Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › 1 ಕೊರಿಂಥದವರಿಗೆ 6:18

ಬೈಬಲ್ ವಚನ · IRV

1 ಕೊರಿಂಥದವರಿಗೆ 6:18

ಜಾರತ್ವವನ್ನು ಬಿಟ್ಟು ದೂರ ಓಡಿಹೋಗಿರಿ. “ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹದ ಹೊರಗಿವೆ”, ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.

ಇಡೀ ಅಧ್ಯಾಯ ಓದಿ: 1 ಕೊರಿಂಥದವರಿಗೆ 6

ಸಂದರ್ಭದಲ್ಲಿ

15ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬುದು ನಿಮಗೆ ತಿಳಿಯದೋ? ಹೀಗಿರಲಾಗಿ ಕ್ರಿಸ್ತನ ಅಂಗಗಳಾಗಿರುವಂಥವುಗಳನ್ನು ತೆಗೆದು ವೇಶ್ಯೆಯ ಅಂಗಗಳೊಡನೆ ಸೇರಿಸುವುದು ಸರಿಯೋ? ಎಂದಿಗೂ ಹಾಗೆ ಮಾಡಬಾರದು

16ವೇಶ್ಯೆಯೊಂದಿಗೆ ಸೇರಿಕೊಂಡವನು ಅವಳೊಂದಿಗೆ ಒಂದೇ ದೇಹವಾಗಿದ್ದಾನೆಂಬುದು ನಿಮಗೆ ತಿಳಿಯದೋ? “ಇಬ್ಬರು ಒಂದೇ ಶರೀರವಾಗಿರುವರೆಂದು” ದೇವರವಾಕ್ಯ ಹೇಳುತ್ತದಲ್ಲಾ.

17ಆದರೆ ಕರ್ತನೊಂದಿಗೆ ಸೇರಿಕೊಂಡವನು ಆತನೊಂದಿಗೆ ಒಂದೇ ಆತ್ಮವಾಗಿದ್ದಾನೆ.

18ಜಾರತ್ವವನ್ನು ಬಿಟ್ಟು ದೂರ ಓಡಿಹೋಗಿರಿ. “ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹದ ಹೊರಗಿವೆ”, ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.

19ನೀವು ನಿಮ್ಮ ಸ್ವಂತ ಸೊತ್ತಲ್ಲವೆಂದು ಮತ್ತು ದೇವರಿಂದ ದಾನವಾಗಿ ಲಭಿಸಿದ ಪವಿತ್ರಾತ್ಮನು ನಿಮ್ಮೊಳಗೆ ನೆಲೆಗೊಂಡಿರುವುದರಿಂದ ನಿಮ್ಮ ದೇಹವು ದೇವರ ಪವಿತ್ರಾಲಯವಾಗಿದೆಂಬುದು ನಿಮಗೆ ತಿಳಿಯದೋ?

20ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು ಆದಕಾರಣ ನಿಮ್ಮ ದೇಹದ ಮೂಲಕ ದೇವರನ್ನು ಮಹಿಮೆಪಡಿಸಿರಿ.

1 ಕೊರಿಂಥದವರಿಗೆ 6

ಇಂಗ್ಲಿಷ್‌ನಲ್ಲಿ

Berean Standard Bible1 Corinthians 6:18Flee from sexual immorality. Every other sin a man can commit is outside his body, but he who sins sexually sins against his own body.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

1 ಪೇತ್ರ 2:11ಪ್ರಿಯರೇ, ಪ್ರವಾಸಿಗಳು ಮತ್ತು ಪರದೇಶಸ್ಥರು ಆಗಿರುವ ನೀವು ನಿಮ್ಮ ಆತ್ಮದ ವಿರುದ್ಧವಾಗಿ ಯುದ್ಧ ಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
1 ಥೆಸ 4:3ದೇವರ ಚಿತ್ತವೇನಂದರೆ ನೀವು ಶುದ್ಧರಾಗಬೇಕೆಂಬುದೇ. ಆದ್ದರಿಂದ ಹಾದರಕ್ಕೆ ದೂರವಾಗಿರಬೇಕು.
ಕೊಲೊ 3:5ಆದುದರಿಂದ ನಿಮ್ಮಲ್ಲಿರುವ ಲೌಕಿಕ ಆಸೆಗಳು ಅಂದರೆ, ಜಾರತ್ವ, ಅಶುದ್ಧತ್ವ, ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು ಸಾಯಿಸಿರಿ.
ರೋಮಾ 6:12–13ಹೀಗಿರುವುದರಿಂದ ಸಾವಿಗೆ ಒಳಗಾಗುವ ಈ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ದೇಹದ ದುರಾಶೆಗಳಿಗೆ ಒಳಪಡಬೇಡಿರಿ. ಇದು ಮಾತ್ರವಲ್ಲದೆ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೆ ಒಪ್ಪಿಸುವವರಾಗಿದ್ದು, ಅವುಗಳನ್ನು ದುಷ್ಟತ್ವವನ್ನು ನಡಿಸುವ ಸಾಧನಗಳಾಗಿ ಮಾಡಬೇಡಿರಿ; ನೀವು ಸತ್ತವರೊಳಗಿಂದ ಜೀವಿತರಾಗಿರಲಾಗಿ ನಿಮ್ಮನ್ನು ದೇವರಿಗೆ ಒಪ್ಪಿಸಿಕೊಟ್ಟು, ನಿಮ್ಮ ದೇಹದ ಅಂಗಗಳನ್ನು ನೀತಿಯ ಆಯುಧಗಳನ್ನಾಗಿ ಆತನಿಗೆ ಸಮರ್ಪಿಸಿರಿ.
2 ತಿಮೊ 2:22ನೀನು ಯೌವನದ ಮೋಹಗಳಿಗೆ ದೂರವಾಗಿರು. ಶುದ್ಧಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳುವವರ ಸಂಗಡ ನೀತಿ, ನಂಬಿಕೆ, ಪ್ರೀತಿ ಮತ್ತು ಸಮಾಧಾನಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.
ಇಬ್ರಿ 13:4ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.
1 ಕೊರಿ 6:9ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಪುರುಷಗಾಮಿಗಳು, ಕಳ್ಳರು,
ಎಫೆ 5:3ಜಾರತ್ವ ಮತ್ತು ಯಾವ ವಿಧವಾದ ಅಶುದ್ಧತ್ವ ಅಥವಾ ದ್ರವ್ಯಾಶೆ ಇವುಗಳ ಸುದ್ದಿಯಾದರೂ ನಿಮ್ಮಲ್ಲಿ ಇರಬಾರದು, ಇವುಗಳಿಗೆ ದೂರವಾಗಿರುವುದೇ ದೇವಜನರಿಗೆ ಯೋಗ್ಯವಾದದ್ದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು