Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › 1 ಯೋಹಾನನು 4:1

ಬೈಬಲ್ ವಚನ · IRV

1 ಯೋಹಾನನು 4:1

ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಬಂದಿರುವುದರಿಂದ ನೀವು ಎಲ್ಲಾ ಆತ್ಮಗಳ ನುಡಿಗಳನ್ನು ನಂಬದೆ ಆಯಾ ಆತ್ಮಗಳ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.

ಇಡೀ ಅಧ್ಯಾಯ ಓದಿ: 1 ಯೋಹಾನನು 4

ಸಂದರ್ಭದಲ್ಲಿ

1ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಬಂದಿರುವುದರಿಂದ ನೀವು ಎಲ್ಲಾ ಆತ್ಮಗಳ ನುಡಿಗಳನ್ನು ನಂಬದೆ ಆಯಾ ಆತ್ಮಗಳ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.

2ದೇವರಾತ್ಮ ಪ್ರೇರಿತವಾದ ನುಡಿಗಳು ಎಂದು ತಿಳಿದುಕೊಳ್ಳುವುದು ಹೇಗೆಂದರೆ, ಯೇಸು ಕ್ರಿಸ್ತನು ಮನುಷ್ಯ ರೂಪವನ್ನು ಧರಿಸಿಕೊಂಡು ಬಂದನು ಎಂದು ಒಪ್ಪಿಕೊಳ್ಳುವ ಆತ್ಮವು ದೇವರಿಂದ ಪ್ರೇರಿತವಾಗಿ ಬಂದದ್ದಾಗಿದೆ.

3ಯೇಸುಕ್ರಿಸ್ತನನ್ನು ಒಪ್ಪಿಕೊಳ್ಳದಿರುವ ಪ್ರತಿಯೊಂದು ಆತ್ಮವು ದೇವರಿಂದ ಬಂದದ್ದಲ್ಲ. ಅದು ಕ್ರಿಸ್ತವಿರೋಧಿಯ ಆತ್ಮವಾಗಿದೆ. ಅದು ಬರುತ್ತದೆಂಬುದನ್ನು ನೀವು ಕೇಳಿದ್ದೀರಲ್ಲಾ. ಅದು ಈಗಾಗಲೇ ಲೋಕದಲ್ಲಿ ಇದೆ.

4ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರಾಗಿದ್ದೀರಿ. ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಉನ್ನತನಾಗಿರುವುದರಿಂದ ನೀವು ಆ ಸುಳ್ಳು ಪ್ರವಾದಿಗಳ ಆತ್ಮವನ್ನು ಜಯಿಸಿದ್ದೀರಿ.

1 ಯೋಹಾನನು 4

ಇಂಗ್ಲಿಷ್‌ನಲ್ಲಿ

Berean Standard Bible1 John 4:1Beloved, do not believe every spirit, but test the spirits to see whether they are from God. For many false prophets have gone out into the world.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

1 ಥೆಸ 5:21ಆದರೆ ಎಲ್ಲವನ್ನೂ ಪರೀಕ್ಷಿಸಿ ಒಳ್ಳೆಯದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ.
2 ಪೇತ್ರ 2:1ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು.
1 ತಿಮೊ 4:1ಆದರೂ ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳ ನುಡಿಗಳಿಗೂ, ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಿದ್ದಾನೆ.
ಜ್ಞಾನೋ 14:15ಮೂಢನು ಯಾವ ಮಾತನ್ನಾದರೂ ನಂಬುವನು, ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.
2 ಯೋಹಾ 1:7ಏಕೆಂದರೆ, ಯೇಸುಕ್ರಿಸ್ತನು ಮನುಷ್ಯನಾಗಿ ಬಂದನು ಎಂಬುದನ್ನು ಒಪ್ಪದೆ ಇರುವ ಅನೇಕ ಮೋಸಗಾರರು ಲೋಕದೊಳಗೆ ಹೊರಟು ಬಂದಿದ್ದಾರೆ. ಇಂಥವರೇ, ಯೇಸುವನ್ನು ಒಪ್ಪದ ಮೋಸಗಾರರೂ, ಕ್ರಿಸ್ತವಿರೋಧಿಗಳು ಆಗಿದ್ದಾರೆ.
ಮತ್ತಾ 24:4–5ಯೇಸು ಅವರಿಗೆ ಉತ್ತರವಾಗಿ ಹೇಳಿದ್ದೇನೆಂದರೆ, “ಯಾರೊಬ್ಬರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಿಂದಿರಿ. ಏಕೆಂದರೆ, ನನ್ನ ಹೆಸರಿನಲ್ಲಿ ಅನೇಕರು ಬಂದು, ‘ನಾನು ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.
ಯೆರೆ 29:8–9ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಿಮ್ಮ ಮಧ್ಯದಲ್ಲಿರುವ ನಿಮ್ಮ ಪ್ರವಾದಿಗಳಿಂದಲೂ, ಶಕುನದವರಿಂದಲೂ ಮೋಸಹೋಗಬೇಡಿರಿ; ನಿಮಗಾಗಿ ಕನಸುಕಂಡು ಹೇಳುವವರಿಗೆ ಕಿವಿಗೊಡಬೇಡಿರಿ. ಅವರು ನನ್ನ ಹೆಸರಿನಲ್ಲಿ ನಿಮಗೆ ಸುಳ್ಳನ್ನು ಸಾರುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ. ಇದು ಯೆಹೋವನ ನುಡಿ” ಎಂದು ಬರೆಯಲ್ಪಟ್ಟಿತು.
ಮತ್ತಾ 7:15–16“ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು ಕಿತ್ತುತಿನ್ನುವ ತೋಳಗಳೇ. ಅವರ ಫಲಗಳಿಂದ ಅವರನ್ನು ತಿಳಿದುಕೊಳ್ಳುವಿರಿ. ಮುಳ್ಳುಗಿಡಗಳಲ್ಲಿ ದ್ರಾಕ್ಷಿಹಣ್ಣುಗಳನ್ನೂ ದತ್ತೂರಿ ಗಿಡಗಳಿಂದ ಅಂಜೂರಗಳನ್ನೂ ಸಂಗ್ರಹಿಸುವುದುಂಟೇ?

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು