ಮುಖಪುಟ › ಜನಪ್ರಿಯ ಬೈಬಲ್ ವಚನಗಳು › 1 ಯೋಹಾನನು 4:18
ಬೈಬಲ್ ವಚನ · IRV
1 ಯೋಹಾನನು 4:18
ಪ್ರೀತಿ ಇರುವಲ್ಲಿ ಹೆದರಿಕೆಯಿಲ್ಲ. ಹೆದರಿಕೆಯಿರುವಲ್ಲಿ ಯಾತನೆಗಳಿರುವವು. ಆದರೆ ಪೂರ್ಣಪ್ರೀತಿಯು ಹೆದರಿಕೆಯನ್ನು ಹೊಡೆದೊಡಿಸಿಬಿಡುತ್ತದೆ. ಹೆದರುವವನು ಪ್ರೀತಿಯಲ್ಲಿ ಪೂರ್ಣಗೊಂಡವನಲ್ಲ.
ಸಂದರ್ಭದಲ್ಲಿ
15ಯೇಸುಕ್ರಿಸ್ತನು ದೇವರ ಮಗನಾಗಿದ್ದಾನೆಂದು ಯಾರು ಒಪ್ಪಿಕೊಳ್ಳುತ್ತಾರೋ ಅವರಲ್ಲಿ ದೇವರು ನೆಲೆಗೊಂಡಿರುತ್ತಾನೆ, ಹಾಗೂ ಅವನು ದೇವರಲ್ಲಿ ನೆಲೆಗೊಂಡಿದ್ದಾನೆ.
16ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ. ಅದನ್ನು ನಂಬಿದ್ದೇವೆ. ದೇವರು ಪ್ರೀತಿಸ್ವರೂಪಿ, ಪ್ರೀತಿಯಲ್ಲಿ ನೆಲೆಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ. ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.
17ನ್ಯಾಯತೀರ್ಪಿನ ದಿನದಲ್ಲಿ ನಾವು ಧೈರ್ಯದಿಂದಿರುವುದಕ್ಕಾಗಿ ಆತನ ಪ್ರೀತಿಯು ನಮ್ಮೊಳಗೆ ಪೂರ್ಣಗೊಂಡಿದೆ. ಈ ಲೋಕದಲ್ಲಿ ನಮ್ಮ ಬಾಳು ಕ್ರಿಸ್ತಯೇಸುವಿನ ಬಾಳಿನಂತೆ ಇರುವುದರಿಂದಲೇ ಆ ಭರವಸೆ ನಮಗೆ ಇರುತ್ತದೆ.
18ಪ್ರೀತಿ ಇರುವಲ್ಲಿ ಹೆದರಿಕೆಯಿಲ್ಲ. ಹೆದರಿಕೆಯಿರುವಲ್ಲಿ ಯಾತನೆಗಳಿರುವವು. ಆದರೆ ಪೂರ್ಣಪ್ರೀತಿಯು ಹೆದರಿಕೆಯನ್ನು ಹೊಡೆದೊಡಿಸಿಬಿಡುತ್ತದೆ. ಹೆದರುವವನು ಪ್ರೀತಿಯಲ್ಲಿ ಪೂರ್ಣಗೊಂಡವನಲ್ಲ.
19ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.
20ಒಬ್ಬನು, “ತಾನು ದೇವರನ್ನು ಪ್ರೀತಿಸುತ್ತೇನೆ” ಎಂದು ಹೇಳಿ ತನ್ನ ಸಹೋದರನನ್ನು ದ್ವೇಷಿಸಿದರೆ ಅವನು ಸುಳ್ಳುಗಾರನಾಗಿದ್ದಾನೆ. ಏಕೆಂದರೆ ತನ್ನೊಂದಿಗೆ ಇರುವ ಸಹೋದರನನ್ನು ಪ್ರೀತಿಸದವನು, ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಬಲ್ಲನು?
21ದೇವರನ್ನು ಪ್ರೀತಿಸುವವನು, ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಆಜ್ಞೆಯನ್ನು ನಾವು ಆತನಿಂದ ಹೊಂದಿದ್ದೇವೆ.
ಇಂಗ್ಲಿಷ್ನಲ್ಲಿ
There is no fear in love, but perfect love drives out fear, because fear involves punishment. The one who fears has not been perfected in love.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ದೇವರು ನಮಗೆ ಕೊಟ್ಟಿರುವ ಆತ್ಮವು ಬಲ, ಪ್ರೀತಿ, ಸಂಯಮಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ.ನೀವು ತಿರುಗಿ ಭಯದಲ್ಲಿ ಬೀಳುವ ಹಾಗೆ ದಾಸತ್ವದ ಆತ್ಮನನ್ನು ಹೊಂದಿದವರಲ್ಲ. ಅದರ ಬದಲಾಗಿ, ನಿಮ್ಮವು ದೇವರನ್ನು, “ಅಪ್ಪಾ, ತಂದೆಯೇ,” ಎಂದು ಕರೆಯುವ ಮಕ್ಕಳ ಆತ್ಮವನ್ನು ಹೊಂದಿದ್ದೀರಿ.ದೇವರನ್ನು ಯಾರೂ ಎಂದೂ ನೋಡಿಲ್ಲ. ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ, ಮತ್ತು ಆತನ ಪ್ರೀತಿಯು ನಮ್ಮಲ್ಲಿ ಪರಿಪೂರ್ಣಗೊಂಡಿರುತ್ತದೆ.ಹೀಗೆ ನಾವು ನಮ್ಮ ವೈರಿಗಳ ಕೈಯಿಂದ ಬಿಡುಗಡೆಹೊಂದಿ ಭಯವಿಲ್ಲದವರಾಗಿದ್ದು, ನಮ್ಮ ಜೀವಮಾನದಲ್ಲೆಲ್ಲಾ ನಿರ್ಮಲಚಿತ್ತದಿಂದಲೂ ನೀತಿಯಿಂದಲೂ ತನ್ನ ಸನ್ನಿಧಿಯಲ್ಲಿ ಸೇವೆಮಾಡುವಂತೆ ನಮಗೆ ಅನುಕೂಲಮಾಡಿದ್ದಾನೆ.ಆದ್ದರಿಂದ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆದುಕೊಳ್ಳುವವರಾದ ನಾವು ಕೃತಜ್ಞತೆಯುಳ್ಳವರಾಗಿ, ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಮತ್ತು ಭಯದಿಂದಲೂ ಮಾಡೋಣ.ದೇವರು ಒಬ್ಬನೇ ಎಂದು ನೀನು ನಂಬುತ್ತೀ; ಹಾಗೆ ನಂಬುವುದು ಸರಿ. ಆದರೆ ದೆವ್ವಗಳು ಸಹ ಹಾಗೆಯೇ ನಂಬಿ ಹೆದರಿ ನಡುಗುತ್ತವೆ.ನಿನ್ನ ಭಯದಿಂದ ನನ್ನ ದೇಹದ ಮಾಂಸವು ಕಂಪಿಸುತ್ತದೆ, ನಿನ್ನ ನ್ಯಾಯವಿಧಿಗಳಿಗೆ ಹೆದರುತ್ತೇನೆ.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು