ಮುಖಪುಟ › ಜನಪ್ರಿಯ ಬೈಬಲ್ ವಚನಗಳು › 1 ಸಮುವೇಲನು 16:7
ಬೈಬಲ್ ವಚನ · IRV
1 ಸಮುವೇಲನು 16:7
ಆದರೆ ಯೆಹೋವನು ಸಮುವೇಲನಿಗೆ, “ನೀನು ಅವನ ಸೌಂದರ್ಯವನ್ನೂ, ಎತ್ತರವನ್ನೂ ನೋಡಬೇಡ; ನಾನು ಅವನನ್ನು ನಿರಾಕರಿಸಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯದ ಮತ್ತು ಅಂತರಂಗದ ಸೌಂದರ್ಯ ನೋಡುವವನಾಗಿದ್ದಾನೆ” ಅಂದನು.
ಸಂದರ್ಭದಲ್ಲಿ
4ಯೆಹೋವನು ಹೇಳಿದಂತೆಯೇ ಸಮುವೇಲನು ಬೇತ್ಲೆಹೇಮಿಗೆ ಹೋದನು. ಆ ಊರಿನ ಹಿರಿಯರು ನಡುಗುತ್ತಾ ಬಂದು ಅವನನ್ನು ಎದುರುಗೊಂಡು “ನಿನ್ನ ಆಗಮನವು ನಮಗೆ ಶುಭಕರವಾಗಿದೆಯೇ?” ಎಂದು ಕೇಳಲು
5ಅವನು, “ಹೌದು, ಶುಭಕರವಾಗಿದೆ; ಯೆಹೋವನಿಗೆ ಯಜ್ಞವನ್ನರ್ಪಿಸುವುದಕ್ಕೆ ಬಂದಿದ್ದೇನೆ. ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ನನ್ನ ಜೊತೆಯಲ್ಲಿ ಯಜ್ಞಕ್ಕೆ ಬನ್ನಿರಿ” ಎಂದು ಹೇಳಿ ಇಷಯನನ್ನೂ, ಅವನ ಮಕ್ಕಳನ್ನೂ ಶುದ್ಧೀಕರಿಸಿ ಅವರನ್ನೂ ಯಜ್ಞಕ್ಕೆ ಕರೆದನು.
6ಅವರು ಬರಲು ಅವನು ಎಲೀಯಾಬನನ್ನು ನೋಡಿ, ನಿಶ್ಚಯವಾಗಿ ಯೆಹೋವನು ಅಭಿಷೇಕಕ್ಕೆ ಆರಿಸಿಕೊಂಡವನು ಆತನ ಮುಂದೆ ಇದ್ದಾನೆ ಎಂದುಕೊಂಡನು.
7ಆದರೆ ಯೆಹೋವನು ಸಮುವೇಲನಿಗೆ, “ನೀನು ಅವನ ಸೌಂದರ್ಯವನ್ನೂ, ಎತ್ತರವನ್ನೂ ನೋಡಬೇಡ; ನಾನು ಅವನನ್ನು ನಿರಾಕರಿಸಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯದ ಮತ್ತು ಅಂತರಂಗದ ಸೌಂದರ್ಯ ನೋಡುವವನಾಗಿದ್ದಾನೆ” ಅಂದನು.
8ಇಷಯನು ಅಬೀನಾದಾಬನನ್ನು ಸಮುವೇಲನ ಬಳಿಗೆ ಬರಮಾಡಲು ಸಮುವೇಲನು, “ಯೆಹೋವನು ಇವನನ್ನು ಆರಿಸಿಕೊಳ್ಳಲಿಲ್ಲ” ಎಂದನು.
9ತರುವಾಯ ಇಷಯನು ಶಮ್ಮನನ್ನು ಬರಮಾಡಲು ಸಮುವೇಲನು, “ಯೆಹೋವನು ಇವನನ್ನೂ ಆರಿಸಿಕೊಳ್ಳಲಿಲ್ಲ” ಎಂದು ಹೇಳಿದನು.
10ಹೀಗೆ ಇಷಯನು ತನ್ನ ಮಕ್ಕಳಲ್ಲಿ ಏಳು ಮಂದಿಯನ್ನು ಸಮುವೇಲನ ಬಳಿಗೆ ಬರಮಾಡಿದರೂ ಅವನು, “ಯೆಹೋವನು ಇವರನ್ನು ಆರಿಸಿಕೊಳ್ಳಲಿಲ್ಲ” ಎಂದು ನುಡಿದನು.
ಇಂಗ್ಲಿಷ್ನಲ್ಲಿ
But the LORD said to Samuel, “Do not consider his appearance or height, for I have rejected him; the LORD does not see as man does. For man sees the outward appearance, but the LORD sees the heart.”ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ತೋರಿಕೆಗೆ ಅನುಸಾರವಾಗಿ ತೀರ್ಪುಮಾಡಬೇಡಿರಿ. ನ್ಯಾಯಬದ್ಧವಾಗಿ ತೀರ್ಪುನ್ನು ಮಾಡಿರಿ” ಎಂದನು.ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು, ಹೃದಯವನ್ನು ಪರೀಕ್ಷಿಸುವವನೂ, ಅಂತರಿಂದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ.ಆಗ ಆತನು ಅವರಿಗೆ ಹೇಳಿದ್ದೇನಂದರೆ, “ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು, ಆದರೆ ದೇವರು ನಿಮ್ಮ ಹೃದಯಗಳನ್ನು ಬಲ್ಲವನಾಗಿದ್ದಾನೆ. ಮನುಷ್ಯರ ದೃಷ್ಟಿಯಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.ಆದರೆ ದೇವರ ದೃಷ್ಟಿಯಲ್ಲಿ ಅಮೂಲ್ಯವಾದದ್ದೂ ಮತ್ತು ಶಾಶ್ವತವಾದದ್ದೂ ಆಗಿರುವ ಸಾತ್ವಿಕತೆ ಮತ್ತು ಶಾಂತಮನಸ್ಸು ಎಂಬ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ.ಯೆಹೋವನು ಹೀಗೆನ್ನುತ್ತಾನೆ, “ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ, ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ. ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ, ನಿಮ್ಮ ಮಾರ್ಗಗಳಿಗಿಂತ ನನ್ನ ಮಾರ್ಗಗಳೂ, ನಿಮ್ಮ ಆಲೋಚನೆಗಳಿಗಿಂತ ನನ್ನ ಆಲೋಚನೆಗಳೂ ಅಷ್ಟು ಉನ್ನತವಾಗಿವೆ.ಮನುಷ್ಯನ ನಡತೆಯೆಲ್ಲಾ ಸ್ವಂತ ದೃಷ್ಟಿಗೆ ಶುದ್ಧವಾಗಿದೆ, ಯೆಹೋವನು ಅಂತರಂಗವನ್ನೇ ಪರೀಕ್ಷಿಸುವನು.ಸೌಂದರ್ಯವು ನೆಚ್ಚತಕ್ಕದ್ದಲ್ಲ, ಲಾವಣ್ಯವು ನೆಲೆಯಲ್ಲ, ಯೆಹೋವನಲ್ಲಿ ಭಯಭಕ್ತಿಯುಳ್ಳವಳೇ ಸ್ತೋತ್ರಪಾತ್ರಳು.ಕುದುರೆಯ ಶಕ್ತಿಯಲ್ಲಿ ಆತನಿಗೆ ಇಷ್ಟವಿಲ್ಲ, ಆಳಿನ ತೊಡೆಯ ಬಲವನ್ನು ಆತನು ಮೆಚ್ಚುವುದಿಲ್ಲ. ಯೆಹೋವನು ಆನಂದಿಸುವುದು ತನ್ನ ಕೃಪೆಯನ್ನು ನಿರೀಕ್ಷಿಸುವ ಭಕ್ತರಲ್ಲೇ.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು