ಮುಖಪುಟ › ಜನಪ್ರಿಯ ಬೈಬಲ್ ವಚನಗಳು › 1 ಪೇತ್ರನು 5:7
ಬೈಬಲ್ ವಚನ · IRV
1 ಪೇತ್ರನು 5:7
ನಿಮ್ಮ ಚಿಂತಾಭಾರವನ್ನೆಲ್ಲಾ ಆತನ ಮೇಲೆ ಹಾಕಿರಿ ಆತನು ನಿಮಗೋಸ್ಕರ ಚಿಂತಿಸುತ್ತಾನೆ.
ಸಂದರ್ಭದಲ್ಲಿ
4ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯ ಕಿರೀಟವನ್ನು ಹೊಂದುವಿರಿ.
5ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”
6ಹೀಗಿರುವುದರಿಂದ ದೇವರ ಬಲವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ. ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ಎತ್ತುವನು.
7ನಿಮ್ಮ ಚಿಂತಾಭಾರವನ್ನೆಲ್ಲಾ ಆತನ ಮೇಲೆ ಹಾಕಿರಿ ಆತನು ನಿಮಗೋಸ್ಕರ ಚಿಂತಿಸುತ್ತಾನೆ.
8ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ.
9ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ. ಲೋಕದಲ್ಲಿರುವ ನಿಮ್ಮ ಸಹೋದರರೂ ಅಂಥ ಬಾಧೆಗಳನ್ನೇ ಅನುಭವಿಸುತ್ತಿದ್ದಾರೆಂಬುದು ನಿಮಗೆ ತಿಳಿದಿದೆ.
10ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.
ಇಂಗ್ಲಿಷ್ನಲ್ಲಿ
ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು; ಆತನು ನಿನ್ನನ್ನು ಉದ್ಧಾರಮಾಡುವನು. ನೀತಿವಂತನನ್ನು ಎಂದಿಗೂ ಕದಲಗೊಡಿಸನು.ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ.ನಿನ್ನ ಭೂಯಾತ್ರೆಯ ಚಿಂತೆಯನ್ನು ಯೆಹೋವನಿಗೆ ವಹಿಸಿಬಿಟ್ಟು ಭರವಸದಿಂದಿರು; ಆತನೇ ಅದನ್ನು ಸಾಗಿಸುವನು.ನನಗೆ ಹೆದರಿಕೆಯುಂಟಾದಾಗ ನಿನ್ನನ್ನೇ ಆಶ್ರಯಿಸಿಕೊಳ್ಳುವೆನು. ದೇವರ ವಾಗ್ದಾನಕ್ಕೋಸ್ಕರ ಆತನಲ್ಲಿಯೇ ಹೆಚ್ಚಳಪಡುವೆನು; ದೇವರನ್ನು ನಂಬಿ ನಿರ್ಭಯದಿಂದಿರುವೆನು. ನರಪ್ರಾಣಿಗಳು ನನಗೆ ಏನು ಮಾಡಾರು?“ಈ ಕಾರಣದಿಂದ, ನಮ್ಮ ಜೀವನಕ್ಕೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗಾಗಿ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದುದಲ್ಲವೇ. ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ; ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ತುಂಬಿಟ್ಟುಕೊಳ್ಳುವುದಿಲ್ಲ; ಆದಾಗ್ಯೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಸಾಕಿ ಸಲಹುತ್ತಾನೆ; ಅವುಗಳಿಗಿಂತ ನೀವು ಹೆಚ್ಚಿನವರಲ್ಲವೋ?ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು. ಆದುದರಿಂದ ನಾಳಿನ ವಿಷಯವಾಗಿ ಚಿಂತೆ ಮಾಡಬೇಡಿರಿ; ನಾಳಿನ ದಿನವು ತನ್ನದನ್ನು ತಾನೇ ಚಿಂತಿಸಿಕೊಳ್ಳುವುದು. ಆ ಹೊತ್ತಿನ ಪಾಡೇ ಆ ಹೊತ್ತಿಗೆ ಸಾಕು.ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ. ಆದ್ದರಿಂದ, “ಕರ್ತನು ನನ್ನ ಸಹಾಯಕನು ನಾನು ಭಯಪಡುವುದಿಲ್ಲ, ಮನುಷ್ಯನು ನನಗೆ ಏನು ಮಾಡಿಯಾನು?” ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.ಯೆಹೋವನು ನೀತಿವಂತರನ್ನು ಕಟಾಕ್ಷಿಸುತ್ತಾನೆ; ಅವರು ಮೊರೆಯಿಡುವಾಗ ಕಿವಿಗೊಡುತ್ತಾನೆ.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು