ಮುಖಪುಟ › ಜನಪ್ರಿಯ ಬೈಬಲ್ ವಚನಗಳು › 1 ಪೇತ್ರನು 3:3–4
ಬೈಬಲ್ ವಚನ · IRV
1 ಪೇತ್ರನು 3:3–4
3ಜಡೆ ಹೆಣೆದುಕೊಳ್ಳುವುದೂ, ಚಿನ್ನದ ಒಡವೆಗಳನ್ನು ಹಾಕಿಕೊಳ್ಳುವುದೂ, ಬೆಲೆಬಾಳುವ ವಸ್ತ್ರಗಳನ್ನು ಧರಿಸಿಕೊಳ್ಳುವುದೂ ಈ ಮೊದಲಾದ ಹೊರಗಣ ಶೃಂಗಾರವೇ ನಿಮ್ಮ ಅಲಂಕಾರವಾಗಿರಬಾರದು.
4ಆದರೆ ದೇವರ ದೃಷ್ಟಿಯಲ್ಲಿ ಅಮೂಲ್ಯವಾದದ್ದೂ ಮತ್ತು ಶಾಶ್ವತವಾದದ್ದೂ ಆಗಿರುವ ಸಾತ್ವಿಕತೆ ಮತ್ತು ಶಾಂತಮನಸ್ಸು ಎಂಬ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ.
ಸಂದರ್ಭದಲ್ಲಿ
1ಅದೇ ರೀತಿಯಾಗಿ ಪತ್ನಿಯರೇ, ನಿಮ್ಮ ಪತಿಯರಿಗೆ ಅಧೀನರಾಗಿರಿ. ಅವರಲ್ಲಿ ಕೆಲವರು ದೇವರ ವಾಕ್ಯಕ್ಕೆ ಅವಿಧೇಯರಾಗಿದ್ದರೂ ನೀವು ನಿರ್ಮಲರಾಗಿಯೂ, ಗೌರವದಿಂದಲೂ ನಡೆದುಕೊಳ್ಳುವುದನ್ನು ಅವರು ನೋಡಿ ವಾಕ್ಯೋಪದೇಶವಿಲ್ಲದೆ ತಮ್ಮ ಪತ್ನಿಯರಾದ ನಿಮ್ಮ ಒಳ್ಳೆಯ ನಡತೆಗಳಿಂದಲೇ ಸನ್ಮಾರ್ಗಕ್ಕೆ ಬಂದಾರು.
3ಜಡೆ ಹೆಣೆದುಕೊಳ್ಳುವುದೂ, ಚಿನ್ನದ ಒಡವೆಗಳನ್ನು ಹಾಕಿಕೊಳ್ಳುವುದೂ, ಬೆಲೆಬಾಳುವ ವಸ್ತ್ರಗಳನ್ನು ಧರಿಸಿಕೊಳ್ಳುವುದೂ ಈ ಮೊದಲಾದ ಹೊರಗಣ ಶೃಂಗಾರವೇ ನಿಮ್ಮ ಅಲಂಕಾರವಾಗಿರಬಾರದು.
4ಆದರೆ ದೇವರ ದೃಷ್ಟಿಯಲ್ಲಿ ಅಮೂಲ್ಯವಾದದ್ದೂ ಮತ್ತು ಶಾಶ್ವತವಾದದ್ದೂ ಆಗಿರುವ ಸಾತ್ವಿಕತೆ ಮತ್ತು ಶಾಂತಮನಸ್ಸು ಎಂಬ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ.
5ಪೂರ್ವ ಕಾಲದಲ್ಲಿ ದೇವರ ಮೇಲೆ ನಿರೀಕ್ಷೆಯನ್ನಿಟ್ಟಿದ್ದ ಭಕ್ತೆಯರಾದ ಸ್ತ್ರೀಯರೂ ಸಹ ಹೀಗೆಯೇ ತಮ್ಮನ್ನು ಅಲಂಕರಿಸಿಕೊಂಡಿದ್ದರು. ಅವರು ತಮ್ಮ ತಮ್ಮ ಗಂಡಂದಿರಿಗೆ ಅಧೀನರಾಗಿದ್ದರು.
6ಸಾರಳು ಹಾಗೆಯೇ ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು ಯಜಮಾನ ಎಂದು ಕರೆದಳು. ನೀವು ಒಳ್ಳೆಯದನ್ನು ಮಾಡುತ್ತಾ ಯಾವ ಭೀತಿಗೂ ಭಯಪಡುವುದಿಲ್ಲವಾದರೆ ನೀವು ಆಕೆಯ ಕುವರಿಯರೇ ಆಗುವಿರಿ.
7ಅದೇ ರೀತಿಯಾಗಿ ಪತಿಯರೇ, ಸ್ತ್ರೀಯು ನಿಮ್ಮಗಿಂತ ಬಲಹೀನಳೆಂಬುದನ್ನು ತಿಳಿದುಕೊಂಡು, ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ನಡೆದುಕೊಳ್ಳಿರಿ, ಅವರು ನಿತ್ಯಜೀವ ವರಕ್ಕೆ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಗೌರವವನ್ನು ಸಲ್ಲಿಸಿರಿ. ಹೀಗೆ ಮಾಡಿದರೆ ನಿಮ್ಮ ಪ್ರಾರ್ಥನೆಗಳಿಗೆ ಅಡಚಣೆ ಉಂಟಾಗುವುದಿಲ್ಲ.
ಇಂಗ್ಲಿಷ್ನಲ್ಲಿ
Your beauty should not come from outward adornment, such as braided hair or gold jewelry or fine clothes, but from the inner disposition of your heart, the unfading beauty of a gentle and quiet spirit, which is precious in God’s sight.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಹೀಗಿರಲಾಗಿ ದೇವರಿಂದ ಆರಿಸಿಕೊಂಡವರಾಗಿ, ಪರಿಶುದ್ಧರೂ ಹಾಗೂ ಪ್ರಿಯರೂ ಆಗಿರುವುದರಿಂದ ಕನಿಕರ, ದಯೆ, ದೀನತೆ, ಸಾತ್ವಿಕತ್ವ ಮತ್ತು ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.ಹಾಗೆಯೇ ಸ್ತ್ರೀಯರು ಮಾನಸ್ಥೆಯರಾಗಿಯೂ, ಸಭ್ಯತೆಯುಳ್ಳವರಾಗಿಯೂ ಇದ್ದು, ಗೌರವಕ್ಕೆ ತಕ್ಕ ಉಡುಪನ್ನೂ ಧರಿಸಿಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆಯನ್ನು ಹೆಣೆಯುವುದು, ಚಿನ್ನ, ಮುತ್ತು, ಬೆಲೆಯುಳ್ಳ ವಸ್ತ್ರ ಮುಂತಾದವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ ದೇವಭಕ್ತೆಯರೆನಿಸಿಕೊಳ್ಳುವ ಸ್ತ್ರೀಯರಿಗೆ ಯುಕ್ತವಾಗಿರುವ ಪ್ರಕಾರ ಸತ್ಕ್ರಿಯೆಗಳಿಂದಲೇ ಅಲಂಕರಿಸಿಕೊಳ್ಳಬೇಕು.ಆದರೆ ಯೆಹೋವನು ಸಮುವೇಲನಿಗೆ, “ನೀನು ಅವನ ಸೌಂದರ್ಯವನ್ನೂ, ಎತ್ತರವನ್ನೂ ನೋಡಬೇಡ; ನಾನು ಅವನನ್ನು ನಿರಾಕರಿಸಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯದ ಮತ್ತು ಅಂತರಂಗದ ಸೌಂದರ್ಯ ನೋಡುವವನಾಗಿದ್ದಾನೆ” ಅಂದನು.ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು.ಆದರೆ ಆಂತರಿಕವಾಗಿ ಯೆಹೂದ್ಯನಾಗಿರುವವನೇ ಯೆಹೂದ್ಯನು; ಮತ್ತು ಸುನ್ನತಿಯನ್ನು ಹೃದಯದಲ್ಲಿ ಹೊಂದಿರುವವನೇ ಸುನ್ನತಿಯುಳ್ಳವನು. ಇದು ಬಾಹ್ಯಾಚಾರಕ್ಕೆ ಸಂಬಂಧಪಟ್ಟದ್ದಲ್ಲ, ಆತ್ಮಸಂಬಂಧಪಟ್ಟದ್ದೇ; ಇಂಥ ಮನುಷ್ಯನಿಗೆ ಬರುವ ಪ್ರಶಂಸೆಯು, ದೇವರಿಂದಲೇ ಹೊರತು ಮನುಷ್ಯರಿಂದ ಬರುವುದಿಲ್ಲ.ಯಾರನ್ನೂ ದೂಷಿಸದೆ, ಕುತರ್ಕ ಮಾಡದೆ ಎಲ್ಲಾ ಜನರಿಗೂ ಪೂರ್ಣಸದ್ಗುಣವನ್ನು ತೋರಿಸುತ್ತಾ ಸಾತ್ವಿಕರಾಗಿರಬೇಕೆಂತಲೂ, ಅವರಿಗೆ ನೆನಪಿಸು.ಕುರುಡನಾದ ಫರಿಸಾಯನೇ, ಮೊದಲು ಪಾತ್ರೆ ಬಟ್ಟಲುಗಳ ಒಳಭಾಗವನ್ನು ಶುಚಿಮಾಡು, ಆಗ ಅವುಗಳ ಹೊರಭಾಗವೂ ಶುಚಿಯಾಗುವುದು.ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು