ಮುಖಪುಟ › ಜನಪ್ರಿಯ ಬೈಬಲ್ ವಚನಗಳು › 1 ಪೇತ್ರನು 3:15
ಬೈಬಲ್ ವಚನ · IRV
1 ಪೇತ್ರನು 3:15
ಆದರೆ ಕ್ರಿಸ್ತನನ್ನು ಕರ್ತನೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೆನೆಂದು ಕೇಳುವವರೆಲ್ಲರಿಗೂ ಉತ್ತರ ಹೇಳುವುದಕ್ಕೆ ಯಾವಾಗಲೂ ಸಿದ್ಧರಾಗಿರಿ. ಆದರೆ ಅದನ್ನು ಸಾತ್ವಿಕತ್ವದಿಂದಲೂ ಮತ್ತು ಗೌರವದಿಂದಲೂ ಹೇಳಿರಿ.
ಸಂದರ್ಭದಲ್ಲಿ
12ಏಕೆಂದರೆ ಕರ್ತನು ನೀತಿವಂತರನ್ನು ಕಟಾಕ್ಷಿಸುತ್ತಾನೆ ಮತ್ತು ಆತನು ಅವರ ವಿಜ್ಞಾಪನೆಗಳಿಗೆ ಕಿವಿಗೊಡುತ್ತಾನೆ. ಆದರೆ ಕೆಡುಕರಿಗೋ ಕರ್ತನು ವಿಮುಖನಾಗಿರುತ್ತಾನೆ.”
13ನೀವು ಒಳ್ಳೆಯದನ್ನೇ ಮಾಡುವುದರಲ್ಲಿ ಆಸಕ್ತರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ?
14ಒಂದು ವೇಳೆ ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ನೀವು ಧನ್ಯರೇ. ಅವರ ಬೆದರಿಕೆಗೆ ಹೆದರಬೇಡಿರಿ, ಕಳವಳಪಡಬೇಡಿರಿ.
15ಆದರೆ ಕ್ರಿಸ್ತನನ್ನು ಕರ್ತನೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೆನೆಂದು ಕೇಳುವವರೆಲ್ಲರಿಗೂ ಉತ್ತರ ಹೇಳುವುದಕ್ಕೆ ಯಾವಾಗಲೂ ಸಿದ್ಧರಾಗಿರಿ. ಆದರೆ ಅದನ್ನು ಸಾತ್ವಿಕತ್ವದಿಂದಲೂ ಮತ್ತು ಗೌರವದಿಂದಲೂ ಹೇಳಿರಿ.
16ಒಳ್ಳೆಯ ಮನಸ್ಸಾಕ್ಷಿಯುಳ್ಳವರಾಗಿರಿ ಆಗ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೆಯ ನಡತೆಯನ್ನು ಕುರಿತು ಕೆಟ್ಟಮಾತುಗಳನ್ನಾಡುವವರು ನಿಮ್ಮನ್ನು ನಿಂದಿಸುವುದಕ್ಕೆ ನಾಚಿಕೆಪಡುವರು.
17ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವುದಕ್ಕಿಂತಲೂ ಒಳ್ಳೆ ನಡತೆಯುಳ್ಳವರಾಗಿಯೇ ದೇವರ ಚಿತ್ತದ ಪ್ರಕಾರ ಬಾಧೆಪಡುವುದು ಉತ್ತಮ.
18ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.
ಇಂಗ್ಲಿಷ್ನಲ್ಲಿ
But in your hearts sanctify Christ as Lord. Always be prepared to give a defense to everyone who asks you the reason for the hope that is in you. But respond with gentleness and respect,ಹಳೆಯ ಒಡಂಬಡಿಕೆಯಿಂದ ಉಲ್ಲೇಖ
“ಇವರು ಯಾವುದನ್ನು ಒಪ್ಪಂದವೆನ್ನುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ; ಇವರು ಯಾವುದಕ್ಕೆ ಹೆದರುತ್ತಾರೋ ನೀವು ಅದಕ್ಕೆ ಹೆದರಬೇಡಿರಿ, ನಡುಗಬೇಡಿರಿ. ಸೇನಾಧೀಶ್ವರನಾದ ಯೆಹೋವನನ್ನೇ ಪ್ರತಿಷ್ಠೆಪಡಿಸಿರಿ; ಆತನಿಗೆ ಹೆದರಿಕೊಳ್ಳಿರಿ, ನಡುಗಿರಿ.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ನಿಮ್ಮ ಸಂಭಾಷಣೆಯು ಯಾವಾಗಲೂ ಕೃಪೆಯುಳ್ಳದ್ದಾಗಿಯೂ, ಉಪ್ಪಿನಂತೆ ರುಚಿಕರವಾಗಿಯೂ ಇರಲಿ. ಹೀಗೆ ನೀವು ಪ್ರತಿಯೊಬ್ಬರಿಗೂ ಯಾವಾವ ರೀತಿಯಲ್ಲಿ ಉತ್ತರಹೇಳಬೇಕು ಎಂಬುದನ್ನು ತಿಳಿದುಕೊಳ್ಳುವಿರಿ.ಎದುರಿಸುವವರನ್ನು ಸೌಮ್ಯತೆಯಿಂದ ತಿದ್ದುವವನೂ ಆಗಿರಬೇಕು. ಬಹುಶಃ ದೇವರು ಆ ಎದುರಿಸುವವರ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿ ಸತ್ಯದ ಜ್ಞಾನವನ್ನು ಅವರಿಗೆ ಕೊಟ್ಟಾನು. ಸೈತಾನನ ಬಲೆಗೆ ಬಿದ್ದವರಾದ ಇವರು ಒಂದು ವೇಳೆ ತಪ್ಪಿಸಿಕೊಂಡು ದೇವರ ಚಿತ್ತವನ್ನು ಅನುಸರಿಸುವುದಕ್ಕೆ ಶಕ್ತರಾದಾರು.ಆದುದರಿಂದ ಏನು ಉತ್ತರ ಕೊಡಬೇಕೆಂಬ ವಿಷಯದಲ್ಲಿ ನೀವು ಮುಂದಾಗಿ ಯೋಚಿಸುವುದಿಲ್ಲವೆಂದು ನಿಮ್ಮ ಮನಸ್ಸಿನಲ್ಲಿ ನಿಶ್ಚಯಮಾಡಿಕೊಳ್ಳಿರಿ. ಏಕೆಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತನಾಡುವುದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದೆಯೂ ಅರಸುಗಳ ಮುಂದೆಯೂ ಕರೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವಿರಿ. ಆದರೆ ಅವರು ನಿಮ್ಮನ್ನು ಒಪ್ಪಿಸಿಕೊಡುವಾಗ ಏನು ಮಾತನಾಡಬೇಕು ಎಂದು ಚಿಂತೆಮಾಡಬೇಡಿರಿ; ಆಡತಕ್ಕ ಮಾತು ಆ ಸಮಯದಲ್ಲಿ ನಿಮಗೆ ಗೋಚರವಾಗುವುದು. ಮಾತನಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮನೇ ನಿಮ್ಮ ಮುಖಾಂತರವಾಗಿ ಮಾತನಾಡುವನು.ಆದುದರಿಂದ ಕ್ರಿಸ್ತನ ವಿಷಯವಾದ ಪ್ರಾಥಮಿಕ ಉಪದೇಶವನ್ನು ಬಿಟ್ಟು, ನಿರ್ಜೀವ ಕ್ರಿಯೆಗಳಿಂದ ಮಾನಸಾಂತರವೂ, ದೇವರಲ್ಲಿ ನಂಬಿಕೆಯೂ, ದೀಕ್ಷಾಸ್ನಾನಗಳ ಬೋಧನೆಯೂ, ಹಸ್ತಾರ್ಪಣೆಯೂ, ಸತ್ತವರಿಗೆ ಪುನರುತ್ಥಾನವೂ ಮತ್ತು ನಿತ್ಯವಾದ ನ್ಯಾಯತೀರ್ಪೂ ಉಂಟೆಂಬುದರ ಕುರಿತು ಪದೇಪದೇ ಅಸ್ತಿವಾರವನ್ನೆ ಹಾಕುತಿರದೆ ನಾವು ಪರಿಪಕ್ವತೆಯೆಡೆಗೆ ಸಾಗೋಣ.ನಿನ್ನ ಕಟ್ಟಳೆಗಳ ವಿಷಯವಾಗಿ, ಅರಸುಗಳ ಮುಂದೆಯೂ ಮಾತನಾಡುವೆನು, ನಾಚಿಕೆಪಡುವುದಿಲ್ಲ.ತಂದೆಯಾದ ದೇವರಿಂದ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನಿಂದ ನಿನಗೆ ಕೃಪೆ, ಕರುಣೆ ಮತ್ತು ಶಾಂತಿ ದೊರಕಲಿ.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು