ಮುಖಪುಟ › ಜನಪ್ರಿಯ ಬೈಬಲ್ ವಚನಗಳು › 1 ಥೆಸಲೋನಿಕದವರಿಗೆ 5:18
ಬೈಬಲ್ ವಚನ · IRV
1 ಥೆಸಲೋನಿಕದವರಿಗೆ 5:18
ಎಲ್ಲಾದರಲ್ಲಿಯೂ ಕೃತಜ್ಞತಾಸ್ತುತಿಮಾಡಿರಿ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿ ತೋರಿಬಂದ ದೇವರ ಚಿತ್ತವಾಗಿದೆ.
ಇಡೀ ಅಧ್ಯಾಯ ಓದಿ: 1 ಥೆಸಲೋನಿಕದವರಿಗೆ 5
ಸಂದರ್ಭದಲ್ಲಿ
15ಯಾರೂ ಅಪಕಾರಕ್ಕೆ ಅಪಕಾರಮಾಡದಂತೆ ನೋಡಿಕೊಳ್ಳಿರಿ, ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವುದಲ್ಲದೆ ಎಲ್ಲರಿಗೂ ಒಳ್ಳೆಯದನ್ನು ಮಾಡುವವರಾಗಿರಿ.
16ಯಾವಾಗಲೂ ಸಂತೋಷಿಸಿರಿ,
17ಎಡೆಬಿಡದೆ ಪ್ರಾರ್ಥನೆಮಾಡಿರಿ,
18ಎಲ್ಲಾದರಲ್ಲಿಯೂ ಕೃತಜ್ಞತಾಸ್ತುತಿಮಾಡಿರಿ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿ ತೋರಿಬಂದ ದೇವರ ಚಿತ್ತವಾಗಿದೆ.
19ಪವಿತ್ರಾತ್ಮನನ್ನು ನಂದಿಸಬೇಡಿ,
20ಪ್ರವಾದನೆಗಳನ್ನು ಹಿನೈಸಬೇಡಿರಿ.
21ಆದರೆ ಎಲ್ಲವನ್ನೂ ಪರೀಕ್ಷಿಸಿ ಒಳ್ಳೆಯದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ.
ಇಂಗ್ಲಿಷ್ನಲ್ಲಿ
Give thanks in every circumstance, for this is God’s will for you in Christ Jesus.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಯಾವಾಗಲೂ ಎಲ್ಲಾ ಕಾರ್ಯಗಳಿಗಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರವನ್ನು ಮಾಡಿರಿ.ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ.ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನೇ ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ ಮತ್ತು ತಂದೆಯಾದ ದೇವರಿಗೆ ಆತನ ಮೂಲಕ ಕೃತಜ್ಞತಾಸ್ತುತ್ತಿಯನ್ನು ಸಲ್ಲಿಸಿರಿ.ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.“ಏನೂ ಇಲ್ಲದವನಾಗಿ ತಾಯಿಯ ಗರ್ಭದಿಂದ ಬಂದೆನು; ಏನೂ ಇಲ್ಲದವನಾಗಿಯೇ ಗತಿಸಿಹೋಗುವೆನು; ನನಗಿರುವುದನ್ನೆಲ್ಲ ಯೆಹೋವನೇ ಕೊಟ್ಟನು, ಅವುಗಳನ್ನು ಯೆಹೋವನೇ ತೆಗೆದುಕೊಂಡನು; ಯೆಹೋವನ ನಾಮಕ್ಕೆ ಸ್ತೋತ್ರವಾಗಲಿ” ಎಂದು ಹೇಳಿದನು.ಆದ್ದರಿಂದ ಉಳಿದಿರುವ ತನ್ನ ಜೀವಮಾನ ಕಾಲದಲ್ಲಿ ಇನ್ನೂ ಮನುಷ್ಯರ ಅಭಿಲಾಷೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವುದಕ್ಕೆ ಪ್ರಯತ್ನಮಾಡುವನು.ದಾವೀದನು ಅಬೀಮೆಲೆಕನ ಎದುರಿನಲ್ಲಿ ಹುಚ್ಚನಂತೆ ತೋರ್ಪಡಿಸಿಕೊಂಡು ಅವನ ಬಳಿಯಿಂದ ಹೊರಟಾಗ ರಚಿಸಿದ ಕೀರ್ತನೆ. ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು; ಆತನ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿ ಇರುವುದು.ತಿಳಿವಳಿಕೆಯಿಲ್ಲದೆ ಮಾತನಾಡುವ ಮೂಢ ಜನರ ಬಾಯನ್ನು ನೀವು ಒಳ್ಳೆ ನಡತೆಯಿಂದ ಮುಚ್ಚಿಸಬೇಕೆಂಬುದು ದೇವರ ಚಿತ್ತ.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು