ಮುಖಪುಟ › ಜನಪ್ರಿಯ ಬೈಬಲ್ ವಚನಗಳು › 2 ಕೊರಿಂಥದವರಿಗೆ 10:5
ಬೈಬಲ್ ವಚನ · IRV
2 ಕೊರಿಂಥದವರಿಗೆ 10:5
ನಾವು ದೇವಜ್ಞಾನಕ್ಕೆ ವಿರೋಧವಾಗಿ ಏಳುವ ಅಹಂಭಾವಗಳನ್ನು ಧ್ವಂಸಮಾಡಿ, ಪ್ರತಿಯೊಂದು ಆಲೋಚನೆಗಳನ್ನೂ ಕ್ರಿಸ್ತನಿಗೆ ವಿಧೇಯರಾಗುವಂತೆ ಸೆರೆಹಿಡಿದು,
ಇಡೀ ಅಧ್ಯಾಯ ಓದಿ: 2 ಕೊರಿಂಥದವರಿಗೆ 10
ಸಂದರ್ಭದಲ್ಲಿ
2ಯಾರು ನಮ್ಮನ್ನು ಲೋಕ ರೀತಿಯಾಗಿ ಜೀವಿಸುವವರೆಂದು ಎಣಿಸುತ್ತಾರೋ ಅವರೊಂದಿಗೆ ದಿಟ್ಟತನದಿಂದಲೇ ಇರಬೇಕೆಂದು ಅಂದುಕೊಂಡಿದೇನೆ. ನಾವು ನಿಮ್ಮೊಂದಿಗಿರುವಾಗ ಅಂಥ ದಿಟ್ಟತನವನ್ನು ತೋರಿಸುವುದಕ್ಕೆ ಅವಕಾಶವುಂಟಾಗಬಾರದೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
3ನಾವು ಲೋಕದಲ್ಲಿದ್ದರೂ ಲೋಕಾನುಸಾರವಾಗಿ ಯುದ್ಧಮಾಡುವವರಲ್ಲ.
4ನಾವು ಉಪಯೋಗಿಸುವ ಆಯುಧಗಳು ಲೋಕದ ಆಯುಧಗಳಲ್ಲ. ಅವು ದೇವರ ಎಣಿಕೆಯಲ್ಲಿ ಬಲವಾಗಿದ್ದು ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ.
5ನಾವು ದೇವಜ್ಞಾನಕ್ಕೆ ವಿರೋಧವಾಗಿ ಏಳುವ ಅಹಂಭಾವಗಳನ್ನು ಧ್ವಂಸಮಾಡಿ, ಪ್ರತಿಯೊಂದು ಆಲೋಚನೆಗಳನ್ನೂ ಕ್ರಿಸ್ತನಿಗೆ ವಿಧೇಯರಾಗುವಂತೆ ಸೆರೆಹಿಡಿದು,
6ನಿಮ್ಮ ವಿಧೇಯತ್ವವು ಪರಿಪೂರ್ಣವಾದ ಮೇಲೆ ಎಲ್ಲಾ ಅವಿಧೇಯತ್ವಕ್ಕೆ ಪ್ರತಿಕಾರವನ್ನು ನೀಡುವುದಕ್ಕೆ ಸಿದ್ಧರಾಗಿದ್ದೇವೆ.
7ನೀವು ಬಾಹ್ಯವಾದುದ್ದುನ್ನು ಮಾತ್ರ ನೋಡುತ್ತೀರಿ. ಯಾವನಾದರೂ ತನ್ನನ್ನು ಕ್ರಿಸ್ತನವನೆಂದು ಒಪ್ಪಿಕೊಂಡರೆ ಅವನು ಆಲೋಚನೆಮಾಡಿಕೊಂಡು ತಾನು ಹೇಗೆ ಕ್ರಿಸ್ತನವನೋ ಹಾಗೆ ನಾವೂ ಕ್ರಿಸ್ತನವರೆಂದು ತಿಳಿದುಕೊಳ್ಳಲಿ.
8ನಮಗಿರುವ ಅಧಿಕಾರವನ್ನು ಕುರಿತು ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವುದರಲ್ಲಿ ನಾಚಿಕೆಪಡಬೇಕಾಗಿರುವುದಿಲ್ಲ. ಆದರೆ ನಿಮ್ಮನ್ನು ಕೆಡವಿಹಾಕುವುದಕ್ಕಲ್ಲ ಕಟ್ಟುವುದಕ್ಕಾಗಿಯೇ ಕರ್ತನು ಈ ಅಧಿಕಾರವನ್ನು ನಮಗೆ ಕೊಟ್ಟಿರುವವನು.
ಇಂಗ್ಲಿಷ್ನಲ್ಲಿ
We tear down arguments and every presumption set up against the knowledge of God; and we take captive every thought to make it obedient to Christ.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಏಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಸಕ್ರಿಯವಾದದ್ದು ಮತ್ತು ಯಾವ ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು ಆಗಿದ್ದು, ಪ್ರಾಣ ಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದಾಗಿದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾಕೃಪೆಯಿಂದ ಕ್ಷಮಿಸುವನು.ವಿಧೇಯತ್ವವುಳ್ಳ ಮಕ್ಕಳಂತೆ ನಡೆಯಿರಿ, ನೀವು ಮೊದಲು ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ, ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾಗಿದ್ದು ಆತನಿಗೆ ನಿಮ್ಮ ಎಲ್ಲಾ ನಡವಳಿಕೆಗಳಲ್ಲಿ ಪರಿಶುದ್ಧರಾಗಿರಿ.ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರುದ್ಧವಾಗಿ ಕಾದಾಡಿ ನನ್ನನ್ನು ಸೆರೆಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ನನ್ನನ್ನು ಒಪ್ಪಿಸುವಂಥದ್ದಾಗಿದೆ.ಏಕೆಂದರೆ ಹೃದಯದಿಂದ ಕೆಟ್ಟ ಆಲೋಚನೆಗಳು, ಕೊಲೆ, ವ್ಯಭಿಚಾರ, ಜಾರತ್ವ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ದೂಷಣೆಗಳು ಹೊರಟು ಬರುತ್ತವೆ.ಯಾಕೆಂದರೆ ದೇವರ ವಿಷಯವಾಗಿ ಅವರಿಗೆ ತಿಳಿವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ. ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. ಅವರು ಎಷ್ಟೇ ವಿಚಾರ ಮಾಡಿದರೂ ಫಲ ಕಾಣಲಿಲ್ಲ. ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಗಿಬಿಟ್ಟಿದೆ.ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?ಯಾಕೆಂದರೆ ಇಹಲೋಕದ ಜ್ಞಾನವು ದೇವರ ಮುಂದೆ ಮೂರ್ಖತನವಾಗಿದೆ. “ಆತನು ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೆ ಹಿಡಿದುಕೊಳ್ಳುತ್ತಾನೆಂತಲೂ,”ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು