ಮುಖಪುಟ › ಜನಪ್ರಿಯ ಬೈಬಲ್ ವಚನಗಳು › 1 ತಿಮೊಥೆಯನಿಗೆ 4:8
ಬೈಬಲ್ ವಚನ · IRV
1 ತಿಮೊಥೆಯನಿಗೆ 4:8
ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು. ಅದಕ್ಕೆ ಇಹಪರಗಳಲ್ಲಿನ ಜೀವನಕ್ಕೆ ವಾಗ್ದಾನ ಉಂಟು.
ಇಡೀ ಅಧ್ಯಾಯ ಓದಿ: 1 ತಿಮೊಥೆಯನಿಗೆ 4
ಸಂದರ್ಭದಲ್ಲಿ
5ದೇವರ ವಾಕ್ಯದಿಂದಲೂ ಪ್ರಾರ್ಥನೆಯಿಂದಲೂ ಆ ಆಹಾರವು ಪವಿತ್ರವಾಗುತ್ತದಲ್ಲಾ.
6ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ, ನೀನು ಅನುಸರಿಸುತ್ತಿರುವ ಕ್ರಿಸ್ತ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಅಭ್ಯಾಸಹೊಂದಿದವನಾಗಿ, ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವಿ.
7ಅಜ್ಜಿ ಕಥೆಗಳನ್ನೂ ಪ್ರಾಪಂಚಿಕವಾದ ಆ ಕಥೆಗಳನ್ನೂ ತಳ್ಳಿಬಿಟ್ಟು, ನೀನು ದೇವಭಕ್ತಿಯ ವಿಷಯದಲ್ಲಿ ಸಾಧನೆಮಾಡಿಕೋ.
8ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು. ಅದಕ್ಕೆ ಇಹಪರಗಳಲ್ಲಿನ ಜೀವನಕ್ಕೆ ವಾಗ್ದಾನ ಉಂಟು.
9ಈ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಇದೆ.
10ಇದಕ್ಕಾಗಿ ನಾವು ಕಷ್ಟಪಡುತ್ತಿದ್ದೇವೆ, ಪ್ರಯಾಸಪಡುತ್ತಿದ್ದೇವೆ, ಯಾಕೆಂದರೆ ಎಲ್ಲಾ ಮನುಷ್ಯರಿಗೂ, ವಿಶೇಷವಾಗಿ ನಂಬುವವರಿಗೆ, ರಕ್ಷಕನಾಗಿರುವ ಜೀವವುಳ್ಳ ದೇವರ ಮೇಲೆ ನಾವು ನಿರೀಕ್ಷೆಯನ್ನಿಟ್ಟುಕೊಂಡವರಾಗಿದ್ದೇವೆ.
11ಈ ಸಂಗತಿಗಳನ್ನು ನೀನು ಆಜ್ಞಾಪಿಸಬೇಕು ಮತ್ತು ಬೋಧಿಸಬೇಕು.
ಇಂಗ್ಲಿಷ್ನಲ್ಲಿ
For physical exercise is of limited value, but godliness is valuable in every way, holding promise for the present life and for the one to come.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.ಸಂತುಷ್ಟಿಸಹಿತವಾದ ಭಕ್ತಿಯು ದೊಡ್ಡ ಲಾಭವೇ ಸರಿ.ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು. ನೀನು ಯೆಹೋವನಲ್ಲಿ ಸಂತೋಷಿಸು; ಆಗ ಆತನು ನಿನ್ನ ಇಷ್ಟಾರ್ಥಗಳನ್ನು ನೆರವೇರಿಸುವನು.ಯೆಹೋವನ ಭಯವು ಜೀವದಾಯಕವು, ಭಯಭಕ್ತಿಯುಳ್ಳವನು ತೃಪ್ತನಾಗಿ ನೆಲೆಗೊಳ್ಳುವನು, ಅವನಿಗೆ ಕೇಡು ಸಂಭವಿಸದು.ಧನ, ಮಾನ ಮತ್ತು ಜೀವಗಳು ದೀನಭಾವಕ್ಕೂ, ಯೆಹೋವನ ಭಯಕ್ಕೂ ಫಲ.“ಇದನ್ನು ಹಿಡಿಯಬೇಡ, ಇದರ ರುಚಿನೋಡಬೇಡ, ಅದನ್ನು ಮುಟ್ಟಬೇಡ” ಎನ್ನುವ ನಿಬಂಧನೆಗಳಿಗೆ ಅಧೀನರಾಗಿರುವುದೇತಕ್ಕೆ? ಈ ಮಾನವ ಆಜ್ಞೆಗಳೂ ಹಾಗೂ ಬೋಧನೆಗಳೂ ಉಪಯೋಗದಿಂದ ನಾಶವಾಗುವ ಪದಾರ್ಥಗಳಿಗೆ ಅನುಸಾರವಾಗಿದೆ. ಇಂಥ ಉಪದೇಶಗಳು ಮನುಷ್ಯಕಲ್ಪಿತವಾದ ಆಚರಣೆಗಳಿಂದಲೂ, ಕಪಟದೀನತೆಯಿಂದಲೂ ಮತ್ತು ದೇಹದಂಡನೆಯಿಂದಲೂ ಜ್ಞಾನವುಳ್ಳದೆಂದು ತೋರಿಬರುತ್ತವೆ, ಆದರೆ ಶಾರೀರಿಕ ಇಚ್ಛೆಗಳನ್ನು ನಿಯಂತ್ರಿಸುವಲ್ಲಿ ಇವುಗಳಿಂದ ಯಾವ ಪ್ರಯೋಜನವೂ ಉಂಟಾಗುವುದಿಲ್ಲ.ಆದರೆ ದೀನರು ದೇಶವನ್ನು ಅನುಭವಿಸುವರು; ಅವರು ಮಹಾಸೌಖ್ಯದಿಂದ ಆನಂದಿಸುವರು.ಅವನಿಗೆ ಈ ಕಾಲದಲ್ಲಿಯೇ ಮನೆ, ಸಹೋದರರು, ಸಹೋದರಿಯರು, ತಾಯಿ, ಮಕ್ಕಳು, ಹೊಲಗದ್ದೆಗಳು ಇವೆಲ್ಲವೂ ಹಿಂಸೆಗಳ ಸಹಿತವಾಗಿ ನೂರರಷ್ಟು ಸಿಕ್ಕೇ ಸಿಗುತ್ತವೆ ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವುದು.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು