Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › 1 ಪೇತ್ರನು 2:16

ಬೈಬಲ್ ವಚನ · IRV

1 ಪೇತ್ರನು 2:16

ಸ್ವತಂತ್ರರಂತೆ ನಡೆದುಕೊಳ್ಳಿರಿ, ಆದರೆ ಕೆಟ್ಟತನವನ್ನು ಮರೆಮಾಡುವುದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಬಳಸಿಕೊಳ್ಳಬೇಡಿರಿ, ಆದರೆ ನೀವು ದೇವರ ದಾಸರಂತೆ ನಡೆದುಕೊಳ್ಳಿರಿ.

ಇಡೀ ಅಧ್ಯಾಯ ಓದಿ: 1 ಪೇತ್ರನು 2

ಸಂದರ್ಭದಲ್ಲಿ

13ಮನುಷ್ಯರು ನೇಮಿಸಿರುವ ಪ್ರತಿಯೊಂದು ಅಧಿಕಾರಕ್ಕೂ ಕರ್ತನ ನಿಮಿತ್ತ ನೀವು ಅಧೀನರಾಗಿರಿ. ಸರ್ವಾಧಿಕಾರಿಯಾಗಿರುವ ಅರಸನಿಗಾಗಲಿ

14ಅಥವಾ ಅರಸನಿಂದ ಕೆಟ್ಟ ನಡತೆಯುಳ್ಳವರನ್ನು ದಂಡಿಸುವುದಕ್ಕೂ ಒಳ್ಳೆ ನಡತೆಯುಳ್ಳವರನ್ನು ಪ್ರೋತ್ಸಾಹಪಡಿಸುವುದಕ್ಕೂ ಕಳುಹಿಸಲ್ಪಟ್ಟಂಥ ಅಧಿಪತಿಗಳಿಗಾಗಲಿ ನೀವು ಅಧೀನರಾಗಿರಿ.

15ತಿಳಿವಳಿಕೆಯಿಲ್ಲದೆ ಮಾತನಾಡುವ ಮೂಢ ಜನರ ಬಾಯನ್ನು ನೀವು ಒಳ್ಳೆ ನಡತೆಯಿಂದ ಮುಚ್ಚಿಸಬೇಕೆಂಬುದು ದೇವರ ಚಿತ್ತ.

16ಸ್ವತಂತ್ರರಂತೆ ನಡೆದುಕೊಳ್ಳಿರಿ, ಆದರೆ ಕೆಟ್ಟತನವನ್ನು ಮರೆಮಾಡುವುದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಬಳಸಿಕೊಳ್ಳಬೇಡಿರಿ, ಆದರೆ ನೀವು ದೇವರ ದಾಸರಂತೆ ನಡೆದುಕೊಳ್ಳಿರಿ.

17ಎಲ್ಲರನ್ನೂ ಸನ್ಮಾನಿಸಿರಿ. ಸಹೋದರರನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ. ಅರಸನನ್ನು ಗೌರವಿಸಿರಿ.

18ಸೇವಕರೇ, ನಿಮ್ಮ ಯಜಮಾನರಿಗೆ ಪೂರ್ಣ ಗೌರವದಿಂದ ಅಧೀನರಾಗಿರಿ. ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯರಾಗಿರಿ.

19ಒಬ್ಬನು ಅನ್ಯಾಯವಾಗಿ ಬಾಧೆಪಡುವವನಾಗಿದ್ದು ದೇವರು ನೋಡುತ್ತಾನೆಂದು ಅರಿತು ಆ ಕಷ್ಟವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ.

1 ಪೇತ್ರನು 2

ಇಂಗ್ಲಿಷ್‌ನಲ್ಲಿ

Berean Standard Bible1 Peter 2:16Live in freedom, but do not use your freedom as a cover-up for evil; live as servants of God.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಗಲಾ 5:13ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ದೇವರು ನಿಮ್ಮನ್ನು ಕರೆದನು. ಆದರೆ ನಿಮಗಿರುವ ಸ್ವಾತಂತ್ರ್ಯವನ್ನು ಶರೀರಾಧೀನ ಸ್ವಭಾವಕ್ಕೆ ಆಸ್ಪದವಾಗಿ ಬಳಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.
ರೋಮಾ 6:22ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ.
1 ಕೊರಿ 7:22ಯಾವನಾದರೂ ದಾಸನಾಗಿದ್ದು ಕರ್ತನಿಂದ ಕರೆಯಲ್ಪಟ್ಟಿರುವನೋ ಅವನು ಕರ್ತನ ಮೂಲಕ ಬಿಡುಗಡೆ ಹೊಂದಿರುವ ಸ್ವತಂತ್ರನಾಗಿದ್ದಾನೆ. ಅದೇ ಪ್ರಕಾರ ಯಾವನು ಸ್ವತಂತ್ರನಾಗಿದ್ದಾಗ ಕರೆಯಲ್ಪಟ್ಟಿರುವನೋ ಅವನು ಕ್ರಿಸ್ತನಿಗೆ ದಾಸನು.
ರೋಮಾ 6:18ಪಾಪದಿಂದ ಬಿಡುಗಡೆಯನ್ನು ಹೊಂದಿ ನೀತಿಗೆ ದಾಸರಾದ್ದರಿಂದಲೂ ದೇವರಿಗೆ ಸ್ತೋತ್ರವಾಗಲಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು