ಮುಖಪುಟ › ಜನಪ್ರಿಯ ಬೈಬಲ್ ವಚನಗಳು › 1 ಪೇತ್ರನು 4:10
ಬೈಬಲ್ ವಚನ · IRV
1 ಪೇತ್ರನು 4:10
ನೀವೆಲ್ಲರು ದೇವರ ವಿವಿಧ ವರಗಳ ವಿಷಯದಲ್ಲಿ ಒಳ್ಳೆಯ ನಿರ್ವಾಹಕರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ಕೃಪಾವರವನ್ನು ಎಲ್ಲರ ಸೇವೆಗಾಗಿ ಉಪಯೋಗಿಸಕೊಳ್ಳಲಿ.
ಸಂದರ್ಭದಲ್ಲಿ
7ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಜಿತೇಂದ್ರಿಯರಾಗಿಯೂ ಯಾವಾಗಲೂ ಪ್ರಾರ್ಥನೆಗೆ ಸಿದ್ಧವಾಗಿರುವಂತೆ ಸ್ವಸ್ಥಚಿತ್ತರಾಗಿಯೂ ಇರಿ.
8ಮೊಟ್ಟಮೊದಲು ನಿಮ್ಮ ನಿಮ್ಮೊಳಗೆ ಪ್ರಾಮಾಣಿಕವಾದ ಪ್ರೀತಿಯಿರಲಿ. ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ.
9ಗುಣಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ.
10ನೀವೆಲ್ಲರು ದೇವರ ವಿವಿಧ ವರಗಳ ವಿಷಯದಲ್ಲಿ ಒಳ್ಳೆಯ ನಿರ್ವಾಹಕರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ಕೃಪಾವರವನ್ನು ಎಲ್ಲರ ಸೇವೆಗಾಗಿ ಉಪಯೋಗಿಸಕೊಳ್ಳಲಿ.
11ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವುದು. ಯೇಸು ಕ್ರಿಸ್ತನಿಗೆ ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್.
12ಪ್ರಿಯರೇ, ನಿಮ್ಮನ್ನು ಪರಿಶೋಧಿಸುವುದಕ್ಕಾಗಿ ಅಗ್ನಿ ಪರೀಕ್ಷೆ ಬರುವಾಗ ನೀವು ಆಶ್ಚರ್ಯಪಡಬೇಡಿರಿ. ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ.
13ಆದರೆ ನೀವು ಎಷ್ಟರ ಮಟ್ಟಿಗೆ ಕ್ರಿಸ್ತನ ಬಾಧೆಗಳಲ್ಲಿ ಪಾಲುಗಾರರಾಗಿದ್ದೀರೋ ಅಷ್ಟರ ಮಟ್ಟಿಗೆ ಸಂತೋಷಪಡಿರಿ. ಆದ್ದರಿಂದ ಆತನ ಮಹಿಮೆಯ ಪ್ರತ್ಯಕ್ಷತೆಯಲ್ಲಿಯೂ ನೀವು ಸಂತೋಷಪಟ್ಟು ಉಲ್ಲಾಸಗೊಳ್ಳುವಿರಿ
ಇಂಗ್ಲಿಷ್ನಲ್ಲಿ
As good stewards of the manifold grace of God, each of you should use whatever gift he has received to serve one another.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ದೇವರು ನಮಗೆ ಕೃಪೆಮಾಡಿದ ಪ್ರಕಾರ ನಾವು ಬೇರೆ ಬೇರೆ ವರಗಳನ್ನು ಹೊಂದಿದ್ದೇವೆ. ಹೊಂದಿದ ವರವು ಪ್ರವಾದನೆ ರೂಪವಾಗಿದ್ದರೆ, ನಮ್ಮ ನಂಬಿಕೆಗೆ ತಕ್ಕ ಹಾಗೆ ಪ್ರವಾದನೆ ಹೇಳೋಣ. ಅದು ಸಭಾಸೇವೆಯ ರೂಪವಾಗಿದ್ದರೆ ಪ್ರಾಮಾಣಿಕವಾಗಿ ಸಭಾಸೇವೆಯನ್ನು ಮಾಡುತ್ತಾ ಇರೋಣ. ಬೋಧಿಸುವವನು ಬೋಧಿಸುವುದರಲ್ಲಿಯೂ, ಬುದ್ಧಿಹೇಳುವವನು ಬುದ್ಧಿ ಹೇಳುವುದರಲ್ಲಿಯೂ ನಿರತನಾಗಿರಲಿ. ದಾನಕೊಡುವವನು ಯಥಾರ್ಥಮನಸ್ಸಿನಿಂದ ಕೊಡಲಿ. ದಾರಿ ತೋರಿಸುವವನು ಆಸಕ್ತಿಯಿಂದ ಅದನ್ನು ಮಾಡಲಿ. ಕಷ್ಟದಲ್ಲಿರುವವರಿಗೆ ಉಪಕಾರಮಾಡುವವನು ಸಂತೋಷವಾಗಿ ಮಾಡಲಿ.ಜನರು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಗುಪ್ತವಾಗಿದ್ದ ಸತ್ಯಾರ್ಥಗಳ ವಿಷಯದಲ್ಲಿ ದೇವರ ಮನೆವಾರ್ತೆಯವರೆಂತಲೂ ಪರಿಗಣಿಸಲಿ. ಹೀಗಿರಲು ನಿರ್ವಾಹಕರು ನಂಬಿಗಸ್ತರಾಗಿ ಕಂಡುಬರುವದು ಅಗತ್ಯವಲ್ಲವೇ.ಮನುಷ್ಯಕುಮಾರನು ಸಹ ಸೇವೆಮಾಡಿಸಿಕೊಳ್ಳುವುದಕ್ಕೆ ಬರಲಿಲ್ಲ, ಸೇವೆಮಾಡುವುದಕ್ಕೂ ಅನೇಕರನ್ನು ಬಿಡಿಸಿಕೊಳ್ಳುವುದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವುದಕ್ಕಾಗಿ ಬಂದನು” ಎಂದು ಹೇಳಿದನು.ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ.ಆದರೆ ನಾನು ಈಗ ಎಂಥವನಾಗಿದ್ದೇನೊ ಅದು ದೇವರ ಕೃಪೆಯಿಂದಲೇ ಮತ್ತು ಆತನ ಕೃಪೆಯು ನನ್ನಲ್ಲಿ ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ.ದೇವರು ನನಗೆ ಕೊಟ್ಟ ಕೃಪೆಯ ಪ್ರಕಾರ ನಾನು ಜಾಣ್ಮೆಯುಳ್ಳ ಪ್ರವೀಣನಾದ ಶಿಲ್ಪಿಯಂತೆ ಅಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಆದರೆ ತಾನು ಅದರ ಮೇಲೆ ಹೇಗೆ ಕಟ್ಟುತ್ತಿದ್ದೇನೆಂದು ಪ್ರತಿಯೊಬ್ಬನು ಎಚ್ಚರಿಕೆಯಿಂದಿರಬೇಕು.ಇದನ್ನು ಮಾಡುವುದಕ್ಕೆ ಇವರು ಇಷ್ಟಪಟ್ಟಿದ್ದಲ್ಲದೆ ಇವರು ಅವರ ಹಂಗಿನವರಾಗಿದ್ದಾರೆ. ಹೇಗೆಂದರೆ ಅನ್ಯಜನರು ಅವರ ಆತ್ಮ ಸಂಬಂಧವಾದ ಸಂಪತ್ತಿಗೆ ಪಾಲುಗಾರರಾದ ಮೇಲೆ ಲೋಕಸಂಬಂಧವಾದ ಕಾರ್ಯಗಳಲ್ಲಿ ಅವರಿಗೆ ಸೇವೆ ಮಾಡುವ ಹಂಗಿನಲ್ಲಿದ್ದಾರಲ್ಲವೇ.ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ, ಕೆಲವರನ್ನು ಪ್ರವಾದಿಗಳನ್ನಾಗಿಯೂ, ಕೆಲವರನ್ನು ಸುವಾರ್ತಿಕರನ್ನಾಗಿಯೂ, ಕೆಲವರನ್ನು ಸಭಾಪಾಲಕರನ್ನಾಗಿಯೂ, ಬೋಧಕರನ್ನಾಗಿಯೂ ನೇಮಿಸಿದನು.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು