Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › 1 ಪೇತ್ರನು 5:8

ಬೈಬಲ್ ವಚನ · IRV

1 ಪೇತ್ರನು 5:8

ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ.

ಇಡೀ ಅಧ್ಯಾಯ ಓದಿ: 1 ಪೇತ್ರನು 5

ಸಂದರ್ಭದಲ್ಲಿ

5ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”

6ಹೀಗಿರುವುದರಿಂದ ದೇವರ ಬಲವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ. ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ಎತ್ತುವನು.

7ನಿಮ್ಮ ಚಿಂತಾಭಾರವನ್ನೆಲ್ಲಾ ಆತನ ಮೇಲೆ ಹಾಕಿರಿ ಆತನು ನಿಮಗೋಸ್ಕರ ಚಿಂತಿಸುತ್ತಾನೆ.

8ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ.

9ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ. ಲೋಕದಲ್ಲಿರುವ ನಿಮ್ಮ ಸಹೋದರರೂ ಅಂಥ ಬಾಧೆಗಳನ್ನೇ ಅನುಭವಿಸುತ್ತಿದ್ದಾರೆಂಬುದು ನಿಮಗೆ ತಿಳಿದಿದೆ.

10ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.

11ಆತನಿಗೆ ಅಧಿಪತ್ಯವು ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.

1 ಪೇತ್ರನು 5

ಇಂಗ್ಲಿಷ್‌ನಲ್ಲಿ

Berean Standard Bible1 Peter 5:8Be sober-minded and alert. Your adversary the devil prowls around like a roaring lion, seeking someone to devour.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಎಫೆ 6:11ಸೈತಾನನ ತಂತ್ರೋಪಾಯಗಳನ್ನು ನೀವು ಎದುರಿಸಿ ನಿಲ್ಲುವುದಕ್ಕೆ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.
ಯಾಕೋ 4:7ಹೀಗಿರಲಾಗಿ ದೇವರಿಗೆ ಅಧೀನರಾಗಿದ್ದು ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿ ಹೋಗುವನು.
ಎಫೆ 4:27ಸೈತಾನನಿಗೆ ಅವಕಾಶಕೊಡಬೇಡಿರಿ.
ಯೋಬ 2:2ಯೆಹೋವನು, “ಎಲ್ಲಿಂದ ಬಂದೆ?” ಎಂದು ಸೈತಾನನನ್ನು ಕೇಳಲು ಸೈತಾನನು ಯೆಹೋವನಿಗೆ, “ಭೂಲೋಕದಲ್ಲಿ ಸಂಚರಿಸುತ್ತಾ, ಅಲ್ಲಲ್ಲಿ ತಿರುಗುತ್ತಾ ಇದ್ದು ಬಂದೆನು” ಎಂದನು.
1 ಪೇತ್ರ 1:13ಆದ್ದರಿಂದ ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು, ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.
1 ಪೇತ್ರ 4:7ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಜಿತೇಂದ್ರಿಯರಾಗಿಯೂ ಯಾವಾಗಲೂ ಪ್ರಾರ್ಥನೆಗೆ ಸಿದ್ಧವಾಗಿರುವಂತೆ ಸ್ವಸ್ಥಚಿತ್ತರಾಗಿಯೂ ಇರಿ.
1 ಯೋಹಾ 3:8–10ಪಾಪಮಾಡುವವನು ಸೈತಾನನಿಗೆ ಸಂಬಂಧಪಟ್ಟವನಾಗಿದ್ದಾನೆ. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ಸೈತಾನನ ಕೆಲಸಗಳನ್ನು ನಾಶಮಾಡುವುದಕ್ಕೋಸ್ಕರ ದೇವಕುಮಾರನು ಪ್ರತ್ಯಕ್ಷನಾದನು. ದೇವರಿಂದ ಹುಟ್ಟಿದವನು ಪಾಪಮಾಡುವುದಿಲ್ಲ. ಏಕೆಂದರೆ ದೇವರ ಸ್ವಭಾವವು ಅವನಲ್ಲಿ ನೆಲೆಗೊಂಡಿದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡಲಾರನು. ಆದ್ದರಿಂದ ದೇವರ ಮಕ್ಕಳು ಯಾರೆಂಬುದು ಹಾಗೂ ಸೈತಾನನ ಮಕ್ಕಳು ಯಾರೆಂಬುದು ಇದರಿಂದ ತಿಳಿದುಬರುತ್ತದೆ. ನೀತಿಯನ್ನು ಅನುಸರಿಸದವರೂ ತನ್ನ ಸಹೋದರನನ್ನು ಪ್ರೀತಿಸದವರೂ ದೇವರಿಗೆ ಸಂಬಂಧಪಟ್ಟವರಲ್ಲ.
1 ಥೆಸ 5:6–8ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿರೋಣ. ನಿದ್ರೆಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ, ಅಮಲೇರುವವರು ರಾತ್ರಿಯಲ್ಲಿ ಅಮಲೇರುತ್ತಾರಷ್ಟೆ. ನಾವಾದರೋ ಹಗಲಿನವರಾಗಿರಲಾಗಿ ನಂಬಿಕೆ ಪ್ರೀತಿಗಳೆಂಬ ಎದೆಕವಚವನ್ನೂ, ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು