Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › 1 ಪೇತ್ರನು 3:7

ಬೈಬಲ್ ವಚನ · IRV

1 ಪೇತ್ರನು 3:7

ಅದೇ ರೀತಿಯಾಗಿ ಪತಿಯರೇ, ಸ್ತ್ರೀಯು ನಿಮ್ಮಗಿಂತ ಬಲಹೀನಳೆಂಬುದನ್ನು ತಿಳಿದುಕೊಂಡು, ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ನಡೆದುಕೊಳ್ಳಿರಿ, ಅವರು ನಿತ್ಯಜೀವ ವರಕ್ಕೆ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಗೌರವವನ್ನು ಸಲ್ಲಿಸಿರಿ. ಹೀಗೆ ಮಾಡಿದರೆ ನಿಮ್ಮ ಪ್ರಾರ್ಥನೆಗಳಿಗೆ ಅಡಚಣೆ ಉಂಟಾಗುವುದಿಲ್ಲ.

ಇಡೀ ಅಧ್ಯಾಯ ಓದಿ: 1 ಪೇತ್ರನು 3

ಸಂದರ್ಭದಲ್ಲಿ

4ಆದರೆ ದೇವರ ದೃಷ್ಟಿಯಲ್ಲಿ ಅಮೂಲ್ಯವಾದದ್ದೂ ಮತ್ತು ಶಾಶ್ವತವಾದದ್ದೂ ಆಗಿರುವ ಸಾತ್ವಿಕತೆ ಮತ್ತು ಶಾಂತಮನಸ್ಸು ಎಂಬ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ.

5ಪೂರ್ವ ಕಾಲದಲ್ಲಿ ದೇವರ ಮೇಲೆ ನಿರೀಕ್ಷೆಯನ್ನಿಟ್ಟಿದ್ದ ಭಕ್ತೆಯರಾದ ಸ್ತ್ರೀಯರೂ ಸಹ ಹೀಗೆಯೇ ತಮ್ಮನ್ನು ಅಲಂಕರಿಸಿಕೊಂಡಿದ್ದರು. ಅವರು ತಮ್ಮ ತಮ್ಮ ಗಂಡಂದಿರಿಗೆ ಅಧೀನರಾಗಿದ್ದರು.

6ಸಾರಳು ಹಾಗೆಯೇ ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು ಯಜಮಾನ ಎಂದು ಕರೆದಳು. ನೀವು ಒಳ್ಳೆಯದನ್ನು ಮಾಡುತ್ತಾ ಯಾವ ಭೀತಿಗೂ ಭಯಪಡುವುದಿಲ್ಲವಾದರೆ ನೀವು ಆಕೆಯ ಕುವರಿಯರೇ ಆಗುವಿರಿ.

7ಅದೇ ರೀತಿಯಾಗಿ ಪತಿಯರೇ, ಸ್ತ್ರೀಯು ನಿಮ್ಮಗಿಂತ ಬಲಹೀನಳೆಂಬುದನ್ನು ತಿಳಿದುಕೊಂಡು, ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ನಡೆದುಕೊಳ್ಳಿರಿ, ಅವರು ನಿತ್ಯಜೀವ ವರಕ್ಕೆ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಗೌರವವನ್ನು ಸಲ್ಲಿಸಿರಿ. ಹೀಗೆ ಮಾಡಿದರೆ ನಿಮ್ಮ ಪ್ರಾರ್ಥನೆಗಳಿಗೆ ಅಡಚಣೆ ಉಂಟಾಗುವುದಿಲ್ಲ.

8ಕಡೆಗೆ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ, ಪರಸ್ಪರ ಅನುಕಂಪವುಳ್ಳವರಾಗಿರಿ, ಅಣ್ಣತಮ್ಮಂದಿರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ, ಕರುಣೆಯೂ, ದೀನಭಾವವೂ ಉಳ್ಳವರಾಗಿರಿ.

9ಅಪಕಾರಕ್ಕೆ ಅಪಕಾರವನ್ನು, ನಿಂದೆಗೆ ನಿಂದೆಯನ್ನು ಮಾಡದೇ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದಿದ್ದಾನಲ್ಲಾ. ಹೀಗೆ ಮಾಡುವುದಾದರೆ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರಿ.

10ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ, “ಜೀವವನ್ನು ಬಯಸುತ್ತಾ ಸುದಿನಗಳನ್ನು ನೋಡುವುದಕ್ಕೆ ಕಾದಿರುವಾತನು ಕೆಟ್ಟದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನು ವಂಚನೆಯ ಮಾತುಗಳನ್ನಾಡದಂತೆ ತುಟಿಗಳನ್ನು ಬಿಗಿಹಿಡಿದುಕೊಳ್ಳಲಿ.

1 ಪೇತ್ರನು 3

ಇಂಗ್ಲಿಷ್‌ನಲ್ಲಿ

Berean Standard Bible1 Peter 3:7Husbands, in the same way, treat your wives with consideration as a delicate vessel, and with honor as fellow heirs of the gracious gift of life, so that your prayers will not be hindered.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಕೊಲೊ 3:19ಗಂಡಂದಿರೇ, ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಅವರೊಂದಿಗೆ ಕಠಿಣವಾಗಿ ವರ್ತಿಸಬೇಡಿರಿ.
ಆದಿ 2:23–24“ಈಗ ಸರಿ, ಈಕೆಯು ನನ್ನ ಎಲುಬುಗಳಿಂದ ಬಂದ ಎಲುಬು, ನನ್ನ ಮಾಂಸದಿಂದ ಬಂದ ಮಾಂಸವೂ ಆಗಿದ್ದಾಳೆ. ಈಕೆಯು ಮನುಷ್ಯನಿಂದ ಉತ್ಪತ್ತಿಯಾದ ಕಾರಣ ನಾರೀ ಎನ್ನಿಸಿಕೊಳ್ಳುವಳು” ಅಂದನು. ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು.
ಎಫೆ 5:25–28ಪತಿಯರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ. ಆತನು ಅದನ್ನು ಪಾವನಗೊಳಿಸುವುದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು. ಅದನ್ನು ಕಳಂಕ ಸುಕ್ಕು ಮುಂತಾದದ್ದೊಂದೂ ಇಲ್ಲದಂತೆ ಪರಿಶುದ್ಧವೂ, ನಿರ್ದೋಷವೂ, ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು ವಾಕ್ಯೋಪದೇಶ ಸಹಿತವಾದ ಜಲಸ್ನಾನವನ್ನು ಮಾಡಿಸಿ ಶುದ್ಧಿಮಾಡಿದನು. ಹಾಗೆಯೇ ಗಂಡದಿರು ಸಹ ತಮ್ಮ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸಿಕೊಳ್ಳುವವನಾಗಿದ್ದಾನೆ.
1 ಕೊರಿ 7:3ಗಂಡನು ಹೆಂಡತಿಗೆ, ಹಾಗೆಯೇ ಹೆಂಡತಿಯು ಗಂಡನಿಗೆ ಒಗೆತನವನ್ನು ಸಲ್ಲಿಸಲಿ
ಎಫೆ 5:33ಆದರೆ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. ಪ್ರತಿ ಹೆಂಡತಿಯೂ ತನ್ನ ಗಂಡನಿಗೆ ಗೌರವದಿಂದ ನಡೆದುಕೊಳ್ಳಬೇಕು.
ಮಲಾ 2:14–16“ಇದಕ್ಕೆ ಕಾರಣವೇನೆಂದು ಕೇಳುತ್ತೀರೋ? ನಿನಗೂ, ನಿನ್ನ ಯೌವನ ಪ್ರಾಯದ ಹೆಂಡತಿಗೂ ಆದ ಒಡಂಬಡಿಕೆಗೆ ಯೆಹೋವನೇ ಸಾಕ್ಷಿಯಾಗಿದ್ದಾನಲ್ಲಾ, ನಿನ್ನ ಸಹಚರಿಣಿಯೂ, ನಿನ್ನ ಒಡಂಬಡಿಕೆಯ ಪತ್ನಿಯಾದ ಆಕೆಗೆ ದ್ರೋಹಮಾಡಿದ್ದೀ. ದೇವರು ನಿನ್ನ ಮತ್ತು ನಿನ್ನ ಪತ್ನಿಯ ತನುಮನಗಳನ್ನು ಒಂದು ಮಾಡಿ ಒಡಂಬಡಿಸಲಿಲ್ಲವೇ? ದೇವರ ಉದ್ದೇಶವೇನು? ದೇವರ ಮಕ್ಕಳಾಗಿ ಬಾಳುವ ಸಂತಾನ ದಯಪಾಲಿಸುವ ಉದ್ದೇಶ ಆತನದಾಗಿತ್ತು. ಆದುದರಿಂದ ಮದುವೆಯಾದ ಪತ್ನಿಗೆ ದ್ರೋಹಮಾಡದೆ ಪ್ರತಿಯೊಬ್ಬನೂ ಎಚ್ಚರಿಕೆಯಿಂದಿರಲಿ.” ಇಸ್ರಾಯೇಲಿನ ದೇವರಾದ ಯೆಹೋವನು ಇಂತೆನ್ನುತ್ತಾನೆ, “ನಾನು ಪತ್ನಿತ್ಯಾಗವನ್ನೂ, ಹೆಂಡತಿಗೆ ಅನ್ಯಾಯ ಮಾಡುವವನನ್ನೂ ಹಗೆಮಾಡುತ್ತೇನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ಆದಕಾರಣ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ, ದ್ರೋಹಮಾಡಬೇಡಿರಿ.”

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು