Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › 1 ಕೊರಿಂಥದವರಿಗೆ 7:2

ಬೈಬಲ್ ವಚನ · IRV

1 ಕೊರಿಂಥದವರಿಗೆ 7:2

ಆದರೆ ಜಾರತ್ವದ ಶೋಧನೆಗೆ ಅವಕಾಶ ಕೊಡದಿರಲು ಪ್ರತಿಯೊಬ್ಬನಿಗೂ ಸ್ವಂತ ಹೆಂಡತಿಯು ಇರಲಿ ಮತ್ತು ಪ್ರತಿಯೊಬ್ಬಳಿಗೆ ಸ್ವಂತ ಗಂಡನು ಇರಲಿ.

ಇಡೀ ಅಧ್ಯಾಯ ಓದಿ: 1 ಕೊರಿಂಥದವರಿಗೆ 7

ಸಂದರ್ಭದಲ್ಲಿ

1ನೀವು ಬರೆದು ಕಳುಹಿಸಿದ ವಿಷಯಗಳ ಬಗ್ಗೆ ನನ್ನ ಅಭಿಪ್ರಾಯವೇನೆಂದರೆ, ಸ್ತ್ರೀಯರ ಶರೀರ ಸಂಪರ್ಕವಿಲ್ಲದೆ ಇರುವುದು ಪುರುಷನಿಗೆ ಒಳ್ಳೆಯದು;

2ಆದರೆ ಜಾರತ್ವದ ಶೋಧನೆಗೆ ಅವಕಾಶ ಕೊಡದಿರಲು ಪ್ರತಿಯೊಬ್ಬನಿಗೂ ಸ್ವಂತ ಹೆಂಡತಿಯು ಇರಲಿ ಮತ್ತು ಪ್ರತಿಯೊಬ್ಬಳಿಗೆ ಸ್ವಂತ ಗಂಡನು ಇರಲಿ.

3ಗಂಡನು ಹೆಂಡತಿಗೆ, ಹಾಗೆಯೇ ಹೆಂಡತಿಯು ಗಂಡನಿಗೆ ಒಗೆತನವನ್ನು ಸಲ್ಲಿಸಲಿ

4ಹೆಂಡತಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ ಅದು ಗಂಡನಿಗುಂಟು. ಹಾಗೆಯೇ ಪುರುಷನಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ ಅದು ಹೆಂಡತಿಗುಂಟು.

5ಪ್ರಾರ್ಥನೆಗೆ ಸಮಯ ಕೊಡುವುದಕ್ಕಾಗಿ ನೀವು ಪರಸ್ಪರ ಸಮ್ಮತಿಯಿಂದ ಸ್ವಲ್ಪ ಕಾಲ ಅಗಲಿ ಇರಬಹುದೇ ಹೊರತು ಅನ್ಯತಾ ಹಾಗೆ ಮಾಡಬಾರದು. ಸೈತಾನನು ನಿಮಗೆ ಸ್ವಯಂ ನಿಯಂತ್ರಣವಿಲ್ಲದಿರುವುದನ್ನು ನೋಡಿ ನಿಮಗೆ ದುಷ್ಪ್ರೇರಣೆಗೆ ಎಡೆ ಮಾಡದಂತೆ ತಿರುಗಿ ಕೂಡಿಕೊಳ್ಳಿರಿ.

1 ಕೊರಿಂಥದವರಿಗೆ 7

ಇಂಗ್ಲಿಷ್‌ನಲ್ಲಿ

Berean Standard Bible1 Corinthians 7:2But because there is so much sexual immorality, each man should have his own wife, and each woman her own husband.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಎಫೆ 5:28ಹಾಗೆಯೇ ಗಂಡದಿರು ಸಹ ತಮ್ಮ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸಿಕೊಳ್ಳುವವನಾಗಿದ್ದಾನೆ.
ಎಫೆ 5:33ಆದರೆ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. ಪ್ರತಿ ಹೆಂಡತಿಯೂ ತನ್ನ ಗಂಡನಿಗೆ ಗೌರವದಿಂದ ನಡೆದುಕೊಳ್ಳಬೇಕು.
1 ಕೊರಿ 7:9ಅವರು ಸಂಯಮಯಿಲ್ಲದವರಾದರೆ ಮದುವೆಮಾಡಿಕೊಳ್ಳಲಿ. ಯಾಕೆಂದರೆ ಕಾಮತಾಪಪಡುವುದಕ್ಕಿಂತ ಮದುವೆಮಾಡಿಕೊಳ್ಳುವುದು ಉತ್ತಮ.
ಜ್ಞಾನೋ 18:22ಪತ್ನಿಲಾಭವು ರತ್ನಲಾಭ, ಅದು ಯೆಹೋವನ ಅನುಗ್ರಹವೇ.
ಜ್ಞಾನೋ 5:18–19ನಿನ್ನ ಬುಗ್ಗೆಯು ದೇವರ ಆಶೀರ್ವಾದವನ್ನು ಹೊಂದಲಿ, ನಿನ್ನ ಯೌವನಕಾಲದ ಪತ್ನಿಯಲ್ಲಿ ಆನಂದಿಸು. ಆಕೆ ಮನೋಹರವಾದ ಜಿಂಕೆಯಂತೆಯೂ, ಅಂದವಾದ ದುಪ್ಪಿಯ ಹಾಗೂ ಇರುವಳಲ್ಲಾ, ಆಕೆಯ ಸ್ತನಗಳು ನಿನ್ನನ್ನು ಸರ್ವದಾ ತೃಪ್ತಿಪಡಿಸಲಿ, ಆಕೆಯ ಪ್ರೀತಿಯಲ್ಲೇ ನಿರಂತರವಾಗಿ ಲೀನವಾಗಿರು.
1 ಕೊರಿ 6:18ಜಾರತ್ವವನ್ನು ಬಿಟ್ಟು ದೂರ ಓಡಿಹೋಗಿರಿ. “ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹದ ಹೊರಗಿವೆ”, ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು