Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › 1 ತಿಮೊಥೆಯನಿಗೆ 4:12

ಬೈಬಲ್ ವಚನ · IRV

1 ತಿಮೊಥೆಯನಿಗೆ 4:12

ನಿನ್ನ ಯೌವನವನ್ನು ಅಸಡ್ಡೆಮಾಡುವುದಕ್ಕೆ ಯಾರಿಗೂ ಆಸ್ಪದಮಾಡಿಕೊಡದೆ, ನಂಬುವವರಿಗೆ ನಡೆ, ನುಡಿ, ಪ್ರೀತಿ, ನಂಬಿಕೆ, ಶುದ್ಧತ್ವ ಇವುಗಳ ವಿಷಯದಲ್ಲಿ ನೀನೇ ಮಾದರಿಯಾಗಿರು.

ಇಡೀ ಅಧ್ಯಾಯ ಓದಿ: 1 ತಿಮೊಥೆಯನಿಗೆ 4

ಸಂದರ್ಭದಲ್ಲಿ

9ಈ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಇದೆ.

10ಇದಕ್ಕಾಗಿ ನಾವು ಕಷ್ಟಪಡುತ್ತಿದ್ದೇವೆ, ಪ್ರಯಾಸಪಡುತ್ತಿದ್ದೇವೆ, ಯಾಕೆಂದರೆ ಎಲ್ಲಾ ಮನುಷ್ಯರಿಗೂ, ವಿಶೇಷವಾಗಿ ನಂಬುವವರಿಗೆ, ರಕ್ಷಕನಾಗಿರುವ ಜೀವವುಳ್ಳ ದೇವರ ಮೇಲೆ ನಾವು ನಿರೀಕ್ಷೆಯನ್ನಿಟ್ಟುಕೊಂಡವರಾಗಿದ್ದೇವೆ.

11ಈ ಸಂಗತಿಗಳನ್ನು ನೀನು ಆಜ್ಞಾಪಿಸಬೇಕು ಮತ್ತು ಬೋಧಿಸಬೇಕು.

12ನಿನ್ನ ಯೌವನವನ್ನು ಅಸಡ್ಡೆಮಾಡುವುದಕ್ಕೆ ಯಾರಿಗೂ ಆಸ್ಪದಮಾಡಿಕೊಡದೆ, ನಂಬುವವರಿಗೆ ನಡೆ, ನುಡಿ, ಪ್ರೀತಿ, ನಂಬಿಕೆ, ಶುದ್ಧತ್ವ ಇವುಗಳ ವಿಷಯದಲ್ಲಿ ನೀನೇ ಮಾದರಿಯಾಗಿರು.

13ನಾನು ಬರುವ ತನಕ ವೇದವಾಕ್ಯವನ್ನು ಓದಿ ಹೇಳುವುದರಲ್ಲಿಯೂ, ಪ್ರಬೋಧಿಸುವುದರಲ್ಲಿಯೂ, ಉಪದೇಶಿಸುವುದರಲ್ಲಿಯೂ ಆಸಕ್ತನಾಗಿರು.

14ನಿನ್ನಲ್ಲಿರುವ ಕೃಪಾವರವನ್ನು ಅಲಕ್ಷ್ಯಮಾಡಬೇಡ, ಆ ವರವು ಸಭೆಯ ಹಿರಿಯರು ಪ್ರವಾದನೆಯ ಸಹಿತವಾಗಿ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ, ಅದು ನಿನಗೆ ಕೊಡಲ್ಪಟ್ಟಿತಲ್ಲಾ.

15ಈ ಕಾರ್ಯಗಳನ್ನು ಸಾಧಿಸುತ್ತಾ, ಅವುಗಳಲ್ಲಿ ಮಗ್ನನಾಗಿರು. ಇದರಿಂದ ನಿನ್ನ ಅಭಿವೃದ್ಧಿಯು ಎಲ್ಲರಿಗೂ ಪ್ರಸಿದ್ಧವಾಗುವುದು.

1 ತಿಮೊಥೆಯನಿಗೆ 4

ಇಂಗ್ಲಿಷ್‌ನಲ್ಲಿ

Berean Standard Bible1 Timothy 4:12Let no one despise your youth, but set an example for the believers in speech, in conduct, in love, in faith, in purity.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ತೀತ 2:7ಸತ್ಕಾರ್ಯ ಮಾಡುವುದರಲ್ಲಿ ನೀನೇ ಮಾದರಿಯಾಗಿರು. ನೀನು ಮಾಡುವ ಉಪದೇಶದಲ್ಲಿ ಸತ್ಯವೂ ಗೌರವವೂ ಆಕ್ಷೇಪಣೆಗೆ ಅವಕಾಶವಿಲ್ಲದಂಥ ಸುಬುದ್ಧಿಯೂ ಇರಬೇಕು;
2 ತಿಮೊ 2:22ನೀನು ಯೌವನದ ಮೋಹಗಳಿಗೆ ದೂರವಾಗಿರು. ಶುದ್ಧಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳುವವರ ಸಂಗಡ ನೀತಿ, ನಂಬಿಕೆ, ಪ್ರೀತಿ ಮತ್ತು ಸಮಾಧಾನಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.
2 ತಿಮೊ 2:15ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವುದಕ್ಕೆ ಪ್ರಯಾಸಪಡು. ಅವಮಾನಕ್ಕೆ ಗುರಿಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಉಪದೇಶಿಸುವವನೂ ಆಗಿರು.
1 ಪೇತ್ರ 5:3ನಿಮ್ಮ ವಶಕ್ಕೆ ಒಪ್ಪಿಸಿಕೊಟ್ಟಿರುವವರ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.
2 ಪೇತ್ರ 1:5–8ಈ ಕಾರಣದಿಂದಲೇ ನೀವು ಪೂರ್ಣಾಸಕ್ತಿಯುಳ್ಳವರಾಗಿ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ, ಸದ್ಗುಣಕ್ಕೆ ಜ್ಞಾನವನ್ನೂ, ಜ್ಞಾನಕ್ಕೆ ದಮೆಯನ್ನೂ, ದಮೆಗೆ ತಾಳ್ಮೆಯನ್ನೂ, ತಾಳ್ಮೆಗೆ ಭಕ್ತಿಯನ್ನೂ, ಭಕ್ತಿಗೆ ಸಹೋದರ ಸ್ನೇಹವನ್ನೂ, ಸಹೋದರ ಸ್ನೇಹಕ್ಕೆ ಪ್ರೀತಿಯನ್ನೂ ಕೂಡಿಸಿರಿ. ಇವು ನಿಮ್ಮಲ್ಲಿದ್ದು ಬೆಳೆದು ಬಂದರೆ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕುರಿತಾದ ಪರಿಜ್ಞಾನದಲ್ಲಿ ನೀವು ನಿರುತ್ಸಾಹಿಗಳೂ, ನಿಷ್ಪ್ರಯೋಜಕರೂ ಆಗದಂತೆ ಮಾಡುತ್ತವೆ.
1 ಕೊರಿ 11:1ನಾನು ಕ್ರಿಸ್ತನನ್ನು ಅನುಸರಿಸುವಂತೆಯೇ ನೀವು ನನ್ನನ್ನು ಅನುಸರಿಸುವವರಾಗಿರಿ.
1 ಥೆಸ 1:6ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿ ಬಂದಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ದೇವರ ವಾಕ್ಯವನ್ನು ಅಂಗೀಕರಿಸಿ, ನಮ್ಮನ್ನು ಮತ್ತು ಕರ್ತನಾದ ಯೇಸುವನ್ನು ಅನುಸರಿಸುವವರಾದಿರಿ.
2 ತಿಮೊ 2:7ನಾನು ಹೇಳುವುದನ್ನು ಯೋಚಿಸು. ಕರ್ತನು ಎಲ್ಲಾದರಲ್ಲಿಯೂ ನಿನಗೆ ವಿವೇಕವನ್ನು ದಯಪಾಲಿಸುವನು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು