ಮುಖಪುಟ › ಜನಪ್ರಿಯ ಬೈಬಲ್ ವಚನಗಳು › 1 ಯೋಹಾನನು 2:15–17
ಬೈಬಲ್ ವಚನ · IRV
1 ಯೋಹಾನನು 2:15–17
15ಲೋಕವನ್ನಾಗಲಿ ಲೋಕದಲ್ಲಿರುವವುಗಳನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕವನ್ನು ಪ್ರೀತಿಸಿದರೆ ತಂದೆಯ ಮೇಲಿನ ಪ್ರೀತಿಯು ಅವನಲ್ಲಿಲ್ಲ.
16ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಬದುಕುಬಾಳಿನ ಗರ್ವ, ಇವು ತಂದೆಗೆ ಸಂಬಂಧಪಟ್ಟವುಗಳಲ್ಲ. ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.
17ಲೋಕವೂ ಅದರ ಆಸೆಯೂ ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಸದಾಕಾಲಕ್ಕೂ ಇರುವನು.
ಸಂದರ್ಭದಲ್ಲಿ
12ಪ್ರಿಯ ಮಕ್ಕಳೇ, ಕ್ರಿಸ್ತನ ಹೆಸರಿನ ನಿಮಿತ್ತ ನಿಮ್ಮ ಪಾಪಗಳು ಕ್ಷಮಿಸಲ್ಪಟ್ಟಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ.
13ತಂದೆಗಳಿರಾ, ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ. ಯೌವನಸ್ಥರೇ, ನೀವು ಕೆಡುಕನನ್ನು ಜಯಿಸಿರುವುದರಿಂದ ನಿಮಗೆ ಬರೆಯುತ್ತಿದ್ದೇನೆ. ಮಕ್ಕಳೇ, ನೀವು ತಂದೆಯನ್ನು ಬಲ್ಲವರಾಗಿರುವುದರಿಂದ ನಿಮಗೆ ಬರೆಯುತ್ತಿದ್ದೇನೆ.
14ತಂದೆಗಳಿರಾ, ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವುದರಿಂದ ನಿಮಗೆ ಬರೆದಿದ್ದೇನೆ. ಯೌವನಸ್ಥರೇ, ನೀವು ಶಕ್ತರಾಗಿರುವುದರಿಂದಲೂ ದೇವರ ವಾಕ್ಯವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದಲೂ ನೀವು ಕೆಡುಕನನ್ನು ಜಯಿಸಿರುವುದರಿಂದಲೂ ನಾನು ನಿಮಗೆ ಬರೆದಿದ್ದೇನೆ.
15ಲೋಕವನ್ನಾಗಲಿ ಲೋಕದಲ್ಲಿರುವವುಗಳನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕವನ್ನು ಪ್ರೀತಿಸಿದರೆ ತಂದೆಯ ಮೇಲಿನ ಪ್ರೀತಿಯು ಅವನಲ್ಲಿಲ್ಲ.
16ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಬದುಕುಬಾಳಿನ ಗರ್ವ, ಇವು ತಂದೆಗೆ ಸಂಬಂಧಪಟ್ಟವುಗಳಲ್ಲ. ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.
17ಲೋಕವೂ ಅದರ ಆಸೆಯೂ ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಸದಾಕಾಲಕ್ಕೂ ಇರುವನು.
18ಪ್ರಿಯ ಮಕ್ಕಳೇ, ಇದು ಅಂತ್ಯ ಕಾಲವಾಗಿದೆ. ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ್ದೀರಿ. ಈಗಾಗಲೇ ಕ್ರಿಸ್ತವಿರೋಧಿಗಳು ಅನೇಕರಿದ್ದಾರೆ. ಆದ್ದರಿಂದ ಇದು ಅಂತ್ಯ ಕಾಲವಾಗಿದೆ ಎಂದು ನಾವು ಬಲ್ಲವರಾಗಿದ್ದೇವೆ.
19ಅವರು ನಮ್ಮಿಂದ ಹೊರಟುಹೋದವರು. ಏಕೆಂದರೆ ಅವರು ನಮ್ಮವರಾಗಿರಲಿಲ್ಲ. ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟುಹೋದುದರಿಂದ ಅವರೆಲ್ಲರೂ ನಮ್ಮವರಲ್ಲವೆಂಬುದು ಸ್ಪಷ್ಟವಾಗಿ ತೋರಿಬಂದಿದೆ.
20ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದವರಾಗಿದ್ದೀರಿ ಎಂಬ ಸತ್ಯವನ್ನೂ ತಿಳಿದವರಾಗಿದ್ದೀರಿ.
ಇಂಗ್ಲಿಷ್ನಲ್ಲಿ
Do not love the world or anything in the world. If anyone loves the world, the love of the Father is not in him. For all that is in the world—the desires of the flesh, the desires of the eyes, and the pride of life—is not from the Father but from the world. The world is passing away, along with its desires; but whoever does the will of God remains forever.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ವ್ಯಭಿಚಾರಿಗಳೇ, ಇಹಲೋಕದ ಗೆಳೆತನವು ದೇವರಿಗೆ ಹಗೆತನವೆಂದು ನಿಮಗೆ ತಿಳಿಯದೋ? ಆದ್ದರಿಂದ ಲೋಕಕ್ಕೆ ಸ್ನೇಹಿತನಾಗಿರಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.“ಯಾರೊಬ್ಬನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನಿಗೆ ಶ್ರದ್ಧೆಯಿಂದ ಸೇವೆಮಾಡಿ ಮತ್ತೊಬ್ಬನನ್ನು ತಾತ್ಸಾರ ಮಾಡಬಹುದು. ನೀವು ದೇವರನ್ನೂ ಐಶ್ವರ್ಯವನ್ನೂ ಒಟ್ಟಾಗಿ ಸೇವಿಸಲಾರಿರಿ.ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟಿರುವುದಾದರೆ ಮೇಲಿನವುಗಳನ್ನೇ ಹುಡುಕಿರಿ, ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ. ಭೂಲೋಕದಲ್ಲಿರುವಂಥವುಗಳ ಬಗ್ಗೆ ಅಲ್ಲ, ಪರಲೋಕದಲ್ಲಿರುವಂಥವುಗಳ ಬಗ್ಗೆ ಯೋಚಿಸಿರಿ.ಯಾವ ಆಳಾದರೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು, ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು, ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಒಟ್ಟಿಗೆ ಸೇವಿಸಲಾರಿರಿ” ಅಂದನು.ಏಕೆಂದರೆ ದೇವರಿಂದ ಹುಟ್ಟಿದವನು ಲೋಕವನ್ನು ಜಯಿಸುತ್ತಾನೆ. ಲೋಕವನ್ನು ಜಯಿಸುವಂಥದ್ದು ನಮ್ಮ ನಂಬಿಕೆಯೇ. ಯೇಸುಕ್ರಿಸ್ತನು ದೇವರ ಮಗನೆಂದು ಒಪ್ಪಿಕೊಂಡು ನಂಬಿದವರಲ್ಲದೆ ಮತ್ತಾರು ಲೋಕವನ್ನು ಜಯಿಸಿದವರಾಗಿದ್ದಾರೆ?ನೀವು ಲೋಕದವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಪ್ರೀತಿಸುತ್ತಿತ್ತು. ನೀವಾದರೋ ಲೋಕದ ಕಡೆಯವರಲ್ಲ, ನಾನು ನಿಮ್ಮನ್ನು ಆರಿಸಿಕೊಂಡಿದ್ದರಿಂದಲೇ ಲೋಕವು ನಿಮ್ಮನ್ನು ದ್ವೇಷ ಮಾಡುತ್ತದೆ.ದೇಹದ ಆಸೆಗಳನ್ನು ಪೂರೈಸುವುದಕ್ಕಾಗಿ ಚಿಂತಿಸದೇ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು