ಮುಖಪುಟ › ಜನಪ್ರಿಯ ಬೈಬಲ್ ವಚನಗಳು › 1 ಯೋಹಾನನು 3:17
ಬೈಬಲ್ ವಚನ · IRV
1 ಯೋಹಾನನು 3:17
ಆದರೆ ಈ ಲೋಕದ ಸಂಪತ್ತುಳ್ಳ ಯಾರಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕನಿಕರಪಡದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರಲು ಸಾಧ್ಯವೇ?
ಸಂದರ್ಭದಲ್ಲಿ
14ನಾವಂತೂ ಕ್ರೈಸ್ತಸಹೋದರರನ್ನು ಪ್ರೀತಿಸುವವರಾಗಿರುವುದರಿಂದ ಮರಣದಿಂದ ಪಾರಾಗಿ ನಿತ್ಯಜೀವದಲ್ಲಿ ಸೇರಿದ್ದೇವೆಂಬುದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.
15ತನ್ನ ಸಹೋದರನನ್ನು ದ್ವೇಷಿಸುವವನು ಕೊಲೆಗಾರನಾಗಿದ್ದಾನೆ. ಮತ್ತು ಯಾವ ಕೊಲೆಗಾರನಲ್ಲಿಯೂ ನಿತ್ಯಜೀವವು ಇರುವುದಿಲ್ಲವೆಂಬುದು ನಿಮಗೆ ಗೊತ್ತಾಗಿದೆ.
16ಕ್ರಿಸ್ತನು ನಮಗೋಸ್ಕರ ತನ್ನ ಪ್ರಾಣವನ್ನು ಅರ್ಪಿಸಿದ್ದರಿಂದ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.
17ಆದರೆ ಈ ಲೋಕದ ಸಂಪತ್ತುಳ್ಳ ಯಾರಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕನಿಕರಪಡದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರಲು ಸಾಧ್ಯವೇ?
18ನನ್ನ ಪ್ರಿಯ ಮಕ್ಕಳೇ, ನೀವು ಬರೀ ಮಾತಿನಿಂದಾಗಲಿ, ಬಾಯುಪಚಾರದಿಂದಾಗಲಿ, ಪ್ರೀತಿಸುವವರಾಗಿರದೆ ಕ್ರಿಯೆಗಳಿಂದಲೂ ಮತ್ತು ನಿಜ ಪ್ರೀತಿಯಿಂದ ಪ್ರೀತಿಸುವವರಾಗಿರಬೇಕು.
19ನಾವು ಸತ್ಯಕ್ಕೆ ಸೇರಿದವರೆಂಬುದು ಇದರಿಂದಲೇ ನಮಗೆ ತಿಳಿಯುತ್ತದೆ, ನಮ್ಮ ಹೃದಯವು ದೇವರ ಸಮಕ್ಷಮದಲ್ಲಿ ದೋಷರಹಿತವಾಗಿರುತ್ತದೆ.
20ಏಕೆಂದರೆ ನಮ್ಮ ಹೃದಯವು ಯಾವ ವಿಷಯದಲ್ಲಾದರು ನಮ್ಮನ್ನು ದೋಷಿಗಳೆಂದು ನಿರ್ಣಯಿಸಿದರೆ, ದೇವರು ನಮ್ಮ ಹೃದಯವನ್ನು ಬಲ್ಲವನಾಗಿರುವುದರಿಂದ ನಮ್ಮ ಹೃದಯವನ್ನು ಆತನಲ್ಲಿ ದೃಢಪಡಿಸಬಹುದು.
ಇಂಗ್ಲಿಷ್ನಲ್ಲಿ
If anyone with earthly possessions sees his brother in need, but withholds his compassion from him, how can the love of God abide in him?ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಇದಲ್ಲದೆ ಪರೋಪಕಾರ ಮಾಡುವುದನ್ನು, ಬೇರೆಯವರಿಗೆ ಸಹಾಯ ಮಾಡುವುದನ್ನು ಮರೆಯಬೇಡಿರಿ. ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.ಹಸಿದವರಿಗೆ ಅನ್ನವನ್ನು ಹಂಚುವುದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವುದು, ನಿನ್ನಂತೆ ಮನುಷ್ಯನಾಗಿರುವ ಯಾರಿಗೇ ಆಗಲಿ ಮುಖತಪ್ಪಿಸಿಕೊಳ್ಳದಿರುವುದು, ಇವುಗಳೇ ನನಗೆ ಇಷ್ಟವಾದ ಉಪವಾಸ ವ್ರತವಲ್ಲವೇ. ಇದನ್ನು ಆಚರಿಸುವಾಗ ನಿಮಗೆ ಬೆಳಕು ಉದಯದಂತೆ ಮೂಡಿ ಬರುವುದು, ನಿಮ್ಮ ಕ್ಷೇಮವು ಬೇಗನೆ ಬೆಳೆಯುವುದು; ನಿಮ್ಮ ಧರ್ಮವು ನಿಮಗೆ ಮುಂಬಲವಾಗಿರುವುದು, ಯೆಹೋವನ ಮಹಿಮೆಯು ನಿಮಗೆ ಹಿಂಬಲವಾಗಿರುವುದು. ಆಗ ನೀವು ಕೂಗಿದರೆ ಯೆಹೋವನು ಉತ್ತರಕೊಡುವನು, ಮೊರೆಯಿಟ್ಟು ಕರೆದರೆ, “ಇಗೋ, ಇದ್ದೇನೆ” ಅನ್ನುವನು. ನೀವು ನಿಮ್ಮ ಮಧ್ಯದೊಳಗಿಂದ ನೊಗವನ್ನು, ಇನ್ನೊಬ್ಬರನ್ನು ದೂಷಣೆಗೆ ಗುರಿಮಾಡಿ ತೋರುವ ಬೆರಳನ್ನು, ಕೆಡುಕಿನ ನುಡಿಯನ್ನು ಬಿಟ್ಟು, ನಿಮಗೆ ಪ್ರಿಯವಾದದ್ದನ್ನು ಹಸಿದವರಿಗೆ ಒದಗಿಸಿ, ಕುಗ್ಗಿದವರ ಆಶೆಯನ್ನು ನೆರವೇರಿಸಿದರೆ, ಆಗ ನಿಮಗೆ ಕತ್ತಲಲ್ಲಿ ಬೆಳಕು ಉದಯಿಸುವುದು, ನಿಮ್ಮ ಅಂಧಕಾರವು ಪರಿಹಾರವಾಗಿ ಮಧ್ಯಾಹ್ನವಾಗುವುದು.ಒಬ್ಬನು, “ತಾನು ದೇವರನ್ನು ಪ್ರೀತಿಸುತ್ತೇನೆ” ಎಂದು ಹೇಳಿ ತನ್ನ ಸಹೋದರನನ್ನು ದ್ವೇಷಿಸಿದರೆ ಅವನು ಸುಳ್ಳುಗಾರನಾಗಿದ್ದಾನೆ. ಏಕೆಂದರೆ ತನ್ನೊಂದಿಗೆ ಇರುವ ಸಹೋದರನನ್ನು ಪ್ರೀತಿಸದವನು, ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಬಲ್ಲನು?ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಯಾವ ಊರಿನಲ್ಲಾದರೂ ಸ್ವದೇಶದವನಾದ ಬಡವನು ಇದ್ದರೆ, ನೀವು ಆ ಬಡ ಸಹೋದರನಿಗೆ ಮನಸ್ಸನ್ನು ಕಠಿಣಮಾಡಿಕೊಂಡು ಅವನಿಗೆ ಸಹಾಯಮಾಡದೆ ಇರಬಾರದು. ನೀವು ಕೈತೆರೆದು ಅವನಿಗೆ ಅವಶ್ಯವಾಗಿ ಬೇಕಾದದ್ದನ್ನು ಕೊಟ್ಟು ಸಹಾಯ ಮಾಡಬೇಕು. ನೀವು “ಬಿಡುಗಡೆಯುಂಟಾಗುವ ಏಳನೆಯ ವರ್ಷವು ಸಮೀಪವಾಯಿತು” ಎಂಬ ನೀಚವಾದ ಆಲೋಚನೆಯನ್ನು ಮಾಡಿ, ಆ ಬಡ ಸಹೋದರನಿಗೆ ಏನೂ ಕೊಡದೆ ಇರಬಾರದು, ಎಚ್ಚರಿಕೆ! ಹಾಗೆ ಧಿಕ್ಕರಿಸಿದರೆ ಅವನು ಒಂದು ವೇಳೆ ನಿಮ್ಮ ವಿಷಯದಲ್ಲಿ ಯೆಹೋವನಿಗೆ ಮೊರೆಯಿಟ್ಟಾನು, ನೀವು ದೋಷಿಗಳಾಗಿ ಕಂಡುಬರುವಿರಿ. ನೀವು ಕೊಡುವಾಗ ಬೇಸರಗೊಳ್ಳದೆ ಉದಾರವಾದ ಮನಸ್ಸಿನಿಂದಲೇ ಕೊಡಬೇಕು. ಇದರಿಂದ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ಮತ್ತು ಪ್ರಯತ್ನಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು. ದೇಶದಲ್ಲಿ ಯಾವಾಗಲೂ ಬಡವರು ಇರುವರಷ್ಟೆ; ಆದುದರಿಂದ, “ನೀವು ಸ್ವದೇಶದವರಾದ ನಿಮ್ಮ ಸಹೋದರರಿಗೂ, ಬಡವರಿಗೂ ಮತ್ತು ಗತಿಯಿಲ್ಲದವರಿಗೂ ಕೈನೀಡಿ ಸಹಾಯಮಾಡಬೇಕು” ಎಂದು ನಾನು ನಿಮಗೆ ಆಜ್ಞಾಪಿಸಿದ್ದೇನೆ.ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು, ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.ಆತನು, “ಎರಡು ಅಂಗಿಗಳುಳ್ಳವನು ಇಲ್ಲದವನಿಗೆ ಒಂದು ಕೊಡಲಿ; ಆಹಾರವುಳ್ಳವನು ಇಲ್ಲದವನಿಗೆ ಕೊಡಲಿ” ಎಂದು ಅವರಿಗೆ ಹೇಳಿದನು.ಹೀಗಿರಲಾಗಿ ಈ ಸಹೋದರರು ಮುಂಚಿತವಾಗಿ ನಿಮ್ಮ ಬಳಿಗೆ ಬಂದು ನೀವು ಮೊದಲೇ ವಾಗ್ದಾನಮಾಡಿದ ಕೊಡುಗೆಯನ್ನು ಸಿದ್ಧಪಡಿಸಲು ನಿಮಗೆ ಸಹಾಯಮಾಡುವಂತೆ ಇವರನ್ನು ಬೇಡಿಕೊಳ್ಳುವುದು ಅವಶ್ಯವೆಂದು ನನಗೆ ತೋಚಿತು. ಹೀಗೆ ಈ ದಾನ ಒತ್ತಾಯದ ವಸೂಲಿ ಆಗಿರದೆ ಮನಃಪೂರ್ವಕವಾಗಿ ಕೊಟ್ಟ ದಾನ ಆಗಿರುತ್ತದೆ. ಆದರೆ ಮಿತವಾಗಿ ಬಿತ್ತುವವನು ಮಿತವಾಗಿ ಕೊಯ್ಯುವನು. ಹೇರಳವಾಗಿ ಬಿತ್ತುವವನು ಹೇರಳವಾಗಿ ಕೊಯ್ಯುತ್ತಾನೆ. ಇದು ನಿಮಗೆ ತಿಳಿದಿರಲಿ. ಪ್ರತಿಯೊಬ್ಬನೂ ತನ್ನ ತನ್ನ ಹೃದಯದಲ್ಲಿ ನಿರ್ಣಯಿಸಿಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲವಂತದಿಂದಾಗಲಿ ಯಾರೂ ಕೊಡಬಾರದು; ಯಾಕೆಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿಸುವನು. ದೇವರು ಸಕಲ ವಿಧವಾದ ದಾನಗಳನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವುದಕ್ಕೆ ಶಕ್ತನಾದ್ದರಿಂದ, ನೀವೂ ಯಾವಾಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆಯುಳ್ಳವರಾಗಿ ಸಕಲ ಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರಬೇಕು. “ಅವನು ಬಡವರಿಗೆ ಧಾರಾಳವಾಗಿ ನೀಡುವನು; ಅವನ ನೀತಿಯು ಸದಾಕಾಲವೂ ಇರುವುದು.”ನಿಮ್ಮಲ್ಲಿ ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಉಡಲು ಬಟ್ಟೆಯೂ ಮತ್ತು ದಿನನಿತ್ಯದ ಆಹಾರವೂ ಅಗತ್ಯವಾಗಿರುವಾಗ,ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು