Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › 1 ಕೊರಿಂಥದವರಿಗೆ 6:19–20

ಬೈಬಲ್ ವಚನ · IRV

1 ಕೊರಿಂಥದವರಿಗೆ 6:19–20

19ನೀವು ನಿಮ್ಮ ಸ್ವಂತ ಸೊತ್ತಲ್ಲವೆಂದು ಮತ್ತು ದೇವರಿಂದ ದಾನವಾಗಿ ಲಭಿಸಿದ ಪವಿತ್ರಾತ್ಮನು ನಿಮ್ಮೊಳಗೆ ನೆಲೆಗೊಂಡಿರುವುದರಿಂದ ನಿಮ್ಮ ದೇಹವು ದೇವರ ಪವಿತ್ರಾಲಯವಾಗಿದೆಂಬುದು ನಿಮಗೆ ತಿಳಿಯದೋ?

20ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು ಆದಕಾರಣ ನಿಮ್ಮ ದೇಹದ ಮೂಲಕ ದೇವರನ್ನು ಮಹಿಮೆಪಡಿಸಿರಿ.

ಇಡೀ ಅಧ್ಯಾಯ ಓದಿ: 1 ಕೊರಿಂಥದವರಿಗೆ 6

ಸಂದರ್ಭದಲ್ಲಿ

16ವೇಶ್ಯೆಯೊಂದಿಗೆ ಸೇರಿಕೊಂಡವನು ಅವಳೊಂದಿಗೆ ಒಂದೇ ದೇಹವಾಗಿದ್ದಾನೆಂಬುದು ನಿಮಗೆ ತಿಳಿಯದೋ? “ಇಬ್ಬರು ಒಂದೇ ಶರೀರವಾಗಿರುವರೆಂದು” ದೇವರವಾಕ್ಯ ಹೇಳುತ್ತದಲ್ಲಾ.

17ಆದರೆ ಕರ್ತನೊಂದಿಗೆ ಸೇರಿಕೊಂಡವನು ಆತನೊಂದಿಗೆ ಒಂದೇ ಆತ್ಮವಾಗಿದ್ದಾನೆ.

18ಜಾರತ್ವವನ್ನು ಬಿಟ್ಟು ದೂರ ಓಡಿಹೋಗಿರಿ. “ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹದ ಹೊರಗಿವೆ”, ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.

19ನೀವು ನಿಮ್ಮ ಸ್ವಂತ ಸೊತ್ತಲ್ಲವೆಂದು ಮತ್ತು ದೇವರಿಂದ ದಾನವಾಗಿ ಲಭಿಸಿದ ಪವಿತ್ರಾತ್ಮನು ನಿಮ್ಮೊಳಗೆ ನೆಲೆಗೊಂಡಿರುವುದರಿಂದ ನಿಮ್ಮ ದೇಹವು ದೇವರ ಪವಿತ್ರಾಲಯವಾಗಿದೆಂಬುದು ನಿಮಗೆ ತಿಳಿಯದೋ?

20ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು ಆದಕಾರಣ ನಿಮ್ಮ ದೇಹದ ಮೂಲಕ ದೇವರನ್ನು ಮಹಿಮೆಪಡಿಸಿರಿ.

1 ಕೊರಿಂಥದವರಿಗೆ 6

ಇಂಗ್ಲಿಷ್‌ನಲ್ಲಿ

Berean Standard Bible1 Corinthians 6:19–20Do you not know that your body is a temple of the Holy Spirit who is in you, whom you have received from God? You are not your own; you were bought at a price. Therefore glorify God with your body.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

1 ಕೊರಿ 3:16ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?
2 ಕೊರಿ 6:16ದೇವ ಮಂದಿರಕ್ಕೂ, ವಿಗ್ರಹಗಳಿಗೂ ಒಪ್ಪಿಗೆಯೇನು? ನಾವು ದೇವರೇ ಹೇಳಿರುವಂತೆ ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ, “ನಾನು ಅವರಲ್ಲಿ ವಾಸಮಾಡುವೆನು, ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳಿದ್ದಾನೆ.
1 ಪೇತ್ರ 2:5ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
ಎಫೆ 2:21–22ಆತನಲ್ಲಿ ಕಟ್ಟಡದ ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ, ಕಟ್ಟಡವು ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ಧ ದೇವಾಲಯವಾಗುತ್ತದೆ. ಆತನಲ್ಲಿ ನೀವೂ ಸಹ ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ವಾಸಸ್ಥಾನವಾಗುವುದಕ್ಕೆ ನಮ್ಮ ಜೊತೆಯಲ್ಲಿ ಕಟ್ಟಲ್ಪಡುತ್ತಾ ಇದ್ದೀರಿ.
1 ಕೊರಿ 7:23ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು. ಮನುಷ್ಯರಿಗೆ ದಾಸರಾಗಬೇಡಿರಿ.
ರೋಮಾ 12:1ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.
1 ಕೊರಿ 6:15–16ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬುದು ನಿಮಗೆ ತಿಳಿಯದೋ? ಹೀಗಿರಲಾಗಿ ಕ್ರಿಸ್ತನ ಅಂಗಗಳಾಗಿರುವಂಥವುಗಳನ್ನು ತೆಗೆದು ವೇಶ್ಯೆಯ ಅಂಗಗಳೊಡನೆ ಸೇರಿಸುವುದು ಸರಿಯೋ? ಎಂದಿಗೂ ಹಾಗೆ ಮಾಡಬಾರದು ವೇಶ್ಯೆಯೊಂದಿಗೆ ಸೇರಿಕೊಂಡವನು ಅವಳೊಂದಿಗೆ ಒಂದೇ ದೇಹವಾಗಿದ್ದಾನೆಂಬುದು ನಿಮಗೆ ತಿಳಿಯದೋ? “ಇಬ್ಬರು ಒಂದೇ ಶರೀರವಾಗಿರುವರೆಂದು” ದೇವರವಾಕ್ಯ ಹೇಳುತ್ತದಲ್ಲಾ.
ಕೀರ್ತ 100:3ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಉಂಟುಮಾಡಿದವನು ಆತನೇ; ನಾವು ಆತನವರು, ಆತನ ಪ್ರಜೆಯೂ, ಆತನು ಪಾಲಿಸುವ ಹಿಂಡೂ ಆಗಿದ್ದೇವೆ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು