Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › 1 ಯೋಹಾನನು 1:9

ಬೈಬಲ್ ವಚನ · IRV

1 ಯೋಹಾನನು 1:9

ನಾವು ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವನು.

ಇಡೀ ಅಧ್ಯಾಯ ಓದಿ: 1 ಯೋಹಾನನು 1

ಸಂದರ್ಭದಲ್ಲಿ

6ನಾವು ದೇವರೊಂದಿಗೆ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿಕೊಳ್ಳುತ್ತಾ ಕತ್ತಲೆಯಲ್ಲಿ ನಡೆದರೆ ಸುಳ್ಳಾಡುವವರಾಗಿದ್ದೇವೆ, ಸತ್ಯವನ್ನನುಸರಿಸುತ್ತಿಲ್ಲ ಎಂದು ತಿಳಿದು ಬರುತ್ತದೆ.

7ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರು ಅನ್ಯೋನ್ಯತೆಯಲ್ಲಿರುತ್ತೇವೆ. ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ.

8ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಗೊಳಿಸಿಕೊಂಡ ಹಾಗಾಯಿತು ಮತ್ತು ಸತ್ಯವೆಂಬುದು ನಮ್ಮಲ್ಲಿಲ್ಲವೆಂದು ತಿಳಿಯುತ್ತದೆ.

9ನಾವು ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವನು.

10ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡಿದಂತಾಗುತ್ತದೆ ಮತ್ತು ಆತನ ವಾಕ್ಯವು ನಮ್ಮಲ್ಲಿ ನೆಲೆಗೊಂಡಿರುವುದಿಲ್ಲ.

1 ಯೋಹಾನನು 1

ಇಂಗ್ಲಿಷ್‌ನಲ್ಲಿ

Berean Standard Bible1 John 1:9If we confess our sins, He is faithful and just to forgive us our sins and to cleanse us from all unrighteousness.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಕೀರ್ತ 32:5ಹೀಗಿರುವಲ್ಲಿ ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡು ನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು. ನೀನು ನನ್ನ ಪಾಪಗಳ ಅಪರಾಧವನ್ನು ಪರಿಹರಿಸಿಬಿಟ್ಟಿ. ಸೆಲಾ
ಜ್ಞಾನೋ 28:13ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು, ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.
ಯೆರೆ 33:8ಅವರು ನನ್ನ ವಿರುದ್ಧವಾಗಿ ಮಾಡಿರುವ ಅಧರ್ಮವನ್ನೆಲ್ಲಾ ತೊಲಗಿಸಿ ಅವರನ್ನು ಶುದ್ಧೀಕರಿಸುವೆನು; ಅವರು ನನಗೆ ಪಾಪದ್ರೋಹಗಳನ್ನು ಮಾಡಿ ನಡೆಸಿರುವ ಅಪರಾಧಗಳನ್ನೆಲ್ಲಾ ಕ್ಷಮಿಸುವೆನು.
ಕೀರ್ತ 51:2–5ನನ್ನ ಪಾಪವನ್ನು ಸಂಪೂರ್ಣವಾಗಿ ತೊಳೆದುಬಿಡು; ನನ್ನ ದೋಷವನ್ನು ಪರಿಹರಿಸಿ, ನನ್ನನ್ನು ಶುದ್ಧಿಗೊಳಿಸು. ನಾನು ದ್ರೋಹಿ ಎಂದು ನಾನೇ ಒಪ್ಪಿಕೊಂಡಿದ್ದೇನೆ; ನನ್ನ ಪಾಪವು ಯಾವಾಗಲೂ ನನ್ನ ಮುಂದೆ ಇದೆ. ನಿನಗೇ, ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವುದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ, ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದೆ. ಹುಟ್ಟಿದಂದಿನಿಂದ ನಾನು ಪಾಪಿಯೇ; ಮಾತೃಗರ್ಭವನ್ನು ಹೊಂದಿದ ದಿನದಿಂದ ದ್ರೋಹಿಯೇ.
ಯೆಹೆ 36:25ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.
ಇಬ್ರಿ 10:23ನಾವು ನಮ್ಮ ನಿರೀಕ್ಷೆಯನ್ನು ಕುರಿತು ಮಾಡಿದ ಅರಿಕೆಯನ್ನು ನಿಶ್ಚಂಚಲದಿಂದ ಬಿಗಿಯಾಗಿ ಹಿಡಿಯೋಣ, ಯಾಕೆಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು.
1 ತಿಮೊ 1:15ಕ್ರಿಸ್ತಯೇಸು ಪಾಪಿಗಳನ್ನು ರಕ್ಷಿಸುವುದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂಬ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಇದೆ, ಯಾಕೆಂದರೆ ಆ ಎಲ್ಲಾ ಪಾಪಿಗಳಲ್ಲಿ ನಾನೇ ಪ್ರಮುಖನು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು