Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › 1 ತಿಮೊಥೆಯನಿಗೆ 4:1

ಬೈಬಲ್ ವಚನ · IRV

1 ತಿಮೊಥೆಯನಿಗೆ 4:1

ಆದರೂ ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳ ನುಡಿಗಳಿಗೂ, ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಿದ್ದಾನೆ.

ಇಡೀ ಅಧ್ಯಾಯ ಓದಿ: 1 ತಿಮೊಥೆಯನಿಗೆ 4

ಸಂದರ್ಭದಲ್ಲಿ

1ಆದರೂ ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳ ನುಡಿಗಳಿಗೂ, ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಿದ್ದಾನೆ.

2ಕಪಟದಿಂದ ಸುಳ್ಳಾಡುವವರು, ಸ್ವಂತ ಮನಸ್ಸಾಕ್ಷಿಯ ಮೇಲೆ ಬರೆಹಾಕಲ್ಪಟ್ಟವರಾಗಿದ್ದು,

3ಅವರು ವಿಶ್ವಾಸಿಗಳಿಗೆ ಮದುವೆಯಾಗಬಾರದೆಂತಲೂ, ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿದ್ದಾರೋ, ಅವರು ಕೃತಜ್ಞತಾಸ್ತುತಿಮಾಡಿ, ತಿನ್ನುವುದಕ್ಕೋಸ್ಕರ ದೇವರು ಉಂಟುಮಾಡಿದ ಆಹಾರವನ್ನು ತಿನ್ನಬಾರದೆಂತಲೂ ಹೇಳುವರು.

4ದೇವರು ಉಂಟುಮಾಡಿದ್ದೆಲ್ಲವೂ ಒಳ್ಳೆಯದೇ, ನಾವು ಕೃತಜ್ಞತಾಸ್ತುತಿಮಾಡಿ ತೆಗೆದುಕೊಳ್ಳುವ ಯಾವ ಆಹಾರವನ್ನು ತಿರಸ್ಕರಿಸಬೇಕಾಗಿಲ್ಲ.

1 ತಿಮೊಥೆಯನಿಗೆ 4

ಇಂಗ್ಲಿಷ್‌ನಲ್ಲಿ

Berean Standard Bible1 Timothy 4:1Now the Spirit expressly states that in later times some will abandon the faith to follow deceitful spirits and the teachings of demons,

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

2 ಪೇತ್ರ 2:1ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು.
2 ಕೊರಿ 11:13–15ಆದರೆ ಅಂಥವರು ಸುಳ್ಳು ಅಪೊಸ್ತಲರೂ, ಮೋಸಗಾರರಾದ ಕೆಲಸದವರೂ, ಕ್ರಿಸ್ತನ ಅಪೊಸ್ತಲರಾಗಿ ಕಾಣಿಸುವುದಕ್ಕೆ ವೇಷಹಾಕಿಕೊಳ್ಳುವವರೂ ಆಗಿದ್ದಾರೆ. ಇದೇನೂ ಆಶ್ಚರ್ಯವಲ್ಲ. ಸೈತಾನನು ತಾನೇ ಪ್ರಕಾಶ ರೂಪವುಳ್ಳ ದೇವದೂತನ ವೇಷವನ್ನು ಹಾಕಿಕೊಳ್ಳುವಾಗ, ಅವನ ಸೇವಕರೂ ಸಹ ನೀತಿಗೆ ಸೇವಕರಾಗಿ ಕಾಣಿಸುವುದಕ್ಕೆ ವೇಷಹಾಕಿಕೊಳ್ಳುವುದು ಆಶ್ಚರ್ಯವೇನಲ್ಲ. ಅವರ ಅಂತ್ಯಾವಸ್ಥೆಯು ಅವರ ಕೃತ್ಯಗಳಿಗೆ ತಕ್ಕಂತೆಯೇ ಇರುವುದು.
ಯೂದ 1:18“ಭಕ್ತಿಗೆ ವಿರುದ್ಧವಾದ ತಮ್ಮ ಆಸೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಬರುವರೆಂದು” ಅವರು ನಿಮಗೆ ಹೇಳಿದರು.
2 ಪೇತ್ರ 3:3ಕಡೆ ದಿನಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು ಕುಚೋದ್ಯ ಮಾಡುತ್ತಾ,
ಯೂದ 1:4ಏಕೆಂದರೆ ಭಕ್ತಿಹೀನರೂ, ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಕಾಮಾಭಿಲಾಷೆಯ ಕೃತ್ಯಗಳನ್ನು ನಡಿಸುವವರೂ, ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಕೆಲವು ಜನರು ರಹಸ್ಯವಾಗಿ ಸಭೆಯ ಒಳಗೆ ಹೊಕ್ಕಿದ್ದಾರೆ. ಇವರು ದಂಡನೆಗಾಗಿ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ ಎಂದು ಬರೆದದೆ.
2 ಕೊರಿ 11:3ಆದರೆ ಹೇಗೆ ಹವ್ವಳು ಸರ್ಪದ ಕುಯುಕ್ತಿಗೆ ಒಳಗಾಗಿ ಮೋಸಹೋದಳೋ ಹಾಗೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿರಬೇಕಾದ ಯಥಾರ್ಥತ್ವವನ್ನೂ ಶುದ್ಧತ್ವವನ್ನೂ ಬಿಟ್ಟು ಕೆಟ್ಟುಹೋದೀತೆಂದು ನನಗೆ ಭಯವಾಗಿದೆ.
2 ತಿಮೊ 3:13ಆದರೆ ದುಷ್ಟರೂ, ವಂಚಕರೂ ಇತರರನ್ನು ಮೋಸಮಾಡುತ್ತಾ ತಾವೇ ಮೋಸಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.
1 ಯೋಹಾ 4:6ನಾವಂತೂ ದೇವರಿಗೆ ಸಂಬಂಧಪಟ್ಟವರಾಗಿದ್ದೇವೆ. ದೇವರನ್ನು ಬಲ್ಲವರು ನಮ್ಮ ಮಾತನ್ನು ಕೇಳುತ್ತಾರೆ. ದೇವರಿಗೆ ಸಂಬಂಧಪಡದವರು ನಮ್ಮ ಮಾತನ್ನು ಕೇಳುವುದಿಲ್ಲ. ಇದರಿಂದಲೇ ಸತ್ಯವನ್ನು ಬೋಧಿಸುವ ಆತ್ಮ ಯಾವುದು ಮತ್ತು ಸುಳ್ಳನ್ನು ಬೋಧಿಸುವ ಆತ್ಮ ಯಾವುದು ಎಂದು ನಾವು ತಿಳಿದುಕೊಳ್ಳುತ್ತೇವೆ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು