ಮುಖಪುಟ › ಜನಪ್ರಿಯ ಬೈಬಲ್ ವಚನಗಳು › 1 ತಿಮೊಥೆಯನಿಗೆ 6:10
ಬೈಬಲ್ ವಚನ · IRV
1 ತಿಮೊಥೆಯನಿಗೆ 6:10
ಹಣದಾಸೆಯು ಸಕಲವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು, ಅದರಿಂದ ಕ್ರಿಸ್ತ ನಂಬಿಕೆಯನ್ನು ಬಿಟ್ಟು, ಅಲೆದಾಡಿ ಅನೇಕ ವೇದನೆಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.
ಇಡೀ ಅಧ್ಯಾಯ ಓದಿ: 1 ತಿಮೊಥೆಯನಿಗೆ 6
ಸಂದರ್ಭದಲ್ಲಿ
7ನಾವು ಲೋಕದೊಳಕ್ಕೆ ಏನೂ ತೆಗೆದುಕೊಂಡು ಬರಲಿಲ್ಲವಾದ್ದರಿಂದ, ಅದರೊಳಗಿಂದ ಏನೂ ತೆಗೆದುಕೊಂಡು ಹೋಗಲಾರೆವು.
8ನಮಗೆ ಅನ್ನ ವಸ್ತ್ರಗಳಿದ್ದರೆ ಸಾಕು, ನಾವು ಸಂತುಷ್ಟರಾಗುತ್ತವೆ.
9ಐಶ್ವರ್ಯವಂತರಾಗಬೇಕೆಂದು ಮನಸ್ಸುಮಾಡುವವರು ದುಷ್ಟ್ರೇರಣೆಯೆಂಬ ಬಲೆಯಲ್ಲಿ ಸಿಕ್ಕಿಕೊಂಡು, ಬುದ್ಧಿಗೆ ವಿರುದ್ಧವಾಗಿಯೂ ಹಾನಿಕರವಾಗಿಯೂ ಇರುವ ಅನೇಕ ಆಸೆಗಳಲ್ಲಿ ಬೀಳುತ್ತಾರೆ. ಇಂಥ ಆಸೆಗಳು ಮನುಷ್ಯರನ್ನು ಸಂಹಾರ ವಿನಾಶಗಳಲ್ಲಿ ಸಿಕ್ಕಿಸುತ್ತವೆ.
10ಹಣದಾಸೆಯು ಸಕಲವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು, ಅದರಿಂದ ಕ್ರಿಸ್ತ ನಂಬಿಕೆಯನ್ನು ಬಿಟ್ಟು, ಅಲೆದಾಡಿ ಅನೇಕ ವೇದನೆಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.
11ಎಲೈ, ದೇವರ ಮನುಷ್ಯನೇ, ನೀನಾದರೋ ಇವುಗಳಿಗೆ ದೂರವಾಗಿರು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ಸ್ಥಿರಚಿತ್ತ ಹಾಗೂ ಸಾತ್ವಿಕತ್ವ ಇವುಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.
12ಕ್ರಿಸ್ತ ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ. ಅದಕ್ಕಾಗಿ ನೀನು ದೇವರಿಂದ ಕರೆಯಲ್ಪಟ್ಟಿದಿ ಮತ್ತು ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಪ್ರತಿಜ್ಞೆಯನ್ನು ಮಾಡಿದಿಯಲ್ಲಾ.
13ಸರ್ವ ಸೃಷ್ಟಿಗೆ ಜೀವಾಧಾರಕನಾದ ದೇವರ ಮುಂದೆಯೂ, ಪೊಂತ್ಯ ಪಿಲಾತನ ಕಾಲದಲ್ಲಿ ಶ್ರೇಷ್ಠ ಪ್ರತಿಜ್ಞೆಯನ್ನು ತಾನೇ ಸಾಕ್ಷಿಯಾಗಿದ್ದು ಸ್ಥಾಪಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಆಜ್ಞಾಪಿಸುವುದೇನಂದರೆ,
ಇಂಗ್ಲಿಷ್ನಲ್ಲಿ
For the love of money is the root of all kinds of evil. By craving it, some have wandered away from the faith and pierced themselves with many sorrows.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಸೂರೆಮಾಡುವವರೆಲ್ಲರ ದಾರಿಯು ಹೀಗೆಯೇ ಸರಿ; ಕೊಳ್ಳೆಯು ಕೊಳ್ಳೆಗಾರರ ಜೀವವನ್ನೇ ಕೊಳ್ಳೆಮಾಡುವುದು.ದುಷ್ಟರಿಗೆ ಅನೇಕ ಕಷ್ಟನಷ್ಟಗಳು ಉಂಟಾಗುವವು; ಆದರೆ ಯೆಹೋವನಲ್ಲಿ ಭರವಸವಿಟ್ಟವರನ್ನು ಆತನ ಕೃಪೆಯು ಆವರಿಸಿಕೊಳ್ಳುವುದು.ಆದುದರಿಂದ ಅವರು ತಮ್ಮ ನಡತೆಯ ಫಲವನ್ನು ಅನುಭವಿಸಿ, ಸ್ವಂತ ಕುಯುಕ್ತಿಗಳನ್ನೇ ಹೊಟ್ಟೆತುಂಬಾ ಉಣ್ಣಬೇಕಾಗುವುದು.ಅವರು ಅತಿಲಾಭವನ್ನು ಪಡೆದುಕೊಳ್ಳುವುದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಕುಟುಂಬ ಕುಟುಂಬಗಳನ್ನೇ ಹಾಳುಮಾಡುತ್ತಾರಾದ್ದರಿಂದ ಅವರ ಬಾಯಿ ಮುಚ್ಚಿಸಬೇಕಾಗಿದೆ.ಇವು ಹೊಟ್ಟೆಬಾಕ ನಾಯಿಗಳು, ಇವುಗಳಿಗೆ ಎಂದಿಗೂ ಸಾಕು ಎನಿಸದು. ಇಂಥವರು ಕುರಿಗಳನ್ನು ಕಾಯತಕ್ಕವರೋ! ಬುದ್ಧಿಹೀನರಾಗಿದ್ದಾರೆ, ಇವರಲ್ಲಿ ಯಾರೂ ತಪ್ಪದೆ ಪ್ರತಿಯೊಬ್ಬನೂ ಕೊಳ್ಳೆಹೊಡೆಯಬೇಕೆಂದು ತನ್ನ ತನ್ನ ಮಾರ್ಗಕ್ಕೆ ತಿರುಗಿಕೊಂಡಿದ್ದಾನೆ.ಅವರ ಗತಿಯನ್ನು ಏನೆಂದು ಹೇಳಲಿ? ಇವರು ಕಾಯಿನನ ಮಾರ್ಗವನ್ನು ಹಿಡಿದವರೂ, ದ್ರವ್ಯಸಂಪಾದನೆಗೋಸ್ಕರ ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಳುಗಿದವರೂ, ಕೋರಹನಂತೆ ಎದುರು ಮಾತನಾಡಿ ನಾಶವಾಗಿ ಹೋಗುವವರು ಆಗಿದ್ದಾರೆ.ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ. ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ. ಆದರೂ ಯೆಹೋವನ ಮೇಲೆ ಭಾರ ಹಾಕಿ, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು” ಅಂದುಕೊಳ್ಳುತ್ತಾರೆ.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು