Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › 1 ಯೋಹಾನನು 4:8

ಬೈಬಲ್ ವಚನ · IRV

1 ಯೋಹಾನನು 4:8

ಪ್ರೀತಿ ಇಲ್ಲದವನು ದೇವರನ್ನು ಬಲ್ಲವನಲ್ಲ. ಏಕೆಂದರೆ ದೇವರು ಪ್ರೀತಿಸ್ವರೂಪನಾಗಿದ್ದಾನೆ.

ಇಡೀ ಅಧ್ಯಾಯ ಓದಿ: 1 ಯೋಹಾನನು 4

ಸಂದರ್ಭದಲ್ಲಿ

5ಅವರು ಲೋಕಸಂಬಂಧಿಗಳಾಗಿದ್ದಾರೆ. ಈ ಕಾರಣದಿಂದ ಅವರು ಲೌಕಿಕವಾದುದನ್ನೇ ಮಾತನಾಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.

6ನಾವಂತೂ ದೇವರಿಗೆ ಸಂಬಂಧಪಟ್ಟವರಾಗಿದ್ದೇವೆ. ದೇವರನ್ನು ಬಲ್ಲವರು ನಮ್ಮ ಮಾತನ್ನು ಕೇಳುತ್ತಾರೆ. ದೇವರಿಗೆ ಸಂಬಂಧಪಡದವರು ನಮ್ಮ ಮಾತನ್ನು ಕೇಳುವುದಿಲ್ಲ. ಇದರಿಂದಲೇ ಸತ್ಯವನ್ನು ಬೋಧಿಸುವ ಆತ್ಮ ಯಾವುದು ಮತ್ತು ಸುಳ್ಳನ್ನು ಬೋಧಿಸುವ ಆತ್ಮ ಯಾವುದು ಎಂದು ನಾವು ತಿಳಿದುಕೊಳ್ಳುತ್ತೇವೆ.

7ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಏಕೆಂದರೆ ಪ್ರೀತಿಯು ದೇವರಿಂದ ಬಂದದ್ದಾಗಿದೆ ಮತ್ತು ಪ್ರೀತಿ ಮಾಡುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನೂ ದೇವರನ್ನು ಬಲ್ಲವನೂ ಆಗಿದ್ದಾನೆ.

8ಪ್ರೀತಿ ಇಲ್ಲದವನು ದೇವರನ್ನು ಬಲ್ಲವನಲ್ಲ. ಏಕೆಂದರೆ ದೇವರು ಪ್ರೀತಿಸ್ವರೂಪನಾಗಿದ್ದಾನೆ.

9ನಾವು ಆತನ ಮೂಲಕ ಜೀವಿಸುವುದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮಲ್ಲಿ ಪ್ರತ್ಯಕ್ಷವಾಗಿದೆ.

10ನಾವು ದೇವರನ್ನು ಪ್ರೀತಿಸಿಲ್ಲ, ಆದರೂ ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತನ್ನ ಮಗನನ್ನು ಕಳುಹಿಸಿಕೊಟ್ಟಿದ್ದರಲ್ಲಿಯೇ ಆತನ ನಿಜವಾದ ಪ್ರೀತಿಯು ತೋರಿಬರುತ್ತದೆ.

11ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವೂ ಸಹ ಒಬ್ಬರನ್ನೊಬ್ಬರು ಪ್ರೀತಿಸುವ ಹಂಗಿನಲ್ಲಿದ್ದೇವೆ.

1 ಯೋಹಾನನು 4

ಇಂಗ್ಲಿಷ್‌ನಲ್ಲಿ

Berean Standard Bible1 John 4:8Whoever does not love does not know God, because God is love.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

1 ಯೋಹಾ 4:16ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ. ಅದನ್ನು ನಂಬಿದ್ದೇವೆ. ದೇವರು ಪ್ರೀತಿಸ್ವರೂಪಿ, ಪ್ರೀತಿಯಲ್ಲಿ ನೆಲೆಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ. ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.
ಕೀರ್ತ 86:15ಕರ್ತನೇ, ನೀನು ಕನಿಕರವೂ, ದಯೆಯೂ ಉಳ್ಳ ದೇವರು; ದೀರ್ಘಶಾಂತನು, ಬಹಳ ಪ್ರೀತಿಯೂ, ನಂಬಿಕೆಯೂ ಉಳ್ಳವನು.
2 ಕೊರಿ 13:11ಕಡೆಯದಾಗಿ ಸಹೋದರರೇ, ಸಂತೋಷಪಡಿರಿ! ಕ್ರಮಪಡಿಸಿಕೊಳ್ಳಿರಿ. ಧೈರ್ಯವುಳ್ಳವರಾಗಿರಿ, ಏಕ ಮನಸ್ಸುಳ್ಳವರಾಗಿರಿ, ಸಮಾಧಾನದಿಂದ ಇರಿ; ಆಗ ಪ್ರೀತಿಸ್ವರೂಪನೂ, ಶಾಂತಿದಾಯಕನೂ ಆದ ದೇವರು ನಿಮ್ಮ ಸಂಗಡ ಇರುವನು.
ಕೀರ್ತ 86:5ಕರ್ತನೇ, ನೀನು ಒಳ್ಳೆಯವನೂ, ಕ್ಷಮಿಸುವವನೂ, ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದಿಯಲ್ಲಾ.
ಎಫೆ 2:4ಆದರೆ ಕರುಣಾನಿಧಿಯಾಗಿರುವ ದೇವರು ನಮ್ಮನ್ನು ಪ್ರೀತಿಸಿದ ಮಹಾ ಪ್ರೀತಿಯ ನಿಮಿತ್ತ,
ವಿಮೋ 34:6–7ಯೆಹೋವನು ಮೋಶೆಗೆ ಎದುರಾಗಿ ಹೋಗುತ್ತಾ ಪ್ರಕಟಿಸಿ ಹೇಳಿದ್ದೇನೆಂದರೆ; “ಯೆಹೋವನೆಂಬ ದೇವರು ಕರುಣಾಳುವು, ಕೃಪಾಳುವು, ದೀರ್ಘಶಾಂತವುಳ್ಳವನು, ಪ್ರೀತಿಯುಳ್ಳವನು ಹಾಗು ನಂಬಿಗಸ್ತನಾದ ದೇವರು ಆಗಿದ್ದೇನೆ; ಸಾವಿರಾರು ತಲೆಮಾರುಗಳವರೆಗೂ ದಯೆತೋರಿಸುವವನು; ದೋಷಾಪರಾಧ ಪಾಪಗಳನ್ನು ಕ್ಷಮಿಸುವವನು; ಆದರೂ ಅಪರಾಧಿಗಳನ್ನು ಶಿಕ್ಷಿಸದೆ ಬಿಡುವುದಿಲ್ಲ; ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಮಾರುಗಳವರೆಗೆ ಬರಮಾಡುವವನು ಆಗಿದ್ದಾನೆ” ಎಂಬುದೇ.
1 ಯೋಹಾ 1:5ನಾವು ಆತನಿಂದ ಕೇಳಿ ನಿಮಗೆ ತಿಳಿಸುತ್ತಿರುವ ಸಂದೇಶ ಯಾವುದೆಂದರೆ; ದೇವರು ಬೆಳಕಾಗಿದ್ದಾನೆ; ಮತ್ತು ಆತನಲ್ಲಿ ಸ್ವಲ್ಪವೂ ಕತ್ತಲೆಯಿಲ್ಲ ಎಂಬುದೇ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು