯವನ್ನು ನಾಶಪಡಿಸಿದರೆ ದೇವರು ಅವನನ್ನು ನಾಶಪಡಿಸುವನು. ಯಾಕೆಂದರೆ ದೇವರ ಆಲಯವು ಪವಿತ್ರವಾದದ್ದು ಆ ಆಲಯವು ನೀವೇ ಆಗಿದ್ದೀರಿ.

ಇಡೀ ಅಧ್ಯಾಯ ಓದಿ: 1 ಕೊರಿಂಥದವರಿಗೆ 3

ಸಂದರ್ಭದಲ್ಲಿ

13ಅವನವನ ಕೆಲಸವು ಪ್ರಕಟವಾಗುವುದು. ಕ್ರಿಸ್ತನು ಬರುವ ದಿನವು ಬೆಂಕಿಯೊಡನೆ ಉದಯವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವುದು. ಅವನವನ ಕೆಲಸವೆಂಥದೆಂಬುದನ್ನು ಆ ಬೆಂಕಿ ಶೋಧಿಸುವುದು.

14ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಉಳಿದರೆ ಅವನಿಗೆ ಪ್ರತಿಫಲ ಸಿಕ್ಕುವುದು.

15ಒಬ್ಬನು ಕಟ್ಟಿದ್ದು ಸುಟ್ಟು ಹೋದರೆ ಅವನಿಗೆ ನಷ್ಟವಾಗುವುದು. ತಾನಾದರೋ ರಕ್ಷಣೆ ಹೊಂದುವನು. ಆದರೆ ಬೆಂಕಿಯೊಳಗಿಂದ ತಪ್ಪಿಸಿಕೊಂಡವನ ಹಾಗಿರುವನು.

16ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?

17ಯಾವನಾದರೂ ದೇವರ ಆಲಯವನ್ನು ನಾಶಪಡಿಸಿದರೆ ದೇವರು ಅವನನ್ನು ನಾಶಪಡಿಸುವನು. ಯಾಕೆಂದರೆ ದೇವರ ಆಲಯವು ಪವಿತ್ರವಾದದ್ದು ಆ ಆಲಯವು ನೀವೇ ಆಗಿದ್ದೀರಿ.

18ಯಾವನೂ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳದಿರಲಿ ನಿಮ್ಮಲ್ಲಿ ಯಾವನಾದರೂ ಲೋಕಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿಕೊಳ್ಳುವುದಾದರೆ ಅವನು ಜ್ಞಾನಿಯಾಗುವುದಕ್ಕಾಗಿ “ಮೂರ್ಖನಾಗಲಿ”

19ಯಾಕೆಂದರೆ ಇಹಲೋಕದ ಜ್ಞಾನವು ದೇವರ ಮುಂದೆ ಮೂರ್ಖತನವಾಗಿದೆ. “ಆತನು ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೆ ಹಿಡಿದುಕೊಳ್ಳುತ್ತಾನೆಂತಲೂ,”

20“ಜ್ಞಾನಿಗಳ ಯೋಚನೆಗಳು ನಿಷ್ಫಲವಾದವುಗಳೆಂದು ಕರ್ತನು ತಿಳಿದುಕೊಳ್ಳುತ್ತಾನೆಂತಲೂ” ಬರೆದದೆಯಲ್ಲಾ

1 ಕೊರಿಂಥದವರಿಗೆ 3

ಇಂಗ್ಲಿಷ್‌ನಲ್ಲಿ

Berean Standard Bible1 Corinthians 3:16–17Do you not know that you yourselves are God’s temple, and that God’s Spirit dwells in you? If anyone destroys God’s temple, God will destroy him; for God’s temple is holy, and you are that temple.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

1 ಕೊರಿ 6:19ನೀವು ನಿಮ್ಮ ಸ್ವಂತ ಸೊತ್ತಲ್ಲವೆಂದು ಮತ್ತು ದೇವರಿಂದ ದಾನವಾಗಿ ಲಭಿಸಿದ ಪವಿತ್ರಾತ್ಮನು ನಿಮ್ಮೊಳಗೆ ನೆಲೆಗೊಂಡಿರುವುದರಿಂದ ನಿಮ್ಮ ದೇಹವು ದೇವರ ಪವಿತ್ರಾಲಯವಾಗಿದೆಂಬುದು ನಿಮಗೆ ತಿಳಿಯದೋ?
ಯೆಹೆ 36:27ನನ್ನ ಆತ್ಮವನ್ನು ನಿಮ್ಮಲ್ಲಿ ನೆಲಸಿರುವಂತೆ ಅನುಗ್ರಹಿಸಿ, ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವಿರಿ.
2 ಕೊರಿ 6:16ದೇವ ಮಂದಿರಕ್ಕೂ, ವಿಗ್ರಹಗಳಿಗೂ ಒಪ್ಪಿಗೆಯೇನು? ನಾವು ದೇವರೇ ಹೇಳಿರುವಂತೆ ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ, “ನಾನು ಅವರಲ್ಲಿ ವಾಸಮಾಡುವೆನು, ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳಿದ್ದಾನೆ.
ರೋಮಾ 8:11ಯೇಸುವನ್ನು ಸತ್ತವರೊಳಗಿಂದ ಜೀವಿತನಾಗಿ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ, ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯದೇಹಗಳನ್ನು ಸಹ ಬದುಕಿಸುವನು.
ಎಫೆ 2:21–22ಆತನಲ್ಲಿ ಕಟ್ಟಡದ ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ, ಕಟ್ಟಡವು ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ಧ ದೇವಾಲಯವಾಗುತ್ತದೆ. ಆತನಲ್ಲಿ ನೀವೂ ಸಹ ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ವಾಸಸ್ಥಾನವಾಗುವುದಕ್ಕೆ ನಮ್ಮ ಜೊತೆಯಲ್ಲಿ ಕಟ್ಟಲ್ಪಡುತ್ತಾ ಇದ್ದೀರಿ.
ರೋಮಾ 8:9ಆದಾಗ್ಯೂ, ನೀವೂ ದೇವರ ಆತ್ಮನ ಸ್ವಭಾವದ ಮೇಲೆ ಆತುಕೊಂಡು ಜೀವಿಸುವವರೇ ಹೊರತು ದೇಹಸ್ವಭಾವದವರಲ್ಲಾ. ನಿಮ್ಮಲ್ಲಿ ದೇವರ ಆತ್ಮನು ವಾಸವಾಗಿರುವುದಾದರೆ ನೀವು ಶರೀರ ಭಾವಾಧೀನರಲ್ಲ, ದೇವರಾತ್ಮನಿಗೆ ಅಧೀನರಾಗಿದ್ದೀರಿ. ಯಾರಲ್ಲಿ ಕ್ರಿಸ್ತನ ಆತ್ಮನು ಇಲ್ಲವೋ ಅವನು ಕ್ರಿಸ್ತನವನಲ್ಲ.
ಯೋಹಾ 14:17ಆ ಸಹಾಯಕನು ಯಾರೆಂದರೆ ಸತ್ಯದ ಆತ್ಮನೇ. ಲೋಕವು ಆತನನ್ನು ನೋಡದೆಯೂ, ತಿಳಿಯದೆಯೂ ಇರುವುದರಿಂದ ಆತನನ್ನು ಸ್ವೀಕರಿಸಲಾರದು. ನೀವು ಆತನನ್ನು ಬಲ್ಲಿರಿ, ಹೇಗೆಂದರೆ ಆತನು ನಿಮ್ಮೊಂದಿಗೆ ವಾಸಮಾಡುತ್ತಾನೆ ಮತ್ತು ನಿಮ್ಮೊಳಗೆ ಇರುವನು.
1 ಪೇತ್ರ 2:5ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು