Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › 1 ಪೇತ್ರನು 5:5

ಬೈಬಲ್ ವಚನ · IRV

1 ಪೇತ್ರನು 5:5

ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”

ಇಡೀ ಅಧ್ಯಾಯ ಓದಿ: 1 ಪೇತ್ರನು 5

ಸಂದರ್ಭದಲ್ಲಿ

2ನಿಮ್ಮ ಮೇಲ್ವಿಚಾರಣೆಯಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲವಂತದಿಂದಲ್ಲ ದೇವರ ಚಿತ್ತಾನುಸಾರ ಇಷ್ಟಪೂರ್ವಕವಾಗಿ, ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧ ಮನಸ್ಸಿನಿಂದಲೇ ಮೇಲ್ವಿಚಾರಣೆ ಮಾಡಿರಿ.

3ನಿಮ್ಮ ವಶಕ್ಕೆ ಒಪ್ಪಿಸಿಕೊಟ್ಟಿರುವವರ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.

4ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯ ಕಿರೀಟವನ್ನು ಹೊಂದುವಿರಿ.

5ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”

6ಹೀಗಿರುವುದರಿಂದ ದೇವರ ಬಲವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ. ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ಎತ್ತುವನು.

7ನಿಮ್ಮ ಚಿಂತಾಭಾರವನ್ನೆಲ್ಲಾ ಆತನ ಮೇಲೆ ಹಾಕಿರಿ ಆತನು ನಿಮಗೋಸ್ಕರ ಚಿಂತಿಸುತ್ತಾನೆ.

8ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ.

1 ಪೇತ್ರನು 5

ಇಂಗ್ಲಿಷ್‌ನಲ್ಲಿ

Berean Standard Bible1 Peter 5:5Young men, in the same way, submit yourselves to your elders. And all of you, clothe yourselves with humility toward one another, because, “God opposes the proud, but gives grace to the humble.”

ಹಳೆಯ ಒಡಂಬಡಿಕೆಯಿಂದ ಉಲ್ಲೇಖ

ಜ್ಞಾನೋ 3:34ಯಾರು ಧರ್ಮವನ್ನು ತಿರಸ್ಕರಿಸುವರೋ ಅವರನ್ನು ಆತನು ತಿರಸ್ಕರಿಸುವನು. ದೀನರಿಗಾದರೋ ತನ್ನ ಕೃಪೆಯನ್ನು ಅನುಗ್ರಹಿಸುವನು.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಯಾಕೋ 4:6ಆತನು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದುದರಿಂದ, “ದೇವರು ಅಹಂಕಾರಿಗಳಿಗೆ ಎದುರಾಳಿಯಾಗಿದ್ದಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ” ಎಂದು ಧರ್ಮಶಾಸ್ತ್ರವು ಹೇಳುತ್ತದೆ.
ಎಫೆ 5:21ಕ್ರಿಸ್ತನಿಗೆ ಭಯಪಡುವವರಾಗಿದ್ದು, ಒಬ್ಬರಿಗೊಬ್ಬರು ವಿನಯವುಳ್ಳವರಾಗಿ ನಡೆದುಕೊಳ್ಳಿರಿ.
ರೋಮಾ 12:10ಕ್ರೈಸ್ತ ಸಹೋದರರು ಅಣ್ಣ ತಮ್ಮಂದಿರೆಂದು ತಿಳಿದು ಒಬ್ಬರನ್ನೊಬ್ಬರು ಪ್ರೀತಿಸಿರಿ. ಗೌರವಮರ್ಯಾದೆಗಳನ್ನು ತೋರಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ.
ಕೊಲೊ 3:12ಹೀಗಿರಲಾಗಿ ದೇವರಿಂದ ಆರಿಸಿಕೊಂಡವರಾಗಿ, ಪರಿಶುದ್ಧರೂ ಹಾಗೂ ಪ್ರಿಯರೂ ಆಗಿರುವುದರಿಂದ ಕನಿಕರ, ದಯೆ, ದೀನತೆ, ಸಾತ್ವಿಕತ್ವ ಮತ್ತು ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.
ಫಿಲಿಪ್ಪಿ 2:3ಸ್ವಾರ್ಥದಿಂದಾಗಲಿ, ಒಣ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ, ಪ್ರತಿಯೊಬ್ಬನು ದೀನಭಾವದಿಂದ ಮತ್ತೊಬ್ಬರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.
ಯೆಶಾ 66:2ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ, ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.
ರೋಮಾ 13:14ದೇಹದ ಆಸೆಗಳನ್ನು ಪೂರೈಸುವುದಕ್ಕಾಗಿ ಚಿಂತಿಸದೇ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು