Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › 1 ತಿಮೊಥೆಯನಿಗೆ 5:8

ಬೈಬಲ್ ವಚನ · IRV

1 ತಿಮೊಥೆಯನಿಗೆ 5:8

ಯಾವನಾದರೂ ಸ್ವಂತ ಜನರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ಕ್ರಿಸ್ತ ನಂಬಿಕೆಯನ್ನು ತಿರಸ್ಕರಿಸಿದವನೂ ನಂಬದವನಿಗಿಂತ ಕೀಳಾದವನೂ ಆಗಿದ್ದಾನೆ.

ಇಡೀ ಅಧ್ಯಾಯ ಓದಿ: 1 ತಿಮೊಥೆಯನಿಗೆ 5

ಸಂದರ್ಭದಲ್ಲಿ

5ದಿಕ್ಕಿಲ್ಲದೆ ಒಬ್ಬೊಂಟಿಗಳಾಗಿರುವ ವಿಧವೆಯು, ದೇವರ ಮೇಲೆ ನಿರೀಕ್ಷೆಯನ್ನಿಟ್ಟು, ಹಗಲಿರುಳು ವಿಜ್ಞಾಪನೆಗಳಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು.

6ಆದರೆ ಸುಖಭೋಗದಲ್ಲಿರುವ ವಿಧವೆಯು ಬದುಕಿದ್ದರೂ ಸತ್ತಂತೆಯೇ.

7ವಿಧವೆಯರು ನಿಂದೆಗೆ ಗುರಿಯಾಗದಂತೆ ಈ ವಿಷಯಗಳನ್ನು ಆಜ್ಞಾಪಿಸು.

8ಯಾವನಾದರೂ ಸ್ವಂತ ಜನರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ಕ್ರಿಸ್ತ ನಂಬಿಕೆಯನ್ನು ತಿರಸ್ಕರಿಸಿದವನೂ ನಂಬದವನಿಗಿಂತ ಕೀಳಾದವನೂ ಆಗಿದ್ದಾನೆ.

9ವಯಸ್ಸಿನಲ್ಲಿ ಅರುವತ್ತು ವರ್ಷ ಮೇಲ್ಪಟ್ಟ, ವಿಧವೆಯನ್ನು ವಿಧವೆಯರ ಪಟ್ಟಿಯಲ್ಲಿ ಸೇರಿಸಬಹುದು. ಅಂಥವಳಾದರೂ ಒಬ್ಬ ಗಂಡನಿಗೆ ಮಾತ್ರ ಹೆಂಡತಿಯಾಗಿದ್ದವಳಾಗಿ,

10ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡವಳೂ ಆಗಿದ್ದಲ್ಲಿ, ಅವರು ಮಕ್ಕಳನ್ನು ಸಾಕಿಕೊಂಡು, ಅತಿಥಿಸತ್ಕಾರವನ್ನು ಮಾಡುತ್ತಾ, ದೇವಜನರಿಗೆ ಉಪಚಾರಮಾಡಿದವಳಾಗಲಿ, ಸಂಕಟದಲ್ಲಿ ಬಿದ್ದವರಿಗೆ ಸಹಾಯಮಾಡುತ್ತಾ ಎಲ್ಲಾ ಸತ್ಕಾರ್ಯಗಳಲ್ಲಿ ಆಸಕ್ತಿಯುಳ್ಳವಳಾಗಿರಲಿ.

11ಯೌವನ ಪ್ರಾಯದ ವಿಧವೆಯರನ್ನು ಪಟ್ಟಿಯಲ್ಲಿ ಸೇರಿಸಬೇಡ, ಅವರು ದೈಹಿಕ ಆಸೆಗಳಿಂದ ಸೋಲಿಸಲ್ಪಟ್ಟು, ಕ್ರಿಸ್ತನಿಗೆ ವಿಮುಖರಾಗಿ ಮದುವೆಮಾಡಿಕೊಳ್ಳಬೇಕೆಂದು ಇಷ್ಟಪಟ್ಟಾರು.

1 ತಿಮೊಥೆಯನಿಗೆ 5

ಇಂಗ್ಲಿಷ್‌ನಲ್ಲಿ

Berean Standard Bible1 Timothy 5:8If anyone does not provide for his own, and especially his own household, he has denied the faith and is worse than an unbeliever.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಗಲಾ 6:10ಆದ್ದರಿಂದ ಅವಕಾಶ ಸಿಕ್ಕಿದಾಗಲೆಲ್ಲಾ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ, ವಿಶೇಷವಾಗಿ ಒಂದೇ ಮನೆಯವರಂತಿರುವ ಕ್ರೈಸ್ತ ವಿಶ್ವಾಸಿಗಳಿಗೆ ಮಾಡೋಣ.
2 ಕೊರಿ 12:14ಇಗೋ ನಾನು ನಿಮ್ಮ ಬಳಿಗೆ ಮೂರನೇ ಸಾರಿ ಬರುವುದಕ್ಕೆ ಸಿದ್ಧವಾಗಿದ್ದೇನೆ ಮತ್ತು ನಿಮಗೆ ಭಾರವಾಗಿರುವುದಿಲ್ಲ. ನಾನು ನಿಮ್ಮ ಸೊತ್ತನ್ನು ಬಯಸದೇ ನಿಮ್ಮನ್ನೇ ಆಶಿಸುತ್ತೇನೆ. ಮಕ್ಕಳು ತಂದೆತಾಯಿಗಳಿಗೋಸ್ಕರ ಕೂಡಿಸಿಡುವುದು ಧರ್ಮವಲ್ಲ. ಆದರೆ ತಂದೆತಾಯಿಗಳು ಮಕ್ಕಳಿಗೋಸ್ಕರ ಕೂಡಿಸಿಡುವುದೇ ಧರ್ಮ.
ಲೂಕ 11:11–13ನಿಮ್ಮಲ್ಲಿ ತಂದೆಯಾದವನು ಮೀನನ್ನು ಕೇಳುವ ಮಗನಿಗೆ ಮೀನು ಕೊಡದೆ ಹಾವನ್ನು ಕೊಡುವನೇ? ಅಥವಾ ಮೊಟ್ಟೆಯನ್ನು ಕೇಳಿದರೆ ಚೇಳನ್ನು ಕೊಡುವನೇ? ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಪವಿತ್ರಾತ್ಮವನ್ನೇ ಕೊಡುವನಲ್ಲವೇ?” ಅಂದನು.
ಯೆಶಾ 58:7ಹಸಿದವರಿಗೆ ಅನ್ನವನ್ನು ಹಂಚುವುದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವುದು, ನಿನ್ನಂತೆ ಮನುಷ್ಯನಾಗಿರುವ ಯಾರಿಗೇ ಆಗಲಿ ಮುಖತಪ್ಪಿಸಿಕೊಳ್ಳದಿರುವುದು, ಇವುಗಳೇ ನನಗೆ ಇಷ್ಟವಾದ ಉಪವಾಸ ವ್ರತವಲ್ಲವೇ.
ತೀತ 1:16ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಅವರು ಅಸಹ್ಯ ಕೃತ್ಯಗಳಲ್ಲಿ ಭಾಗವಹಿಸುವವರೂ, ದೇವರಿಗೆ ಅವಿಧೇಯರೂ ಆಗಿರುವುದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುತ್ತಾರೆ ಹಾಗು ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆಂದು ಸಾಬಿತುಪಡಿಸುತ್ತಾರೆ.
ಮತ್ತಾ 7:11ಹಾಗಾದರೆ ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಉಡುಗೊರೆಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯ ವರಗಳನ್ನು ಕೊಡುವನಲ್ಲವೇ?

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು