Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › 1 ಥೆಸಲೋನಿಕದವರಿಗೆ 4:3–5

ಬೈಬಲ್ ವಚನ · IRV

1 ಥೆಸಲೋನಿಕದವರಿಗೆ 4:3–5

3ದೇವರ ಚಿತ್ತವೇನಂದರೆ ನೀವು ಶುದ್ಧರಾಗಬೇಕೆಂಬುದೇ. ಆದ್ದರಿಂದ ಹಾದರಕ್ಕೆ ದೂರವಾಗಿರಬೇಕು.

4ದೇವರನ್ನರಿಯದ ಅನ್ಯಜನರಂತೆ ಕಾಮಾಭಿಲಾಷೆಗಳಿಗೆ ಒಳಗಾಗದೆ, ನಿಮ್ಮಲ್ಲಿ ಪ್ರತಿಯೊಬ್ಬನು ಪವಿತ್ರವಾದ ಮನಸ್ಸಿನಿಂದಲೂ ಘನತೆಯಿಂದಲೂ ಪತ್ನಿಯನ್ನು ಸಂಪಾದಿಸಿಕೊಳ್ಳಲು ತಿಳಿಯಬೇಕು.

ಇಡೀ ಅಧ್ಯಾಯ ಓದಿ: 1 ಥೆಸಲೋನಿಕದವರಿಗೆ 4

ಸಂದರ್ಭದಲ್ಲಿ

1ಕಡೆಯದಾಗಿ, ಸಹೋದರರೇ, ನಾವು ಕರ್ತನಾದ ಯೇಸುವಿನ ಮುಖಾಂತರ ನಿಮಗೆ ಕೊಟ್ಟಿರುವ ಆಜ್ಞೆಗಳನ್ನು ತಿಳಿದಿದ್ದೀರಷ್ಟೆ.

2ಅದುದರಿಂದ ನೀವು ಹೇಗೆ ನಡೆದು ದೇವರನ್ನು ಮೆಚ್ಚಿಸಬೇಕಾಗಿದೆಯೋ ಆ ಆಜ್ಞೆಗಳನ್ನು ನಮ್ಮಿಂದ ಕಲಿತುಕೊಂಡು ಅದರಂತೆ ನಡೆಯುತ್ತಲೇ ಇದ್ದಿರಿ. ನೀವು ಹಾಗೆಯೇ ಇನ್ನೂ ಹೆಚ್ಚಾಗಿ ನಡೆಯಬೇಕೆಂದು ನಿಮ್ಮನ್ನು ಯೇಸು ಕರ್ತನಲ್ಲಿ ಬೇಡಿಕೊಳ್ಳುತ್ತೇವೆ ಹಾಗೂ ಪ್ರಬೋಧಿಸುತ್ತೇವೆ.

3ದೇವರ ಚಿತ್ತವೇನಂದರೆ ನೀವು ಶುದ್ಧರಾಗಬೇಕೆಂಬುದೇ. ಆದ್ದರಿಂದ ಹಾದರಕ್ಕೆ ದೂರವಾಗಿರಬೇಕು.

4ದೇವರನ್ನರಿಯದ ಅನ್ಯಜನರಂತೆ ಕಾಮಾಭಿಲಾಷೆಗಳಿಗೆ ಒಳಗಾಗದೆ, ನಿಮ್ಮಲ್ಲಿ ಪ್ರತಿಯೊಬ್ಬನು ಪವಿತ್ರವಾದ ಮನಸ್ಸಿನಿಂದಲೂ ಘನತೆಯಿಂದಲೂ ಪತ್ನಿಯನ್ನು ಸಂಪಾದಿಸಿಕೊಳ್ಳಲು ತಿಳಿಯಬೇಕು.

6ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಕೇಡು ಮಾಡಬಾರದು. ನಾವು ಮೊದಲೇ ತಿಳಿಸಿ, ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಪ್ರತಿಕಾರ ಮಾಡುವವನಾಗಿದ್ದಾನೆ.

7ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಶುದ್ಧರಾಗಿರುವುದಕ್ಕೆ ಕರೆದನು.

8ಹೀಗಿರಲು ಈ ಮಾತನ್ನು ತಿರಸ್ಕರಿಸುವವನು ಮನುಷ್ಯರನ್ನು ಮಾತ್ರವಲ್ಲದೆ, ನಿಮಗೆ ಪವಿತ್ರಾತ್ಮವರವನ್ನು ದಯಪಾಲಿಸುವ ದೇವರನ್ನೂ ತಿರಸ್ಕರಿಸುವವನಾಗಿದ್ದಾನೆ.

1 ಥೆಸಲೋನಿಕದವರಿಗೆ 4

ಇಂಗ್ಲಿಷ್‌ನಲ್ಲಿ

Berean Standard Bible1 Thessalonians 4:3–5For it is God’s will that you should be holy: You must abstain from sexual immorality; each of you must know how to control his own body in holiness and honor, not in lustful passion like the Gentiles who do not know God;

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

1 ಪೇತ್ರ 4:2ಆದ್ದರಿಂದ ಉಳಿದಿರುವ ತನ್ನ ಜೀವಮಾನ ಕಾಲದಲ್ಲಿ ಇನ್ನೂ ಮನುಷ್ಯರ ಅಭಿಲಾಷೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವುದಕ್ಕೆ ಪ್ರಯತ್ನಮಾಡುವನು.
ರೋಮಾ 12:2ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.
1 ಥೆಸ 5:23ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಶುದ್ಧೀಕರಿಸಲಿ. ನಮ್ಮ ಕರ್ತನಾದ ಯೇಸು ಕ್ರಿಸ್ತನು ಹಿಂತಿರುಗಿ ಬರುವಾಗ ನಿಮ್ಮ ಆತ್ಮ, ಪ್ರಾಣ ಮತ್ತು ಶರೀರಗಳು ದೋಷವಿಲ್ಲದೆ ಪರಿಪೂರ್ಣವಾಗಿ ಕಾಣಿಸಿಕೊಳ್ಳುವಂತೆ ಕಾಪಾಡಲ್ಪಡಲಿ.
ಇಬ್ರಿ 13:4ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.
ಕೊಲೊ 3:5ಆದುದರಿಂದ ನಿಮ್ಮಲ್ಲಿರುವ ಲೌಕಿಕ ಆಸೆಗಳು ಅಂದರೆ, ಜಾರತ್ವ, ಅಶುದ್ಧತ್ವ, ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು ಸಾಯಿಸಿರಿ.
ಎಫೆ 5:17ಮತ್ತು ಬುದ್ಧಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬುದನ್ನು ತಿಳಿದುಕೊಳ್ಳಿರಿ.
ಎಫೆ 5:3–5ಜಾರತ್ವ ಮತ್ತು ಯಾವ ವಿಧವಾದ ಅಶುದ್ಧತ್ವ ಅಥವಾ ದ್ರವ್ಯಾಶೆ ಇವುಗಳ ಸುದ್ದಿಯಾದರೂ ನಿಮ್ಮಲ್ಲಿ ಇರಬಾರದು, ಇವುಗಳಿಗೆ ದೂರವಾಗಿರುವುದೇ ದೇವಜನರಿಗೆ ಯೋಗ್ಯವಾದದ್ದು. ಹೊಲಸು ಮಾತು, ಹುಚ್ಚು ಮಾತು, ಕುಚೋದ್ಯ ಇವು ಬೇಡ. ಇವು ಅಯುಕ್ತವಾಗಿವೆ. ಆದರೆ ಇವುಗಳಿಗೆ ಪ್ರತಿಯಾಗಿ ದೇವರಿಗೆ ಕೃತಜ್ಞತಾಸ್ತುತಿಮಾಡಿರಿ. ಜಾರನಿಗಾಗಲಿ, ದುರಾಚಾರಿಗಾಗಲಿ, ವಿಗ್ರಹಾರಾಧಕನಾಗಿರುವ ಲೋಭಿಗಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿರಲಿ.
ಗಲಾ 5:19ಶರೀರಭಾವದ ಸ್ವಭಾವಗಳು ಪ್ರತ್ಯಕ್ಷವಾಗಿಯೇ ಇವೆ, ಅದು ಯಾವುವೆಂದರೆ, ಜಾರತ್ವ, ಬಂಡುತನ, ನಾಚಿಕೆಗೇಡಿತನ,

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು