Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › 1 ಕೊರಿಂಥದವರಿಗೆ 9:24–27

ಬೈಬಲ್ ವಚನ · IRV

1 ಕೊರಿಂಥದವರಿಗೆ 9:24–27

24ಕ್ರೀಡಾಂಗಣದಲ್ಲಿ ಅನೇಕರು ಓಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ, ಆದರೂ ಒಬ್ಬನು ಮಾತ್ರ ಜಯಮಾಲೆಯನ್ನು ಪಡೆಯುತ್ತಾನೆ ಎಂಬುದು ನಿಮಗೆ ತಿಳಿಯದೋ? ಅವರಂತೆ ನೀವೂ ಸಹ ಬಹುಮಾನವನ್ನು ಗೆಲ್ಲಬೇಕೆಂದು ಓಡಿರಿ.

25ಪ್ರತಿಯೊಬ್ಬ ಕ್ರೀಡಾಪಟುವು ತನ್ನ ತರಬೇತಿಯ ಎಲ್ಲಾ ವಿಷಯಗಳಲ್ಲಿ ಶಮೆದಮೆಯುಳ್ಳವನಾಗಿರುತ್ತಾನೆ. ಅವರು ಬಾಡಿ ಹೋಗುವ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುತ್ತಾರೆ; ನಾವಾದರೋ ಬಾಡಿಹೋಗದ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುವವರಾಗಿದ್ದೇವೆ.

26ಆದ್ದರಿಂದ ನಾನು ಸಹ ಗೊತ್ತುಗುರಿಯಿಲ್ಲದವನಂತೆ ಓಡುವುದಿಲ್ಲ; ಗಾಳಿಯೊಂದಿಗೆ ಗುದ್ದಾಡುವವನಂತೆ ಹೋರಾಡುವುದಿಲ್ಲ.

27ಇತರರಿಗೆ ಬೋಧಿಸಿದ ಮೇಲೆ ನಾನೇ ಅಯೋಗ್ಯನಾಗದಂತೆ, ನನ್ನ ದೇಹವನ್ನು ದಂಡಿಸಿ ಸ್ವಾಧಿನದಲ್ಲಿಟ್ಟುಕೊಳ್ಳುತ್ತೇನೆ.

ಇಡೀ ಅಧ್ಯಾಯ ಓದಿ: 1 ಕೊರಿಂಥದವರಿಗೆ 9

ಸಂದರ್ಭದಲ್ಲಿ

21ನಾನು ದೇವರ ಧರ್ಮಶಾಸ್ತ್ರ ಇಲ್ಲದವನಲ್ಲ, ಕ್ರಿಸ್ತನ ನಿಯಮಕ್ಕೊಳಗಾದವನೇ; ಆದರೂ ಧರ್ಮಶಾಸ್ತ್ರಕ್ಕೆ ಹೊರತಾದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ಧರ್ಮಶಾಸ್ತ್ರ ಬಾಹಿರನಂತಾದೆನು.

22ಬಲವಿಲ್ಲದವರನ್ನು ಸಂಪಾದಿಸುವುದಕ್ಕಾಗಿ ನಾನೂ ಬಲವಿಲ್ಲದವನಾದೆನು. ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಎಲ್ಲರಿಗೂ ಎಲ್ಲರಂತಾದೆನು.

23ಇದೆಲ್ಲವನ್ನು ಸುವಾರ್ತೆಗೋಸ್ಕರವೇ ಮಾಡಿ, ನಾನು ಇತರರ ಸಂಗಡ ಸುವಾರ್ತೆಯ ಆಶೀರ್ವಾದದಲ್ಲಿ ಪಾಲುಗಾರನಾಗಬೇಕೆಂದು ಇದನ್ನು ಮಾಡುತ್ತಿದ್ದೇನೆ.

24ಕ್ರೀಡಾಂಗಣದಲ್ಲಿ ಅನೇಕರು ಓಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ, ಆದರೂ ಒಬ್ಬನು ಮಾತ್ರ ಜಯಮಾಲೆಯನ್ನು ಪಡೆಯುತ್ತಾನೆ ಎಂಬುದು ನಿಮಗೆ ತಿಳಿಯದೋ? ಅವರಂತೆ ನೀವೂ ಸಹ ಬಹುಮಾನವನ್ನು ಗೆಲ್ಲಬೇಕೆಂದು ಓಡಿರಿ.

25ಪ್ರತಿಯೊಬ್ಬ ಕ್ರೀಡಾಪಟುವು ತನ್ನ ತರಬೇತಿಯ ಎಲ್ಲಾ ವಿಷಯಗಳಲ್ಲಿ ಶಮೆದಮೆಯುಳ್ಳವನಾಗಿರುತ್ತಾನೆ. ಅವರು ಬಾಡಿ ಹೋಗುವ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುತ್ತಾರೆ; ನಾವಾದರೋ ಬಾಡಿಹೋಗದ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುವವರಾಗಿದ್ದೇವೆ.

26ಆದ್ದರಿಂದ ನಾನು ಸಹ ಗೊತ್ತುಗುರಿಯಿಲ್ಲದವನಂತೆ ಓಡುವುದಿಲ್ಲ; ಗಾಳಿಯೊಂದಿಗೆ ಗುದ್ದಾಡುವವನಂತೆ ಹೋರಾಡುವುದಿಲ್ಲ.

27ಇತರರಿಗೆ ಬೋಧಿಸಿದ ಮೇಲೆ ನಾನೇ ಅಯೋಗ್ಯನಾಗದಂತೆ, ನನ್ನ ದೇಹವನ್ನು ದಂಡಿಸಿ ಸ್ವಾಧಿನದಲ್ಲಿಟ್ಟುಕೊಳ್ಳುತ್ತೇನೆ.

1 ಕೊರಿಂಥದವರಿಗೆ 9

ಇಂಗ್ಲಿಷ್‌ನಲ್ಲಿ

Berean Standard Bible1 Corinthians 9:24–27Do you not know that in a race all the runners run, but only one receives the prize? Run in such a way as to take the prize. Everyone who competes in the games trains with strict discipline. They do it for a crown that is perishable, but we do it for a crown that is imperishable. Therefore I do not run aimlessly; I do not fight like I am beating the air. No, I discipline my body and make it my slave, so that after I have preached to others, I myself will not be disqualified.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಫಿಲಿಪ್ಪಿ 3:14ದೇವರು ಕ್ರಿಸ್ತನ ಮೂಲಕವಾಗಿ ನಮ್ಮನ್ನು ಮೇಲಕ್ಕೆ ಕರೆದು ನಮ್ಮ ಮುಂದೆ ಇಟ್ಟಿರುವ ಬಿರುದನ್ನು ಹೊಂದುವ ಗುರಿಯನ್ನು ತಲುಪಲೆಂದು ಓಡುತ್ತಾ ಇದ್ದೇನೆ.
ಇಬ್ರಿ 12:1–2ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.
ರೋಮಾ 8:13ನೀವು ಶರೀರಭಾವವನ್ನು ಅನುಸರಿಸಿ ಬದುಕಿದರೆ ಸಾಯುವುದು ನಿಶ್ಚಯ; ನೀವು ಪವಿತ್ರಾತ್ಮನಿಂದ ದೇಹದ ದುರಭ್ಯಾಸಗಳನ್ನು ನಾಶ ಮಾಡುವುದಾದರೆ ಜೀವಿಸುವಿರಿ.
2 ತಿಮೊ 4:7–8ಶ್ರೇಷ್ಠ ಹೋರಾಟವನ್ನು ಮಾಡಿದ್ದೇನೆ, ನನ್ನ ಓಟವನ್ನು ಓಡಿಮುಗಿಸಿದ್ದೇನೆ, ಕ್ರಿಸ್ತ ನಂಬಿಕೆಯನ್ನು ಕಾಪಾಡಿಕೊಂಡಿದ್ದೇನೆ. ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗಾಗಿ ಸಿದ್ಧವಾಗಿದೆ, ಅದನ್ನು ನೀತಿವಂತನಾದ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು, ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು.
ಕೊಲೊ 3:5ಆದುದರಿಂದ ನಿಮ್ಮಲ್ಲಿರುವ ಲೌಕಿಕ ಆಸೆಗಳು ಅಂದರೆ, ಜಾರತ್ವ, ಅಶುದ್ಧತ್ವ, ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು ಸಾಯಿಸಿರಿ.
ಪ್ರಕ 3:11ನಾನು ಬೇಗನೇ ಬರುತ್ತೇನೆ, ನಿನ್ನ ಕಿರೀಟವನ್ನು ಯಾರೂ ಕಸಿದುಕೊಳ್ಳದಂತೆ ನೀನು ಅವಲಂಬಿಸಿರುವುದನ್ನೇ ಆಶ್ರಯಿಸಿಕೊಂಡಿರು.
ಫಿಲಿಪ್ಪಿ 2:16ಇವರೊಳಗೆ ನೀವು ಸರ್ವರಿಗೂ ಜೀವದಾಯಕ ವಾಕ್ಯವನ್ನು ತೋರಿಸಿಕೊಡುವವರಾಗಿದ್ದು, ಲೋಕದೊಳಗೆ ಹೊಳೆಯುವ ನಕ್ಷತ್ರಗಳಂತೆ ಕಾಣಿಸುತ್ತೀರಿ. ನೀವು ಹೀಗೆ ನಡೆದರೆ ನಾನು ಸುವಾರ್ತೆಗಾಗಿ ಓಡಿದ ಓಟವು ವ್ಯರ್ಥವಲ್ಲ, ನಾನು ಪ್ರಯಾಸಪಟ್ಟದ್ದೂ ವ್ಯರ್ಥವಲ್ಲ ಎಂಬ ಹೊಗಳಿಕೆಯು ಕ್ರಿಸ್ತನ ದಿನದಲ್ಲಿ ನನಗೆ ಉಂಟಾಗುವುದು.
2 ಕೊರಿ 13:5–6ನೀವು ಕ್ರಿಸ್ತ ನಂಬಿಕೆಯಲ್ಲಿ ಇದ್ದೀರೋ ಇಲ್ಲವೋ ಎಂದು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ, ನಿಮ್ಮನ್ನು ನೀವೇ ಪರಿಶೋಧಿಸಿಕೊಳ್ಳಿರಿ. ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದು ನಿಮಗೆ ತಿಳಿಯುವುದಿಲ್ಲವೋ? ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಆಯೋಗ್ಯರೇ. ನಾವಂತೂ ಆಯೋಗ್ಯರಲ್ಲವೆಂದು ನಿಮಗೆ ಗೊತ್ತಾಗುವುದೆಂಬುದಾಗಿ ನನಗೆ ಭರವಸೆವುಂಟು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು